Breaking News

Monthly Archives: ಡಿಸೆಂಬರ್ 2023

ಮುಂದಿನ ವಾರದೊಳಗೆ ರೈತರಿಗೆ ಮೊದಲ ಹಂತದ ಬೆಳೆ ನಷ್ಟ ಪರಿಹಾರ:C.M.

ಬೆಳಗಾವಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಬೆಳೆ ನಾಶದಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂಪಾಯಿವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತಷ್ಟು ಯುದ್ಧೋಪಾದಿಯಲ್ಲಿ ಕೆಲಸ ಮುಂದುವರಿಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ …

Read More »

ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿಪರಾಜಿತ ಬಿಜೆಪಿ ಅಭ್ಯರ್ಥಿಯಾಗಿದ್ದ ಮಣಿಕಂಠ ರಾಠೋಡ್ ಮೇಲಿನ ಹಲ್ಲೆ ಘಟನೆ ಸಂಬಂಧ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.   ಸುವರ್ಣಸೌಧದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚಿತ್ತಾಪುರ ಪರಾಜಿತ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಹಲ್ಲೆ ಮಾಡಿರುವುದಾಗಿ ಸುಳ್ಳು ದೂರು ದಾಖಲಿಸಿದ್ದಾರೆ. ಪೊಲೀಸ್ ತನಿಖೆಯಿಂದ, ಫೊರೆನ್ಸಿಕ್ ವರದಿಯಲ್ಲಿ ಇದು …

Read More »

ಶೂನ್ಯ ವೇಳೆಯಲ್ಲಿ ಶಾಸಕ ಶಿವಲಿಂಗೇಗೌಡ, ಎಚ್.ಡಿ.ರೇವಣ್ಣ ಸೇರಿದಂತೆ ವಿವಿಧ ಶಾಸಕರು ಕೊಬ್ಬರಿ ಪ್ರೊತ್ಸಾಹಧನ ಹೆಚ್ಚಳಕ್ಕೆ ಕ್ರಮ

ಬೆಳಗಾವಿ/ಬೆಂಗಳೂರು: ರಾಜ್ಯ ಸರಕಾರ ತೆಂಗು ಬೆಳೆಗಾರರಿಗೆ ಸಹಾಯ ಮಾಡಲು, ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ನೀಡುವ ದರದೊಂದಿಗೆ ಕೊಬ್ಬರಿ ಖರೀದಿಗೆ ಈಗಾಗಲೇ 1,225 ರೂ.ಗಳನ್ನು ಪ್ರೊತ್ಸಾಹಧನ ನೀಡುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದರು.   ಶೂನ್ಯ ವೇಳೆಯಲ್ಲಿ ಶಾಸಕ ಶಿವಲಿಂಗೇಗೌಡ, ಎಚ್.ಡಿ.ರೇವಣ್ಣ ಸೇರಿದಂತೆ ವಿವಿಧ ಶಾಸಕರು ಕೊಬ್ಬರಿ ಖರೀದಿ ಬೆಲೆ ಬಹಳಷ್ಟು ಕಡಿಮೆ ಆಗಿರುವುದರಿಂದ ಸರಕಾರಗಳು ರೈತರ ನೆರವಿಗೆ ಬರಬೇಕೆಂದು ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ …

Read More »

ಶಬರಿ ಗಿರಿ ಸ್ವಾಮಿಗೆ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ನಲ್ಲಿ ಪೂಜೆ

