ಬೆಳಗಾವಿ: ಡಿ.ಕೆ.ಶಿವಕುಮಾರ್ ಎರಡನೇ ಬಾರಿ ತಿಹಾರ್ ಜೈಲಿಗೆ ಹೋಗಲು ರೆಡಿಯಾಗಬೇಕು ಎಂಬ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಳಿನ್ ಕುಮಾರ್ ಕಟೀಲ್, ಹೆಚ್.ಡಿ.ಕುಮಾರಸ್ವಾಮಿ ನ್ಯಾಯಾಧೀಶರೇನು? ಎಂದು ತಿರುಗೇಟು ನೀಡಿದರು. ಇನ್ನು ಸಿ.ಟಿ.ರವಿಗೆ ಲೂಟಿ ರವಿ ಎಂದು ಹೆಸರು ಕೊಟ್ಟಿದ್ದೇ ಅವರ ಪಾರ್ಟಿ. ಯಾರು ಯಾರು ಏನೇನು ಮಾತನಾಡಿದ್ದಾರೆ ಎಂಬ ದಾಖಲೆ ನನ್ನ ಬಳಿ ಇದೆ. ಸಮಯ ಬರಲಿ, ಎಲ್ಲವನ್ನೂ ಹೇಳುತ್ತೇನೆ ಎಂದರು. ಇದೇ …
Read More »Yearly Archives: 2023
ಆಧಾರರಹಿತ ಆರೋಪ ಮಾಡುವುದು ಬಿಜೆಪಿಯ ಚಾಳಿ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು : ಬಿಜೆಪಿ ಮುಖಂಡರಿಗೆ ಆಧಾರ ರಹಿತ ಆರೋಪ ಮಾಡುವುದು ಒಂದು ಚಾಳಿ ಆಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ ಭೀತಿ ಅವರನ್ನು ಕಾಡತೊಡಗಿದೆ. ಕರ್ನಾಟಕದಲ್ಲಿ ಅವರು ಧೂಳಿಪಟ ಆಗಲಿದ್ದಾರೆ ಎಂದು ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಎಟಿಎಂ ಆಗಿ ಬಳಕೆ ಆಗುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ಬಿಜೆಪಿ ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಯಾವ ರೀತಿ ಆಡಳಿತ ಕೊಟ್ಟಿದ್ದಾರೆ ಎಂಬುದು …
Read More »ಪವಿತ್ರ ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಭಕ್ತಗಣ : ಹಲವು ಗಣ್ಯರು ಭಾಗಿ
ಕೊಡಗು : ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವದ ಕ್ಷಣಕ್ಕೆ ಸಾಕ್ಷಿಯಾದರು. ಕೊಡಗಿನ ಕುಲದೇವಿ, ನಾಡಿನ ಜೀವನದಿ ಕಾವೇರಿ ನಿಗದಿಯಂತೆ ಕರ್ಕಾಟಕ ಲಗ್ನದಲ್ಲಿ ರಾತ್ರಿ 1 ಗಂಟೆ 26 ನಿಮಿಷಕ್ಕೆ ತೀರ್ಥರೂಪಿಣಿಯಾಗಿ ನೆರೆದಿದ್ದ ಭಕ್ತರಿಗೆ ದರ್ಶನ ನೀಡಿದಳು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜ್, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ವೆಂಕಟರಾಜ, ಜಿ. ಪಂ. …
Read More »ವಿಜಯಪುರದಲ್ಲಿ ಹಿಟ್ ಆಯಂಡ್ ರನ್: ಹೈವೇ ಪಕ್ಕದಲ್ಲಿ ಕುಳಿತಿದ್ದ ನಾಲ್ವರು ಸ್ನೇಹಿತರ ಮೇಲೆ ಹರಿದ ಲಾರಿ
ವಿಜಯಪುರ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಮೃತ ಯುವಕರನ್ನು ವಿಜಯಪುರ ವಜ್ರಹನುಮಾನ ನಗರದ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ (26) ಮತ್ತು ಪ್ರವೀಣ ಪಾಟೀಲ್ (30) ಎಂದು ಗುರುತಿಸಲಾಗಿದೆ. ರಾತ್ರಿ 10 ಗಂಟೆಯ ಸುಮಾರಿಗೆ ನಾಲ್ವರು ಸ್ನೇಹಿತರು ಸೇರಿ ಊಟಕ್ಕೆ ಹೊರಗಡೆ ಹೋಗಿದ್ದಾರೆ. ಊಟ ಮುಗಿಸಿಕೊಂಡು ರಾಷ್ಟ್ರೀಯ …
