ಉಡುಪಿ, ನ.7: ಡಿಎಸ್ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಸೇರಿದಂತೆ ಮತ್ತಿತರರು ಯಾವುದೇ ಅನುಮತಿ ಪಡೆಯದೆ ಅಂಬೇಡ್ಕರ್ ಭವನದಲ್ಲಿ (Ambedkar Bhavan) ಮದ್ಯ ಸೇವಿಸಿ ಪಾರ್ಟಿ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ತೆಂಕಭಿರ್ತಿಯಲ್ಲಿ ನಡೆದಿದೆ. ಡಿಎಸ್ ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಅವರ ಮಗ ಕ್ರೀಡಾಕೂಟಕ್ಕೆ ಆಯ್ಕೆಯಾದ ಸಂಭ್ರಮಕ್ಕೆ ಸಾವಿತ್ರಿಬಾಯಿ ಫುಲೆ ಅವರ ಹೆಸರಿನ ಗ್ರಂಥಾಲಯವನ್ನು ಒಳಗೊಂಡಿರುವ ಅಂಬೇಡ್ಕರ್ ಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಯಾವುದೇ ಪೂರ್ವಾನುಮತಿ …
Read More »Yearly Archives: 2023
ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಳ್ಳುವ ಮೂಲಕ ಪ್ರಾಮಾಣಿಕತೆ ಮೆರೆದ ಸರ್ಕಾರಿ ಅಧಿಕಾರಿ
ನವೆಂಬರ್ 7: ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಂಡ ಸರ್ಕಾರಿ ಅಧಿಕಾರಿಯೊಬ್ಬರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಎಲ್ಲೆಡೆ ಲಂಚ, 30 %, 40 % , 45 % ಲಂಚ, ಕಮೀಷನ್ (Corruption) ಎಂಬ ಆರೋಪ-ಪ್ರತ್ಯಾರೋಪಗಳೇ ಕೇಳಿಬರುತ್ತಿರುವ ಈ ಸಂದರ್ಭದಲ್ಲಿ ಮತ್ತು ಅನಾದಿ ಕಾಲದಿಂದಲೂ ಸರ್ಕಾರಿ ಕಛೇರಿಗಳಲ್ಲಿ ಲಂಚ (Bribe) ಇಲ್ಲದೆ ಏನೂ ಕೆಲಸ ಆಗಲ್ಲ, ಒಂದೇ ಒಂದು ಕಡತ ಅಲುಗಾಡಲ್ಲ ಎನ್ನೋ ನೋವು …
Read More »ಮಹಾರಾಷ್ಟ್ರ ಪಂಚಾಯತ್ ಚುನಾವಣೆ ಫಲಿತಾಂಶ: ಮರಾಠಾ vs ಒಬಿಸಿ ಧ್ರುವೀಕರಣ ಸ್ಪಷ್ಟ ಎಂದ ವಿಶ್ಲೇಷಕರು
ನವೆಂಬರ್ 7: ಮಹಾರಾಷ್ಟ್ರದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಡಳಿತಾರೂಢ ಮೈತ್ರಿಕೂಟ ಉತ್ತಮ ಫಲಿತಾಂಶ ಕಂಡುಕೊಂಡಿರುವುದು ಜಾತಿ ಆಧಾರದಲ್ಲಿ ಧ್ರುವೀಕರಣದತ್ತ ಬೊಟ್ಟು ಮಾಡಿದೆ. ಮರಾಠಾ (Maratha) ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಚಳವಳಿಗಾರರನ್ನು ನಿಭಾಯಿಸುವಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂಬ ಭಾವನೆ ಮೂಡಿರುವಾಗಲೇ ಈ ಫಲಿತಾಂಶ ಹೊರಬಿದ್ದಿದೆ. 2359 ಗ್ರಾಮ ಪಂಚಾಯಿತಿಗಳಿಗೆ ಭಾನುವಾರ ಚುನಾವಣೆ ನಡೆದಿತ್ತು. ಸೋಮವಾರ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಖುಷಿಗೆ ಕಾರಣವಾಗಿದೆ. ಬಿಜೆಪಿ 724 ಗ್ರಾಮ ಪಂಚಾಯತಿಗಳಲ್ಲಿ, ಎನ್‌ಸಿಪಿ …
