ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಮತ್ತೊಂದೆಡೆ, ಮಹಾರಾಷ್ಟ್ರದ ಜತ್ತ ಪಟ್ಟಣದ ಸಮೀಪ ಕೆಲ ದುಷ್ಕರ್ಮಿಗಳು ಕೆಎಸ್ಆರ್ಟಿಸಿ ಬಸ್‌ಗೆ ಕಲ್ಲು ತೂರಿರುವ ಘಟನೆ ನಡೆದಿದೆ. ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ವಿಜಯಪುರ ತಾಲೂಕಿನ ಇಂಡಿ ಘಟಕಕ್ಕೆ ಸೇರಿದ ಬಸ್ ಇದಾಗಿದ್ದು, ಜತ್ತ ಪಟ್ಟಣದಿಂದ ವಿಜಯಪುರಕ್ಕೆ ತೆರಳುತ್ತಿತ್ತು. ದುಷ್ಕರ್ಮಿಗಳು ಬಸ್ ಅಡ್ಡಗಟ್ಟಿ ಕಲ್ಲು ತೂರಿದ್ದಾರೆ. ಬಸ್ನ ಹಿಂಬದಿಯ ಗಾಜು ಪುಡಿಯಾಗಿದೆ. ಗಾಜಿನ ಚೂರುಗಳು …
Read More »Yearly Archives: 2023
ಕನ್ನಡ ರಾಜ್ಯೋತ್ಸವ ಕಳೆಗಟ್ಟಿದೆ. ಕುಂದಾನಗರಿ ಬೆಳಗಾವಿಯಲ್ಲಿ ಸಂಭ್ರಮ ಜೋರಾಗಿದೆ.
ಬೆಳಗಾವಿ: ಕನ್ನಡ ರಾಜ್ಯೋತ್ಸವ ಕಳೆಗಟ್ಟಿದೆ. ಕುಂದಾನಗರಿ ಬೆಳಗಾವಿಯಲ್ಲಿ ಸಂಭ್ರಮ ಜೋರಾಗಿದೆ. ರಾಜ್ಯೋತ್ಸವಕ್ಕೆ ಟೀಶರ್ಟ್ಗಳ ಖರೀದಿ ಭರಾಟೆ ಹೆಚ್ಚಾಗಿದ್ದು, ಕನ್ನಡ ನಾಡು, ನುಡಿ ಕುರಿತು ಜಾಗೃತಿ ಜೊತೆ ಕನ್ನಡಾಭಿಮಾನ ಮೂಡಿಸುವ ಟೀಶರ್ಟ್ಗಳ ಖರೀದಿಗೆ ಕನ್ನಡಮ್ಮನ ಕಂದಮ್ಮಗಳು ಮುಗಿ ಬಿದ್ದಿದ್ದಾರೆ. ಬೆಳಗಾವಿಯಿಂದ ಲಂಡನ್ಗೂ ಟೀಶರ್ಟ್ ಕಳಿಸಿದ್ದು ವಿಶೇಷವಾಗಿದೆ. ಇಡೀ ರಾಜ್ಯದಲ್ಲಿ ರಾಜ್ಯೋತ್ಸವ ಆಚರಣೆ ಒಂದೆಡೆಯಾದರೆ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಚರಿಸುವ ರಾಜ್ಯೋತ್ಸವ ತುಂಬಾ ವಿಶೇಷವಾಗಿಯೇ ಇರುತ್ತದೆ. ಅಷ್ಟೊಂದು ಸಂಭ್ರಮ, ಸಡಗರದಿಂದ ಇಲ್ಲಿ ರಾಜ್ಯೋತ್ಸವ ಆಚರಿಸಲಾಗುತ್ತದೆ. …
Read More »”ದೇಶಕ್ಕಾಗಿ ನೆಹರು ಕುಟುಂಬದವರು ಬಲಿದಾನ ಮಾಡಿದ್ದಾರೆ. ಬಿಜೆಪಿ ದೇಶಕ್ಕಾಗಿ ಏನೂ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ”ದೇಶಕ್ಕಾಗಿ ನೆಹರು ಕುಟುಂಬದವರು ಬಲಿದಾನ ಮಾಡಿದ್ದಾರೆ. ಆದ್ರೆ, ಬಿಜೆಪಿಯವರು ದೇಶಕ್ಕಾಗಿ ಏನೂ ಮಾಡಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿ ಬಳಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಇಂದಿರಾ ಗಾಂಧಿ 39ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ”ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ಕಳೆದುಕೊಂಡರು. ಅಟಲ್ ಬಿಹಾರಿ ವಾಜಪೇಯಿ ಅವರು ಇಂದಿರಾ ಗಾಂಧಿಯನ್ನು ದುರ್ಗೆ ಎಂದು ಕರೆದಿದ್ದರು. ಬಿಜೆಪಿಗರು ರಾಷ್ಟ್ರ ಪ್ರೇಮದ ಬಗ್ಗೆ ಮಾತನಾಡುತ್ತಾರೆ. ಆದರೆ, ದೇಶಕ್ಕಾಗಿ ಅವರ್ಯಾರು …
Read More »ಇಸ್ರೋ ಅಧ್ಯಕ್ಷ ಸೋಮನಾಥ್, ನಟರಾದ ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ ಸೇರಿ 68 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಕನ್ನಡ ರಾಜ್ಯೋತ್ಸವದ ನಿಮಿತ್ತ ರಾಜ್ಯ ಸರ್ಕಾರದಿಂದ ಕೊಡ ಮಾಡುವ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಕಲೆ, ಸಾಹಿತ್ಯ, ವಿಜ್ಞಾನ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಸಾಧಕರಿಗೆ ಮತ್ತು 10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ಇಂದು ಬಿಡುಗಡೆ ಆಗಿರುವ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ …
Read More »ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಬಸ್ ಸುಟ್ಟಿದ್ದು ತಪ್ಪು, ರಾಜ್ಯದ ಹಿತ ಕಾಯಲು ನಾವು ಬದ್ಧ: ಡಿ ಕೆ ಶಿವಕುಮಾರ್
ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಬಸ್ ಸುಟ್ಟಿದ್ದು ತಪ್ಪು, ರಾಜ್ಯದ ಹಿತ ಕಾಯಲು ಬದ್ಧ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಂಇಎಸ್ ಕರಾಳ ದಿನ ಆಚರಣೆಗೆ ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿದರು. ಅವರ ನಿರ್ಧಾರ ತಪ್ಪು. ನಾವು ನಮ್ಮ ರಾಜ್ಯದ ಹಿತ ಕಾಯಲು, ಕನ್ನಡಿಗರ ರಕ್ಷಣೆಗೆ ಬದ್ಧ. ಕರ್ನಾಟಕದಲ್ಲಿರುವ ಜನರು, ಅಲ್ಲಿರುವ ಕನ್ನಡಿಗರ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ನಿನ್ನೆ ಮುಖ್ಯಮಂತ್ರಿಗಳು …
Read More »ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದ್ದು, ನೀರು ಬಿಡುವ ಶಕ್ತಿ ನಮ್ಮಲ್ಲಿಲ್ಲ: ಡಿ.ಕೆ.ಶಿ.
