Breaking News

Yearly Archives: 2023

ಶಾಸಕ ಲಕ್ಷ್ಮಣ್ ಸವದಿ ಪುತ್ರನ ಕೊರಳಿನಲ್ಲೂ ಹುಲಿ ಉಗುರು ಹೋಲುವಂತಹ ಲಾಕೆಟ್

ಚಿಕ್ಕೋಡಿ (ಬೆಳಗಾವಿ): ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಹಲವು ಪ್ರಭಾವಿಗಳ ಮನೆಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪೆಂಡೆಂಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಮಾಜಿ ಡಿಸಿಎಂ ಹಾಗೂ ಅಥಣಿ ತಾಲೂಕಿನ ವಿಧಾನಸಭಾ ಕ್ಷೇತ್ರದ ಶಾಸಕ ಲಕ್ಷ್ಮಣ್ ಸವದಿ ಪುತ್ರನ ಕೊರಳಿನಲ್ಲೂ ಹುಲಿ ಉಗುರು ಹೋಲುವಂತಹ ಲಾಕೆಟ್​ ಅನ್ನು ಹಾಕಿಕೊಂಡಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮದುವೆ ಸಂದರ್ಭದಲ್ಲಿ ಹುಲಿ ಉಗುರಿನ ರೀತಿ ಇರುವ …

Read More »

“ಒಲಿಂಪಿಕ್ಸ್​ ಕ್ರೀಡಾಕೂಟ ಆತಿಥ್ಯ ವಹಿಸಲು ಭಾರತ ಸಿದ್ಧ”: ಗೋವಾದಲ್ಲಿ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಿದ ಪ್ರಧಾನಿ ಮೋದಿ

ಪಣಜಿ (ಗೋವಾ): ಮೊದಲ ಬಾರಿಗೆ ಗೋವಾದ ಪಣಜಿಯಲ್ಲಿ ನಡೆಯುತ್ತಿರುವ 37ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಿದರು. ದಕ್ಷಿಣ ಗೋವಾದ ಮಾರ್ಗಾವೊದಲ್ಲಿರುವ ಪಂಡಿತ್​ ಜವಾಹರ್​ಲಾಲ್​ ನೆಹರು ಕ್ರೀಡಾಂಗಣದಲ್ಲಿ ಅ.​ 26ರಿಂದ ನ.​ 9ರವರೆಗೆ ನಡೆಯಲಿರುವ ಕ್ರೀಡಾಕೂಕ್ಕೆ ದೇಶದ ಅಥ್ಲೀಟ್​ಗಳು ಹಸ್ತಾಂತರಿಸಿದ ಆಟಗಳನ್ನು ಪ್ರತಿನಿಧಿಸುವ ಜ್ಯೋತಿ(Infinity Flame) ಯನ್ನು ಸ್ವೀಕರಿಸುವ ಮೂಲಕ ಮೋದಿ ಚಾಲನೆ ನೀಡಿದರು. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಭಾರತದ ಸಂಕಲ್ಪ ಹಾಗೂ …

Read More »

ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್.. ಅರಣ್ಯಾಧಿಕಾರಿಗಳಿಂದ ತನಿಖೆ

ಸುಳ್ಯ (ದಕ್ಷಿಣ ಕನ್ನಡ): ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿರುವ ಪ್ರಕರಣಗಳು ಸದ್ಯ ಸದ್ದು ಮಾಡುತ್ತಿವೆ. ಸುಳ್ಯ ನಗರ ಪಂಚಾಯತ್ ಸಿಬ್ಬಂದಿಯೊಬ್ಬರು ಇದೇ ಮಾದರಿಯ ಪೆಂಡೆಂಟ್ ಧರಿಸಿರುವ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಅರಣ್ಯ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಶಶಿಕಲಾ ಅವರು ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗುತ್ತಿದ್ದು, ಅರಣ್ಯಾಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಈಟಿವಿ ಭಾರತದ …

Read More »

