ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »Monthly Archives: ಡಿಸೆಂಬರ್ 2023
ಬೆಳಗಾವಿ ಅಧಿವೇಶನದಲ್ಲಿ ಕಬ್ಬು ಕಟಾವು ಕಾರ್ಮಿಕರ ಸಮಸ್ಯೆಗಳ ಚರ್ಚೆಗೆ ಒತ್ತಾಯ
ಚಿಕ್ಕೋಡಿ: ರಾಜ್ಯದಲ್ಲೇ ಅತಿ ಹೆಚ್ಚು ಕಬ್ಬು ಬೆಳೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ. ಆದರೆ ಕಬ್ಬು ಕಟಾವು ಮಾಡಿ ಸಾಗಿಸುವ ಕಾರ್ಮಿಕರಿಗೆ ನ್ಯಾಯಯುತ ಸಂಬಳ ಸಿಗದೆ ಇರೋದ್ರಿಂದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಈ ಸಮಸ್ಯೆಗಳ ಕುರಿತಾಗಿ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ನಡೆಸುವಂತೆ ಚಿಕ್ಕೋಡಿ ಭಾಗದ ಕಬ್ಬು ಕಟಾವು ಕಾರ್ಮಿಕರು ಒತ್ತಾಯಿಸಿದ್ದಾರೆ. ಮೂರು ವರ್ಷಗಳಿಂದ ಕಾರ್ಮಿಕರಿಗೆ ಪ್ರತಿ ಟನ್ 324 ರೂ ನೀಡುತ್ತಿದ್ದು, ಈ ಕೂಲಿ ದರವನ್ನು ಸಕ್ಕರೆ ಕಾರ್ಖಾನೆಗಳು …
Read More »ಸಮಾಜದಲ್ಲಿ ಬಿರುಕು ಉಂಟು ಮಾಡುವುದಲ್ಲ, ಒಗ್ಗೂಡಿಸುವುದು ನನ್ನ ಕೆಲಸ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್
ಬೆಳಗಾವಿ/ಬೆಂಗಳೂರು: “ನಾನು ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತೇನೆ. ಕಿತ್ತು ಬಿಸಾಡುವುದಲ್ಲ, ಜೋಡಿಸುವುದು ನನ್ನ ಜವಾಬ್ದಾರಿ” ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಸಾವರ್ಕರ್ ಫೋಟೋ ತೆರವು ವಿಚಾರವಾಗಿ ಪರೋಕ್ಷ ಸಂದೇಶ ನೀಡಿದರು. ಸುವರ್ಣಸೌಧದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಜೊತೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಾವರ್ಕರ್ ಫೋಟೋ ವಿವಾದ ಸಂಬಂಧ ಪ್ರತಿಕ್ರಿಯಿಸಿ, “ಒಂದು ರಥವನ್ನು ಸಾಧ್ಯವಾದರೆ ಮುಂದಕ್ಕೆ ಎಳೆದುಕೊಂಡು ಹೋಗಿ. ಇಲ್ಲವಾದರೆ ಇದ್ದಲ್ಲೇ ಬಿಡಿ. ಆದರೆ ಹಿಂದಕ್ಕೆ ಎಳೆಯುವಂಥ ಕೆಲಸ ಮಾಡಬೇಡಿ ಎಂದು …
Read More »ಜಾತಿಗಣತಿ: ಭೀಮ್ ಆರ್ಮಿ ವಿದ್ಯಾರ್ಥಿ ಘಟಕದ ಪ್ರತಿಭಟನೆಗೆ ನಟ ಚೇತನ್ ಬೆಂಬಲ
ಬೆಳಗಾವಿ: ಜಾತಿ ಗಣತಿ ಅಂಕಿಅಂಶಗಳನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬೆಳಗಾವಿ ಕೊಂಡಸಕೊಪ್ಪ ಸಮೀಪ ಭೀಮ್ ಆರ್ಮಿ ವಿದ್ಯಾರ್ಥಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಿತ್ರನಟ ಚೇತನ್ ಆಗಮಿಸಿ ಸಾಥ್ ಕೊಟ್ಟರು. ಸರ್ಕಾರಿ ವಲಯದ ಖಾಸಗೀಕರಣ ನಿಷೇಧಿಸಬೇಕು. ಸಾಚಾರ್ ವರದಿ ಪರಿಶೀಲಿಸಿ ಅಲ್ಪಸಂಖ್ಯಾತರಿಗೆ ಶೇ. 10ರಷ್ಟು ಮೀಸಲಾತಿ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಸಚಿವ ಮಧು ಬಂಗಾರಪ್ಪ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. …
Read More »ಪ್ರೊ ಕಬಡ್ಡಿ 10ನೇ ಆವೃತ್ತಿಯ ನಿನ್ನೆ (ಶುಕ್ರವಾರ) ನಡೆದ ಪಂದ್ಯದಲ್ಲಿ ಯು ಮುಂಬಾ ಮಣಿಸಿ ಪುಣೇರಿ ಪಲ್ಟನ್ ತಂಡವು ಎರಡನೇ ಜಯ ದಾಖಲಿಸಿತು.