ಬೆಂಗಳೂರು: ಕೆಆರ್‌ಎಸ್ ಒಳಹರಿವು ಶೂನ್ಯ ಮಟ್ಟ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ಗಳು ಸುಟ್ಟು ಹೋದ ಸ್ಥಳಕ್ಕೆ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸಿನ ಕುರಿತು …
Read More »ಶಾಸಕ ರವಿ ಗಣಿಗ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ: ಸತೀಶ್ ಜಾರಕಿಹೊಳಿ
ವಿಜಯಪುರ: ಎರಡೂವರೆ ವರ್ಷದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಶಾಸಕ ರವಿ ಗಣಿಗ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಈ ಬಗ್ಗೆ ಯಾರು ಯಾವ ಹೇಳಿಕೆಯನ್ನು ನೀಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಯಾವ ಹೇಳಿಕೆಯನ್ನು ನಾನು ನೀಡುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ …
Read More »ದೇಶದಲ್ಲಿ ಈರುಳ್ಳಿ ದರ ಹೇಗಿದೆ?: ಬೆಲೆ ಏರಿಕೆ ವದಂತಿಗೆ ಕೇಂದ್ರ ಸರ್ಕಾರದಿಂದ ಅಂಕಿಅಂಶ ಬಿಡುಗಡೆ
ನವದೆಹಲಿ: ದೇಶದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಿದೆ ಎಂಬ ವದಂತಿಯ ಮಧ್ಯೆ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಯಲ್ಲಿನ ದರಗಳ ಅಂಕಿಅಂಶವನ್ನು ಕೇಂದ್ರ ಸರ್ಕಾರ ಸೋಮವಾರ ನೀಡಿದೆ. ದೆಹಲಿಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 78 ರೂಪಾಯಿ ಇದ್ದು, ಅತ್ಯಧಿಕವಾಗಿದ್ದರೆ, ದೇಶದ ವಿವಿಧೆಡೆ 50.35 ಪೈಸೆಯಷ್ಟು ಬಿಕರಿಯಾಗುತ್ತಿದೆ ಎಂದು ತಿಳಿಸಿದೆ. ದೆಹಲಿಯಲ್ಲಿ ಸೋಮವಾರ ಈರುಳ್ಳಿ ಬೆಲೆ ಗರಿಷ್ಠ ಮಟ್ಟದಲ್ಲಿಯೇ ಇತ್ತು. ಇಲ್ಲಿನ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ಸರಾಸರಿ 78 ರೂ. ಮಾರಾಟವಾಗಿದೆ. ದೇಶದಲ್ಲಿ ಸರಾಸರಿ …
Read More »ಮರಾಠ ಮೀಸಲಾತಿ ಹೋರಾಟ ತೀವ್ರ: ಇಬ್ಬರು ಶಿವಸೇನೆ ಸಂಸದರ ರಾಜೀನಾಮೆ, ಸರ್ಕಾರದಿಂದ ಸುಗ್ರೀವಾಜ್ಞೆ ಸಾಧ್ಯತೆ
ಮುಂಬೈ (ಮಹಾರಾಷ್ಟ್ರ) : ಮರಾಠ ಸಮುದಾಯದ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹೋರಾಟಗಾರರು ಶಾಸಕರ ಮನೆಗಳಿಗೆ ಬೆಂಕಿ ಹಚ್ಚಿದ್ದರು. ಇದೀಗ ಮಜಲ್ಗಾಂವ್ ನಗರಸಭೆ ಕಟ್ಟಡಕ್ಕೆ ಬೆಂಕಿ ಇಟ್ಟಿದ್ದಾರೆ. ಅಲ್ಲದೇ, ಇಬ್ಬರು ಶಿವಸೇನೆ ಸಂಸದರು (ಶಿಂಧೆ ಬಣ) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹೋರಾಟದಿಂದ ಬೆಚ್ಚಿರುವ ಸರ್ಕಾರ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮಂಡಿಸುವ ಸಾಧ್ಯತೆ ಇದೆ. ಜಾರಂಗೆ ಪಾಟೀಲ ಅವರು ಕರೆ ನೀಡಿರುವ ಆಂದೋಲನಕ್ಕೆ ರಾಜ್ಯಾದ್ಯಂತ ಮರಾಠ …
Read More »ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚು: ಕರ್ನಾಟಕದ ಬಸ್‌ಗೆ ಬೆಂಕಿ.. ಮಹಾರಾಷ್ಟ್ರಕ್ಕೆ ಸಂಚಾರ ತಾತ್ಕಾಲಿಕ ಸ್ಥಗಿತ
ಕಲಬುರಗಿ : ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಸೋಮವಾರ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ. ಸೋಮವಾರ ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಕೆಎ-38 ಎಫ್-1201 ಸಂಖ್ಯೆ ಬಸ್ಸಿಗೆ ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಬೆಂಕಿ ಹಚ್ಚಲಾಗಿದೆ. ಪ್ರತಿಭಟನಾಕಾರರು ಬಸ್ ತಡೆದು ಪ್ರಯಾಣಿಕರನ್ನು …
Read More »