Read More »ಸತೀಶ್ ಜಾರಕಿಹೊಳಿ ಬೆಂಗಳೂರು ಸರ್ಕಾರಿ ನಿವಾಸಕ್ಕೆ ತೆರಳಿದ ಡಿ.ಕೆ .ಶಿ.:
ಬೆಂಗಳೂರು: ಬೆಳಗಾವಿ ರಾಜಕೀಯದಲ್ಲಿ ಹಸ್ತಕ್ಷೇಪ ಎಂದು ಆರೋಪಿಸಿ ಸಚಿವ ಸತೀಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಮುನಿಸಿಕೊಂಡಿದ್ದರು. ಇದರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಈ ಮಧ್ಯೆ ಡಿಕೆ ಶಿವಕುಮಾರ್ ಸಚಿವ ಸತೀಶ್ ಜಾರಕಿಹೊಳಿರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮಂಗಳವಾರ ಸತೀಶ್ ಜಾರಕಿಹೊಳಿ ಬೆಂಗಳೂರು ಸರ್ಕಾರಿ ನಿವಾಸಕ್ಕೆ ತೆರಳಿದ ಡಿಕೆ ಶಿವಕುಮಾರ್, ಕೆಲ ಹೊತ್ತು ಮಾತುಕತೆ ನಡೆಸಿದರು. ಇಬ್ಬರ ನಡುವಿನ ವೈಮನಸ್ಸು ಮಧ್ಯೆ ಪರಸ್ಪರ ಭೇಟಿ ಮಹತ್ವ ಪಡೆದುಕೊಂಡಿದೆ. ಆ …
Read More »ಯಡಿಯೂರಪ್ಪನವರಿಗೆ ಬದ್ಧತೆ ಇದ್ದರೆ ಕೇಂದ್ರದಿಂದ ಹಣ ಬಿಡುಗಡೆ ಮಾಡಿಸಲಿ- ಸಚಿವ ಕೃಷ್ಣ ಬೈರೇಗೌಡ
ಕೊಪ್ಪಳ : ಕೇಂದ್ರಕ್ಕೆ ಕರ್ನಾಟಕವೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯ. ಬಿಜೆಪಿಯವರಿಗೆ ನಿಜವಾಗಿಯೂ ರಾಜ್ಯದ ಜನರ ಮೇಲೆ ಕಾಳಜಿ ಇದ್ದರೆ, ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿ ನಮ್ಮ ಪಾಲಿನ ಹಣ ಬಿಡುಗಡೆ ಮಾಡಿಸಲಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದ್ದಾರೆ. ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಬದ್ಧತೆ ಇದ್ದರೆ, ರಾಜ್ಯದಿಂದ ಒಂದು ಟೀಂ ಕರೆದುಕೊಂಡು ಕೇಂದ್ರ ಸರ್ಕಾರಕ್ಕೆ ರಾಜ್ಯದ …
Read More »ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್ ಆರ್ ಡಿ ಪಾಟೀಲ್ ಎಸ್ಕೇಪ್: ದೃಶ್ಯ ಸಿಸಿಟಿಯಲ್ಲಿ ಸೆರೆ
ಕಲಬುರಗಿ: ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಯತ್ನಿಸಿದ ಪ್ರಕರಣದ ಕಿಂಗ್‌ಪಿನ್ ಆರ್ ಡಿ ಪಾಟೀಲ್ ವಸತಿ ಸಮುಚ್ಚಯದಿಂದ ಪರಾರಿಯಾಗಿದ್ದಾನೆ. ಆತ ಕಾಂಪೌಂಡ್ ಹಾರಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ ಜೇವರ್ಗಿ ರಸ್ತೆಯಲ್ಲಿರುವ ವರ್ಧಾ ಅಪಾರ್ಟ್ಮೆಂಟ್ನಿಂದ ಆರ್ ಡಿ ಪಾಟೀಲ್ ಎಸ್ಕೆಪ್ ಆಗಿದ್ದು, ಈ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಹುಡುಕಾಟದ ನಡುವೆ ಭಾನುವಾರ ರಾತ್ರಿ 10.30 ರಿಂದ …
Read More »ಆರ್ಥಿಕ ಸಂಕಷ್ಟದ ನಡುವೆ ಪಂಚ ಗ್ಯಾರಂಟಿಗಳ ಅನುಷ್ಠಾನ ಮತ್ತು ಬರದ ಸಮಸ್ಯೆಗಳು ಕರ್ನಾಟಕ ಸರ್ಕಾರಕ್ಕೆ ಸವಾಲಾಗಿವೆ.
