ಗೋಕಾಕ : ಅರಭಾವಿ ಮಠಕ್ಕೆ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರನ್ನು ಪೀಠಾಧಿಪತಿಗಳಾಗಿ ಮಾಡಲಾಗಿದೆ. ನಿನ್ನೆ ದಿನ ತಾಲೂಕಿನ ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಲಿಂಗೈಕ್ಯ ಹೊಂದಿದ್ದರು. ಆದರಿಂದ ಅರಭಾವಿ ಮಠದ ಪೀಠಕ್ಕೆ ಯಮಕನಮರಡಿ ಮತಕ್ಷೇತ್ರದ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರನ್ನು ಪೀಠಾಧಿಪತಿಗಳಾಗಿ ಮಾಡಲಾಗಿದೆ.
Read More »Yearly Archives: 2023
ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್ಸ್ನ ಮತ್ತೊಂದು ಶಾಖೆ ಉದ್ಘಾಟನೆ
ಹಾವೇರಿ: ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್ಸ್ನ ಮತ್ತೊಂದು ಶಾಖೆ ಉದ್ಘಾಟನೆಗೊಂಡಿದೆ. ರಾಜ್ಯದಲ್ಲಿ ಇದು 23ನೇ ಶಾಖೆಯಾಗಿದ್ದು, ದೇಶಾದ್ಯಂತ 110ನೇ ಶಾಖೆಯಾಗಿದೆ. ಮಾರ್ಗದರ್ಶಿ ಚಿಟ್ಸ್ (ಕರ್ನಾಟಕ) ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಪಿ ಲಕ್ಷಣರಾವ್, ಈ ಶಾಖೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಚಂದಾದಾರರು ಭಾಗವಹಿಸಿದ್ದರು. ಇಲ್ಲಿನ ಪಿಬಿ ರೋಡ್ನಲ್ಲಿರುವ ಜಿಜಿ ಮಾಗಾವಿ ಚೇಂಬರ್ಸ್ ಕಾಂಪ್ಲೆಕ್ಸ್ನ ಎರಡನೇ ಮಹಡಿಯಲ್ಲಿ ಮಾರ್ಗದರ್ಶಿ ಚಿಟ್ಸ್ನ ಶಾಖೆ ಆರಂಭವಾಗಿದೆ. ನೂತನ ಶಾಖೆಯ ಮೂಲಕ ಹಾವೇರಿ ಜಿಲ್ಲೆಯ ಜನರು …
Read More »ರಾಜ್ಯದಲ್ಲಿ ”ಶಿವಕುಮಾರ್ ಬ್ಯಾಂಕ್ ಆಫ್ ಇಂಡಿಯಾ” ಬ್ರಾಂಚ್ ಒಪನ್ ಆಗಿದೆ: ಬಿ.ವೈ ವಿಜಯೇಂದ್ರ
ಬೆಂಗಳೂರು: ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದೆ. ಆದರೆ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ನವರು ‘ಶಿವಕುಮಾರ್ ಬ್ಯಾಂಕ್ ಆಫ್ ಇಂಡಿಯಾ’ ಎಂಬ ಬ್ರಾಂಚ್ ಒಪನ್ ಮಾಡಿದ್ದಾರೆ. ರಾಜ್ಯದಲ್ಲಿ ಹಣ ವಸೂಲಿ ಮಾಡಿ ಬೇರೆ ಬೇರೆ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ. ಪಂಚ ರಾಜ್ಯ ಮತ್ತು ಲೋಕಸಭೆ ಚುನಾವಣೆಗೆ ಈ ರೀತಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
Read More »ಐಟಿ ರೇಡ್ನಲ್ಲಿ ಸಿಕ್ಕ ಹಣ ಎಸ್ಎಸ್ಟಿ ಟ್ಯಾಕ್ಸ್ಗೆ ಸೇರಿದ್ದು”:H.D.K.
