Breaking News

Monthly Archives: ಡಿಸೆಂಬರ್ 2023

ಮಾದಪ್ಪನ ಬೆಟ್ಟದಲ್ಲಿ ಹುಂಡಿ ಎಣಿಕೆ: 23 ದಿನಗಳಲ್ಲಿ 2 ಕೋಟಿ ರೂ. ಸಂಗ್ರಹ

ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲ್ಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆ ಮಾಡಲಾಯಿತು. 23 ದಿನಗಳ ಅವಧಿಯಲ್ಲಿ 2 ಕೋಟಿ ರೂ. ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆದಿದ್ದು, ಕಡಿಮೆ ಅವಧಿಯಲ್ಲಿ ಹೆಚ್ಚು ಹಣ …

Read More »

ಕಲಾಪದಲ್ಲಿ ಜಂಟಿ ಸಮರ; ಬಿಜೆಪಿ-ಜೆಡಿಎಸ್​ ನಾಯಕರಿಂದ ರಹಸ್ಯ ಸಮಾಲೋಚನೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿ.4ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ವಿರುದ್ಧ ಪಟ್ಟಾಗಿ ಕುಸ್ತಿಗೆ ಇಳಿಯಲು ದೋಸ್ತಿಗಳು ಸಜ್ಜಾಗಿದ್ದಾರೆ. ರೇಸ್​ಕೋರ್ಸ್ ರಸ್ತೆಯಲ್ಲಿನ ಅಪಾರ್ಟ್​ವೆುಂಟ್​ವೊಂದರಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ರಹಸ್ಯ ಸಮಾಲೋಚನೆ ನಡೆಸಿ, ಸದನದಲ್ಲಿ ಹೂಡಲಿರುವ ಜಂಟಿ ಸಮರದ ತಂತ್ರಗಳಿಗೆ ಅಂತಿಮ ಸ್ಪರ್ಶ ನೀಡಿದರು. ರಾಜ್ಯದ ಹಿತ, ರಚನಾತ್ಮಕವಾಗಿ ಜವಾಬ್ದಾರಿ ನಿರ್ವಹಣೆ, ಸದನದ ಅಮೂಲ್ಯ ಸಮಯ ವ್ಯರ್ಥವಾಗದಂತೆ ನೋಡಿಕೊಳ್ಳುವ ವಿಚಾರದಲ್ಲಿ ಉಭಯ ಪಕ್ಷಗಳು ಬದ್ಧವಾಗಿರಲು ಸಮ್ಮತಿಸಿವೆ. ವೈಫಲ್ಯಗಳನ್ನು ಎತ್ತಿ ಹಿಡಿಯುವ, ಕಟ್ಟಿಹಾಕುವ …

Read More »

ತೆರಿಗೆ ಸಂಗ್ರಹ ಕುಸಿತ: ಗುರಿ ಮುಟ್ಟಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬರ ಮತ್ತು ಜಾಗತಿಕ ಮಾರುಕಟ್ಟೆಯ ಏರಿಳಿತದಿಂದ ತೆರಿಗೆ ಸಂಗ್ರಹದಲ್ಲಿ ತೀವ್ರ ಕುಸಿತವಾಗುವ ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಆರ್ಥಿಕ ವರ್ಷದಲ್ಲಿ ತೆರಿಗೆ ಸಂಗ್ರಹದ ಗುರಿಯನ್ನು ತಲುಪಲು ಕಠಿಣ ಪರಿಶ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.   ರಾಜ್ಯದ ತೆರಿಗೆ ಸಂಗ್ರಹದ ಪ್ರಗತಿ ಪರಿಶೀಲನೆಯನ್ನು ಸಿದ್ದರಾಮಯ್ಯ ಶುಕ್ರವಾರ ನಡೆಸಿದರು. 2023-24 ರ ಸಾಲಿಗೆ ರಾಜ್ಯ ಸರ್ಕಾರ ₹1.82 ಲಕ್ಷ ಕೋಟಿ ತೆರಿಗೆ ಸಂಗ್ರಹದ ಗುರಿ ನಿಗದಿ ಮಾಡಿದೆ. ವಾಣಿಜ್ಯ …