ಬೆಂಗಳೂರು: ಯು ಮುಂಬಾ ತಂಡವನ್ನು 43- 32 ಅಂಕಗಳ ಅಂತರದಿಂದ ಸೋಲಿಸುವ ಮೂಲಕ ಪ್ರೊ ಕಬಡ್ಡಿ 10ನೇ ಆವೃತ್ತಿಯಲ್ಲಿ ಪುಣೇರಿ ಪಲ್ಟನ್ ತಂಡ ತನ್ನ ಎರಡನೇ ಗೆಲುವು ದಾಖಲಿಸಿದೆ. ಶುಕ್ರವಾರ ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ 17 ರೈಡಿಂಗ್‌ಗಳಲ್ಲಿ 12 ಅಂಕಗಳನ್ನು ಗಳಿಸಿದ ಮೋಹಿತ್ ಗೋಯತ್ ಅವರು, ಪಲ್ಟನ್ ತಂಡದ ಅದ್ಭುತ ಜಯಕ್ಕೆ ಕಾರಣರಾದರು. ಯು ಮುಂಬಾ ಮಣಿಸಿ ಎರಡನೇ ಜಯ ದಾಖಲಿಸಿದ ಪುಣೇರಿ ಪಲ್ಟನ್ಈ ಋುತುವಿನ …
Read More »ಬ್ರಾಂಡ್ ಬೆಂಗಳೂರಿನ ಅಡಿ ಫ್ಲೈಓವರ್ನ ಪಿಲ್ಲರ್ಗಳಿಗೆ ಕ್ರಿಕೆಟಿಗರ ಚಿತ್ರ
ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಪಾಲಿಕೆಯಿಂದ ಬ್ಯಾಂಡ್ – ಬೆಂಗಳೂರಿನ ಅಡಿ ಸಿಲಿಕಾನ್ ಸಿಟಿಯನ್ನು ಸುಂದರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇತ್ತೀಚೆಗೆ ಬೆಂಗಳೂರು ಹಬ್ಬವನ್ನು ಸಹ ಆಚರಿಸಿ ನಗರದ ಹಲವು ರಸ್ತೆಗಳು, ಜಂಕ್ಷನ್ ಕಟ್ಟಡಗಳನ್ನು ಸುಂದರಗೊಳಿಸಿ ವಿದ್ಯುತ್ ಅಲಂಕಾರದಿಂದ ಕಂಗೊಳಿಸುವಂತೆ ಮಾಡಲಾಗಿತ್ತು. ಫ್ಲೈಓವರ್ನ ಪಿಲ್ಲರ್ಗಳಿಗೆ ಕ್ರಿಕೆಟಿಗರ ಚಿತ್ರಫ್ಲೈ ಓವರ್ ಪಿಲ್ಲರ್ಗಳ ಕೆಳಗೆ ಸಹ , ಕುಳಿತುಕೊಳ್ಳಲು ಆಸನಗಳು ಮತ್ತು ಮಕ್ಕಳಿಗೆ ಆಟವಾಡಲು ಅನುವು ಮಾಡಿಕೊಡಲಾಗಿದೆ. ಪಿಲ್ಲರ್ಗಳಿಗೆ ಹಲವು ಚಿತ್ರಗಳನ್ನು ಸಹ ಬಿಡಿಸಿ ಸ್ಥಳವನ್ನು …
Read More »ನಟಿ ಲೀಲಾವತಿ ಪಾರ್ಥಿವ ಶರೀರ ಸಾರ್ವಜನಿಕರಿಂದ ಅಂತಿಮ ದರ್ಶನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಶುಕ್ರವಾರ (ನಿನ್ನೆ) ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದು, ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಲೀಲಾವತಿ ಅವರ ಪಾರ್ಥಿವ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಮತ್ತು ಅವರು ಹಿತೈಷಿಗಳು ಬಂದು ದರ್ಶನ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ 5:30 ರಿಂದ 10:45ರವರೆಗೂ ನೆಲಮಂಗಲದ ಡಾ.ಆರ್.ಅಂಬೇಡ್ಕರ್ ಅವರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿನೋದ್ ರಾಜ್ ಅವರ ಒಪ್ಪಿಗೆ ಮೇರೆಗೆ 11 …
