ಬೆಳಗಾವಿ : ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಂದು ರಾತ್ರಿಯೇ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತ ಬೀದಿಗಳಿಯಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಸ್ಸಿ ಮೋರ್ಚಾ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ಹಾಡಹಗಲೇ ಹಲ್ಲೆ ನಡೆಸಲಾಗಿದೆ. ಅವರ …
Read More »Monthly Archives: ಡಿಸೆಂಬರ್ 2023
ಅರಣ್ಯದಲ್ಲಿ ಶೇ.40ರಷ್ಟು ಕಳೆ, ವನ್ಯಜೀವಿಗಳಿಗೆ ಸಮಸ್ಯೆಯಾಗುತ್ತಿರುವುದು ನಿಜ : ಈಶ್ವರ ಖಂಡ್ರೆ
ಬೆಳಗಾವಿ/ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಕಳೆ ಹೆಚ್ಚಾಗುತ್ತಿರುವುದರಿಂದ ವನ್ಯಜೀವಿಗಳಿಗೆ ಸಮಸ್ಯೆಯಾಗುತ್ತಿದ್ದು, ಕಳೆ ತೆರವು ಮಾಡಿ ವನ್ಯಜೀವಿಗಳ ಸಂಚಾರ ಮತ್ತು ಆಹಾರ ಲಭ್ಯತೆ ಹೆಚ್ಚಿಸಲು ಬೇಕಾದ ಎಲ್ಲ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ. ಅದೇ ರೀತಿ ಆನೆ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ಶಾಶ್ವತ ಪರಿಹಾರವಾಗಿದ್ದು, ಅಗತ್ಯವಿರುವ ಕಡೆ ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಕ್ರಮವಹಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಪ್ರಶ್ನೆಗೆ …
Read More »ಬಡ್ಡಿ ವಸೂಲಿ, ಜೀವ ಬೆದರಿಕೆ ಮೂವರ ವಿರುದ್ಧ ದೂರು
ಬಡ್ಡಿ ವಸೂಲಿ, ಜೀವ ಬೆದರಿಕೆ ಮೂವರ ವಿರುದ್ಧ ದೂರು ಗೋಕಾಕ: ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ತಾವು 2018-19ರಲ್ಲಿ ಪಡೆದಿದ್ದ ₹3. 5 ಲಕ್ಷ ಸಾಲಕ್ಕೆ ಅಸಲು-ಬಡ್ಡಿ ಸೇರಿಸಿ ಒಟ್ಟು ₹17 ಲಕ್ಷ ಪಾವತಿಸಿದ್ದರೂ ಸಾಲ ಮತ್ತು ಬಡ್ಡಿವಸೂಲಿಗೆ ಮನೆಗೆ ಬಂದು ಜೀವ ಬೆದರಿಕೆ ಹಾಕಿದ್ದಾರೆ . ಎಂದು ಮೂವರ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗಪ್ಪ ಸಿದ್ದಪ್ಪ ಮಂಗಿ ಮತ್ತು ಸಹೋದರರಾದ ಸಿದ್ದಪ್ಪ ಮತ್ತು …
Read More »ರಮೇಶ್ ಜಾರಕಿಹೊಳಿ ಆಪ್ತನ ಮೇಲೆ ಹಲ್ಲೆ , ಚನ್ನರಾಜ ಹಟ್ಟಿಹೋಳಿ ಹಾಗೂ ಬೆಂಬಲಿಗರೇ ಈ ಘಟನೆಗೆ ಕಾರಣ ಎಂದು ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಪ್ರಕರಣ ದಾಖಲ
ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಹಾಗೂ ಬಿಜೆಪಿ ಮುಖಂಡನ ಮೇಲೆ ಕೆಲವರು ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸೋಮವಾರ ಸಂಜೆ ಜಯನಗರದ ಪೃಥ್ವಿ ಸಿಂಗ್ ಅವರ ಮನೆ ಮುಂದೆ ಐದಾರು ಜನರು ಏಕಾಏಕಿ ಬಂದು, ಹೊರಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪೃಥ್ವಿ ಸಿಂಗ್ ಅವರು ಕೆಲವರ ಜೊತೆಗೆ ಮಾತನಾಡುತ್ತಿರುವುದು ಅವರ ಮನೆ ಬಳಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಗೊಂಡ ತಕ್ಷಣ ಪೃಥ್ವಿ …
Read More »ಭವಾನಿ ಸಿಟ್ಟಿನಿಂದ ಮಾತನಾಡಿದ್ದಾರೆ, ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ: ಹೆಚ್ ಡಿ ರೇವಣ್ಣ
ಬೆಳಗಾವಿ : ಭವಾನಿ ಅವರ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ. ತಾವಿದ್ದ ಕಾರಿಗೆ ಗುದ್ದಿದ ಬೈಕ್ ಸವಾರನಿಗೆ ಭವಾನಿ ರೇವಣ್ಣ ಬೈದಿರುವ ಬಗ್ಗೆ ಪ್ರತಿಕ್ರಿಯಿಸಿ, ಬೈಕ್ ಸವಾರನೇ ಒಂದು ಬದಿಯಿಂದ ಬಂದು ಗುದ್ದಿದ್ದಾನೆ. ಹೆಚ್ಚು ಕಡಿಮೆ ಆಗಿದ್ದರೆ ಏನಾಗುತ್ತಿತ್ತು?. ಅವರು ಏನೂ ಅಹಂಕಾರದಿಂದ ಮಾತಾಡಿಲ್ಲ. ಭವಾನಿ ಅವರು ಯಾರದ್ದೋ ಸ್ನೇಹಿತನ ಕಾರಿನಲ್ಲಿ ಹೋಗಿದ್ದರು. ಹೀಗಾಗಿ ಅವರು ಸಿಟ್ಟಲ್ಲಿ ಮಾತನಾಡಿದ್ದಾರೆ. …
Read More »ವಿಧಾನಸಭೆ ಕಲಾಪದಲ್ಲಿ 18 ಮಸೂದೆಗಳ ಮಂಡನೆಗೆ ಕಲಾಪ ಸಲಹಾ ಸಮಿತಿ ಸಭೆ
ಬೆಳಗಾವಿ/ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ 18 ಮಸೂದೆಗಳ ಮಂಡನೆಗೆ ಕಲಾಪ ಸಲಹಾ ಸಮಿತಿ ಸಭೆ (ಬಿಎಸಿ)ಯಲ್ಲಿ ಚರ್ಚೆ ನಡೆಸಲಾಯಿತು. ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 18 ಮಸೂದೆ ಮಂಡನೆ ಸಂಬಂಧ ಚರ್ಚೆ ನಡೆಸಲಾಯಿತು. ಮುಂದಿನ ವಾರದಿಂದ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಮಧ್ಯಾಹ್ನದ ಬಳಿಕ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬರ ನಿರ್ವಹಣೆ ಸಂಬಂಧ ಸದನಕ್ಕೆ ಮಾಹಿತಿ ನೀಡಲಿದ್ದಾರೆ. ಬಳಿಕ ಪ್ರತಿಪಕ್ಷಗಳು …
Read More »ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ : ರೇವತಿ ಮಠದ ಅಭಿಮತ
ಗೋಕಾಕ ಡಿ 4 : ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ ಅವರಿಗೆ ನಿರಂತರ ಪ್ರೋತ್ಸಾಹ ಮತ್ತು ಬೆಂಬಲ ಅತಿ ಅಗತ್ಯ ಎಂದು ಶಿಕ್ಷಣ ಇಲಾಖೆಯ ಯೋಜನಾ ಸಮನ್ವಯ ಅಧಿಕಾರಿ ಶ್ರೀಮತಿ ರೇವತಿ ಮಠದ ಹೇಳಿದರು. ನಗರದ ಅಡಿಬಟ್ಟಿ ಬಡಾವಣೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ, ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಲಯನ್ಸ್ ಕಬ್ಲ್ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಅಂಗವಿಕಲರ ದಿನಾಚರಣೆಯನ್ನು ಉದ್ಘಾಟಿಸಿ ಅವರು …
