Breaking News

Yearly Archives: 2023

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಬೆಳಗಾವಿ ನಗರಕ್ಕೆ ವಿಸ್ತರಿಸಿ: ರೈಲ್ವೇ ಸಚಿವರಿಗೆ ಸಿಎಂ ಪತ್ರ

ಬೆಂಗಳೂರು- ಧಾರವಾಡ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್​ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರು : ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲು ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಕೇಂದ್ರ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್​ ಅವರಿಗೆ ಪತ್ರ ಬರೆದಿದ್ದಾರೆ. ಕಿತ್ತೂರು ಕರ್ನಾಟಕ ಬೆಳಗಾವಿ ಭಾಗದ ಲಕ್ಷಾಂತರ ಕನ್ನಡಿಗರ ಪರವಾಗಿ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ. ಕೇಂದ್ರ …

Read More »

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಿಕ್ಸರ್​ ಬಾರಿಸುತ್ತಿರುವ 22 ಅಡಿ ಉದ್ದದ ಸಚಿನ್​ ಪ್ರತಿಮೆ ನಿರ್ಮಾಣ.. ನಾಳೆ ಅನಾವರಣ

ಮುಂಬೈ (ಮಹಾರಾಷ್ಟ್ರ): ಕ್ರಿಕೆಟ್​ ದೇವರು ಸಚಿನ್​ ತೆಂಡೂಲ್ಕರ್​ ಹೆಸರಿಗೆ ಅದೆಷ್ಟೋ ದಾಖಲೆಗಳಿವೆ. ಅವರಾಡಿದ ಪ್ರತಿ ಮೈದಾನಗಳೂ ದಾಖಲೆಗಳ ಗೂಡೇ. ಸಚಿನ್​ ಇಷ್ಟಪಡುವ ಮತ್ತು ತವರು ಮೈದಾನವಾದ ಮುಂಬೈನಲ್ಲಿರುವ ವಾಂಖೆಡೆ ಸ್ಟೇಡಿಯಂನಲ್ಲಿ ‘ತದ್ರೂಪಿ ಲಿಟಲ್​ ಮಾಸ್ಟರ್’​ ಮೈದಾಳಿದ್ದು, ಬುಧವಾರ (ನವೆಂಬರ್​ 1) ಅದು ಅನಾವರಣಗೊಳ್ಳಲಿದೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ​ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಮುನ್ನಾದಿನದಂದು ಅನಾವರಣ ಮಾಡಲಾಗುತ್ತಿದೆ. …

Read More »

ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ: 14 ಜನರ ಬಂಧನ, 20 ಮಹಿಳೆಯರ ರಕ್ಷಣೆ

ಬೆಂಗಳೂರು: ನಗರದಲ್ಲಿ ಮಾನವ ಕಳ್ಳಸಾಗಣಿಕೆ ಹಾಗೂ ವೇಶ್ಯಾವಾಟಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ 14 ಜನ ಆರೋಪಿಗಳನ್ನು ಬಂಧಿಸಲಾಗಿದೆ. ನೊಂದ 20 ಮಹಿಳೆಯರನ್ನ ರಕ್ಷಿಸಲಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಗಲಗುಂಟೆ, ವರ್ತೂರು, ಕೆ.ಆರ್. ಪುರಂ, ವಿದ್ಯಾರಣ್ಯಪುರ, ಅಮೃತಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬಾಂಗ್ಲಾದೇಶ ಮೂಲದ ನಾಲ್ವರು, ಪಶ್ಚಿಮ ಬಂಗಾಳದ …

Read More »