Read More »ಗೌರಿ ಲಂಕೇಶ್ ಕೊಲೆ ಪ್ರಕರಣ 11 ನೇ ಆರೋಪಿ ಮೋಹನ್ ನಾಯಕ್ಗೆ ಷರತ್ತುಬದ್ಧ ಜಾಮೀನು
ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದ ಆರೋಪಕ್ಕೆ ಗುರಿಯಾಗಿರುವ ಎನ್. ಮೋಹನ್ ನಾಯಕ್ ಅಲಿಯಾಸ್ ಸಂಪಾಜೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇವರು ಇಡೀ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಮೊದಲ ಆರೋಪಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಎನ್ ಮೋಹನ್ ನಾಯಕ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ …
Read More »ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ್-ಸ್ಯಾಂಡಲ್ ವುಡ್ ನ ಹಿರಿಯ ನಟಿ ಡಾ. ಲೀಲಾವತಿ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ಲೀಲಾವತಿ ಅವರ ನಿಧನದಿಂದ ಚಿತ್ರೋದ್ಯಮವೂ ಸೇರಿದಂತೆ ಇಡೀ ನಾಡೇ ಬಡವಾಗಿದೆ. ಹಲವು ವರ್ಷಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ಅವರು, ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಬಹುಭಾಷೆ ನಟಿಯಾಗಿ ಗುರುತಿಸಿಕೊಂಡಿದ್ದ ಅವರು, ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ …
Read More »ಸತತ ಹಾಜರಿ: ಶಾಸಕ ಜನಾರ್ದನ ರೆಡ್ಡಿಗೆ ಉಡುಗೊರೆ
ಗಂಗಾವತಿ: ಕಳೆದ ವಿಧಾನಸಭೆಯ ಅಧಿವೇಶನದ ಕಲಾಪದ ಒಂದು ದಿನವೂ ಗೈರಾಗದೇ ಗಮನ ಸೆಳೆದಿದ್ದ ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿಗೆ ಸ್ಪೀಕರ್ ಯು.ಟಿ. ಖಾದರ್ ಉಡುಗೊರೆ ನೀಡುವ ಮೂಲಕ ಅಭಿನಂದಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಬಿಡುವಿನ ಸಂದರ್ಭದಲ್ಲಿ ತಮ್ಮ ಕೊಠಡಿಗೆ ಕರೆಯಿಸಿಕೊಂಡ ಸ್ಪೀಕರ್ ಪುಟ್ಟ ಉಡುಗೊರೆ ನೀಡಿ ಅಭಿನಂದನೆ ಸಲ್ಲಿಸಿದರು. ವಿಧಾನಸೌಧದಲ್ಲಿ ನಡೆದ ಕಳೆದ ಅಧಿವೇಶನದ 14 ದಿನಗಳ ಎಲ್ಲ ಕಾರ್ಯಕಲಾಪದಲ್ಲಿ ಸಮಯಕ್ಕೆ ಸರಿಯಾಗಿ ಹಾಜರಾಗಿ ದಿನದ …
Read More »