Breaking News

Yearly Archives: 2023

ಇಸ್ರೇಲ್​​ನಿಂದ ತಾಯ್ನಾಡಿಗೆ ಬಂದ ಬೆಳಗಾವಿ ಯುವಕ: ಯುದ್ಧದ ಭಯಾನಕತೆ ಬಿಚ್ಚಿಟ್ಟ ‘ಮಹಾವೀರ’

ಚಿಕ್ಕೋಡಿ (ಬೆಳಗಾವಿ): ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಯುದ್ಧದ ಭೀತಿಯಿಂದಾಗಿ ಬೆಳಗಾವಿಯ ಜಿಲ್ಲೆಯ ಯುವಕ ಸುರಕ್ಷಿತವಾಗಿ ಮರಳಿ ತಮ್ಮೂರಿಗೆ ಹಿಂತಿರುಗಿದ್ದಾರೆ. ಭಾರತೀಯ ಪ್ರಜೆಗಳ ಸುರಕ್ಷತಾ ದೃಷ್ಟಿಯಿಂದ ಕೇಂದ್ರ ಸರ್ಕಾರದ ಆಪರೇಷನ್ ಅಜಯ್ ಕಾರ್ಯಾಚರಣೆ ಮುಂದುವರಿಸಿದ್ದು, ಅದರ ನೆರವಿನಿಂದ ಯುವಕ ತಾಯ್ನಾಡಿಗೆ ಮರಳಿದ್ದಾನೆ. ಹುಕ್ಕೇರಿ ತಾಲೂಕಿನ ಹೊಸೂರು ಗ್ರಾಮದ ಮಹಾವೀರ ಹಲಕರ್ಣಿ ಎಂಬ ಯುವಕ ಭಾನುವಾರ ತಮ್ಮೂರಿಗೆ ಮರಳಿ ಬಂದಿದ್ದಾರೆ. ಇಸ್ರೇಲ್​​ ದೇಶದ ಬೀರಶೇವಾ ಪ್ರದೇಶದ ಬೆನ್ ಗೋರಿನ್ ವಿಶ್ವವಿದ್ಯಾಲಯದಲ್ಲಿ …

Read More »

ಕಿತ್ತೂರು ಉತ್ಸವದ ಸಿದ್ಧತೆ ಪರಿಶೀಲಿಸಿದ ಡಿಸಿ; ಕೋಟೆ ಆವರಣ ಸ್ವಚ್ಛತೆ, ದೀಪಾಲಂಕಾರಕ್ಕೆ ಸೂಚನೆ

ಬೆಳಗಾವಿ : ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ವೇದಿಕೆ ನಿರ್ಮಾಣ, ಕೆರೆ, ಕುಸ್ತಿ ಕಣ, ಮಾಧ್ಯಮ‌ ಕೇಂದ್ರ, ವಸ್ತು ಪ್ರದರ್ಶನ ಮಳಿಗೆ, ಆಹಾರ ಮಳಿಗೆ, ಕೋಟೆ ಆವರಣ ಸ್ವಚ್ಛತೆ, ಪಾರ್ಕಿಂಗ್, ಬಂದೋಬಸ್ತ್ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಪರಿಶೀಲಿಸಿದ್ದು, ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ.   ಚ.ಕಿತ್ತೂರಿನ ಕೋಟೆ ಆವರಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿಯೂ …

Read More »