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಕೇಂದ್ರೀಕೃತ ಆಡಳಿತ ನಡೆಸುತ್ತಿದೆ. ಪಂಚ ಗ್ಯಾರಂಟಿಯ ಪೈಕಿ ನಾಲ್ಕು ಗ್ಯಾರಂಟಿಗಳು ಈಗಾಗಲೇ ಅನುಷ್ಠಾನವಾಗಿವೆ. ಆರ್ಥಿಕ ತೊಂದರೆಗಳ ಮಧ್ಯೆ ಹಣಕಾಸು ನಿರ್ವಹಿಸಿ ಇವುಗಳನ್ನು ಜಾರಿ ಮಾಡಲಾಗುತ್ತಿದೆ. ಇದರ ನಡುವೆ ಸರ್ಕಾರಕ್ಕೆ ಬರ ಬರೆ ಎಳೆದಿದೆ. ರಾಜ್ಯ ಈ ಬಾರಿ ತೀವ್ರ ಬರಗಾಲಕ್ಕೆ ತುತ್ತಾಗಿದೆ. ಒಟ್ಟು 236 ತಾಲೂಕುಗಳ ಪೈಕಿ 223 ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗೂ ಅಧಿಕ ಬರ …
Read More »ಮುಂಬೈನ ವಾಂಖೆಡೆ ಮೈದಾನದಲ್ಲಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದ ನಡುವೆ ಪಂದ್ಯ
ಮುಂಬೈ : ಮುಂಬೈನ ವಾಂಖೆಡೆ ಮೈದಾನದಲ್ಲಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದ ನಡುವೆ ಪಂದ್ಯ ನಡೆಯುತ್ತಿದೆ. ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಅಫ್ಘಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆಸ್ಟ್ರೇಲಿಯಾ ಬೌಲಿಂಗ್ ನಡೆಸಿದೆ. ವಿಶ್ವಕಪ್ ಕ್ರಿಕೆಟ್ 2023ರ 39ನೇ ಪಂದ್ಯ ಇದಾಗಿದೆ. ಸೂಪರ್ ಫೋರ್ ತಲುಪಲು ಅಫ್ಘಾನಿಸ್ತಾನಕ್ಕೆ ಈ ಪಂದ್ಯದ ಗೆಲುವು ನಿರ್ಣಾಯಕವಾಗಿದೆ. ಆಸೀಸ್ ಒಂದು ವೇಳೆ ಅಫ್ಘಾನ್ ತಂಡವನ್ನು ಮಣಿಸಿದರೆ, ನೇರವಾಗಿ ಸೆಮಿಫೈನಲ್ಗೆ ತಲುಪಲಿದೆ. ಹೀಗಾಗಿ …
Read More »ವಿಶ್ವಕಪ್ ಕ್ರಿಕೆಟ್: ಕಮರಿದ ಶ್ರೀಲಂಕಾ ಸೆಮೀಸ್ ಕನಸು.. ಬಾಂಗ್ಲಾಕ್ಕೆ 3 ವಿಕೆಟ್ ಜಯ
