Breaking News

Yearly Archives: 2023

ಇಂದು ದಸರಾ ಜಂಬೂ ಸವಾರಿ ವೈಭವ: ಅಂಬಾರಿ ಹೊರಡುವ ಮಾರ್ಗದಲ್ಲಿ ಭಾರಿ ಭದ್ರತೆ

ಮೈಸೂರು: ವಿಶ್ವವಿಖ್ಯಾತ ಸಾಂಪ್ರದಾಯಿಕ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ವಿಜಯದಶಮಿ ಮೆರವಣಿಗೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಚಿನ್ನದ ಅಂಬಾರಿಯಲ್ಲಿ ಆಸೀನಳಾಗುವ ನಾಡದೇವತೆ ಶ್ರೀ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ವೈಭವದ ಜಂಬೂ ಸವಾರಿ ಮೆರವಣಿಗೆಗೆ ವಿಧ್ಯುಕ್ತ ಚಾಲನೆ ಸಿಗಲಿದೆ. ಜಂಬೂ ಸವಾರಿಗೆ ಸಕಲ ಸಿದ್ಧತೆಜಂಬೂಸವಾರಿ ಮೆರವಣಿಗೆಗೆ 47 ಸ್ತಬ್ಧಚಿತ್ರಗಳು ಹಾಗೂ ಕಲಾತಂಡಗಳು ಸಿದ್ಧವಾಗಿವೆ. ಮಧ್ಯಾಹ್ನ 1.46 ರಿಂದ 2.08 ರ ಶುಭ ಮಕರ ಲಗ್ನದಲ್ಲಿ ಸಿಎಂ …

Read More »

ಚೆನ್ನೈನ ಅವಡಿ ಬಳಿ ಹಳಿ ತಪ್ಪಿದ ವಿದ್ಯುತ್ ಚಾಲಿತ​ ರೈಲು: ತಪ್ಪಿದ ಭಾರಿ ದುರಂತ

ಚೆನ್ನೈ (ತಮಿಳುನಾಡು): ಇಂದು ಬೆಳಗ್ಗೆ ತಮಿಳುನಾಡು ರಾಜ್ಯದ ಚೆನ್ನೈನ ಅವಡಿ ರೈಲು ನಿಲ್ದಾಣದ ಬಳಿ ವಿದ್ಯುತ್ ಚಾಲಿತ ರೈಲು (electric train) ಹಳಿ ತಪ್ಪಿದೆ. ಅದೃಷ್ಟವಶಾತ್​ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ರೈಲ್ವೆ ಹಳಿ ಬಿರುಕು ಬಿಟ್ಟಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ತಿರುವಳ್ಳೂರಿನಿಂದ ಪುರಟ್ಚಿ ತಲೈವರ್​ ಡಾ. ಎಂಜಿಆರ್​ ಸೆಂಟ್ರಲ್​ ರೈಲು ನಿಲ್ದಾಣದವರೆಗೆ ರೈಲ್ವೆ ಹಳಿಯ (ಟ್ರ್ಯಾಕ್​) ನಿರ್ವಹಣಾ ಕಾರ್ಯ ನಡೆಯುತ್ತಿದೆ. ಈ ವೇಳೆ, ಇಂದು (ಅ.24) …

Read More »