ಮೆಡಿಕಲ್ ಸೀಟ್ ಕೊಡಿಸುವುದಾಗಿ ವಂಚನೆ.. ಹೈದರಾಬಾದ್ ಮೂಲದ ಆರೋಪಿ ಬಂಧನ

ಬೆಂಗಳೂರು: ವೈದ್ಯಕೀಯ ಶಿಕ್ಷಣದ ಸೀಟು ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯನ್ನು ಸಂಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ಶರತ್ ಗೌಡ ಬಂಧಿತ ಆರೋಪಿ.   ಹೇಗಿತ್ತು ಈತನ ಮೋಸದ ಹಾದಿ.. ಸಂಜಯ ನಗರ ವ್ಯಾಪ್ತಿಯ ನ್ಯೂ ಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಹೆಸರಿನ ಕಚೇರಿ ತೆರೆದಿದ್ದ ಆರೋಪಿ, ಸಿಇಟಿಯಲ್ಲಿ ರ್ಯಾಂಕಿಂಗ್‌ ಕಡಿಮೆ ಬಂದ ವಿದ್ಯಾರ್ಥಿಗಳ ಪೋಷಕರು, ವೈದ್ಯಕೀಯ ಶಿಕ್ಷಣ ಪಡೆಯಲು ಪ್ರಯತ್ನಿಸುತ್ತಿರುವವರ ಮಾಹಿತಿಯನ್ನು ಬೇರೆ ಬೇರೆ ಮೂಲಗಳಿಂದ ಸಂಗ್ರಹಿಸುತ್ತಿದ್ದ. ನಂತರ ಅವರುಗಳನ್ನ …

Read More »

ಬಿಜೆಪಿ ನಾಯಕರೇ ನೀವು ಯಾತ್ರೆ ಮಾಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನೀವು ದೆಹಲಿಗೆ ಯಾತ್ರೆ ಹೊರಡಬೇಕು.

ಬೆಂಗಳೂರು : ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಟ ಮಾಡಿದರಂತೆ ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ, ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ. ಈ ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ. ಬಿಜೆಪಿ ನಾಯಕರೇ, ನಿಮ್ಮದೇ ಪಕ್ಷದ ಸರ್ಕಾರಕ್ಕೆ ಸೇರಿದ …

Read More »

ರಾಜ್ಯೋತ್ಸವ ದಿನದಂದು‌ ಮಹಾರಾಷ್ಟ್ರ ಸರ್ಕಾರದ ಮೂವರು ಸಚಿವರು ಹಾಗೂ ಸಂಸದರೊಬ್ಬರಿಗೆ ಬೆಳಗಾವಿ ಮಹಾನಗರ ಮತ್ತು ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

ಬೆಳಗಾವಿ: ಒಂದೆಡೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಮತ್ತೊಂದೆಡೆ ಎಂಇಎಸ್ ಮುಖಂಡರು ಕರಾಳ ದಿನ ಆಚರಿಸಲು ಗುಪ್ತ ಸಭೆಗಳನ್ನು ನಡೆಸುತ್ತಿದ್ದಾರೆ. ಇದಕ್ಕೆಲ್ಲ ತಿರುಗೇಟು ಕೊಟ್ಟಿರುವ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ರಾಜ್ಯೋತ್ಸವ ದಿನದಂದು‌ ಮಹಾರಾಷ್ಟ್ರ ಸರ್ಕಾರದ ಮೂವರು ಸಚಿವರು ಹಾಗೂ ಸಂಸದರೊಬ್ಬರಿಗೆ ಬೆಳಗಾವಿ ಮಹಾನಗರ ಮತ್ತು ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಹೌದು.., ನವೆಂಬರ್ 1ರಂದು ಕನ್ನಡಿಗರ ಪಾಲಿನ ಹೆಮ್ಮೆ ಮತ್ತು ಗೌರವದ …

Read More »

ಸಕ್ಕರೆನಾಡು ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ

ಮಂಡ್ಯ: ಸಕ್ಕರೆನಾಡು ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸುವರು. ಸಿಎಂಗೆ ಅದ್ಧೂರಿ ಸ್ವಾಗತ ಕೋರಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದರೆ, ಕಾವೇರಿ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆಯೂ ಇದ್ದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಸಿಎಂ ಆದ ಬಳಿಕ ಸಿದ್ದರಾಮಯ್ಯ 2ನೇ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. …

Read More »