ಬಿ.ಎಸ್​.ಯಡಿಯೂರಪ್ಪಗೆ ‘Z​’ ಶ್ರೇಣಿಯ ಭದ್ರತೆ: ಶೀಘ್ರವೇ ಸಿಆರ್​ಪಿಎಫ್​ ಕಮಾಂಡೋ ಸೆಕ್ಯೂರಿಟಿ

ನವದೆಹಲಿ: ಕರ್ನಾಟಕ ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್​ ಪಡೆಯ (ಸಿಆರ್​ಪಿಎಫ್​) ಸಿಬ್ಬಂದಿಯನ್ನು ಒಳಗೊಂಡಿರುವ ‘ಝೆಡ್​’ ಶ್ರೇಣಿಯ ಭದ್ರತೆ ಕಲ್ಪಿಸಿ ಕೇಂದ್ರ ಗೃಹ ಸಚಿವಾಲಯ ಗುರುವಾರ ಆದೇಶಿಸಿದೆ. ಕರ್ನಾಟಕದಲ್ಲಿ ಮಾತ್ರವೇ ಉನ್ನತ ಭದ್ರತೆಯ ಸೌಲಭ್ಯವನ್ನು ಬಿಎಸ್​ವೈ ಹೊಂದಿರಲಿದ್ದು, ಸಿಆರ್​ಪಿಎಫ್​ ಸಿಬ್ಬಂದಿ ಶೀಘ್ರವೇ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಬಿ.ಎಸ್.ಯಡಿಯೂರಪ್ಪನವರಿಗೆ ಬೆದರಿಕೆ ಇರುವ ಕುರಿತ ಮಾಹಿತಿಯನ್ನು ಗುಪ್ತಚರ ವಿಭಾಗವು ಕೇಂದ್ರ ಗೃಹ ಇಲಾಖೆಯೊಂದಿಗೆ ಹಂಚಿಕೊಂಡಿದೆ. ಇದರ …

Read More »

ವಿಜುಗೌಡ ಪಾಟೀಲ್ ನಿವಾಸದಲ್ಲಿ ಅರಣ್ಯಾಧಿಕಾರಿಗಳಿಂದ ತಪಾಸಣೆ

ವಿಜಯಪುರ: ಹುಲಿ ಉಗುರಿನ ಮಾದರಿಯ ಪೆಂಡೆಂಟ್‌ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬಳಿಕ ಕೇಳಿ ಬಂದ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರ ನಿವಾಸಕ್ಕೆ ಇಂದು ಬೆಳಿಗ್ಗೆ (ಗುರುವಾರ) ಭೇಟಿ ನೀಡಿದ ಅರಣ್ಯಾಧಿಕಾರಿಗಳು, ಕೆಲಹೊತ್ತು ಶೋಧ ನಡೆಸಿದ್ದಾರೆ. ಜಿಲ್ಲಾ ಉಪ ಅರಣ್ಯಾಧಿಕಾರಿ ಶಿವಶರಣಯ್ಯ, ಸಹಾಯಕ ಅರಣ್ಯಾಧಿಕಾರಿ ಭಾಗ್ಯವಂತ ಮಸೂದೆ, ವಲಯ ಅರಣ್ಯಾಧಿಕಾರಿ ಸಂತೋಷ ಆಜೂರ ಹಾಗೂ ಸಿಬ್ಬಂದಿ ಪರಿಶೀಲಿಸಿದರು. ವಿಜುಗೌಡ, ಪುತ್ರ ಶಾಶ್ವತಗೌಡ ಹಾಜರಿದ್ದು …

Read More »

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು.

ಬೆಂಗಳೂರು : ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಇದರಲ್ಲಿ ಪ್ರಾದೇಶಿಕ ನ್ಯಾಯವನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗದವರಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಮಾತನಾಡಿದರು. ಈ ವೇಳೆ ಕರ್ನಾಟಕ ಎಂದು …

Read More »

ವಿದ್ಯುತ್, ಕಲ್ಲಿದ್ದಲು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ: ಸಚಿವ ಕೆ.ಜೆ.ಜಾರ್ಜ್

ನವದೆಹಲಿ/ಬೆಂಗಳೂರು: ವಿದ್ಯುತ್ ಹಾಗೂ ಕಲ್ಲಿದ್ದಲು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ನಿಯಮದ ಪ್ರಕಾರ ವಿದ್ಯುತ್ ಖರೀದಿ ಮತ್ತು ಕಲ್ಲಿದ್ದಲು ಆಮದು ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಈ ಬಗ್ಗೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ರಾಜ್ಯ ಸರ್ಕಾರ ತಳ್ಳಿ ಹಾಕುತ್ತದೆ ಎಂದರು. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ …

Read More »