ಸೋಷಿಯಲ್​ ಮೀಡಿಯಾದ ವಿಡಿಯೋ ನೋಡಿ ಬಂಗಾರದಂಥ ಬೆಳೆ ಬೆಳೆದ ದಂಪತಿ

ಚಿಕ್ಕೋಡಿ: ಕೃಷಿಯಲ್ಲಿ ಲಾಭವಿಲ್ಲ ಎಂದು ಹೊಲಗದ್ದೆ ಮಾರಿ ಪಟ್ಟಣ – ನಗರ ಪ್ರದೇಶ ಸೇರುವವರ ನಡುವೆ ಇಲ್ಲೊಬ್ಬ ರೈತ ದಂಪತಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ನೋಡಿ, ಬರಡು ಭೂಮಿಯಲ್ಲಿ ಡ್ರ್ಯಾಗನ್ ಫ್ರೂಟ್ ಬೆಳೆದು ಕೈತುಂಬಾ ಆದಾಯ ಪಡೆದುಕೊಂಡು ಉಳಿದ ರೈತರಿಗೆ ಮಾದರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆಜೂರ್ ಗ್ರಾಮದ ರಾವಸಾಬ್ ಅಪ್ಪಾಸಾಬ ಐಗಳಿ ಎಂಬುವರು ತಮ್ಮ ನಾಲ್ಕು ಎಕರೆ ಪ್ರದೇಶದಲ್ಲಿ ಡ್ರ್ಯಾಗನ್ ಫ್ರೂಟ್​ ಬೆಳೆದು ವರ್ಷಕ್ಕೆ 24 ಲಕ್ಷ ಆದಾಯವನ್ನು …

Read More »

ಕಾಂಗ್ರೆಸ್​​ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳಗಾವಿ : ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಇದು ಲೂಟಿ ಸರ್ಕಾರ, 80 ಪರ್ಸೆಂಟ್ ಕಮಿಷನ್ ಸರ್ಕಾರ, ಎಟಿಎಂ ಸರ್ಕಾರ ಎಂದೆಲ್ಲ ಆರೋಪಿಸಿ ತಮ್ಮ ಸಿಟ್ಟನ್ನು ಹೊರ ಹಾಕಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದೆ ಮಂಗಲಾ ಅಂಗಡಿ ಮಾಧ್ಯಮಗಳ ಜೊತೆಗೆ ಮಾತನಾಡಿ, …

Read More »

ನಟಿ ಜಯಪ್ರದಾ ಕೇಸ್: ಕಾರ್ಮಿಕರಿಗೆ ಇಎಸ್‌ಐ ಪಾವತಿಸಿದರೆ ಜೈಲುಶಿಕ್ಷೆ ರದ್ದು- ಮದ್ರಾಸ್​ ಹೈಕೋರ್ಟ್​

ಚೆನ್ನೈ (ತಮಿಳುನಾಡು): ಖ್ಯಾತ ನಟಿ ಜಯಪ್ರದಾ ಅವರ ಇಎಸ್​ಐ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ವಿನಾಯಿತಿಯೊಂದನ್ನು ನೀಡಲು ಸಜ್ಜಾಗಿದೆ. ಕಾರ್ಮಿಕರಿಗೆ ನೀಡಬೇಕಾದ ಬಾಕಿ ಇರುವ ಇಎಸ್‌ಐ ಅನ್ನು ಸಂಪೂರ್ಣವಾಗಿ ಪಾವತಿಸಿದರೆ, ನಟಿಗೆ ವಿಧಿಸಲಾದ 6 ತಿಂಗಳ ಜೈಲುಶಿಕ್ಷೆಯನ್ನು ರದ್ದುಗೊಳಿಸುವುದಾಗಿ ಹೇಳಿದೆ. ಬಹುಭಾಷೆಗಳಲ್ಲಿ ಗುರುತಿಸಿಕೊಂಡಿರುವ ಪ್ರಸಿದ್ಧ ನಟಿ, ಸಂಸತ್​ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಚೆನ್ನೈನ ಅಣ್ಣಾಸಲೈನಲ್ಲಿ ರಾಮ್​​ಕುಮಾರ್ ಮತ್ತು ರಾಜ್​​ಬಾಬು ಅವರೊಂದಿಗೆ ಥಿಯೇಟರ್​ ನಡೆಸುತ್ತಿದ್ದಾರೆ. ಆದ್ರೆ ಕೆಲ ವರ್ಷಗಳಿಂದ ಥಿಯೇಟರ್ ಕಾರ್ಮಿಕರಿಗೆ …

Read More »