Read More »

ನರೇಗಾ ಯೋಜನೆ ಬರಗಾಲದ ಸಂಕಷ್ಟದ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ನೆರವಾಗುತ್ತ

ಬೆಳಗಾವಿ: ನರೇಗಾ ಯೋಜನೆ ಬರಗಾಲದ ಸಂಕಷ್ಟದ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ನೆರವಾಗುತ್ತದೆ. ಆದರೆ ಇದೇ ಈಗ ರೈತರಿಗೆ ಸಂಕಷ್ಟ ತಂದೊಡ್ಡಿದ್ದು, ಬೆಳೆದು ನಿಂತಿರುವ ಭತ್ತದ ಕಟಾವಿಗೆ ಕೂಲಿ ಕಾರ್ಮಿಕರು ಸಿಗದೇ ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಅನ್ನದಾತರು ಪರದಾಡುತ್ತಿದ್ದಾರೆ. ಸುಗ್ಗಿ ಕಾಲದಲ್ಲಿ ಕೂಲಿ ಕೊಡಬೇಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹೌದು, ಮೊದಲೇ ಬರಗಾಲದಿಂದ ತತ್ತರಿಸಿ ಹೋಗಿದ್ದ ಕಡೋಲಿ ಗ್ರಾಮದ ರೈತರು ಕಷ್ಟಪಟ್ಟು ಭತ್ತ ಬೆಳೆದಿದ್ದರು. ಈಗ ಅದು ಕಟಾವಿಗೆ ಬಂದಿದೆ. ಆದರೆ, …

Read More »

ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ರೈನಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ರೈನಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ಪ್ರೊ ಕಬಡ್ಡಿ ಲೀಗ್‌ನ ಹತ್ತನೇ ಆವೃತ್ತಿಗೆ ಇಂದು ಚಾಲನೆ

ಅಹಮದಾಬಾದ್: ಒಂಬತ್ತು ಆವೃತ್ತಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಪ್ರೊ ಕಬಡ್ಡಿ ಲೀಗ್‌ನ ಹತ್ತನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ. ಅಹಮದಾಬಾದ್​​ನ ಅಕ್ಷರ್ ರಿವರ್ ಕ್ರೂಸ್​​ನಲ್ಲಿ ಶುಕ್ರವಾರ ಪ್ರೊ ಕಬಡ್ಡಿ ಲೀಗ್ 10ನೇ ಆವೃತ್ತಿಗೆ ಸಾಂಕೇತಿಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪಿಕೆಎಲ್ 9ನೇ ಆವೃತ್ತಿಯ ವಿಜೇತ ತಂಡದ ನಾಯಕ ಸುನಿಲ್ ಕುಮಾರ್ (ಜೈಪುರ ಪಿಂಕ್ ಪ್ಯಾಂಥರ್ಸ್) ಮತ್ತು 10ನೇ ಆವೃತ್ತಿಯ ಆರಂಭಿಕ ಪಂದ್ಯದ ನಾಯಕರಾದ ಪವನ್ ಶೆಹ್ರಾವತ್ (ತೆಲುಗು ಟೈಟಾನ್ಸ್) ಮತ್ತು ಫಜಲ್ …

Read More »

ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹುಸಿ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕು

ಬೆಂಗಳೂರು: ರಾಜಧಾನಿ ಹಾಗೂ ಗ್ರಾಮಾಂತರ ಜಿಲ್ಲೆ‌ ಸೇರಿ 60 ಶಾಲೆಗಳಿಗೆ ಹುಸಿ ಬಾಂಬ್ ಕರೆ ಸಂಬಂಧ ಆಯಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹುಸಿ ಬಾಂಬ್ ಇಮೇಲ್ ಸಂದೇಶ‌ ಎಲ್ಲಿಂದ ಬಂದಿದೆ? ಎಂಬುದರ ಬಗ್ಗೆ ಪತ್ತೆ ಹಚ್ಚುವ ಕಾಯಕದಲ್ಲಿ ಪೊಲೀಸರು ತೊಡಗಿಸಿಕೊಂಡಿದ್ದಾರೆ. ವಿಶೇಷ ತಂಡ ರಚಿಸಿ ಇಮೇಲ್​ನ ಐಪಿ ಅಡ್ರೆಸ್ ಟ್ರೇಸ್ ಮಾಡುತ್ತಿದ್ದಾರೆ. ಈಗಾಗಲೇ ಸರ್ವರ್ ಪ್ರೊವೈಡರ್​ಗಳಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ. ತನಿಖೆ ಕೈಗೊಂಡಿರುವ ಸ್ಥಳೀಯ …

