Breaking News

Yearly Archives: 2023

ಕಿತ್ತೂರು ಉತ್ಸವದಲ್ಲಿ ಕುಸ್ತಿ ಪಂದ್ಯಾವಳಿ

ಬೆಳಗಾವಿ: ಚನ್ನಮ್ಮನ ಕಿತ್ತೂರು ಉತ್ಸವದಲ್ಲಿ ಆಯೋಜಿಸಿರುವ ಕುಸ್ತಿ ಪಂದ್ಯಾವಳಿ ಕಣ್ಮನ ಸೆಳೆಯಿತು. ರಾಜ್ಯ, ಹೊರ ರಾಜ್ಯ, ಹೊರ ದೇಶಗಳ ಕುಸ್ತಿಪಟುಗಳು ತಮ್ಮ ಪಟ್ಟುಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಜನರು ಶಿಳ್ಳೆ, ಚಪ್ಪಾಳೆಗಳ ಮೂಲಕ ಪೈಲ್ವಾನರನ್ನು ಹುರಿದುಂಬಿಸಿದರು. ಪಟ್ಟಣದ ಕೆಇಬಿ ಗ್ರಿಡ್ ಮೈದಾನದಲ್ಲಿ ಆಯೋಜಿಸಿದ್ದ ಪುರುಷರ ಹಾಗೂ ಮಹಿಳೆಯರ ಅಂತರರಾಷ್ಟ್ರೀಯ ಜಂಘೀ ನಿಖಾಲಿ ಕುಸ್ತಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದ ವಿಭಾಗದಲ್ಲಿ ಹರಿಯಾಣ ರಾಜ್ಯದ ಉಮೇಶ ಚೌಧರಿ ಮಥುರಾ ವಿರುದ್ಧ ಇರಾನ್ …

Read More »

ಬೀದರ್: ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ರೈತನ ಬಂಧನ, 25.54 ಲಕ್ಷ ರೂ. ಮೌಲ್ಯದ ಗಿಡಗಳು ವಶಕ್ಕೆ!

ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ ಎಂಬುವವರು ವಿಜಯನಗರ ತಾಂಡಾದಲ್ಲಿರುವ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಬಗ್ಗೆ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿತ್ತು. ಬೀದರ್: ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ …

Read More »

ನವೆಂಬರ್ 2ರಿಂದ ಪ್ರಸಿದ್ಧ ಹಾಸನಾಂಬ ದೇವಾಲಯ ಓಪನ್

ನವೆಂಬರ್ 2ರಂದು ಪ್ರಸಿದ್ಧ ಅಧಿದೇವತೆ ಹಾಸನಾಂಬೆ ದೇವಸ್ಥಾನ ತೆರೆಯಲಾಗುತ್ತಿದ್ದು ಅಪಾರ ಭಕ್ತರು ಆಗಮಿಸುವ ನಿರೀಕ್ಷೆಯ ಮೇಲೆ ನಿಗಾ ಇಡಲು ಜಿಲ್ಲಾಡಳಿತ ಹೊಸ ನಿಯಮಗಳನ್ನು ರೂಪಿಸಿದೆ. ಹಾಸನ: ನವೆಂಬರ್ 2ರಂದು ಪ್ರಸಿದ್ಧ ಅಧಿದೇವತೆ ಹಾಸನಾಂಬೆ ದೇವಸ್ಥಾನ ತೆರೆಯಲಾಗುತ್ತಿದ್ದು ಅಪಾರ ಭಕ್ತರು ಆಗಮಿಸುವ ನಿರೀಕ್ಷೆಯ ಮೇಲೆ ನಿಗಾ ಇಡಲು ಜಿಲ್ಲಾಡಳಿತ ಹೊಸ ನಿಯಮಗಳನ್ನು ರೂಪಿಸಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಬರುವ …

Read More »

ಬರ ಪರಿಸ್ಥಿತಿ: ಕೇಂದ್ರದಿಂದ 17,901.73 ಕೋಟಿ ರೂ. ಪರಿಹಾರ ಕೋರಿದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸ್ಪಂದಿಸಿ, ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ಕೇಂದ್ರದಿಂದ ರೂ. 17,901.73 ಕೋಟಿಗಳ ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸ್ಪಂದಿಸಿ, ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ಕೇಂದ್ರದಿಂದ ರೂ.17,901.73 ಕೋಟಿಗಳ ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನೊಳಗೊಂಡ ನಿಯೋಗ ಕೇಂದ್ರ …

Read More »

ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಬಾಲಕ: ಸಮಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿ!

