Breaking News

Monthly Archives: ಡಿಸೆಂಬರ್ 2023

ಕರ್ನಾಟಕಕ್ಕೆ ಬರ ಪರಿಹಾರ: ಇಂದು ಅಮಿತ್ ಶಾ ಸಭೆ ನಿರೀಕ್ಷೆ

ನವದೆಹಲಿ, ಡಿಸೆಂಬರ್ 23: ಕರ್ನಾಟಕಕ್ಕೆ ಬರ ಪರಿಹಾರ (Karnataka drought relief fund) ನೀಡುವ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಇಂದು (ಶನಿವಾರ) ಉನ್ನತ ಮಟ್ಟದ ಸಭೆ ನಡೆಸುವ ನಿರೀಕ್ಷೆ ಇದೆ. ಈ ವಿಚಾರವಾಗಿ ಇತ್ತೀಚೆಗಷ್ಟೇ ನವದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತುಕತೆ ನಡೆಸಿ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮೈಸೂರಿನಲ್ಲಿ ಮಾಹಿತಿ ನೀಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ನೀಡುವ ಬಗ್ಗೆ …

Read More »

ಬೆಳಗಾವಿ ಗಡಿಯಲ್ಲಿ ಹೈಅಲರ್ಟ್

ಬೆಳಗಾವಿ, (ಡಿಸೆಂಬರ್ 21): ಕರ್ನಾಟಕದಲ್ಲಿ ಮತ್ತೆ ಕೊರೋನಾ (Coronavirus) ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ (Belagavi) ಸಹ ಕಟ್ಟುನಿಟ್ಟಿನ ಕ್ರಮಕ್ಕೆ ಇಲ್ಲಿನ ಅಧಿಕಾರಿಗಳು ಮುಂದಾಗಿದ್ದಾರೆ. ಈ ಬಗ್ಗೆ ಇಂದು (ಡಿಸೆಂಬರ್ 21) ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಶಾಸಕ ಗಣೇಶ್​​ ಹುಕ್ಕೇರಿ ನೇತೃತ್ವದಲ್ಲಿ ಕೋವಿಡ್​​ ಸಭೆ ನಡೆದಿದ್ದು. ನೆಗಡಿ, ಕೆಮ್ಮು, ಜ್ವರದ ಲಕ್ಷಣ ಇದ್ದವರಿಗೆ ಆರ್​​ಟಿಪಿಸಿಆರ್​​​​ ಟೆಸ್ಟ್​​​ ಕಡ್ಡಾಯ ಹಾಗೂ ಕೇರಳದ ಶಬರಿಮಲೆಗೆ …

Read More »

ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​ಗಳಿಗೆ ​ಕಲ್ಲೆಸೆತ

ಬೆಳಗಾವಿ,  ಅಪರಿಚಿತನೋರ್ವ ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​​ಗಳ (bus) ಮೇಲೆ ಕಲ್ಲೆಸಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ್ ದೌಡಾಯಿಸಿ ಪರಿಶೀಲನೆ ಮಾಡಿದರು. ಬೆನಕನಹೊಳಿ ಗ್ರಾದ ಬಳಿ ಕೆಎ-42, F-962 ಸಂಖ್ಯೆಯ NWKRTC ಹುಕ್ಕೇರಿ – ಬೆಳಗಾವಿ ತಡೆರಹಿತ ಬಸ್​ ಮೇಲೆ ಕಲ್ಲೆಸಿದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕ ರಮೇಶ್ ಚಿವಟೆ(55) ಎಂಬುವರಿಗೆ ಗಾಯವಾಗಿದೆ. …

Read More »

ಮೋದಿ ಯಾವ ಫ್ಲೈಟ್‌ನಲ್ಲಿ ಓಡಾಡುತ್ತಾರೆ?: ಬಿಜೆಪಿಗೆ C.M. ತಿರುಗೇಟು

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಯಾವ ಫ್ಲೈಟ್‍ನಲ್ಲಿ ಓಡಾಡುತ್ತಾರೆ..? ಅದು ಐಷಾರಾಮಿ ಫ್ಲೈಟ್ ಅಲ್ವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದರು. ಜಮೀರ್ ಜೊತೆ ಐಷಾರಾಮಿ ಜೆಟ್‍ನಲ್ಲಿ ಪ್ರಯಾಣ ಮಾಡಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂತದ್ದು?. ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ ಎಂದು ಗರಂ ಆದರು. ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮೆಯ ನಾಯಕರು, ಮುಖ್ಯಮಂತ್ರಿ …

Read More »

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ (BJP) ಸರ್ಕಾರದ ಸರ್ವಾಧಿಕಾರ. ಈ ಹಿನ್ನೆಲೆ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಜನರು ಒಂದಾಗಬೇಕು ಎಂದು ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕರೆ ನೀಡಿದ್ದಾರೆ.   ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷ ಇಂಡಿಯಾ ಬಣ (INDIA bloc) ನವದೆಹಲಿಯ ಜಂತರ್ …

Read More »