Read More »

ಮುರಗೋಡ, ಸೊಗಲ, ಕಾರಿಮನಿ, ಹೊಸೂರ ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆ

ಬೈಲಹೊಂಗಲ: ತಾಲ್ಲೂಕಿನ ಮುರಗೋಡ, ಸೊಗಲ, ಕಾರಿಮನಿ, ಹೊಸೂರ ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆ ಸುರಿಯಿತು. ತಾಸಿಗೂ ಹೆಚ್ಚು ಸಮಯ ಸುರಿದ ಮಳೆಯಿಂದ‌ ಹಳ್ಳ, ಕಾಲುವೆ, ಚರಂಡಿಗಳು ತುಂಬಿ ಹರಿದವು. ದಕ್ಷಿಣ ಕಾಶಿ ಎಂದೇ ಹೆಸರಾದ ‘ಸೊಗಲ ಸೋಮೇಶ್ವರ’ ಕ್ಷೇತ್ರದ ಎರಡು ಜಲಪಾತಗಳಿಗೆ ಮಳೆಯಿಂದಾಗಿ ಮತ್ತೆ ಜೀವಕಳೆ ಬಂದಿದೆ. ದೇವಸ್ಥಾನದ ಕಿರು ಕಾಲುವೆಗಳೂ ತುಂಬಿದವು. ಕೆಲ ಗ್ರಾಮಗಳಲ್ಲಿ ಬಿರಿಗಾಳಿಗೆ ಹಲವು ಕಡೆ ವಿದ್ಯುತ್ ಕಂಬಗಳ ವಾಲಿದವು. ಜಮೀನುಗಳಲ್ಲಿ ಮಳೆ ನೀರು ನಿಂತು …

Read More »

ರಸ್ತೆ ಅಪಘಾತ ತಗ್ಗಿಸಲು ಸಮೂಹ ಮಾಧ್ಯಮ ಅಭಿಯಾನ: ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಪ್ರಮಾಣ ತಗ್ಗಿಸಲು ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ವಾಹನಗಳ ವೇಗವನ್ನು ಕಡಿಮೆ ಮಾಡಲು ಸಮೂಹ ಮಾಧ್ಯಮ ಅಭಿಯಾನ ಆರಂಭಿಸಿದ್ದು, ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಜಂಟಿ ಅಭಿಯಾನಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.   ಬಳಿಕ ಮಾತನಾಡಿದ ಅವರು, ವಾಹನ ಚಲಾಯಿಸುವವರು ತಮ್ಮ ಕುಟುಂಬದ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡ ವಾಹನ ಚಲಾಯಿಸಿದಾಗ ಮಾತ್ರ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಸಾಧ್ಯ. ಏನೆಲ್ಲಾ …

Read More »

ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪ; ಇಬ್ಬರು ಅಧಿಕಾರಿಗಳ ಅಮಾನತು

ನಗರದ ಮಾತಾ ಆಸ್ಪತ್ರೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ (Female foeticide) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.   ಮೈಸೂರಿನ ಹಿಂದಿನ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ರವಿ. ಪಿ ಮತ್ತು ಮೈಸೂರು ತಾಲೂಕು ಆರೋಗ್ಯಾಧಿಕಾರಿ ರಾಜೇಶ್ವರಿ ಅವರನ್ನು ಅಮಾನತು ಮಾಡಲಾಗಿದೆ. ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪವೆಸಗಿದ …

Read More »