Read More »ರಾಂಚಿ (ಜಾರ್ಖಂಡ್) : ಸಾಮಾನ್ಯವಾಗಿ ಮದುವೆ ಮನೆಗೆ ವಧುವರರನ್ನು ಕರೆತರುವಾಗ ಮೆರವಣಿಗೆಯಲ್ಲಿ ಆಗಮಿಸುವುದನ್ನು ನೋಡಿರುತ್ತೇವೆ. ಇತ್ತೀಚಿನ ದಿನಗಳಲ್ಲಿ ಮದುವೆ ಬಳಿಕ ವಧುವರರನ್ನು ಮೆರವಣಿಗೆ ಕರೆದುಕೊಂಡು ಹೋಗುವುದನ್ನು ನೋಡಿರುತ್ತೇವೆ. ಆದರೆ ಗಂಡನ ಮನೆ ತೊರೆದು ತವರಿಗೆ ಆಗಮಿಸಿದ ಮಗಳನ್ನು ಸಂಗೀತ ವಾದ್ಯ ಮೇಳಗಳೊಂದಿಗೆ ಮೆರವಣಿಗೆಯಲ್ಲಿ ಕರೆತಂದಿರುವ ಅಪರೂಪದ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಕುಮ್ಹರ್ಟೋಲಿಯ ಕೈಲಾಸ್ನಗರ ನಿವಾಸಿ ಪ್ರೇಮ್ ಗುಪ್ತಾ ಎಂಬವರು ತಮ್ಮ ಮಗಳು ಸಾಕ್ಷಿ ಗುಪ್ತಾಳನ್ನು ಮೆರವಣಿಗೆ ಮೂಲಕ ತವರು ಮನೆಗೆ ಸ್ವಾಗತಿಸಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರೇಮ್ ಗುಪ್ತಾ, ಮಗಳ ಬಗ್ಗೆ ಭಾವನಾತ್ಮಕ ಬರಹ ಬರೆದಿದ್ದಾರೆ. ಇದರಲ್ಲಿ, ಪೋಷಕರು ತಮ್ಮ ಮಗಳನ್ನು ಬಹಳ ಆಡಂಬರದಿಂದ ಮದುವೆ ಮಾಡಿಕೊಡುತ್ತಾರೆ. ಒಂದು ವೇಳೆ ಮದುವೆ ಬಳಿಕ ಸಂಗಾತಿ ಮತ್ತು ಅವರ ಕುಟುಂಬದವರು ಆಕೆಗೆ ಕಷ್ಟ ನೀಡಲು ಪ್ರಾರಂಭಿಸಿದರೆ, ನಿಮ್ಮ ಮಗಳನ್ನು ಅತ್ಯಂತ ಗೌರವದಿಂದ ಮನೆಗೆ ಕರೆದುಕೊಂಡು ಬರಬೇಕು. ಏಕೆಂದರೆ ಎಲ್ಲಾ ಹೆಣ್ಣುಮಕ್ಕಳು ಅಮೂಲ್ಯ ಎಂದು ಬರೆದಿದ್ದಾರೆ. ಕಳೆದ 2022ರ ಏಪ್ರಿಲ್ 28ರಂದು ಸಾಕ್ಷಿ ಅವರನ್ನು ಸಚಿನ್ ಕುಮಾರ್ ಎಂಬವರಿಗೆ ಬಹಳ ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಸಚಿನ್ ರಾಂಚಿಯ ಸರ್ವೇಶ್ವರಿ ನಗರದ ನಿವಾಸಿಯಾಗಿದ್ದು, ಜಾರ್ಖಂಡ್ ವಿದ್ಯುತ್ ವಿತರಣಾ ನಿಗಮದಲ್ಲಿ ಸಹಾಯಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ಮದುವೆ ಆದ ಕೆಲವು ದಿನಗಳ ಬಳಿಕ ಗಂಡ ಹಾಗೂ ಗಂಡನ ಮನೆಯವರು ಸಾಕ್ಷಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಅಷ್ಟೇ ಅಲ್ಲದೆ ಸಚಿನ್ ಕೂಡ ಸಾಕ್ಷಿಯನ್ನು ಮನೆಯಿಂದ ಹೊರಗೆ ದಬ್ಬಿದ್ದಾನೆ. ಆದರೂ ಧೃತಿಗೆಡದೇ ಸಾಕ್ಷಿ ಗಂಡನ ಮನೆಯವರೊಂದಿಗೆ ವಾಸವಿದ್ದಳು. ಒಂದು ವರ್ಷ ಕಳೆದ ಬಳಿಕ ಸಚಿನ್ ಈಗಾಗಲೇ 2 ಮದುವೆಯಾಗಿರುವುದು ಸಾಕ್ಷಿಗೆ ಗೊತ್ತಾಗಿದೆ. ಎಲ್ಲ ಗೊತ್ತಾದರೂ ಹೊಂದಾಣಿಕೆಯೇ ಜೀವನ ಎಂದು ಸಾಕ್ಷಿ ಸುಮ್ಮನಾಗಿದ್ದಳು.
