ಬೆಳಗಾವಿ : ಪೂರ್ಣಗೊಂಡ ಕಾಮಗಾರಿಗಳ ಬಾಕಿ ಬಿಲ್ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಗುತ್ತಿಗೆದಾರರು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಸರ್ಕಾರಿ ಗುತ್ತಿಗೆದಾರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಬಾಕಿ ಬಿಲ್ ಕೊಡಿ ಇಲ್ಲವೇ ವಿಷ ಕೊಡಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಬೃಹತ್ ಮತ್ತು ಮಧ್ಯಮ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …
Read More »Monthly Archives: ಡಿಸೆಂಬರ್ 2023
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ನಾಮಕರಣ ಮಾಡುವ ನಿರ್ಣಯ ಅಂಗೀಕಾರ
ಬೆಳಗಾವಿ : ವಿಧಾನಸಭೆಯಲ್ಲಿ ರಾಜ್ಯದ ನಾಲ್ಕು ಏರ್ಪೋರ್ಟ್ಗಳಿಗೆ ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಪಡೆದುಕೊಳ್ಳಲಾಯಿತು. ಈ ಸಂಬಂಧ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ ಪಾಟೀಲ್, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯ ಮಂಡಿಸಿದರು. ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ …
Read More »ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ ಅಂಗೀಕಾರ-ಕನಿಷ್ಠ 500 ಕೋಟಿ ರೂ
ಬೆಂಗಳೂರು : ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ- 2023ನ್ನು ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದಾಗ ಸದಸ್ಯರು ಸರ್ವಾನುಮತದಿಂದ ಮೇಜು ಕುಟ್ಟಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ವಿಧೇಯಕವು ವಿಧಾನಪರಿಷತ್ತಿನಲ್ಲಿ ಅಂಗೀಕಾರ ಪಡೆಯಿತು. ಸದಸ್ಯ ರವಿಕುಮಾರ್ ಮಾತನಾಡಿ, ಪ್ರಾಧಿಕಾರ ರಚಿಸುತ್ತಿರುವುದು ಸ್ವಾಗತಾರ್ಹ. ಕನಿಷ್ಠ 500 ಕೋಟಿ ರೂ.ಮೀಸಲಿಟ್ಟು …
Read More »ರೈತರ ಕಾಳಜಿ ಇದ್ದರೆ ತಕ್ಷಣ ಸರ್ಕಾರ ಕಬ್ಬು ತೂಕದಲ್ಲಿ ಆಗುತ್ತಿರುವ ಮೋಸವನ್ನು ತಡೆಯಬೇಕು: ಶ್ರೀಮಂತ ಪಾಟೀಲ್
ಚಿಕ್ಕೋಡಿ: ವಿಧಾನಸಭೆ ಸದನದಲ್ಲಿ ಕಬ್ಬು ಬೆಳೆಗಾರರ ಕುರಿತು ಒಳ್ಳೆಯ ಚರ್ಚೆಗಳು ನಡೆಯುತ್ತಿವೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡು ಕಾಂಗ್ರೆಸ್ ಸರ್ಕಾರ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ರೈತರ ಪರ ಕಾಳಜಿ ಇದ್ದರೆ ತಕ್ಷಣ ಸರ್ಕಾರ ನುಡಿದಂತೆ ನಡೆದು ಕಬ್ಬು ತೂಕದಲ್ಲಿ ಆಗುತ್ತಿರುವ ಮೋಸವನ್ನು ತಡೆಯಬೇಕು ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುರುವಾರ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, …
Read More »ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಅವರ ಮಾತು ಕೇಳಿ ಬಿದ್ದು ಬಿದ್ದ ನಕ್ಕ ಸಂತೋಷ ಲಾಡ್
ಬೆಳಗಾವಿ : ವಿವಿಧ ಸಂಘ ಸಂಸ್ಥೆಗಳು ತಮ್ಮ ಬೇಡಿಕೆ ಈಡೇರಿಸುವಂತೆ ಕಳೆದ 9 ದಿನಗಳಿಂದ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯುತ್ತಿವೆ. ಇಂದು ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ವಿವಿಧ ಬೇಡಿಕೆ ಮುಂದಿಟ್ಟರು. ಕಾರ್ಮಿಕ ಮಂಡಳಿಯ ಅಡಿ ಮಧ್ಯಪಾನ ಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು. ವಾರ್ಷಿಕ ಆದಾಯದಲ್ಲಿ ಶೇ.10ರಷ್ಟು ಕಲ್ಯಾಣ ನಿಧಿಗೆ ವರ್ಗಾಯಿಸಬೇಕು. ಮಧ್ಯಪಾನ …