ಚನ್ನಮ್ಮನ ಕಿತ್ತೂರು ಉತ್ಸವ, ರಾಷ್ಟ್ರೀಯ ಉತ್ಸವ ಆಗಲಿ

ಬೆಳಗಾವಿ : ಕಿತ್ತೂರು ರಾಣಿ‌ ಚನ್ನಮ್ಮಾಜಿ ಬ್ರಿಟಿಷರ ವಿರುದ್ಧ ಮೊದಲ ದಿಗ್ವಿಜಯ ಸಾಧಿಸಿದ್ದಕ್ಕೆ ಮುಂದಿನ ವರ್ಷ 200 ವರ್ಷ ತುಂಬಲಿದೆ. ಆ ವೇಳೆ, ಕಿತ್ತೂರು ಉತ್ಸವ ರಾಷ್ಟ್ರಮಟ್ಟದ ಉತ್ಸವ ಆಗಬೇಕು ಎಂದು ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ಕಿತ್ತೂರು ಉತ್ಸವದಲ್ಲಿ ಆಗ್ರಹಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ವರ್ಷ ನಡೆಯಲಿರುವ ಕಿತ್ತೂರು ಉತ್ಸವ ರಾಷ್ಟ್ರೀಯ ಉತ್ಸವವಾಗಿ‌ ಘೋಷಿಸಬೇಕು. ಪಾರ್ಲಿಮೆಂಟ್ ಮುಂದೆ ಚನ್ನಮ್ಮ ಮತ್ತು …

Read More »

“ಬರ ವಿಚಾರವನ್ನು ಕುಮಾರಸ್ವಾಮಿ ಸರಿಯಾಗಿ ತಿಳಿದುಕೊಂಡಿಲ್ಲ. ಸುಮ್ಮನೆ ಆರೋಪ ಮಾಡುತ್ತಿದ್ದಾರೆ” ಎಂದ ಮುಖ್ಯಮಂತ್ರಿ

ಮೈಸೂರು: “ಬರ ವಿಚಾರವನ್ನು ಕುಮಾರಸ್ವಾಮಿ ಸರಿಯಾಗಿ ತಿಳಿದುಕೊಂಡಿಲ್ಲ. ಸುಮ್ಮನೆ ಆರೋಪ ಮಾಡುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ದಸರಾ ಏರ್ ಶೋ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, “ರಾಜ್ಯದಲ್ಲಿ ಈಗಾಗಲೇ ಬರಗಾಲ ಕಾಮಗಾರಿಗಳು ಆರಂಭವಾಗಿವೆ. ಕುಡಿಯುವ ನೀರು, ಮೇವು ಕೊಡುವ ಕೆಲಸ ಮಾಡುತ್ತಿದ್ದೇವೆ. ಕುಡಿಯುವ ನೀರಿಗೆ ಎಷ್ಟೇ ಹಣ ಖರ್ಚಾದರೂ ತೊಂದರೆ ಆಗಬಾರದು ಎಂದು ಸೂಚಿಸಿದ್ದೇನೆ‌. ಸದ್ಯಕ್ಕೆ ಮೇವಿಗೆ ಕೊರತೆ ಇಲ್ಲ. ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ …

Read More »

ಬಸವರಾಜ ಬೊಮ್ಮಾಯಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಗೆ ಮರಳಿದ್ದಾರೆ.

ಬೆಂಗಳೂರು: ಹೃದಯದ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೇತರಿಸಿಕೊಂಡಿದ್ದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದು, ಇನ್ನಷ್ಟು ಸಮಯದ ನಂತರವೇ ರಾಜಕೀಯ ಚಟುವಟಿಕೆಗೆ ಮರಳಲಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬೊಮ್ಮಾಯಿ ಗುಣಮುಖರಾಗಿದ್ದಾರೆ. ಅಕ್ಟೋಬರ್ 15 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಒಂದು ವಾರದ ನಂತರ ಗುಣಮುಖರಾಗಿ …

Read More »

ಅಂಬಾರಿಯಲ್ಲಿ ಮೈಸೂರು ದಸರಾ ದೀಪಾಲಂಕಾರ ವೀಕ್ಷಿಸಿದ ಸಿಎಂ

ಮೈಸೂರು ದಸರಾ ದೀಪಾಲಂಕಾರ ಕಣ್ತುಂಬಿಕೊಂಡರು. ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು 3 ದಿನಗಳ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಏರ್ ಶೋ ವೀಕ್ಷಣೆ ಮಾಡಿದ ಬಳಿಕ, ಅಂಬಾರಿ ಬಸ್​ನಲ್ಲಿ ಜನರಿಗೆ ಕೈ ಬೀಸುತ್ತಾ ದಸರಾ ದೀಪಾಲಂಕಾರ ವೀಕ್ಷಿಸಿದರು.   ಅಂಬಾರಿಯಲ್ಲಿ ಮೈಸೂರು ದಸರಾ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯಸೋಮವಾರ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ದಸರಾ ಏರ್​ ಶೋ ವೀಕ್ಷಣೆ ಮಾಡಿದ ಬಳಿಕ ಸಂಜೆ ಅರಮನೆಯ ಮುಂಭಾಗದ …

