ಹಾವೇರಿ: ಹಾನಗಲ್ ತಾಲೂಕಿನ ಆಡೂರು ಪೊಲೀಸರು ಕಾರ್ಯಾಚರಣೆ ನಡೆಸಿ 7 ಜೀವಂತ ನಾಡ ಬಾಂಬ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಡ ಬಾಂಬ್ ಇಟ್ಟಿದ್ದ ಆರೋಪದಡಿ ದುರ್ಗಪ್ಪ ತುರಬಿಗುಡ್ಡ (50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಾಡು ಹಂದಿ ಬೇಟೆಯಾಡುವ ಉದ್ದೇಶದಿಂದ ಕುಸನೂರು ಅರಣ್ಯ ಪ್ರದೇಶದಲ್ಲಿ ಈತ ನಾಡ ಬಾಂಬ್‌ಗಳನ್ನು ಇಟ್ಟಿದ್ದ. ಈ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪತ್ತೆಯಾದ 7 ಜೀವಂತ ನಾಡಬಾಂಬ್‌ಪ್ರತ್ಯೇಕ ಪ್ರಕರಣ- ಖಾಸಗಿ ಫೋಟೋ ಸೆರೆಹಿಡಿದು …
Read More »Monthly Archives: ಡಿಸೆಂಬರ್ 2023
2024ರ ಲೋಕಸಭೆಯ ಹ್ಯಾಟ್ರಿಕ್ ಗೆಲುವಿಗೆ ಗ್ಯಾರಂಟಿ ಸಿಕ್ಕಿದೆ : ಪ್ರಧಾನಿ ಮೋದಿ ವಿಶ್ವಾಸ
ನವದೆಹಲಿ : ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದರು. ಬಳಿಕ ಚುನಾವಣಾ ಫಲಿತಾಂಶ ಮತ್ತು ಇದಕ್ಕಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ವಿಧಾನಸಭೆ ಚುನಾವಣೆಯ ಗೆಲುವು ಐತಿಹಾಸಿಕ ಮತ್ತು ಅಭೂತಪೂರ್ವ ಗೆಲುವು. ಸಬ್ಕಾ ಸಾಥ್ ಸಬ್ಕಾ ವಿಕಾಸ್ ಎಂಬ ಭಾವನೆ ಇಂದು ಗೆದ್ದಿದೆ. ಈ ಗೆಲುವು ಸ್ವಾವಲಂಬಿ …
Read More »ಬೆಳಗಾವಿಯಲ್ಲಿ ಅಧಿವೇಶನದ ಸಂತಾಪ ಸೂಚನೆ ಮುಗಿಯುತ್ತಿದ್ದಂತೆ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಹಾಗು ಜೆಡಿಎಸ್ ಸಿದ್ಧ
ಬೆಂಗಳೂರು : ಕುಂದಾನಗರಿ ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಹಣಿಯಲು ಪ್ರತಿಪಕ್ಷಗಳಾದ ಬಿಜೆಪಿ ಹಾಗು ಜೆಡಿಎಸ್ ಜಂಟಿಯಾಗಿ ಅಖಾಡಕ್ಕೆ ದುಮುಕಲು ಸಿದ್ಧವಾಗಿದ್ದು, ಪರಸ್ಪರ ಸಹಕಾರದಿಂದ ಒಟ್ಟಾಗಿ ಕಾಂಗ್ರೆಸ್ ಎದುರಿಸಲು ಸನ್ನದ್ಧವಾಗಿವೆ. ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈಗ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಸದನದಲ್ಲಿ ಉಭಯ ಪ್ರತಿಪಕ್ಷಗಳು ಜಂಟಿಯಾಗಿ ವಾಗ್ದಾಳಿ ನಡೆಸಲಿವೆ. …
Read More »ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ನಾಲ್ಕು ರಾಜ್ಯಗಳ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಡ್ದಲ್ಲಿ ಹಿನ್ನಡೆ ಆಗಿದೆ. ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ …
Read More »ತೆಲಂಗಾಣದ ಎರಡನೇ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ
ಹೈದರಾಬಾದ್ (ತೆಲಂಗಾಣ): ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಕಾಂಗ್ರೆಸ್ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ಇದರೊಂದಿಗೆ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ನ 10 ವರ್ಷಗಳ ಆಡಳಿತ ಅಂತ್ಯವಾಗಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎ. ರೇವಂತ್ ರೆಡ್ಡಿ ರಾಜ್ಯದ ಎರಡನೇ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಸೋಮವಾರ (ಡಿಸೆಂಬರ್ 4) ಪ್ರಮಾಣವಚನ ಸ್ವೀಕಾರ …
Read More »ತೆಲಂಗಾಣದಲ್ಲಿ ಬಿಆರ್ಎಸ್ ಭ್ರಷ್ಟಾಚಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ: ಪ್ರಿಯಾಂಕ್ ಖರ್ಗೆ
ಕಲಬುರಗಿ: ತೆಲಂಗಾಣದಲ್ಲಿ ಬಿಎಸ್ಆರ್ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ವಿರುದ್ಧ ಜನರ ಆಕ್ರೋಶ ವ್ಯಕ್ತವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಖುದ್ದಾಗಿ ತೆಲಂಗಾಣಕ್ಕೆ ಭೇಟಿ ನೀಡಿದ್ದೇನೆ. 10 ವರ್ಷದ ಕೆಸಿಆರ್ ಆಡಳಿತದಲ್ಲಿ 10 ಸ್ಕ್ಯಾಮ್ ಗಳಲ್ಲಿ 10 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿದೆ. ಕಾಳೇಶ್ವರಂ ನೀರಾವರಿ ಯೋಜನೆಯೊಂದರಲ್ಲೇ 1.50 ಲಕ್ಷ ಕೋಟಿ ಅವ್ಯವಹಾರ ಆಗಿರುವ ಬಗ್ಗೆ ಅಲ್ಲಿನ …