ಹೆತ್ತ ಮಗಳನ್ನೇ ನೀರಿನ ಸಂಪಿಗೆ ತಳ್ಳಿ ಕೊಲೆ ಮಾಡಿದ ಹೆತ್ತವ್ವ

ರಾಯಚೂರು: ಮಾನಸಿಕ ಅಸ್ವಸ್ಥೆಯಾಗಿರುವ ಹೆತ್ತ ತಾಯಿಯೊಬ್ಬಳು ತನ್ನ ಮಗಳನ್ನು ಕೊಲೆ ಮಾಡಿದ ಘಟನೆ ಜಿಲ್ಲೆಯ ಕವಿತಾಳ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.   ಜಿಲ್ಲೆಯ ಸಿರವಾರ ತಾಲೂಕಿನ ದೋತ್ರಬಂಡಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಬಾಲಕಿಯನ್ನು 3ನೇ ತರಗತಿಯ ಓದುತ್ತಿದ್ದ ಶ್ರೀದೇವಿ ಎಂದು ಗುರುತಿಸಲಾಗಿದೆ. ತಾಯಿ ಲಲಿತಾ ಎಂಬ ಆರೋಪಿ ತನ್ನ ಮಗಳನ್ನು ತನ್ನ ಕೈಯಿಂದಲೇ ಕೊಲೆ ಮಾಡಿದ ಆರೋಪಿಯಾಗಿದ್ದಾಳೆ. ಮನೆಯ ಪಕ್ಕದಲ್ಲಿ ಇದ್ದ ನೀರಿನ …

Read More »

ಪ್ರಿಯಕರನೊಂದಿಗೆ ಸೇರಿ ಅತ್ತೆಯ ಹತ್ಯೆ, ಮೊಬೈಲ್​ ಚಾಟಿಂಗ್​ನಿಂದ ಸಂಚು ಬಯಲು: ಸೊಸೆ ಸಹಿತ ಮೂವರ ಬಂಧನ

ಬೆಂಗಳೂರು : ಪ್ರಿಯಕರನೊಂದಿಗೆ ಸೇರಿ ಅತ್ತೆಯನ್ನು ಹತ್ಯೆಗೈದಿದ್ದ ಸೊಸೆ ಸಹಿತ ಮೂವರನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಶ್ಮಿ, ಅಕ್ಷಯ್ ಹಾಗೂ ಪುರುಷೋತ್ತಮ್ ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್ 5ರಂದು ಲಕ್ಷ್ಮಮ್ಮ (50) ಎಂಬವರನ್ನು ಉಸಿರುಗಟ್ಟಿಸಿ ಕೊಲೆಗೈದಿದ್ದ ಆರೋಪಿಗಳು, ಹೃದಯಾಘಾತವೆಂದು ಕಥೆ ಸೃಷ್ಟಿಸಿದ್ದರು. ಆರೋಪಿ ರಶ್ಮಿಗೆ ಮಂಜುನಾಥ್ ಎಂಬಾತನೊಂದಿಗೆ ಮದುವೆಯಾಗಿತ್ತು. ಆದರೆ ತಮ್ಮ ಮನೆಯ ಮೇಲೆ ಬಾಡಿಗೆಗೆ ಇದ್ದ ಅಕ್ಷಯ್ ಜೊತೆ ರಶ್ಮಿ ಸಂಪರ್ಕ ಹೊಂದಿದ್ದಳು. ಮನೆಯ ಹಣದ ವ್ಯವಹಾರಕ್ಕೆ …

Read More »

ಮಂಡಿ ಶಸ್ತ್ರ ಚಿಕಿತ್ಸೆಗೆ ತೆರಳಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಹೃದಯದಲ್ಲಿ ರಂಧ್ರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೃದಯದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಮಂಡಿನೋವಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯಕೀಯ ತಪಾಸಣೆ ಮಾಡುವಾಗ ಹೃದಯದಲ್ಲಿ ರಂಧ್ರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಡಿ ಶಸ್ತ್ರ ಚಿಕಿತ್ಸೆಗೂ ಮುನ್ನ ಹೃದಯದ ಶಸ್ತ್ರಚಿಕಿತ್ಸೆ ಮಾಡಲಾಗಿದೆ‌. ಮೊಣಕಾಲು ನೋವು …

