ಬೆಂಗಳೂರು: 2019ರ ಲೋಕಸಭೆ ಚುನಾವಣೆ ವೇಳೆ ಹೈವೋಲ್ಟೆಜ್ ಕದನವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರ ಇದೀಗ 2024ರ ಚುನಾವಣೆ ಮುನ್ನವೇ ರಂಗೇರುವ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಮಂಡ್ಯ ಕ್ಷೇತ್ರ ತಲೆನೋವಾಗುವ ಮುನ್ಸೂಚನೆ ಸಿಕ್ಕಿದೆ. ಇದಕ್ಕೆ ಕಾರಣ ಹಾಲಿ ಸಂಸದೆ ಸುಮಲತಾ ನೀಡಿರುವ ಹೇಳಿಕೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸುಮಲತಾ ತಿಳಿಸಿದ್ದಾರೆ. ನನ್ನ ಸ್ಪರ್ಧೆ ಸಂಬಂಧ …
Read More »Yearly Archives: 2023
ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ: ಡಿವಿಸ್ ಅಸಮಾಧಾನ
ಬೆಂಗಳೂರು: ರಾಜ್ಯ ಬಿಜೆಪಿ (BJP) ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ (DV Sadananda Gowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಗೊಂಡ ನಾಯಕರ ಪಟ್ಟಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಪಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ (BY Vijayendra) ಹಾಗೂ ಆರ್. ಅಶೋಕ್ (R. Ashok) ಆಯ್ಕೆಯಾದಗಿನಿಂದ ಬಿಜೆಪಿ ಹಿರಿಯ ನಾಯಕರು ಒಬ್ಬರಾದ ಮೇಲೊಬ್ಬರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದೀಗ …
Read More »ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಸಿಕ್ಕಿದ್ದು ಮೋದಿಯಿಂದಾಗಿ: ಕಲ್ಲಡ್ಕ ಪ್ರಭಾಕರ್ ಭಟ್
ಮಂಡ್ಯ: ಮುಸ್ಲಿಂ ಸಮುದಾಯದಲ್ಲಿ ಮಹಿಳೆಯರಿಗೆ ತ್ರಿವಳಿ ತಲಾಕ್ (Triple Talaq) ಹೇಳುವ ಅವಕಾಶ ಇತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸರ್ಕಾರದಿಂದಾಗಿ ತ್ರಿವಳಿ ತಲಾಕ್ ರದ್ದಾಗಿದೆ. ಬಹು ಪತ್ನಿತ್ವ ಪಿಡುಗು ಮತ್ತು ತ್ರಿವಳಿ ತಲಾಕ್ ಕಾಟದಿಂದಾಗಿ ಈ ಹಿಂದೆ ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ (Permanent Husband) ಇರಲಿಲ್ಲ. ತ್ರಿವಳಿ ತಲಾಕ್ ರದ್ದುಪಡಿಸುವ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ …
Read More »ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು.: ಬಿಕೆ ಹರಿಪ್ರಸಾದ್
ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರ ಇದ್ದವರ ವಿರುದ್ಧ ಕಾಂಗ್ರೆಸ್ ಇದೆ. ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು. ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಭಾನುವಾರ ಹೇಳಿದರು. ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರ ಇದ್ದವರ ವಿರುದ್ಧ ಕಾಂಗ್ರೆಸ್ ಇದೆ. ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು …
Read More »ಸಿದ್ದರಾಮಯ್ಯನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ.:ಅನಂತ್ ಕುಮಾರ್ ಹೆಗಡೆ
ಸಿದ್ದರಾಮಯ್ಯನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ. ಸಿದ್ದರಾಮಯ್ಯನವರ ದುರಂಹಕಾರಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಕರ್ನಾಟಕದಲ್ಲಿ ಹಿಂದು ವಿರೋಧಿ ಸರ್ಕಾರ ಇರಲು ಸಾಧ್ಯವೇ ಇಲ್ಲ. ಕಾಂಗ್ರೆಸ್ನವರು ಬದುಕಬೇಕು ಎಂದರೇ ಮುಸ್ಲಿಂರ ಹಿಜಾಬನ್ನು ಹಿಡಿದುಕೊಂಡೇ ಓಟು ತಗೋಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿಕಾರಿದ್ದಾರೆ. ಉತ್ತರ ಕನ್ನಡ, ಡಿ.24: ಸಿದ್ದರಾಮಯ್ಯ(Siddaramaiah)ನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ …
Read More »ಕಳ್ಳರ ಕೈಯಲ್ಲಿ ಕೀಲಿ ಕೈʼ.ಬಿಎಸ್‌ವೈ-ವಿಜಯೇಂದ್ರ ವಿರುದ್ಧ ಯತ್ನಾಳ ಮತ್ತೆ ವಾಗ್ದಾಳಿ
ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಹಾಗು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ಮುಂದುವರೆಸಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯಾಧ್ಯಕ್ಷನ ಸ್ಥಾನ ಬದಲಾಗಬಹುದು ಎನ್ನುವ ಸುಳಿವು ನೀಡಿದ್ದಾರೆ. ವಿಜಯೇಂದ್ರನ ಆಪ್ತರನ್ನು ಪದಾಧಿಕಾರಿಗಳನ್ನಾಗಿ ಮಾಡಿರುವ ವಿಚಾರಕ್ಕೆ ಮಾಧ್ಯಮಗಳಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ಕೇಂದ್ರದವರನ್ನ ಅಂಜಿಸಿದ್ದಾರೆ. ನನ್ನ ಮಗನ ಉದ್ಧಾರ ಮಾಡದೇ ಇದ್ದರೆ ಲೋಕಸಭೆಯಲ್ಲಿ ಕೆಲಸ ಮಾಡಲ್ಲ ಎಂದು …
Read More »KPTCL ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ: ಇಂಧನ ಸಚಿವ ಕೆ.ಜೆ.ಜಾರ್ಜ್
ಕರ್ನಾಟಕ ವಿದ್ಯುತ್ ಸರಬರಾಜು ನಿಗಮ (KARNATAKA POWER TRANSMISSION CORPORATION LIMITED)ನಲ್ಲಿ ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಪರಿಗಣನೆಯಲ್ಲಿ ತೊಡಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರು: ಕರ್ನಾಟಕ ವಿದ್ಯುತ್ ಸರಬರಾಜು ನಿಗಮ (KARNATAKA POWER TRANSMISSION CORPORATION LIMITED)ನಲ್ಲಿ ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಪರಿಗಣನೆಯಲ್ಲಿ ತೊಡಗಿದೆ ಎಂದು ಇಂಧನ …
Read More »ರಾಜಕಾರಣದಿಂದ (Politics) ನಿವೃತ್ತಿ ಸೂಚನೆ ನೀಡಿದ ಯತ್ನಾಳ್
ವಿಜಯಪುರ: ರಾಜಕಾರಣದಿಂದ (Politics) ನಿವೃತ್ತಿಯಾಗುವ ಸೂಚನೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರು ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿ (BJP) ಬಿಎಸ್‌ವೈ (BSY) ಕುಟುಂಬದ ಪ್ರಭಾವದ ಬಗ್ಗೆ ಅಸಮಾಧಾನ ಹೊರ ಹಾಕಿರುವ ಯತ್ನಾಳ್, ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣ ಅಸಾಧ್ಯವಾಗಿದೆ. ಅಪ್ಪಾಜಿ ಎನ್ನಬೇಕು, ಹಣ ಬಲ ಬೇಕು, ಮೇಲಿನವರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸಬೇಕು. ಇಂತವೆಲ್ಲ ಮಾಡಲಾಗದಿದ್ದರೆ ರಾಜಕಾರಣ ಮಾಡಲಾಗಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ 2028 ರ ವಿಧಾನಸಭೆ (Assemby …
Read More »ಕ್ರಿಸ್ಮಸ್ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದ KSRTC
ಕ್ರಿಸ್ಮಸ್ ಹಬ್ಬಕ್ಕೆ ರಜೆ ಹಿನ್ನೆಲೆ ಹೆಚ್ಚುವರಿ KSRTC ಬಸ್ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್ಗಳು ಹೊರಡಲಿದ್ದು, ಅದರಂತೆ ತಮಿಳುನಾಡು, ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ಗಳು ಸಂಚರಿಸಲಿವೆ. ಬೆಂಗಳೂರು, ಡಿ.23: ಕ್ರಿಸ್ಮಸ್ ಹಬ್ಬಕ್ಕೆ ರಜೆಯಿರುವ ಹಿನ್ನೆಲೆಕೆಎಸ್ಆರ್ಟಿಸಿ(KSRTC) ಹೆಚ್ಚುವರಿಯಾಗಿ 1000 ಬಸ್ ವ್ಯವಸ್ಥೆ ಮಾಡಿದೆ. ಪ್ರಯಾಣಿಕರಿಗೆ ತೊಂದರೆ ಆಗದ ಹಿನ್ನಲೆ ಡಿ. 22 …
Read More »ಸಿದ್ದರಾಮಯ್ಯ ಸರ್ಕಾರ ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ: ಬಿ.ವೈ ವಿಜಯೇಂದ್ರ ಆರೋಪ
ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅನುಮತಿ ನೀಡುವ ಮೂಲಕ ಸಿದ್ದರಾಮಯ್ಯ ಅವರ ಸರ್ಕಾರವು, ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ. ಎಲ್ಲರನ್ನೂ ಒಳಗೊಳ್ಳುವ ಕಲಿಕೆಯ ವಾತಾವರಣಕ್ಕೆ ಇದು ಹಿನ್ನಡೆಯಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ. ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ-ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವುದನ್ನು ನಿಷೇಧಿಸಿದ್ದನ್ನು ವಾಪಸ್ ಪಡೆಯಲು ಸೂಚಿಸಿದ್ದೇನೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ …
Read More »