ರಾಂಚಿ (ಜಾರ್ಖಂಡ್) : ಸಾಮಾನ್ಯವಾಗಿ ಮದುವೆ ಮನೆಗೆ ವಧುವರರನ್ನು ಕರೆತರುವಾಗ ಮೆರವಣಿಗೆಯಲ್ಲಿ ಆಗಮಿಸುವುದನ್ನು ನೋಡಿರುತ್ತೇವೆ. ಇತ್ತೀಚಿನ ದಿನಗಳಲ್ಲಿ ಮದುವೆ ಬಳಿಕ ವಧುವರರನ್ನು ಮೆರವಣಿಗೆ ಕರೆದುಕೊಂಡು ಹೋಗುವುದನ್ನು ನೋಡಿರುತ್ತೇವೆ. ಆದರೆ ಗಂಡನ ಮನೆ ತೊರೆದು ತವರಿಗೆ ಆಗಮಿಸಿದ ಮಗಳನ್ನು ಸಂಗೀತ ವಾದ್ಯ ಮೇಳಗಳೊಂದಿಗೆ ಮೆರವಣಿಗೆಯಲ್ಲಿ ಕರೆತಂದಿರುವ ಅಪರೂಪದ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಕುಮ್ಹರ್ಟೋಲಿಯ ಕೈಲಾಸ್ನಗರ ನಿವಾಸಿ ಪ್ರೇಮ್ ಗುಪ್ತಾ ಎಂಬವರು ತಮ್ಮ ಮಗಳು ಸಾಕ್ಷಿ ಗುಪ್ತಾಳನ್ನು ಮೆರವಣಿಗೆ ಮೂಲಕ ತವರು ಮನೆಗೆ ಸ್ವಾಗತಿಸಿದ್ದಾರೆ. …
Read More »ಮುಂದಿನ 30 ದಿನಗಳವರೆಗೆ ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ಪ್ರಮೋದ್ ಮುತಾಲಿಕ್ಗೆ ನಿರ್ಬಂಧ
ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಶಿವಮೊಗ್ಗ ಜಿಲ್ಲೆಗೆ ಪ್ರವೇಶ ಮಾಡದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ಈದ್ ಮಿಲಾದ್ ಮೆರವಣಿಗೆ ವೇಳೆ ಒಂದು ಕೋಮಿನ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಹಾನಿಗೊಳಗಾದವರಿಗೆ ಸಾಂತ್ವನ ಹೇಳಲು ಇಂದು ಮುತಾಲಿಕ್ ಅವರು ರಾಗಿಗುಡ್ಡ ಬಡಾವಣೆಗೆ ಭೇಟಿಗೆ ಮುಂದಾಗಿದ್ದರು. ರಾಗಿಗುಡ್ಡದಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಇದರಿಂದಾಗಿ ನಗರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಪ್ರಮೋದ್ ಮುತಾಲಿಕ್ ಅವರಿಗೆ ಶಿವಮೊಗ್ಗ ಪ್ರವೇಶ …
Read More »ಬಿಜೆಪಿ- ಜೆಡಿಎಸ್ ಹತಾಶೆಗೆ ಮೇಜರ್ ಆಪರೇಶನ್ ಮಾಡಬೇಕು: ಡಿ ಕೆ ಶಿವಕುಮಾರ್
ಬೆಂಗಳೂರು : “ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಿಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದೆ ಎಂದು ಹೇಳಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ …
Read More »ಬೆಳಗಾವಿ ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ.. ಲಾರಿಯಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 10 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ಜಪ್ತಿ