Read More »

ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಖರ್ಗೆ ಅಥವಾ ರಾಹುಲ್​ ಪ್ರಧಾನಿ ಸಾಧ್ಯತೆ: ಶಶಿ ತರೂರ್

ತಿರುವನಂತಪುರಂ (ಕೇರಳ): 2024ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ, ಕೇರಳದ ತಿರುವನಂತಪುರಂ ಸಂಸದ ಶಶಿ ತರೂರ್ ಹೇಳಿದ್ದಾರೆ. ತಿರುವನಂತಪುರಂನ ಟೆಕ್ನೋಪಾರ್ಕ್‌ನಲ್ಲಿ ಸೋಮವಾರ ಅಮೆರಿಕ ಮೂಲದ ಮತ್ತು ಸಿಲಿಕಾನ್ ವ್ಯಾಲಿ-ಇನ್‌ಕ್ಯುಬೇಟೆಡ್​ ಡಿ2ಸಿ (ಡೈರೆಕ್ಟ್-ಟು-ಕನ್ಸ್ಯೂಮರ್)ಯ ವೇ.ಕಾಮ್‌ನ ಕಚೇರಿ ಉದ್ಘಾಟಿಸಿದ ನಂತರ ವೃತ್ತಿಪರರೊಂದಿಗೆ ಶಶಿ ತರೂರ್ …

Read More »

ಪಾಸ್​ವರ್ಡ್​ ರಹಿತ ಲಾಗಿನ್​; ಇದು ವಾಟ್ಸ್​ಆಯಪ್​ನ ಹೊಸ ಪಾಸ್​ ಕೀ ವೈಶಿಷ್ಟ್ಯ!

ನವದೆಹಲಿ: ತನ್ನ ಪ್ಲಾಟ್​ಫಾರ್ಮ್​ನಲ್ಲಿ ಪಾಸ್​ವರ್ಡ್ ಬದಲಾಗಿ ಪಾಸ್​ ಕೀ ವೈಶಿಷ್ಟ್ಯವನ್ನು ಶೀಘ್ರದಲ್ಲೇ ಜಾರಿಗೊಳಿಸುವುದಾಗಿ ವಾಟ್ಸ್​ಆಯಪ್ ಘೋಷಿಸಿದೆ. ಈ ಬದಲಾವಣೆಯಿಂದ ಬಳಕೆದಾರರು ಕಿರಿಕಿರಿ ಉಂಟು ಮಾಡುವ ಹಾಗೂ ಅಸುರಕ್ಷಿತವಾದ ಟು – ಸ್ಟೆಪ್ ಎಸ್​ಎಂಎಸ್​ ದೃಢೀಕರಣದ ಪ್ರಕ್ರಿಯೆಯಿಂದ ಪಾರಾಗಲಿದ್ದಾರೆ. “ಆಂಡ್ರಾಯ್ಡ್ ಬಳಕೆದಾರರು ಸುಲಭವಾಗಿ ಮತ್ತು ಸುರಕ್ಷಿತವಾಗಿ ಪಾಸ್ ಕೀಗಳೊಂದಿಗೆ ಲಾಗ್ ಇನ್ ಮಾಡಬಹುದು. ನಿಮ್ಮ ಮುಖ, ಬೆರಳಚ್ಚು ಅಥವಾ ಪಿನ್ ಮಾತ್ರ ನಿಮ್ಮ ವಾಟ್ಸ್​​ಆಯಪ್ ಖಾತೆಯನ್ನು ಅನ್ಲಾಕ್ ಮಾಡುತ್ತದೆ” ಎಂದು ಕಂಪನಿ ಸೋಮವಾರ …

Read More »