ಗೋಕಾಕ: ಇದು ಕಾರ್ತಿಕ ಮಾಸ ಈ ಮಾಸ ಪ್ರಾರಂಭ ಆಗುತ್ತಿದ್ದ ಹಾಗೆ ನಾವು ಎಲ್ಲ ಕಡೆ ಅಯ್ಯಪ್ಪ ನ ಮಾಲಾ ದಾ ರಿ ಗಳು ಸುಮಾರು ಕಡೆ ನಮಗೆ ಕಾಣಿಸುತ್ತಾರೆ   ಇಂದು ಸಂತೋಷ್ ಜಾರಕಿಹೊಳಿ ಅವರ ಒಡೆತನದ ಕಾರ್ಖಾನೆಯಲಿ ಅಯ್ಯಪ್ಪನ ಪೂಜೆ ಮಾಡಿ ಭಕ್ತಿಭಯನ್ನಾ ಮೇರೆದಿದ್ದಾರೆ, ಪೂಜೆ, ಭಜನೆ,ಮಂಗಳರಾತಿ, ಹಾಗೂ ಪ್ರಸಾದ ವಿತರಣೆ ಕೂಡ ನಡೆಯಿತು, ಸುಮಾರು ಜನಾ ಆಯ್ಯಪನ ಭಕ್ತರು ಈ ಸಾಮಾ ರಂಭದಲ್ಲಿ ಭಾಗ ವಹಿಸಿ …

Read More »

ನಾನು ಸಿಎಂ ಸಿದ್ದರಾಮಯ್ಯ ವಕ್ತಾರನಲ್ಲ’: ಬಿ.ಕೆ. ಹರಿಪ್ರಸಾದ್​

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರ ‘ಮುಸ್ಲಿಂ ಸಮುದಾಯಕ್ಕೆ ಅನುದಾನ ನೀಡುವ ವಿಚಾರ’ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಕಾಂಗ್ರೆಸ್​ ನಾಯಕ ಬಿ ಕೆ ಹರಿಪ್ರಸಾದ್​ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಅವರು ಅನುಭವಿಗಳು, ಈ ಬಗ್ಗೆ ಅವರನ್ನೇ ಕೇಳಿ. ನಾನು ಅವರ ವಕ್ತಾರ ಅಲ್ಲ ಎಂದು ಹೇಳಿದ್ದಾರೆ. ಮತ್ತೊಂದೆಡೆ ಸಿಎಂ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಸಚಿವ ದಿನೇಶ್​ ಗುಂಡೂರಾವ್​ ಮರು ಪ್ರಶ್ನಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮುಸ್ಲಿಮರಿಗೆ ಅನುದಾನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ …

Read More »

ಬೀದರ್ : ನಕಲಿ ಕ್ಲಿನಿಕ್​ಗಳ ಮೇಲೆ ವೈದ್ಯಾಧಿಕಾರಿಗಳಿಂದ ದಿಢೀರ್ ದಾಳಿ, ಪರಿಶೀಲನೆ

ಬೀದರ್ : ಗಡಿ ಜಿಲ್ಲೆ ಬೀದರ್‌ನಲ್ಲಿ ನಕಲಿ ವೈದ್ಯರ ಹಾವಳಿ ಹಿನ್ನೆಲೆ ಇಂದು ಕಮಲನಗರ ತಾಲೂಕಿನ ಒಟ್ಟು 6 ನಕಲಿ ಕ್ಲಿನಿಕ್‌ಗಳ ಮೇಲೆ ದಿಢೀರ್ ದಾಳಿ ಮಾಡಿದ ವೈದ್ಯಾಧಿಕಾರಿಗಳು ನಕಲಿ ವೈದ್ಯರಿಗೆ ಶಾಕ್ ನೀಡಿದ್ದಾರೆ.   ನಕಲಿ ಕ್ಲಿನಿಕ್‌ಗಳಾದ ಡಾ. ಬಿಹಾರಿ ಕ್ಲಿನಿಕ್, ಲಕ್ಷ್ಮೀ ಕ್ಲಿನಿಕ್ ಸೇರಿದಂತೆ ಒಟ್ಟು 6 ಕ್ಲಿನಿಕ್‌ಗಳ ಮೇಲೆ ತಾಲೂಕಿನ ಆರೋಗ್ಯಾಧಿಕಾರಿ ಡಾ ಗಾಯತ್ರಿ ವಿಜಯಕುಮಾರ್ ಮತ್ತು ತಂಡದಿಂದ ದಾಳಿ ಮಾಡಲಾಗಿದೆ. ದಾಳಿ ಮಾಡಿ ನಕಲಿ ವೈದ್ಯರ …

Read More »

ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜಗದೀಶ್ ಶೆಟ್ಟರ್ ಸಮರ್ಥನೆ

ಹುಬ್ಬಳ್ಳಿ : ಮುಸ್ಲಿಂರ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂತಹ ವಿಚಾರ ದೊಡ್ಡದು ಮಾಡುವಂತದ್ದಲ್ಲವೇ ಅಲ್ಲ. ನನಗೆ ಅರ್ಥನೇ ಆಗ್ತಿಲ್ಲ. ಅವರು ಹೇಳಿದ ಹೇಳಿಕೆಯನ್ನು ನಾನು ನೋಡಿದ್ದೀನಿ. ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಹೇಳಿದ್ದಾರೆ. ಬೇರೆ ಬೇರೆ ಸಮಾಜಕ್ಕೆ ಹೋದಾಗ ಅವರವರ …

Read More »

ಮುಸ್ಲಿಂ ಸಮುದಾಯಕ್ಕೆ ಸಿಎಂ ಅನುದಾನ ಘೋಷಣೆ ವಿಚಾರ: ವಿಧಾನಸಭೆಯಲ್ಲಿ ಗದ್ದಲ, ಬಿಜೆಪಿ ಸಭಾತ್ಯಾಗ

ಬೆಳಗಾವಿ/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡುವುದಾಗಿ ಘೋಷಿಸಿದ ವಿಚಾರ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಸದನದಲ್ಲಿ ಗದ್ದಲ ಉಂಟುಮಾಡಿದ ಪ್ರತಿಪಕ್ಷದ ಸದಸ್ಯರು, ಮುಖ್ಯಮಂತ್ರಿಗಳು ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ಆದರೆ, ಇದಕ್ಕೆ ಸರ್ಕಾರ ಸ್ಪಂದಿಸಲಿಲ್ಲ. ಇದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಪ್ರಶ್ನೋತ್ತರ ಸಮಯ ಮುಗಿದ ಬಳಿಕ …

Read More »

ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ವೀರಮರಣ ಹೊಂದಿದ ಕ್ಯಾ. ಪ್ರಾಂಜಲ್​ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸಹಾಯಾರ್ಥವಾಗಿ ಚೆಕ್​ ವಿತರಣೆ

ಆನೇಕಲ್: ದೇಶಕ್ಕಾಗಿ ಉಗ್ರರ ವಿರುದ್ಧದ ಹೋರಾಟದಲ್ಲಿ ವೀರಮರಣ ಹೊಂದಿದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ಕೊಟ್ಟ ವಾಗ್ದಾನದಂತೆ ಜಿಲ್ಲಾಡಳಿತದ ಮೂಲಕ 50 ಲಕ್ಷ ರೂ. ಸಹಾಯಾರ್ಥವಾಗಿ ಚೆಕ್ ವಿತರಣೆ ಮಾಡಿದ್ದಾರೆ. ಕ್ಯಾಪ್ಟನ್ ಪ್ರಾಂಜಲ್ ಅಂತಿಮ ದರ್ಶನ ಪಡೆದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹುತಾತ್ಮ ವೀರ ಸೇನಾನಿ ಕುಟುಂಬಕ್ಕೆ 50 ಲಕ್ಷ ರಾಜ್ಯ ಸರ್ಕಾರದಿಂದ ಸಹಾಯಾರ್ಥವಾಗಿ ನೀಡುವುದಾಗಿ ಘೋಷಣೆ ಮಾಡಿದ್ದರು. ಕೊಟ್ಟ ಮಾತಿನಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ ದಯಾನಂದ್, ಬೆಂ.ಗ್ರಾ …

Read More »

ಲಿಡ್ಕರ್ ಉತ್ಪನ್ನಗಳ ರಾಯಭಾರಿಯಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ನೇಮಕ

ಬೆಂಗಳೂರು: ಲಿಡ್ಕರ್ ಉತ್ಪನ್ನಗಳ ರಾಯಭಾರಿಯಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ನೇಮಕ ಮಾಡಲಾಗಿದ್ದು, ಅವರು ಉಚಿತವಾಗಿ ಈ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.   ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 67ನೇ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭ ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂಬುದನ್ನು ಸಿಎಂ ಘೋಷಿಸಿದರು. …

Read More »