ಸೋಮವಾರ (ಡಿ.04) ರಂದು ಮುಖ್ಯಮಂತ್ರಿಗಳು ಆಡಿದ ಮಾತು ದೇಶ ಮತ್ತು ರಾಜ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹಿಂದೆ ಟಿಪ್ಪು (Tippu) ಮೇಲೆ ಅತಿಯಾದ ಪ್ರೀತಿ ತೋರಿಸಿ ಏನಾಯಿತು? ಹಿಂದೂಗಳನ್ನು ಎರಡನೇ ದರ್ಜೆ ಪ್ರಜೆಗಳ ರೀತಿ ನೋಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ವಾಗ್ದಾಳಿ ಮಾಡಿದರು. ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಮಾನತೆ ಇರಬೇಕು. ಟಿಪ್ಪು ಜಯಂತಿ, ಶಾಯಿ ಭಾಗ್ಯ, ಮುಸ್ಲಿಂ ವಿವಾಹಕ್ಕೆ ಧನ …
Read More »Monthly Archives: ಡಿಸೆಂಬರ್ 2023
ಜಲಶಕ್ತಿ ಯೋಜನೆ ಅಡಿ ಗ್ರಾಮೀಣ ಪ್ರದೇಶದ ಶೇ 71 ಮನೆಗಳಿಗೆ ನಲ್ಲಿ ನೀರಿನ ಸೌಕರ್ಯ
ನವದೆಹಲಿ: ಜಲಶಕ್ತಿ ಯೋಜನೆ ಅಡಿ ದೇಶದಾದ್ಯಂತ ಗ್ರಾಮೀಣ ಪ್ರದೇಶದ ಶೇ 71 ಮನೆಗಳಿಗೆ ನಲ್ಲಿ ನೀರಿನ ಸೌಕರ್ಯ ಕಲ್ಪಿಸಲಾಗಿದೆ ಎಂದು ರಾಜ್ಯಸಭೆಗೆ ಸೋಮವಾರ ಲಿಖಿತ ಉತ್ತರದ ಮೂಲಕ ತಿಳಿಸಲಾಯಿತು. ಸೆಪ್ಟೆಂಬರ್ 30ಕ್ಕೆ ಅನ್ವಯಿಸಿ, ಗ್ರಾಮೀಣ ಪ್ರದೇಶಗಳ ಪ್ರತಿ ಮನೆಗಳಿಗೂ ನಲ್ಲಿ ನೀರಿನ ಸೌಕರ್ಯ ಕಲ್ಪಿಸಲಾಗಿದೆ ಎಂದು ಒಂಬತ್ತು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ವರದಿ ನೀಡಿವೆ. ಅದರಂತೆ ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ತೆಲಂಗಾಣ ರಾಜ್ಯಗಳು ಹಾಗೂ …
Read More »ಈ ಅಧಿವೇಶನದಲ್ಲೂ ವಿಧಾನಪರಿಷತ್ ಕಲಾಪ ಅಧಿಕೃತ ವಿರೋಧ ಪಕ್ಷದ ನಾಯಕನಿಲ್ಲ
ಬೆಳಗಾವಿ: ಈ ಅಧಿವೇಶನದಲ್ಲೂ ವಿಧಾನಪರಿಷತ್ ಕಲಾಪ ಅಧಿಕೃತ ವಿರೋಧ ಪಕ್ಷದ ನಾಯಕನಿಲ್ಲದೆಯೇ ನಡೆಯುವ ಸಾಧ್ಯತೆ ಇದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಆರ್. ಅಶೋಕ ಅವರನ್ನು ಆಯ್ಕೆ ಮಾಡಿದಾಗಲೇ, ಪರಿಷತ್ತಿಗೂ ಆಯ್ಕೆಯಾಗಲಿದೆ ಎಂದು ಹೇಳಲಾಗಿತ್ತು. ಬೆಳಗಾವಿ ಅಧಿವೇಶನದ ಎರಡು ದಿನ ಮೊದಲು ಪಕ್ಷದ ವರಿಷ್ಠರು ಹೆಸರು ಸೂಚಿಸಬಹುದು ಎನ್ನಲಾಗಿತ್ತು. ಬಿಜೆಪಿ ರಾಜ್ಯ ನಾಯಕರು ಮೂವರ ಹೆಸರುಗಳನ್ನು ದೆಹಲಿಗೆ ಕಳುಹಿಸಿದ್ದು, ಯಾವುದಕ್ಕೂ ವರಿಷ್ಠರು ಒಪ್ಪಿಗೆ ನೀಡಿಲ್ಲ. ಈ ಬಾರಿಯೂ ಆಯ್ಕೆ ಆಗುವ …
Read More »ರಾಜ್ಯದಲ್ಲಿರುವ ವಿಶೇಷ ಮಕ್ಕಳ ಶಾಲೆಯ ಶಿಕ್ಷಕರ ವೇತನ ತಾರತಮ್ಯ ನಿವಾರಣೆ ಮಾಡಬೇಕು