ಬೆಳಗಾವಿ : ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ ಅಕ್ರಮವಾಗಿ ಮದ್ಯ ಸಾಗಣೆ ಸದ್ದಿಲ್ಲದೇ ನಡೆಯುತ್ತಿದೆ. ಈ ಬೆನ್ನಲ್ಲೇ ಗೋವಾದಿಂದ ತೆಲಂಗಾಣಕ್ಕೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮದ್ಯವನ್ನು ಜಪ್ತಿ ಮಾಡುವಲ್ಲಿ ಬೆಳಗಾವಿಯ ಅಬಕಾರಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕಳೆದ ತಿಂಗಳು ಲಾರಿಯಲ್ಲಿ ಪ್ಲೈವುಡ್ ನಡುವೆ ಮದ್ಯದ ಬಾಕ್ಸ್ಗಳನ್ನು ಇಟ್ಟುಕೊಂಡು ಸಾಗಿಸುತ್ತಿದ್ದಾಗ ಸಿನಿಮೀಯ ಶೈಲಿಯಲ್ಲಿ ದಾಳಿ ಮಾಡಿ, ಅಕ್ರಮ ಜಾಲ ಭೇದಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು, ಈ …
Read More »ದಸರಾ ರಜೆ ವಿಸ್ತರಣೆಗಾಗಿ ಸಿಎಂಗೆ ಪತ್ರ ಬರೆದ ಶಿಕ್ಷಕರ ಸಂಘ
ಹುಬ್ಬಳ್ಳಿ: ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆಲ್ಲ ದಸರಾ ರಜೆ ನೀಡಲಾಗಿದ್ದು, ಮಕ್ಕಳು ರಜೆಯ ಖುಷಿಯಲ್ಲಿದ್ದಾರೆ. ಮತ್ತೊಂದೆಡೆ ದಸರಾ ರಜೆ ಅವಧಿ ಕಡಿತ ಮಾಡಲಾಗಿದೆ. ರಜೆಯನ್ನ ವಿಸ್ತರಣೆ ಮಾಡಬೇಕೆಂದು ಎಂದು ಕೋರಿ ಶಿಕ್ಷಕರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ. ಹಬ್ಬದ ಮರುದಿನವೇ ಶಾಲೆ ಪ್ರಾರಂಭ: ಇದೇ ತಿಂಗಳ 25ಕ್ಕೆ ಮತ್ತೆ ಶಾಲೆ ಆರಂಭ ಎಂದು ಇಲಾಖೆ ಹೇಳಿದೆ. ಆದರೆ, 24ಕ್ಕೆ ದಸರಾ ಹಬ್ಬ ಇದೆ. ಈ ಹಿಂದೆ …
Read More »ಧಾರವಾಡ ಜೈಲಿನಲ್ಲಿ ಕೈದಿ ಮತ್ತು ಸಿಬ್ಬಂದಿ ನಡುವೆ ಮಾರಾಮಾರಿ
ಧಾರವಾಡ: ಕೈದಿ ಮತ್ತು ಜೈಲು ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿರುವ ಘಟನೆ ಧಾರವಾಡ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಘಟನೆಯಲ್ಲಿ ಜೈಲು ಸಿಬ್ಬಂದಿ ಮತ್ತು ಕೈದಿ ಇಬ್ಬರಿಗೂ ಗಾಯಗಳಾಗಿವೆ. ಮೋಹನ ಸಿದ್ದಪ್ಪ ಬಡಿಗೇರ ಗಾಯಗೊಂಡ ಜೈಲು ಸಿಬ್ಬಂದಿಯಾಗಿದ್ದು, ಪ್ರಶಾಂತ ಅಲಿಯಾಸ್ ಪಾಚು ಹಲ್ಲೆ ಮಾಡಿದ ಕೈದಿಯಾಗಿದ್ದಾನೆ. ಗಾಯಗೊಂಡ ಇಬ್ಬರನ್ನೂ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಅನೇಕ ದಿನಗಳಿಂದ ಧಾರವಾಡ ಕಾರಾಗೃಹದಲ್ಲಿದ್ದ ಪ್ರಶಾಂತ ಎಂಬ ಕೈದಿ ಬಾಚಣಿಕೆಯನ್ನೇ ಚಾಕೂವಿನಂತೆ ಮಾಡಿಕೊಂಡು ಜೈಲಿನ …
Read More »