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿಯ ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿಯ ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದ ಘಟನೆ ಮಂಗಳವಾರ …

Read More »

ದರ್ಶನ್, ರಾಕ್​ಲೈನ್ ವೆಂಕಟೇಶ್‌ ಮನೆಯಲ್ಲಿ ಅರಣ್ಯ ಅಧಿಕಾರಿಗಳಿಂದ ಶೋಧ

ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಹೊಂದಿರುವ ಆರೋಪದಡಿ ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ನಟ ದರ್ಶನ್ ತೂಗುದೀಪ ಸೇರಿದಂತೆ ನಾಲ್ವರ ಮನೆಗಳ ಮೇಲೆ ಶೋಧ ವಾರೆಂಟ್ ಪಡೆದು ಪರಿಶೀಲನೆ ನಡೆಸಿದರು. ನಟರಾದ ಜಗ್ಗೇಶ್, ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಹಾಗೂ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ನಿವಾಸಗಳಲ್ಲಿ ಇಲಾಖೆಯ ನಾಲ್ಕು ತಂಡಗಳು ಪ್ರತ್ಯೇಕವಾಗಿ ತೆರಳಿದ್ದು, ನೊಟೀಸ್ ನೀಡಿ, ಮನೆಯ ಇಂಚಿಂಚೂ ಶೋಧಿಸಿವೆ. ಆರ್.ಆರ್.ನಗರದಲ್ಲಿರುವ ದರ್ಶನ್ ಮನೆಗೆ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದ …

Read More »

ವಿಶ್ವಕಪ್‌ ಕ್ರಿಕೆಟ್ ಇತಿಹಾಸದಲ್ಲೇ ಅತಿದೊಡ್ಡ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ! ನೆದರ್ಲೆಂಡ್ಸ್‌ ವಿರುದ್ಧ 309 ರನ್‌ಗಳ ಜಯಭೇರಿ

ಆಸ್ಟ್ರೇಲಿಯಾ ನೀಡಿರುವ 400 ರನ್​ಗಳ ಗುರಿ ಬೆನ್ನತ್ತುವಲ್ಲಿ ವಿಫಲವಾದ ನೆದರ್ಲೆಂಡ್ಸ್‌ 309 ರನ್‌ಗಳ ಭಾರಿ ಅಂತರದ ಸೋಲು ಕಂಡಿತು. ನವದೆಹಲಿ: ಐದು ಬಾರಿ ಏಕದಿನ ವಿಶ್ವಕಪ್​ ಗೆದ್ದಿರುವ ಆಸ್ಟ್ರೇಲಿಯಾ ಇಂದು ತಮ್ಮ ಹಳೆಯ ಚಾರ್ಮ್‌ ಪ್ರದರ್ಶಿಸಿತು. ನೆದರ್ಲೆಂಡ್ಸ್​ ವಿರುದ್ಧ ಬ್ಯಾಟಿಂಗ್​ ಮತ್ತು ಬೌಲಿಂಗ್‌ನಲ್ಲಿ ಚಾಂಪಿಯನ್​ ರೀತಿಯ ಪ್ರದರ್ಶನ ನೀಡಿ 29 ಓವರ್​ ಮತ್ತು 309 ರನ್‌ಗಳಿಂದ ಪಂದ್ಯ ಗೆದ್ದುಕೊಂಡಿತು. ಆಸ್ಟ್ರೇಲಿಯಾ ನೀಡಿದ 400 ರನ್‌ಗಳ ಬೃಹತ್​ ಗುರಿ ಬೆನ್ನತ್ತಿದ ಡಚ್ಚರು 21 …

Read More »

ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ.