Read More »ನಿಷೇಧದ ನಡುವೆ ಎಂಇಎಸ್ ಮುಖಂಡರ ಪ್ರತಿಭಟನೆ
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಈ ನಡುವೆ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಘೋಷಣೆ ಕೂಗುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿನ ಹುತಾತ್ಮ ಸ್ಮಾರಕಕ್ಕೆ ಭೇಟಿ ನೀಡಿದ ಎಂಇಎಸ್ ನಾಯಕರು, ಗೌರವ ಸಲ್ಲಿಸಿದರು. ನಿಷೇಧಾಜ್ಞೆ ಹೇರಿದ್ದರಿಂದ ಕರ್ನಾಟಕದಲ್ಲಿ ಅನುಮತಿ ಸಿಗದ ಹಿನ್ನೆಲೆ ಮಹಾರಾಷ್ಟ್ರದ ಶಿನೊಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಶಿನೊಳ್ಳಿಗೆ ತೆರಳುವ ಮುನ್ನ ಹುತಾತ್ಮರ ಸ್ಮಾರಕಕ್ಕೆ ಎಂಇಎಸ್ ನಾಯಕರು …
Read More »ಚಳಿಗಾಲದ ಅಧಿವೇಶನ ಪ್ರಾರಂಭ ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಚರ್ಚೆಯಾಗಲಿ
ಬೆಳಗಾವಿ: ಇವತ್ತಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಈ ಭಾಗವನ್ನು ಕೇಂದ್ರಸ್ಥಳವಾಗಿ ಇಟ್ಟುಕೊಂಡು ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಚರ್ಚೆಯಾಗಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಚುನಾವಣೆಯಲ್ಲಿ ಹಿನ್ನಡೆ: ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದಕ್ಕೆ ಸಂತೋಷವಾಗಿದೆ. ಮೂರು ರಾಜ್ಯಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ನಾವು ಈ ರೀತಿ ಆಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಹಿಂದಿ ಭಾಷೆಯ ಪ್ರಾಂತ್ಯದಲ್ಲಿ ನಮಗೆ …
Read More »ಬಿಎಂಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರು ಸುಟ್ಟು ಕರಕಲು
ಬೆಂಗಳೂರು: ವೇಗವಾಗಿ ಬಂದ ಕಾರು ಬಿಎಂಟಿಸಿ ಬಸ್‌ಗೆ ಡಿಕ್ಕಿಯಾಗಿ ಅಗ್ನಿಗಾಹುತಿಯಾದ ಘಟನೆ ಇಂದು ಬೆಳಿಗ್ಗೆ ನಾಗರಭಾವಿ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ಬಸ್ ನಿಲ್ದಾಣದ ಬಳಿ ನಡೆಯಿತು. ಯಶವಂತಪುರದಿಂದ ನಾಯಂಡಹಳ್ಳಿಗೆ ತೆರಳುತ್ತಿದ್ದ ಬಸ್ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಪ್ರಯಾಣಿಕರನ್ನು ಇಳಿಸಲು ಹಾಗೂ ಹತ್ತಿಸಿಕೊಳ್ಳಲು ಚಂದ್ರಾಲೇಔಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಹಿಂಬದಿಯಿಂದ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಉಂಟಾದ ಘರ್ಷಣೆಯಿಂದ ಬೆಂಕಿ ಹತ್ತಿಕೊಂಡಿದ್ದು, ಕಾರು ಪೂರ್ತಿಯಾಗಿ …
Read More »