Read More »

ಮಕ್ಕಳಿಲ್ಲದವರು ಈ ದೇವಸ್ಥಾನಕ್ಕೆ ಬೇಟಿ ನೀಡಿದರೆ ಸಂತಾನಭಾಗ್ಯ ಖಚಿತವಂತೆ: ಭಕ್ತರ ಇಷ್ಟಾರ್ಥ ಇಡೇರಿಸುತ್ತಿರುವ ಈ ದೇವಸ್ಥಾನ ಎಲ್ಲಿದೆ ಗೊತ್ತಾ?

ಹಾವೇರಿ: ಹಿರೇಕೆರೂರು ತಾಲೂಕು ಸಾತೇನಹಳ್ಳಿಯಲ್ಲೊಂದು ವಿಶಿಷ್ಟ ದೇವಸ್ಥಾನವಿದೆ. ಈ ದೇವಸ್ಥಾನಕ್ಕೆ ವಿಶೇಷತೆ ಬಂದಿರುವದು ಇಲ್ಲಿ ನೀಡುತ್ತಿರುವ ಸಂತಾನ ಭಾಗ್ಯ ಪ್ರಸಾದದಿಂದ. ಹೌದು ಸಾತೇನಹಳ್ಳಿ ಗ್ರಾಮದ ಶಾಂತೇಶ (ಹನುಮಂತ ದೇವರ) ದೇವಸ್ಥಾನದ ಅರ್ಚಕರು ಮಕ್ಕಳಾಗದ ಮಹಿಳೆಯರಿಗೆ ಸಂತಾನ ಭಾಗ್ಯ ನೀಡುವ ಔಷಧವನ್ನು ದೇವಸ್ಥಾನದ ಅರ್ಚಕರು ಸುಮಾರು ಎರಡುನೂರು ವರ್ಷಗಳಿಂದ ನೀಡುತ್ತಾ ಬಂದಿದ್ದಾರೆ. ನವರಾತ್ರಿಯ ಈ ದಿನಗಳಲ್ಲಿ ಆಯುಧಪೂಜೆಯ ದಿನದಂದು ಶ್ರವಣಾ ನಕ್ಷತ್ರದಲ್ಲಿ ಈ ಔಷಧ ಭಕ್ತರಿಗೆ ವಿತರಿಸಲಾಗುತ್ತದೆ. ಶಾಂತೇಶನ ದೇವಸ್ಥಾನದಲ್ಲಿ ಬಾಳೇಹಣ್ಣಿನಲ್ಲಿ ನೀಡುವ …

Read More »

ಜಗದೀಶ್​ ಶೆಟ್ಟರ್ ನಮ್ಮ ಪ್ರೀತಿಯ ಮನುಷ್ಯ,ನಾನು ಸತತವಾಗಿ 06 ನೇ ಸಲ ಭೇಟಿಯಾಗಿದ್ದೇನೆ.