ಕುಮಾರಸ್ವಾಮಿ ಸವಾಲು ಸ್ವೀಕರಿಸುತ್ತೇನೆ, ಅಧಿವೇಶನದಲ್ಲಿ ಚರ್ಚೆಗೆ ಸಿದ್ಧ: ಡಿ.ಕೆ.ಶಿವಕುಮಾರ್

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸವಾಲು ಸ್ವೀಕರಿಸಿದ್ದು, ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ಸಿದ್ಧನಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಮಾತಮಾಡಿದ ಅವರು, ನಾನು ಏನು ಮಾಡಿದ್ದೇನೆ, ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ಅಧಿವೇಶನದಲ್ಲಿ ದಾಖಲೆ ಸಮೇತ ಚರ್ಚೆ ಮಾಡೋಣ ಎಂದರು. ಕುಮಾರಸ್ವಾಮಿ ಅವರು ನನ್ನ ಸವಾಲು ಸ್ವೀಕರಿಸಿರುವುದು ಬಹಳ ಸಂತೋಷ. ಅವರ ಪ್ರತೀ ಸವಾಲನ್ನೂ ನಾನು ಸ್ವೀಕರಿಸುತ್ತೇನೆ. …

Read More »

ನಿಂತ ಮಿಡಿತ..ಇದು ಅಪರೂಪದ ‘ಹೃದಯ’ ಬಡಿತ: ಬ್ಯಾಟರಿಯೇ ಈ ಮಹಿಳೆಯ ‘ನಾಡಿಮಿಡಿತ’ಕ್ಕೆ ಆಸರೆ..

ನ್ಯೂಯಾರ್ಕ್( ವಾಷಿಂಗ್ಟನ್​): ಅಪರೂಪದ ಆನುವಂಶಿಕ ಹೃದಯ ಕಾಯಿಲೆಯಿಂದ ಬಳಲುತ್ತಿರುವ 30 ವರ್ಷದ ಅಮೆರಿಕದ ಮಹಿಳೆ, ನಾಡಿಮಿತವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಅವರಿಗೆ ಬ್ಯಾಟರಿಯೇ ಉಸಿರಾಟಕ್ಕೆ ಆಸರೆ ಆಗಿದೆ. ಬೋಸ್ಟನ್‌ನ ಟಿಕ್‌ಟಾಕರ್ ಸೋಫಿಯಾ ಹಾರ್ಟ್​ ಎಂಬುವವರ ಹೃದಯ ಹಿಗ್ಗಿದ ಕಾರ್ಡಿಯೊಮಿಯೊಪತಿ ಸಮಸ್ಯೆಯಿಂದ ಬಳಲುತ್ತಿದೆ. ಅಂದರೆ ಡಿಲೇಟೆಡ್ ಕಾರ್ಡಿಯೊಮಿಯೋಪತಿ, ಅಥವಾ ಡಿಸಿಎಂ, ಹೃದಯದ ಕೋಣೆಗಳು ಹಿಗ್ಗಿದಾಗ ಮತ್ತು ಸಂಕುಚಿತಗೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತವೆ. ಇದು ಹೆಚ್ಚಾಗಿ ಎಡ ಕುಹರದಲ್ಲಿ ( ಅಂದರೆ ಹೃದಯದ ಕೆಳಗಿನ ಕೋಣೆ) …

Read More »

ಚಿಕ್ಕಮಗಳೂರು: ಹುಲಿ ಉಗುರು ಮಾದರಿ ಪೆಂಡೆಂಟ್​ ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು : ಹುಲಿ ಉಗುರಿನಿಂದ ಡಾಲರ್ ಮಾಡಿ ಕತ್ತಿಗೆ ಹಾಕಿಕೊಂಡಿದ್ದ ಆರೋಪದ ಮೇಲೆ ದೇವಸ್ಥಾನದ ಇಬ್ಬರು ಅರ್ಚಕರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ನಡೆದಿದೆ. ಬಂಧಿತರಿಗೆ ಚಿಕ್ಕಮಗಳೂರು ಜೆಎಂಎಫ್‌ಸಿ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಬಾಳೆಹೊನ್ನೂರು ಸಮೀಪದ ಖಾಂಡ್ಯಾದ ಪ್ರಸಿದ್ಧ ಮಾರ್ಕಂಡೇಶ್ವರ ಸ್ವಾಮಿ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಮೂರು ಹುಲಿ ಉಗುರು ವಶಕ್ಕೆ ಪಡೆಯಲಾಗಿದೆ. ಇಬ್ಬರನ್ನು …

Read More »