ಮೈಸೂರು: ಬೆಂಗಳೂರಿನ ಐಟಿ ರೇಡ್ನಲ್ಲಿ ಸಿಕ್ಕ ಹಣ ಎಸ್ಎಸ್ಟಿ (ಡಿ ಕೆ.ಶಿವಕುಮಾರ್, ಸುರೇಶ್ ಟ್ಯಾಕ್ಸ್) ಟ್ಯಾಕ್ಸ್ಗೆ ಸೇರಿದ್ದಾಗಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ಕಲೆಕ್ಷನ್ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇಂದು ಕುಟುಂಬ ಸಮೇತ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ‘ರಾಜ್ಯದಲ್ಲಿ ಕೃಷಿ …
Read More »ಲಂಡನ್ನಲ್ಲಿ ಬಸವೇಶ್ವರ ಪ್ರತಿಮೆಗೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ನಮನ
ಲಂಡನ್: ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಲಂಡನ್ಗೆ ಭೇಟಿ ನೀಡಿದ್ದು, ಭಾನುವಾರ ಲ್ಯಾಂಬೆತ್ ನಗರದ ಥೇಮ್ಸ್ ನದಿ ದಂಡೆ ಮೇಲಿರುವ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಲ್ಯಾಂಬೆತ್‌ನ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಅವರು ಖಾದರ್ ಹಾಗೂ ಹೊರಟ್ಟಿ ಅವರನ್ನು ಸ್ವಾಗತಿಸಿದರು. ಖಾದರ್ ಬಸವಣ್ಣನವರ ಪ್ರತಿಮೆಗೆ ವಿಭೂತಿ ಹಚ್ಚಿದರು. ಈ ಸಂದರ್ಭದಲ್ಲಿ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ …
Read More »4 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ: ವಿದೇಶದಿಂದ ಬರುತ್ತಿದ್ದಂತೆಯೇ ಬಂಧನ
ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ದೇಶಕ್ಕೆ ಬರುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ನಗರದ ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಬಂಧಿತ ಆರೋಪಿ ಎಂಬುದಾಗಿ ತಿಳಿದು ಬಂದಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಈತ ಭಾಗಿಯಾಗಿದ್ದನು. ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತ ಕಳೆದ 4 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ, …
Read More »‘ಬರ’ ಸಿಡಿಲು: ಬೆಳೆ ಸಂರಕ್ಷಣೆಗೆ ಟ್ಯಾಂಕರ್ ನೀರಿನ ಮೊರೆ ಹೋದ ರೈತರು
ಕೊಪ್ಪಳ: ಕೊಪ್ಪಳ ಜಿಲ್ಲೆಯಾದ್ಯಂತ ಸಕಾಲಕ್ಕೆ ಮಳೆಯಾಗದೇ ಬರ ತಾಂಡವವಾಡುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಅಲ್ಪಸ್ವಲ್ಪ ತೇವಾಂಶದಿಂದ ಜೀವ ಹಿಡಿದುಕೊಂಡಿದ್ದ ಬೆಳೆಗಳು ಒಣಗುತ್ತಿವೆ. ಅಳಿದುಳಿದಿರುವ ಈ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಮಾಡುತ್ತಿದ್ದಾರೆ. ಟ್ಯಾಂಕರ್ ಮೂಲಕ ನೀರು: ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳ, ಯರೇಹಂಚಿನಾಳ, ಸೊಂಪುರ ಸೇರಿದಂತೆ ವಿವಿಧ ಗ್ರಾಮದಲ್ಲಿ ರೈತರು ಬೆಳೆ ಸಂರಕ್ಷಿಸಲು ಟ್ಯಾಂಕರ್ ನೀರಿನ ಮೊರೆ ಹೋಗುತ್ತಿದ್ದಾರೆ. ಟ್ಯಾಂಕರ್ ಮೂಲಕ ನೀರುಣಿಸುವುದು ಸರಳ ಕೆಲಸವಲ್ಲ. ಹೀಗಿದ್ದರೂ ಇರುವ ಒಂದಿಷ್ಟು ಬೆಳೆಯನ್ನಾದರೂ ಉಳಿಸಿಕೊಳ್ಳೋಣ ಎಂದು …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ದರೋಡೆಕೋರರು ಚಿನ್ನದಂಗಡಿಗೆ ನುಗ್ಗಿ ಕಳ್ಳತನ ಮಾಡಲೆತ್ನ
ಬೆಳಗಾವಿ: ಇಬ್ಬರುಮುಸುಕುಧಾರಿಗಳು ಪಿಸ್ತೂಲ್ ತೋರಿಸಿ ಬಂಗಾರದ ಅಂಗಡಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಬೆಳಗಾವಿಯ ಶಾಹುನಗರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಪ್ರಶಾಂತ ಹೊನರಾವ್ ಎಂಬವರಿಗೆ ಸೇರಿದ ಸಂತೋಷಿ ಜ್ಯುವೆಲ್ಲರಿಯಲ್ಲಿ ಘಟನೆ ನಡೆದಿದೆ. ಎಂದಿನಂತೆ ಬಾಗಿಲು ತೆರೆದು ಪ್ರಶಾಂತ ಅಂಗಡಿಯಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ ಇಬ್ಬರು ಅಂಗಡಿಗೆ ನುಗ್ಗಿದ್ದಾರೆ. ಒಬ್ಬ ಪಿಸ್ತೂಲಿನಿಂದ ಹೆದರಿಸಿ, ಚಿನ್ನಾಭರಣ ನೀಡುವಂತೆ ಒತ್ತಾಯಿಸಿದ್ದಾನೆ. ಪ್ರಶಾಂತ ಪ್ರತಿರೋಧ ತೋರುತ್ತಿದ್ದಂತೆ ದರೋಡೆಕೋರರು ಹಲ್ಲೆಗೆ ಮುಂದಾಗಿದ್ದಾರೆ. ಇದಕ್ಕೆ ಪ್ರಶಾಂತ ತೀವ್ರ ಪ್ರತಿರೋಧ ಒಡ್ಡಿದ್ದು ಕಳ್ಳರು …
Read More »ದಸರಾ ಹಬ್ಬ: ವಾಯವ್ಯ ಸಾರಿಗೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ
ಹುಬ್ಬಳ್ಳಿ: ದಸರಾ ಹಬ್ಬಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಕ್ಟೋಬರ್ 21ರಂದು ವಾರಾಂತ್ಯ ಶನಿವಾರ, 22 ರಂದು ಭಾನುವಾರ, 23 ರಂದು ಸೋಮವಾರ ಮಹಾನವಮಿ, ಆಯುಧಪೂಜೆ ಹಾಗೂ 24ರಂದು ಮಂಗಳವಾರ ವಿಜಯದಶಮಿ ಇದೆ. ಹಬ್ಬ ಆಚರಿಸಲು ಅ.20ರಂದು ಶುಕ್ರವಾರ ಮತ್ತು 21 …
Read More »ತನ್ನ ನಾಲಿಗೆಯಿಂದ ಚಿತ್ರ ಅರಳಿಸುತ್ತಾನೆ ಕಲಾವಿದ
ಹಾವೇರಿ: ಸಾಮಾನ್ಯವಾಗಿ ಚಿತ್ರಕಲಾವಿದರು ಬೆರಳುಗಳ ಸಹಾಯದಿಂದ ಕುಂಚದಲ್ಲಿ ಚಿತ್ರಗಳನ್ನ ಬಿಡಿಸುವುದನ್ನು ನೋಡಿದ್ದೇವೆ. ಕೆಲವರು ಬೆರಳುಗಳಲ್ಲಿ ಕುಂಚ ಕಟ್ಟಿಕೊಂಡು ಚಿತ್ರಬಿಡಿಸುವುದು ಉಂಟು. ಇನ್ನೂ ಕೆಲವರು ತಮ್ಮ ಮೂಗಿನ ಸಹಾಯದಿಂದ ಸಹ ಚಿತ್ರ ಬಿಡಿಸುತ್ತಾರೆ. ಆದರೆ ಹಾವೇರಿ ತಾಲೂಕಿನ ಹೊಸರಿತ್ತಿಯಲ್ಲಿ ವಿಭಿನ್ನ ಯುವ ಕಲಾವಿದನಿದ್ದಾನೆ.. ಚೆನ್ನಬಸಪ್ಪ ತೊಪ್ಪಲದ ಹೆಸರಿನ ಈ ಕಲಾವಿದ ಎಲ್ಲರಂತೆ ಕುಂಚದಿಂದ ಚಿತ್ರ ಬಿಡಿಸುವುದಿಲ್ಲ. ಬದಲಿಗೆ ತನ್ನ ನಾಲಿಗೆಯನ್ನೇ ಕುಂಚವನ್ನಾಗಿ ಮಾಡಿಕೊಂಡು ಚಿತ್ರ ಬಿಡಿಸುತ್ತಾನೆ. 18 ವರ್ಷದ ಈ ಯುವಕ ಹೆಚ್ಚು …
Read More »