ನವದೆಹಲಿ: ಲಂಕಾಗೆ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಬಾಂಗ್ಲಾ ವಿರುದ್ಧದ ಪಂದ್ಯವನ್ನು ಗೆದ್ದಿದ್ದರೆ, ಅದೃಷ್ಟವಶಾತ್ ಸೆಮೀಸ್ಗೆ ನಾಲ್ಕನೇ ತಂಡವಾಗಿ ಪ್ರವೇಶಿಸುವ ಅವಕಾಶ ಇತ್ತು. ಆದರೆ, ಬಾಂಗ್ಲಾ ಟೈಗರ್ಸ್ ಸಿಂಹಳೀಯರ ಈ ಕನಸನ್ನು ಭಗ್ನ ಮಾಡಿದ್ದಾರೆ. ಶ್ರೀಲಂಕಾ ನೀಡಿದ್ದ 279 ರನ್ಗಳ ಗುರಿಯನ್ನು ಬಾಂಗ್ಲಾದೇಶ 41.1 ಓವರ್ಗೆ 3 ವಿಕೆಟ್ ಉಳಿಸಿಕೊಂಡು ಜಯ ದಾಖಲಿಸಿದೆ. ವಿಶ್ವಕಪ್ನಲ್ಲಿ ಕೇವಲ ಒಂದು ಗೆಲುವು ಸಾಧಿಸಿದ್ದ ಬಾಂಗ್ಲಾದೇಶ ಟೂರ್ನಿಯಿಂದ ಹೊರಬಿದ್ದಿತ್ತು. ಈಗ ಶ್ರೀಲಂಕಾವನ್ನು ಮಣಿಸಿ ಅವರನ್ನು …
Read More »ರಾಜ್ಯದ ಹಲವೆಡೆ ಹಿಂಗಾರು ಮಳೆ ಮಜ್ಜನ; ಯಲಹಂಕದ ಕೋಗಿಲು ಕ್ರಾಸ್ ಜಲಾವೃತ
ಬೆಂಗಳೂರು : ಸೋಮವಾರ ರಾತ್ರಿಯಿಂದ ನಗರದಲ್ಲಿ ಧಾರಾಕಾರವಾಗಿ ಹಿಂಗಾರು ಮಳೆ ಸುರಿಯುತ್ತಿದೆ. ಕೆಲವೆಡೆ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾದವು. ಹಲವು ಅಂಡರ್ಪಾಸ್ಗಳಲ್ಲಿ ಮೊಣಕಾಲುದ್ದ ನೀರು ತುಂಬಿ ವಾಹನ ಸವಾರರು ಪರದಾಡಿದರು. ಮಲ್ಲೇಶ್ವರಂ, ಶಾಂತಿನಗರ, ಮೈಸೂರು ಬ್ಯಾಂಕ್, ಟೌನ್ ಹಾಲ್, ಯಲಹಂಕ ಸೇರಿ ಹಲವೆಡೆ ಮಳೆ ಸುರಿಯುತ್ತಿದೆ. ಸಂಜೆ ಸಾಧಾರಣವಾಗಿ ಆರಂಭವಾದ ಮಳೆ ನಂತರ ಕೊಂಚ ಬಿಡುವು ನೀಡಿತು. ರಾತ್ರಿಯಾಗುತ್ತಿದ್ದಂತೆ ಮತ್ತೆ ಬಿರುಸಾಯಿತು. ನಗರದ ಹಲವೆಡೆ ಬಿಟ್ಟೂಬಿಡದೆ ಮಳೆಯಾಗುತ್ತಿದೆ. ಯಲಹಂಕದಲ್ಲಿ ಮಳೆ-ಕೋಗಿಲು ಕ್ರಾಸ್ …
Read More »