Read More »ಅರಣ್ಯಭೂಮಿ ಗಡಿ ಗುರುತಿಸಲು ಕಂದಾಯ ಅರಣ್ಯ ಇಲಾಖೆ ಜಂಟಿ ಸರ್ವೆ: ಸಚಿವ ಈಶ್ವರ್ ಖಂಡ್ರೆ
ಬೆಳಗಾವಿ(ಬೆಂಗಳೂರು) :ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಹರೀಶ್ ಪೂಂಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮೀಕ್ಷೆಯನ್ನು ಕಾಲಮಿತಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕರ್ನಾಟಕ ಅರಣ್ಯ ನಿಯಮದ ಪ್ರಕಾರ ಜಿಲ್ಲಾ ಅರಣ್ಯ ಅಥವಾ ರಕ್ಷಿತ ಅರಣ್ಯಕ್ಕೆ ಹೊಂದಿಕೊಂಡಂತೆ ಇರುವ …
Read More »ತಾಲೂಕು ಕೇಂದ್ರಗಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ: ದಿನೇಶ್ ಗುಂಡೂರಾವ್
ಬೆಂಗಳೂರು/ ಬೆಳಗಾವಿ : ರಾಜ್ಯದಲ್ಲಿ ಘೋಷಣೆಯಾದ ಹೊಸ ತಾಲೂಕು ಕೇಂದ್ರಗಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ಹೇಳಿದ್ದಾರೆ. ಗುರುವಾರ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಹೊಸದಾಗಿ ಘೋಷಣೆಯಾದ ತಾಲೂಕು ಕೇಂದ್ರಗಳ ಬಹಳಷ್ಟು ಆಸ್ಪತ್ರೆಗಳು ತಾಲೂಕು ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಕೆಯಾಗಿಲ್ಲ. ಇದರೊಂದಿಗೆ ರಾಜ್ಯದಲ್ಲಿ 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಹ …
Read More »ಕೇಂದ್ರದ ಗೃಹ ಸಚಿವ ಹಾಗೂ ಪ್ರಧಾನಿ ಮೋದಿ ಪಾರ್ಲಿಮೆಂಟ್ನಲ್ಲಿ ಆಗಿರುವ ಭದ್ರತಾ ಲೋಪದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದು ಆಶ್ಚರ್ಯ
ಬೆಳಗಾವಿ: ಸಂಸತ್ತಿನ ಇತಿಹಾಸದಲ್ಲಿ ಆಗದೇ ಇರುವ ಭದ್ರತಾ ಲೋಪವನ್ನು ಇಡೀ ವಿಶ್ವವೇ ನೋಡಿದೆ. ಈ ಬಗ್ಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡದೇ ಇರುವುದು ಆಶ್ಚರ್ಯವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕಿಡಿಕಾರಿದ್ದಾರೆ. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಹೊಸದಾಗಿ ಸಂಸತ್ ನಿರ್ಮಿಸಿದ್ದೇವೆ. ವ್ಯವಸ್ಥಿತ ಹಾಗೂ ವೈಜ್ಞಾನಿಕವಾಗಿ ಮಾಡಿದ್ದೇವೆ ಎಂದು ಹೇಳುವಾಗ ಇಬ್ಬರು ಯುವಕರು ಗ್ಯಾಲರಿಗೆ ಬಂದು, ಅಲ್ಲಿಂದ ಜಿಗಿದು ನೇರವಾಗಿ ಸದನದ …
Read More »ನಾನು ಸಿಎಲ್‌ಪಿ ಸಭೆಗೆ ಹೋಗಿಲ್ಲ, ನಾನು ಡಿಸಿಎಂ ಕರೆದ ಭೋಜನಕೂಟಕ್ಕೆ ಹೋಗಿದ್ದೆ
ಬೆಳಗಾವಿ : ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ. ನಾನು ಡಿಸಿಎಂ ಡಿಕೆ ಶಿವಕುಮಾರ್ ಕರೆದ ಭೋಜನಕೂಟಕ್ಕೆ ಮಾತ್ರ ಹೋಗಿದ್ದು ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಾನು ನಿನ್ನೆ 8 ಗಂಟೆಯಿಂದ 10 ಗಂಟೆ ತನಕ ವಿಜಯೇಂದ್ರ ಜೊತೆಗೆ ಇದ್ದೆ. ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಭೋಜನ ಕೂಟ ಇಟ್ಟುಕೊಂಡಿದ್ದರು. ಅವರ …
Read More »ವಿಧಾನ ಪರಿಷತ್‌ನಲ್ಲಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ
ಬೆಳಗಾವಿ/ಬೆಂಗಳೂರು: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ-2023, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023 ಸೇರಿದಂತೆ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿವಿಧ ವಿಧೇಯಕಗಳಿಗೆ ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 13ರಂದು ಅಂಗೀಕಾರ ದೊರೆಯಿತು. ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಯಲೋಸಲು ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಕೋರಿದರು. 2023ನೇ ಸಾಲಿನ …
Read More »