ಧಾರವಾಡ: ಮುಂಗಾರು ಮಳೆ ಕೈಕೊಟ್ಟರೂ ಟೊಮೆಟೊ ಬೆಳೆಯಲ್ಲಿ ಭರ್ಜರಿ ಲಾಭ ಗಳಿಸಿದ್ದನ್ನು ಕಂಡು ಸಹಿಸಲಾಗದೇ ಕಿಡಿಗೇಡಿಗಳು ರಾತ್ರೋರಾತ್ರಿ ತಮ್ಮ ಒಂದೂವರೆ ಎಕರೆ ಹತ್ತಿ ಬೆಳೆಗೆ ಕಳೆನಾಶಕ ಹೊಡೆದು ಹಾಳು ಮಾಡಿದ್ದಾರೆ ಎಂದು ರೈತ ಧಾರವಾಡ ತಾಲೂಕಿನ ಗರಗ ಗ್ರಾಮದ ಗಂಗಪ್ಪ ಬಾರ್ಕಿ ಎಂಬ ರೈತ ಆರೋಪಿಸಿದ್ದಾರೆ. ಗಂಗಪ್ಪ ಬಾರ್ಕಿ ಅವರು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಹತ್ತಿ ಬೆಳೆ ಬೆಳೆದಿದ್ದರು. ಬರಗಾಲ ಇದ್ದರೂ, ಈ ರೈತ ನೀರು ಹಾಯಿಸಿ ಹತ್ತಿ ಬೆಳೆದಿದ್ದರು. …
Read More »Yearly Archives: 2023
ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ
ರಾಯಚೂರು: ಇಲ್ಲಿನ ಲಿಂಗಸುಗೂರು (Lingasaguu Taluku) ತಾಲೂಕಿನ ಹಟ್ಟಿ ಚಿನ್ನದಗಣಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಹಟ್ಟಿ ಚಿನ್ನದಗಣಿ ಕ್ಯಾಂಪಿನ ಗುಂಡುರಾವ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಮೃತ ಮಹಿಳೆಯನ್ನ ಮಂಜುಳಾ (45) ಅಂತ ಗುರುತಿಸಲಾಗಿದೆ. ಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಲ್ಯಾಬ್ ಟೆಕ್ನೀಷಿಯನ್ ಆಗಿದ್ದ ಮಂಜುಳಾ ಸಾವನ್ನಪ್ಪಿದ್ದಾರೆ. ಕೊಲೆ ಮಾಡಿ ಬೆಂಕಿ ಹಚ್ಚಿರಬಹುದು ಅಂತ ಶಂಕಿಸಲಾಗಿದೆ. ಮಂಜುಳಾ ಮನೆಯಿಂದ ಸ್ವಲ್ಪ ದೂರದಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ …
Read More »ಹುಲಿ ಉಗುರು ಮಾದರಿ ಪೆಂಡೆಂಟ್ ಪ್ರಕರಣ: ತಲೆತಗ್ಗಿಸುವ ಯಾವ ಕೆಲಸವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ ಎಂದ ನಟ ಜಗ್ಗೇಶ್
ಬೆಂಗಳೂರು: ಹುಲಿ ಉಗುರಿನ ಮಾದರಿ ಪೆಂಡೆಂಟ್ ಹೊಂದಿರುವ ಆರೋಪದ ಮೇಲೆ ನಟ ದರ್ಶನ್, ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮತ್ತು ನಟ ನಿಖಿಲ್ ಕುಮಾರಸ್ವಾಮಿ ನಿವಾಸಗಳಲ್ಲಿ ಅರಣ್ಯ ಅಧಿಕಾರಿಗಳು ಬುಧವಾರ ಶೋಧ ಕಾರ್ಯಾಚರಣೆ ನಡೆಸಿದರು. ಆ ಬಳಿಕ ಪ್ರಕರಣ ಕುರಿತು ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ತಾವು ಧರಿಸುವ ಲಾಕೆಟ್ ನಮ್ಮ ತಾಯಿ ಕೊಟ್ಟಿರುವ ಕಾಣಿಕೆಯಾಗಿದ್ದು, ಅದನ್ನು …
Read More »ಚಿಕ್ಕಬಳ್ಳಾಪುರ ರಸ್ತೆ ಅಪಘಾತ: ಮೃತರ ಸಂಖ್ಯೆ 13ಕ್ಕೆ ಏರಿಕೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. ಇಂದು ಮುಂಜಾನೆ ತಾಲೂಕಿನ ಚಿತ್ರಾವತಿ ಬಳಿಯ ಆರ್ಟಿಒ ಕಚೇರಿ ಸಮೀಪ ಹೆದ್ದಾರಿ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೊ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತರಲ್ಲಿ 8 ಜನ ಪುರುಷರು, 4 ಮಹಿಳೆಯರು, ಒಂದು …