ಬಿಜೆಪಿಗರು ಮೊದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಜೆಪಿ (BJP) ನಾಯಕರು ಸಚಿವ ಜಮೀರ್ ಅಹ್ಮದ್ (Zameer Ahmed Khan) ಅವರ ವಿಮಾನದ ಬಗ್ಗೆ ಮಾತನಾಡುವ ಬದಲು ಪ್ರಧಾನಿ ನರೇಂದ್ರ ಮೋದಿಯವರಿಂದ (PM Narendra Modi) ರಾಜ್ಯಕ್ಕೆ ಬರ ಪರಿಹಾರ ಕೊಡಿಸಲಿ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ವಾಗ್ದಾಳಿ ನಡೆಸಿದ್ದಾರೆ.   ಸಚಿವ ಜಮೀರ್ ಅಹ್ಮದ್ ಖಾನ್ ಐಶಾರಾಮಿ ವಿಮಾನದಲ್ಲಿ ಹಾಡು ಹಾಕಿಕೊಂಡು ಹೋಗಿದ್ದಾರೆ ಎಂಬ ಬಿಜೆಪಿ ನಾಯಕರ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ …

Read More »

ಜಮೀರ್ ಅಹ್ಮದ್ ಜೊತೆಗೂಡಿ C.M. ಹಾದಿ ಬಿಟ್ಟಿದ್ದಾರೆ: ಯತ್ನಾಳ್ ಕಿಡಿ

ವಿಜಯಪುರ, (ಡಿಸೆಂಬರ್ 22): ಬರ ಪರಿಹಾರದ ಚರ್ಚೆಗಾಗಿ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmad Khan) ಅವರು ಐಷಾರಾಮಿ ವಿಮಾನದಲ್ಲಿ (Luxurious flight) ಮರಳಿ ಬೆಂಗಳೂರಿಗೆ ಬಂದಿದ್ದಾರೆ. ಆದ್ರೆ, ವಿಶೇಷತೆ ವಿಮಾನದಲ್ಲಿ ಸಿಎಂ ಪ್ರಯಾಣಿಸಿದ್ದಕ್ಕೆ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರು ಸಮಾಜವಾದ ಬಡವರ ಪರವಾಗಿ ಏನೇನೋ …

Read More »

ಶೀಘ್ರದಲ್ಲೇ ಹಿಜಾಬ್ ನಿಷೇಧ ವಾಪಸ್‌? ಸಿದ್ದರಾಮಯ್ಯ

ಮೈಸೂರು: ವಿರೋಧದ ನಡುವೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್‌ (Hijab Row‌) ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಊಟ, ಉಡುಪು ಅವರವರ ಇಷ್ಟ. ಹೀಗಾಗಿ ಹಿಜಾಬ್ ನಿಷೇಧ ಆದೇಶ ವಾಪಸ್ ತೆಗೆದುಕೊಳ್ಳಲು ಹೇಳಿರುವುದಾಗಿ ಸಿಎಂ ತಿಳಿಸಿದ್ದಾರೆ.   ನಂಜನಗೂಡು ತಾಲೂಕಿ‌ನ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ …

Read More »

ಮೋಹನ್ ಕುಮಾರ್‌ ದಾನಪ್ಪರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಸಚಿವ ರಹೀಂ ಖಾನ್

ಬಳ್ಳಾರಿ: ದೇಶದ ಯುವಕರು ಸೇನೆ (Army) ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಕಾರ್ಗಿಲ್‌ನಲ್ಲಿ (Kargil) ಮ್ಯಾರಥಾನ್ (Marathon) ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ, ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲ ಮೋಹನ್ ಕುಮಾರ್ ದಾನಪ್ಪ ಅವರಿಗೆ ರಾಜ್ಯದ ಪೌರಾಡಳಿತ ಮತ್ತು ಹಜ್ ಇಲಾಖೆಯ ಸಚಿವ ರಹೀಂ ಖಾನ್ ಅವರು ಪತ್ರದ ಮುಖಾಂತರ ಅಭಿನಂದಿಸಿದ್ದಾರೆ.   ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರ ನಿವಾಸಿ ಕರ್ನಾಟಕ …

Read More »

ರಾಕಿಂಗ್ ಸ್ಟಾರ್ ಯಶ್ ಅಭಿನಯದ ದಕ್ಷಿಣ ಭಾರತದ ಯಶಸ್ವಿ ಚಿತ್ರ ಯಾವುದು ?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 14 ಏಪ್ರಿಲ್ 2022 ರಲ್ಲಿ ತೆರೆ ಕಂಡಿತು. ಕೆಜಿಎಫ್-2 ದಕ್ಷಿಣ ಭಾರತದ ಯಶಸ್ವಿ ಚಿತ್ರವಾಗಿ ಬಿಗ್ ಸಕ್ಸಸ್ ಕಂಡಿತ್ತು. 100 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಕೆಜಿಎಫ್ ಅಧ್ಯಾಯ 2 ಇದುವರೆಗಿನ ಅತ್ಯಂತ ದುಬಾರಿ ಕನ್ನಡ ಚಿತ್ರವಾಗಿದೆ . ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಆಯಕ್ಷನ್ ಕಟ್ ಹೇಳಿದ್ದು, ಭುವನ್ ಗೌಡ ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ ಮತ್ತು ರವಿ ಬಸ್ರೂರ್ ಚಿತ್ರ ಸಂಗೀತ ಮತ್ತು …

Read More »