ಬೆಳಗಾವಿ: ರಾಜ್ಯದಲ್ಲಿರುವ ವಿಶೇಷ ಮಕ್ಕಳ ಶಾಲೆಯ ಶಿಕ್ಷಕರ ವೇತನ ತಾರತಮ್ಯ ನಿವಾರಣೆ ಮಾಡಬೇಕು, ಎಲ್ಲ ಸರ್ಕಾರಿ ಶಾಲೆಗಳ ಮಾದರಿಯಲ್ಲಿ ತಮ್ಮನ್ನೂ ಪರಿಗಣಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ವಿಶೇಷ ಶಾಲೆಗಳ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿ, ಸಮೀಪದ ಸುವರ್ಣ ವಿಧಾನಸೌಧದ ಬಳಿ ಸೋಮವಾರ ಧರಣಿ ನಡೆಸಿದರು. ರಾಜ್ಯದಲ್ಲಿ 34 ಅನುದಾನಿತ ಶಾಲೆಗಳು, 136 ಶಾಲೆಗಳು ಶಿಶುಕೇಂದ್ರಿದ ಎಂಬ ಅವೈಜ್ಞಾನಿಕ ಯೋಜನೆ ಅಡಿ ಇವೆ. 1982ರ ಅಧಿನಿಯಮದ ಪ್ರಕಾರ ಇರುವ 34 …
Read More »ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವಿದೆ.
ಚನ್ನಮ್ಮನ ಕಿತ್ತೂರು: ‘ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವಿದೆ. ಅದನ್ನು ಸಾಹಿತಿ, ಕವಿಗಳು ಅಧ್ಯಯನ ಮಾಡಬೇಕು. ನಿರಂತರ ಓದುವಿಕೆ ಶ್ರೇಷ್ಠ ಸಾಹಿತ್ಯ ರಚನೆಗೆ ಸಹಕಾರಿ’ ಎಂದು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು. ಇಲ್ಲಿಯ ಕಲ್ಮಠದ ಶಂಕರ ಚಂದರಗಿ ಸಭಾಭವನದಲ್ಲಿ ಸುವರ್ಣ ಕರ್ನಾಟಕ-50 ಸಂಭ್ರಮದ ಅಂಗವಾಗಿ ಭಾನುವಾರ ನಡೆದ ಜಿಲ್ಲಾ ಮಟ್ಟದ ಕವಿಗೋಷ್ಠಿಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ‘ಕುವೆಂಪು ಅವರ ಸಾಹಿತ್ಯದಲ್ಲಿ ನಿಸರ್ಗ ಶ್ರೀಮಂತಿಕೆ …
Read More »ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ: ಜೊಲ್ಲೆ
ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ ಪ್ರಸ್ತಾವಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಯೋಜನೆಯನ್ನು ನಗರದ ಮುಂದಿನ 50 ವರ್ಷಗಳ ಕಾಲಾವಧಿಯ ಜನಸಂಖ್ಯೆಯ ಆಧಾರದ ಮೇಲೆ ಲೆಕ್ಕಾಚಾರ ಮಾಡಿ ರೂಪುರೇಷೆ ಸಿದ್ಧಪಡಿಸಿ ಕಾಮಗಾರಿಯ ವಿಸ್ತೃತ ಯೋಜನಾ ವರದಿಯನ್ನು …
Read More »ಸಮಾಜಕ್ಕೆ ಛಾಯಾಗ್ರಾಹಕರ ಕೊಡುಗೆ ಅನನ್ಯ: ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ
ಬೈಲಹೊಂಗಲ: ‘ಪ್ರತಿಯೊಬ್ಬ ಛಾಯಾಗ್ರಾಹಕರು ತಮ್ಮ ವೃತ್ತಿ ಬದುಕಿನ ಜೊತೆಗೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು’ ಎಂದು ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೇಳಿದರು. ಪಟ್ಟಣದ ಗಣಾಚಾರಿ ಕಲ್ಯಾಣ ಮಂಟಪದಲ್ಲಿ ನಡೆದ ತಾಲ್ಲೂಕು ಪೋಟೊಗ್ರಾಫರ್ ಮತ್ತು ವಿಡಿಯೊಗ್ರಾಫರ್ ಸಂಘದ 8ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ‘ಸ್ಥಳೀಯವಾಗಿಯು ಸಾಕಷ್ಟು ಹಿರಿಯ ಛಾಯಾಗ್ರಾಹಕರು ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕಿರಿಯ ಛಾಯಾಗ್ರಾಹಕರು ಮುನ್ನಡೆಯಬೇಕು. ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡಬೇಕು’ …