Read More »ನ.1ರ ಬಳಿಕ ಯಾವ ದಿನವಾದರೂ ಸರಿ, ಬಹಿರಂಗ ಚರ್ಚೆಗೆ ಸಮಯ ಫಿಕ್ಸ್ ಮಾಡಿ; ಡಿ ಕೆ ಶಿವಕುಮಾರ್
ಬೆಂಗಳೂರು: ಯಾವಾಗಾದ್ರೂ ಸರಿ. ಚರ್ಚೆಗೆ ಸಮಯ ಫಿಕ್ಸ್ ಮಾಡಿ. ನವೆಂಬರ್ 1ರ ನಂತರ ಯಾವ ದಿನಾಂಕವಾದ್ರೂ ನಿಗದಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಚರ್ಚೆಗೆ ಒಪ್ಪಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೂಡ ಬಹಿರಂಗ ಚರ್ಚೆಗೆ ಒಪ್ಪಿಗೆ ಸೂಚಿಸಿ ಸಮಯ ನಿಗದಿಪಡಿಸುವಂತೆ ಹೇಳಿದ್ದಾರೆ. ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಡಿ.ಕೆ ಶಿವಕುಮಾರ್ ಪಟಾಲಮ್ನಿಂದ ರೈತರ ಪರಿಹಾರದಲ್ಲಿ ಲೂಟಿ ಎಂಬ ಹೆಚ್ಡಿಕೆ ಆರೋಪದ ವಿರುದ್ಧ ವಾಗ್ದಾಳಿ ನಡೆಸಿದರು. …
Read More »ಮೈಸೂರು ಜಂಬೂಸವಾರಿ ಯಶಸ್ವಿಗೊಳಿಸಿದ ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ
ಮೈಸೂರು: ಪ್ರಸಿದ್ಧ ದಸರಾಜಂಬೂಸವಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಮಾವುತರು ಹಾಗು ಕಾವಾಡಿಗರನ್ನು ಇಂದು ಸನ್ಮಾನಿಸಲಾಯಿತು. ಈ ಮೂಲಕ ಅರಮನೆಯ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಆತ್ಮೀಯ ಬೀಳ್ಕೊಡುಗೆ ನೀಡಿತು. ಕಳೆದ 56 ದಿನಗಳಿಂದ ಅರಮನೆ ಆವರಣದಲ್ಲಿ ಗಜಪಡೆ ಹಾಗೂ ಅದರೊಂದಿಗೆ ಬಂದಿದ್ದ ಮಾವುತರು, ಕಾವಾಡಿಗರ ಕುಟುಂಬದವರು ಬೀಡುಬಿಟ್ಟಿದ್ದರು. ಮಾವುತ, ಕಾವಾಡಿಗರಿಗೆ ಗೌರವ ಧನದ ಚೆಕ್ ನೀಡಲಾಯಿತು. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು. ಗಜಪಯಣದ ಮೂಲಕ 14 …
Read More »ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಬೆಂಗಳೂರು: ಅಕ್ಟೋಬರ್ 28 ಮತ್ತು 29ರಂದು ನಡೆಯಲಿರುವ ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಷರತ್ತುಬದ್ಧ ಅನುಮತಿ ನೀಡಿದೆ. ಹಾಗಾಗಿ ಹಿಜಾಬ್ ಧರಿಸಿಯೇ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬಹುದಾಗಿದೆ. ಆದರೆ ಕೆಲ ಷರತ್ತುಗಳನ್ನು ವಿಧಿಸಿದ್ದು, ಕಟ್ಟುನಿಟ್ಟಾಗಿ ಷರತ್ತು ಪಾಲಿಸಲು ಸೂಚನೆ ನೀಡಿದೆ. ಸೂಚನೆಗಳೇನು?: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಕೊಠಡಿಗೆ ಪ್ರವೇಶ ಕಲ್ಪಸಲು ಸೂಚಿಸಿದ್ದರೂ ಪರೀಕ್ಷೆ ಆರಂಭವಾಗುವುದಕ್ಕೆ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ …
Read More »ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ; ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ
ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಹಾಗೂ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ ಮಾಡಿದರು. ಸಂತೋಷ ಜಾರಕಿಹೊಳಿ ಅವರ ಅಭಿಮಾನಿಗಳು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಾಗೂ ಉಪಹಾರ ವಿತರಣೆ ಮಾಡುವ ಮೂಲಕ ಸರಳವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸಂತೋಷ ಜಾರಕಿಹೊಳಿ ಅವರ …
Read More »ಚನ್ನಮ್ಮಾಜಿ ದಿಟ್ಟತನ, ಸ್ವಾಭಿಮಾನ, ಛಲವನ್ನು ಮೈಗೂಡಿಸಿಕೊಳ್ಳಿ: ನಟ ರಮೇಶ್ ಅರವಿಂದ ಕರೆ
ಬೆಳಗಾವಿ: “200 ವರ್ಷಗಳ ಹಿಂದೆ ಆಂಗ್ಲರು ಮಂಡಿಯೂರುವಂತೆ ಮಾಡಿದ ವೀರಮಹಿಳೆ ಕಿತ್ತೂರು ಚನ್ನಮ್ಮ. ಕಿತ್ತೂರಿನ ಈ ವೀರಭೂಮಿಯಲ್ಲಿ ಸಹಸ್ರಾರು ವೀರಮಹಿಳೆಯರು ಹುಟ್ಟಿ ಬರಬೇಕು. ಕಿತ್ತೂರು ನೆಲದ ಜನರು ಚನ್ನಮ್ಮನ ದಿಟ್ಟತನ, ಸ್ವಾಭಿಮಾನ, ಹೋರಾಟದ ಛಲವನ್ನು ರೂಢಿಸಿಕೊಳ್ಳಬೇಕು” ಎಂದು ನಟ ರಮೇಶ್ ಅರವಿಂದ್ ಕರೆ ನೀಡಿದ್ದಾರೆ. ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಸನ್ಮಾನಿಸಲಾಯಿತುಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ಮಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಮೂರು ದಿನಗಳ ರಾಜ್ಯಮಟ್ಟದ …
Read More »ಕಾರ್ಮಿಕ ನ್ಯಾಯಾಲಯದ ಪೀಠಾಧಿಕಾರಿ ನೇಮಕ ವಿಳಂಬವಾದರೆ 10 ಲಕ್ಷ ರೂ ದಂಡ: ಕೆಂದ್ರ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ
ಬೆಂಗಳೂರು: ನಗರದಲ್ಲಿರುವ ಕೈಗಾರಿಕಾ ನ್ಯಾಯಾಧೀಕರಣ (ಕಾರ್ಮಿಕ ನ್ಯಾಯಾಲಯ) ದ ಪೀಠಾಸೀನಾಧಿಕಾರಿಯ ನೇಮಕಾತಿ ವಿಚಾರದಲ್ಲಿ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಮುಂದಿನ ಮೂರು ವಾರಗಳಲ್ಲಿ ಈ ಸಂಬಂಧ ಸಕಾರಾತ್ಮಕ ಕ್ರಮ ಕೈಗೊಳ್ಳದಿದ್ದರೆ 10 ಲಕ್ಷ ರೂ ದಂಡ ತೆತ್ತಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಕೈಗಾರಿಕಾ ಕಾನೂನು ಅಭ್ಯಾಸಕಾರರ ವೇದಿಕೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ …
Read More »