ಟಾಟಾ ಮೋಟಾರ್ಸ್​ಗೆ ₹766 ಕೋಟಿ ನೀಡುವಂತೆ ಪಶ್ಚಿಮಬಂಗಾಳ ಸರ್ಕಾರಕ್ಕೆ ಆದೇಶ

ನವದೆಹಲಿ: ಟಾಟಾ ಮೋಟಾರ್ಸ್​ ಮತ್ತು ಪಶ್ಚಿಮಬಂಗಾಳ ಸರ್ಕಾರದ ನಡುವಿನ ಸಿಂಗೂರ್​ ಘಟಕ ವ್ಯಾಜ್ಯ ಕಡೆಗೂ ಇತ್ಯರ್ಥ ಕಂಡಿದೆ. ನ್ಯಾನೋ ಕಾರು ಉತ್ಪಾದನಾ ಘಟಕವನ್ನು ಸ್ಥಳಾಂತರಿಸಿದ್ದಕ್ಕಾಗಿ ಉಂಟಾದ ನಷ್ಟವನ್ನು ಭರಿಸಲು ಕೋರಿದ್ದ ಟಾಟಾ ಮೋಟಾರ್ಸ್​ಗೆ, ಸಿಎಂ ಮಮತಾ ಬ್ಯಾನರ್ಜಿ ಅವರ ಸರ್ಕಾರ 766 ಕೋಟಿ ರೂಪಾಯಿ ಪರಿಹಾರವಾಗಿ ನೀಡಬೇಕು ಎಂದು ಮಧ್ಯಸ್ಥಿಕೆ ನ್ಯಾಯಮಂಡಳಿಯು ಸೋಮವಾರ ಆದೇಶಿಸಿದೆ.     ಪಶ್ಚಿಮಬಂಗಾಳದ ಸಿಂಗೂರಿನಲ್ಲಿ ಟಾಟಾ ಮೋಟಾರ್ಸ್​ ಕಂಪನಿಯು ನ್ಯಾನೋ ಕಾರು ಉತ್ಪಾದನಾ ಘಟಕ ಸ್ಥಾಪನೆಗೆ …

Read More »

ಬಿಗ್​ಬಾಸ್​ ಮನೆಯಿಂದ ಅನಿರೀಕ್ಷಿತವಾಗಿ ಎಕ್ಸಿಟ್​ ಆಗಿದ್ದ ಸೀಸನ್​ 10ರ ಸ್ಪರ್ಧಿ ​ವರ್ತೂರು ಸಂತೋಷ್ ಮತ್ತೆ ರೀ ಎಂಟ್ರಿ

ಬೆಂಗಳೂರು: ಹುಲಿ ಉಗುರಿನ ಡಾಲರ್​ ಧರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಕನ್ನಡ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿ ಹಳ್ಳಿಕಾರ್​ ಖ್ಯಾತಿಯ ವರ್ತೂರು​ ಸಂತೋಷ್​ ಮತ್ತೆ ಬಿಗ್​ ಬಾಸ್​ ಮನೆಗೆ ರೀ ಎಂಟ್ರಿ ಕೊಟ್ಟು ಸ್ಪರ್ಧಾರ್ತಿಗಳಿಗೆ ಸರ್​ಪ್ರೈಸ್​ ಕೊಟ್ಟಿದ್ದಾರೆ. ಹುಲಿ ಉಗುರಿನ ಡಾಲರ್​ ಧಾರಣೆ ಪ್ರಕರಣದಲ್ಲಿ ಅ.22ರಂದು ಬಿಗ್​ ಬಾಸ್​ ಮನೆಯಿಂದಲೇ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇದರಿಂದ ಅನಿರೀಕ್ಷಿತವಾಗಿ ಮನೆಯಿಂದ ಎಕ್ಸಿಟ್​​ ಆಗಿದ್ದ ಅವರು ಮತ್ತೆ ಬಿಗ್​ ಬಾಸ್​ …

Read More »

”ಆಪರೇಷನ್ ಕಮಲದ ಬಗ್ಗೆ ಯಾರಾದರೂ ದೂರು ಕೊಟ್ಟರೆ ತನಿಖೆ ಮಾಡುತ್ತೇವೆ.: ಡಾ. ಜಿ. ಪರಮೇಶ್ವರ್

ಬೆಂಗಳೂರು: ”ಆಪರೇಷನ್ ಕಮಲದ ಬಗ್ಗೆ ಯಾರಾದರೂ ದೂರು ಕೊಟ್ಟರೆ ತನಿಖೆ ಮಾಡುತ್ತೇವೆ. ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಸದಾಶಿವ ನಗರ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ನಾನಿದರ ಬಗ್ಗೆ ಮಾತನಾಡಿಲ್ಲ. ಯಾರಾದರೂ ದೂರು ಕೊಟ್ಟರೆ ತನಿಖೆ ಮಾಡ್ತೇವೆ. ದೂರು ಪೆಸಿಫಿಕ್ ಆಗಿರಬೇಕು” ಎಂದರು. ಅಸಮಾಧಾನ‌ ಇಲ್ಲ: ಪಕ್ಷದಲ್ಲಿ ಕಾರ್ಯಕರ್ತರ ಬೇಸರ ವಿಚಾರವಾಗಿ ಪ್ರತಿಕ್ರಿಯಿಸಿ, ”ಅಸಮಾಧಾನ ಆ ರೀತಿ ಯಾವುದೂ ಇಲ್ಲ. …

Read More »