ಬೆಳಗಾವಿ: ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ. ಕಲರ್​ಫುಲ್ ಲೈಟಿಂಗ್ಸ್‌ನಿಂದ​ ಕಂಗೊಳಿಸುತ್ತಿದ್ದ ಕೋಟೆಯಲ್ಲಿ ಜನರು ಸೆಲ್ಫಿ ಫೋಟೋ ತೆಗೆಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಉತ್ಸವಕ್ಕೆ ಬಂದವರು ಕೋಟೆ ಅಭಿವೃದ್ಧಿಯಾಗಿ, ಪ್ರಸಿದ್ಧ ಪ್ರವಾಸಿ ತಾಣವಾಗಬೇಕು, ದಸರಾ ಮಾದರಿಯಲ್ಲಿ ಕಿತ್ತೂರು ಉತ್ಸವ ಜರುಗಬೇಕು ಎಂದು ಆಶಿಸಿದರು. ವೀರರಾಣಿ ಚನ್ನಮ್ಮಾಜಿ ಆಳಿದ ಕೋಟೆಯಲ್ಲಿ ಯುವಕ, ಯುವತಿಯರು, ಚಿಕ್ಕ ಮಕ್ಕಳು, ಮಹಿಳೆಯರು ಸೇರಿ ಇಡೀ ಕುಟುಂಬಸ್ಥರು ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ವಸ್ತು ಪ್ರದರ್ಶನದಲ್ಲಿ ಮಾರಾಟಕ್ಕೆ ಇಟ್ಟಿರುವ ವಿವಿಧ ವಸ್ತುಗಳ …

Read More »

ಶಾಸಕ ಅಭಯ್ ಪಾಟೀಲ್​ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ.

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇತ್ತೀಚೆಗೆ ಆಸ್ತಿ ತೆರಿಗೆ ಹೆಚ್ಚಳ ನಿರ್ಣಯದ ದಿನಾಂಕ ತಿದ್ದಿದ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಬುಧವಾರ ಬಿಜೆಪಿ ಶಾಸಕ ಅಭಯ್ ಪಾಟೀಲ್ ದಲಿತ ಅಧಿಕಾರಿಗಳ ಮೇಲೆ ವೈಯಕ್ತಿಕ ಹಗೆತನ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.   ಪ್ರಗತಿಪರ ಸಂಘಟನೆಗಳು, ಕಾಂಗ್ರೆಸ್ ನಗರಸಭೆ ಸದಸ್ಯರು, ವಿವಿಧ ದಲಿತ ಸಂಘಟನೆಗಳು ಹಾಗೂ ಸಚಿವ ಸತೀಶ್​ …

Read More »

ಮಹಿಳೆಗೆ ಯಾವುದೇ ಜವಾಬ್ದಾರಿ ನೀಡಿದರೂ ಆಕೆ ಅಚ್ಚುಕಟ್ಟಾಗಿ ನಿರ್ವಹಿಸುತ್ತಾಳೆ. ವಿಶ್ವಾಸದ್ರೋಹವನ್ನು ಸ್ತ್ರೀಕುಲ ಎಂದೂ ಮಾಡುವುದಿಲ್ಲ.: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮಹಿಳೆಗೆ ಯಾವುದೇ ಜವಾಬ್ದಾರಿ ನೀಡಿದರೂ ಆಕೆ ಅಚ್ಚುಕಟ್ಟಾಗಿ ನಿರ್ವಹಿಸುತ್ತಾಳೆ. ವಿಶ್ವಾಸದ್ರೋಹವನ್ನು ಸ್ತ್ರೀಕುಲ ಎಂದೂ ಮಾಡುವುದಿಲ್ಲ. ಆದರೆ ಒಬ್ಬ ಮಹಿಳೆ ಇನ್ನೊಬ್ಬ ಮಹಿಳೆಯನ್ನು ಸಹಿಸಿಕೊಳ್ಳುವುದಿಲ್ಲ ಎನ್ನುವ ಅಪವಾದವಿದೆ. ತೊಡೆದು ಹಾಕಲು ನಾವೆಲ್ಲ ಒಂದಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕಿತ್ತೂರು ಉತ್ಸವದಲ್ಲಿ ಬುಧವಾರ ರಾಜ್ಯಮಟ್ಟದ ಮಹಿಳಾಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು. ಚಂದ್ರಯಾನ ಸೇರಿದಂತೆ ಪ್ರತಿಯೊಂದು ಸಾಧನೆಯಲ್ಲೂ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು. ಈಗ …

Read More »