Read More »ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್ ಮೂರು ರಾಜ್ಯಗಳಿಗೆ ಬಿಜೆಪಿಯೇ ಬಾಸ್
ಪ್ರಚಂಡ ವಿಜಯಕ್ಕೆ ಕಾರಣೀಕರ್ತರಾದ ಮತದಾರ ಪ್ರಭುಗಳು ಹಾಗೂ ಕಾರ್ಯಕರ್ತರಿಗೆ ಅಭಿನಂಧನೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡ್ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಐತಿಹಾಸಿಕ ಜಯ ಸಾಧಿಸಿರುವುದಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಇನ್ನೇನೂ ಲೋಕಸಭೆಯ ಚುನಾವಣೆಯ ಹೊಸ್ತಿನಲ್ಲಿರುವಾಗ ಈ ರಾಜ್ಯಗಳ ಫಲಿತಾಂಶಗಳು ನಮ್ಮ ಕಾರ್ಯಕರ್ತರನ್ನು ಹುರಿದುಂಬಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯ ಕೇಂದ್ರ ಸರ್ಕಾರದ ಯೋಜನೆಗಳಿಂದ ಮತದಾರರು ಬಿಜೆಪಿಗೆ ಫುಲ್ …
Read More »ಸುವರ್ಣಸೌಧದಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದ್ ಸಭಾಧ್ಯಕ್ಷ&ಸಭಾಪತಿ
ಬೆಳಗಾವಿ/ಬೆಂಗಳೂರು: ವಿಧಾನಮಂಡಲದ ಚಳಿಗಾಲ ಅಧಿವೇಶನ ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ವಿಧಾನಸಭಾಧ್ಯಕ್ಷ ಯು ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪರಿಶೀಲನೆ ನಡೆಸಿದರು. ಸುವರ್ಣಸೌಧದಲ್ಲಿ ಕೈಗೊಂಡಿರುವ ಸಿದ್ಧತೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ನೀಡಿದರು. ಸುವರ್ಣಸೌಧದ ಪ್ರವೇಶದ್ವಾರಗಳಲ್ಲಿನ ಸಿದ್ಧತೆ, ವಿಧಾನಸಭಾ ಸದನ, ವಿಧಾನ ಪರಿಷತ್ ಸದನಗಳನ್ನು ವೀಕ್ಷಿಸಿದ ಅವರು ಮೈಕ್ ವ್ಯವಸ್ಥೆ ಸೇರಿ …
Read More »ಅಧಿವೇಶನದ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪೊಲೀಸರ ವಸತಿಗೆ ನಿರ್ಮಿಸಿರುವ ಜರ್ಮನ್ ಟೆಂಟ್ಗೆ ಡಿಜಿ ಐಜಿಪಿ ಅಲೋಕ್ ಮೋಹನ್ ಭೇಟಿ
ಬೆಳಗಾವಿ: ತಾಲೂಕಿನ ಅಲಾರವಾಡ ಗ್ರಾಮದ ಹೊರ ವಲಯದಲ್ಲಿ ಚಳಿಗಾಲದ ಅಧಿವೇಶನದ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪೊಲೀಸರ ವಸತಿಗೆ ನಿರ್ಮಿಸಿರುವ ಜರ್ಮನ್ ಟೆಂಟ್ಗೆ ಡಿಜಿ – ಐಜಿಪಿ ಅಲೋಕ್ ಮೋಹನ್ ಅವರು ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ನಡೆಸಿದರು. 10 ದಿನಗಳ ಚಳಿಗಾಲದ ಅಧಿವೇಶನಕ್ಕೆ ಅಧಿವೇಶನ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪೊಲೀಸರ ವಸತಿಗೆ ಜರ್ಮನ್ ಟೆಂಟ್ ಮೂಲಕ ಟೌನ್ ಶಿಪ್ ನಿರ್ಮಿಸಲಾಗಿದೆ. ಟೆಂಟ್ಗಳಿಗೆ ಭೇಟಿ ನೀಡಿದ ಅಲೋಕ್ ಮೋಹನ್ ಅವರು ಪೊಲೀಸ್ ಸಿಬ್ಬಂದಿಗಳನ್ನು ಮಾತನಾಡಿಸಿ ಇಲ್ಲಿ …
Read More »ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್ಗೆ ಅನುಮತಿ ನಿರಾಕರಣೆ : ಪೊಲೀಸ್ ಕಮೀಷ್ನರ್ ಖಡಕ್ ಆದೇಶ
ಬೆಳಗಾವಿ : ಮಹಾಮೇಳಾವ್ ಸಿದ್ಧತೆಯಲ್ಲಿ ತೊಡಗಿದ್ದ ಎಂಇಎಸ್‌ಗೆ ಬೆಳಗಾವಿ ಜಿಲ್ಲಾಡಳಿತ ಬಿಗ್ ಶಾಕ್ ಕೊಟ್ಟಿದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮಹಾಮೇಳಾವ್ಗೆ ಅನುಮತಿ ನಿರಾಕರಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಖಡಕ್ ಆದೇಶ ಹೊರಡಿಸಿದ್ದಾರೆ. ಅನುಮತಿ ನಿರಾಕರಣೆ ಮಧ್ಯೆಯೂ ಎಂಇಎಸ್ ಮಹಾಮೇಳಾವ್ ನಡೆಸುವ ಸಾಧ್ಯತೆ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರು, ಬೆಳಗಾವಿಯ ಮೂರು ಪ್ರಮುಖ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದಿದ್ದಾರೆ. ಟಿಳಕವಾಡಿ …
Read More »