Read More »ಅಮಟೂರು ಬಾಳಪ್ಪನ ರಾಜ್ಯ ಮಟ್ಟದ ಸರ್ಕಾರಿ ಉತ್ಸವ ಆಚರಣೆ ಕನಸಾಗಿಯೇ ಉಳಿದಿರುವುದು ಗ್ರಾಮಸ್ಥರಲ್ಲಿ ನೋವು
ಬೈಲಹೊಂಗಲ: ಐತಿಹಾಸಿಕವಾಗಿ ಕಿತ್ತೂರು ಸಂಸ್ಥಾನದೊಂದಿಗೆ ಬೆಸೆದುಕೊಂಡಿರುವ ತಾಲ್ಲೂಕಿನ ಅಮಟೂರು ಗ್ರಾಮದಲ್ಲಿ ಡಿ. 4ರಂದು ವೀರಕೇಸರಿ ಅಮಟೂರು ಬಾಳಪ್ಪನ ಉತ್ಸವ ಆಚರಣೆ ನಡೆಯಲಿದೆ. ಆದರೆ ಅಮಟೂರು ಬಾಳಪ್ಪನ ರಾಜ್ಯ ಮಟ್ಟದ ಸರ್ಕಾರಿ ಉತ್ಸವ ಆಚರಣೆ ಕನಸಾಗಿಯೇ ಉಳಿದಿರುವುದು ಗ್ರಾಮಸ್ಥರಲ್ಲಿ ನೋವು ಉಂಟು ಮಾಡಿದೆ. ಗ್ರಾಮಸ್ಥರಲ್ಲಿ ನಿರಾಸೆ: ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮ ಉತ್ಸವದಂತೆ ಅಮಟೂರು ಬಾಳಪ್ಪನ ಉತ್ಸವ ಆಚರಣೆ ನಡೆಯುತ್ತದೆ. ಸಾಕಷ್ಟು ಅನುದಾನ ಬರುತ್ತದೆ. ಗ್ರಾಮದಲ್ಲಿ ಬಾಳಪ್ಪನ …
Read More »ಕಾಡಾನೆ ದಾಳಿಗೆ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಬಲಿ
ಹಾಸನ : ಕಾಡಾನೆ ದಾಳಿಗೆ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಬಲಿಯಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಇಂದು ನಡೆದಿದೆ. ಅರ್ಜುನ ಸೇರಿ ನಾಲ್ಕು ಪಳಗಿದ ಆನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುವ ವೇಳೆ ಘಟನೆ ಸಂಭವಿಸಿದೆ. ಅಂಬಾರಿ ಹೊತ್ತು ಗಾಂಭೀರ್ಯದ ನಡೆಯೊಂದಿಗೆ ಅರ್ಜುನಅರಣ್ಯ ಇಲಾಖೆ ಸಿಬ್ಬಂದಿ ಪುಂಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡುವಾಗ ಆ ಆನೆ ಅರ್ಜುನನ ಮೇಲೆ ದಾಳಿ ನಡೆಸಿದೆ. ಒಂಟಿ …
Read More »ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಚೈತ್ರಾಗೆ ಜಾಮೀನು ಮಂಜೂರು
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬಂಧಿತಳಾಗಿದ್ದ ಚೈತ್ರಾ ಸೇರಿದಂತೆ ಇಬ್ಬರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್ನಲ್ಲಿ ಚೈತ್ರಾ ಬಂಧನವಾಗಿತ್ತು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ …
Read More »