ರಮೇಶ್​ ಜಾರಕಿಹೊಳಿ-ಜಗದೀಶ್​ ಶೆಟ್ಟರನ್ನು ಭೇಟಿಯಾದ ವಿಚಾರವಾಗಿ ಪ್ರತಿಕ್ರಿಯಿಸಿ, ಜಗದೀಶ್​ ಶೆಟ್ಟರ್ ನಮ್ಮ ಪ್ರೀತಿಯ ಮನುಷ್ಯ. ಅವರು ಎಲ್ಲಿದ್ದರೂ ನಮ್ಮ ಹಿರಿಯರು. ಅವರನ್ನು ನಾನು ಸತತವಾಗಿ 06 ನೇ ಸಲ ಭೇಟಿಯಾಗಿದ್ದೇನೆ. ಈ ಸಲ ಅವರ ಭೇಟಿ ವಿಚಾರ ಲೀಕ್ ಆಗಿದೆ. ನಾನು ಅವರನ್ನು ತುಂಬಾ ಸಲ ಮೀಟ್ ಆಗಿದ್ದೇನೆ. ಶೆಟ್ಟರ್​ ಅವರು ಒಳ್ಳೆಯವರು. ನಮ್ಮ ಪಕ್ಷ ಬಿಡಬಾರದಾಗಿತ್ತು. ದುರ್ದೈವ ನೋಡೊಣ. ಮುಂದಿನ ದಿನಮಾನದಲ್ಲಿ ಏನಾಗುತ್ತೆಂದು. ರಾಜಕೀಯ ಚರ್ಚೆ ಏನೂ‌ ನಡೆದಿಲ್ಲ. …

Read More »

ಸಿದ್ದರಾಮಯ್ಯನವರ ಕ್ಯಾಬಿನೆಟ್​ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ.: ರಮೇಶ್ ಜಾರಕಿಹೊಳಿ ಕಳವಳ

ಚಿಕ್ಕೋಡಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಯಾಬಿನೆಟ್​ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ. ಸಿದ್ದರಾಮಯ್ಯನವರು ಇದ್ದಾಗಲೇ ಸತೀಶ್​ಗೆ ಈ ರೀತಿ ಪರಿಸ್ಥಿತಿ ಬಂದಿದೆ. ಬೇರೆ ಯಾರಾದ್ರೂ ಸಿಎಂ ಇದ್ರೆ ಸತೀಶ್​ ಪರಿಸ್ಥಿತಿ ಏನು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದ್ದಾರೆ. ಸೋಮವಾರ ರಾತ್ರಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದಗಾಂವ್ ಗ್ರಾಮದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಸಿಎಂ ಸಿದ್ದರಾಮಯ್ಯನವರ ಕಾಲದಲ್ಲಿ ಸತೀಶ್​ ಅವರಿಗೆ …

Read More »

ಹುಲಿವೇಷ ಕುಣಿತ ಸ್ಪರ್ಧೆಗೆ ತಾರಾ ಮೆರುಗು: ಕ್ರಿಕೆಟಿಗ ಹರ್ಭಜನ್​ ಸಿಂಗ್​, ನಟ ಸುನೀಲ್​ ಶೆಟ್ಟಿ ಭಾಗಿ

ಮಂಗಳೂರು (ದಕ್ಷಿಣ ಕನ್ನಡ): ನಗರದ ಉರ್ವಾ ಮೈದಾನದಲ್ಲಿ ನಡೆದ ಹುಲಿವೇಷ ಸ್ಪರ್ಧೆ ಪಿಲಿನಲಿಕೆಯಲ್ಲಿ ಭಾರತ ತಂಡದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಮತ್ತು ಬಾಲಿವುಡ್ ನಟ ಸುನೀಲ್ ಶೆಟ್ಟಿ ಭಾಗಿಯಾದರು. ಮಂಗಳೂರು (ದಕ್ಷಿಣ ಕನ್ನಡ): ನಗರದ ಉರ್ವಾ ಮೈದಾನದಲ್ಲಿ ನಡೆದ ಹುಲಿವೇಷ ಸ್ಪರ್ಧೆ ಪಿಲಿನಲಿಕೆಯಲ್ಲಿ ಭಾರತ ತಂಡದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಮತ್ತು ಬಾಲಿವುಡ್ ನಟ ಸುನೀಲ್ ಶೆಟ್ಟಿ ಭಾಗಿಯಾದರು. ಕಾಂಗ್ರೆಸ್ ಮುಖಂಡ ಮಿಥುನ್​ ರೈ ನೇತೃತ್ವದಲ್ಲಿ ಪಿಲಿನಲಿಕೆ ಎಂಬ ಹುಲಿವೇಷ …

Read More »