ಬೆಂಗಳೂರು : ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದಾಗಿ ವಿದ್ಯುತ್ ಕೊರತೆಯಾಗಿದೆ. ಈ ವಿಚಾರವಾಗಿ ಟೀಕೆ ಮಾಡುವ ಬಿಜೆಪಿ ನಾಯಕರು ತಮ್ಮ ಅಧಿಕಾರಾವಧಿಯಲ್ಲಿ ಎಷ್ಟು ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದರು ಎಂಬುದನ್ನು ಹೇಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳೆ ಬಿದ್ದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಇದೇ ಪರಿಸ್ಥಿತಿ …
Read More »Yearly Archives: 2023
ಸ್ವಯಂಪ್ರೇರಿತವಾಗಿ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕಿಸುತ್ತಿದ್ದಾರೆ: ಜಗದೀಶ್ ಶೆಟ್ಟರ್
ಬೆಂಗಳೂರು: ಸ್ವಯಂಪ್ರೇರಿತವಾಗಿ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಧ್ರುವೀಕರಣ ಆಗಲಿದೆ. ರಾಜಕೀಯ ವ್ಯವಸ್ಥೆಯಲ್ಲಿ ಕಾಂಗ್ರೆಸ್ ಜನಮನ್ನಣೆ ಗಳಿಸ್ತಿದೆ. ಬೇರೆ ರಾಜ್ಯಗಳಲ್ಲೂ ಪ್ರಭಾವ ಬೀರುತ್ತಿದೆ. ಚುನಾವಣೆಯ ಫಲಿತಾಂಶ ಪ್ರಭಾವ ಬೀರುತ್ತಿದೆ. ನಾವು ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಯಾರೂ ನಿರೀಕ್ಷಿಸಿದ ರೀತಿಯಲ್ಲಿ ಈಡೇರಿಸಿದ್ದೇವೆ. ಇದು ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮುಂದಿನ ಪಂಚ ರಾಜ್ಯಗಳ ಚುನಾವಣೆ ಸೆಮಿಫೈನಲ್. ಲೋಕಸಭೆ …
Read More »ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಜೆ.ಪಿ.ನಡ್ಡಾ ಪ್ರಕರಣಕ್ಕೆ ಹೈಕೋರ್ಟ್ ತಡೆ
ಧಾರವಾಡ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ನಡ್ಡಾ ಅವರು ಮತದಾರರಿಗೆ ಆಮಿಷ ಒಡ್ಡಿದ್ದಾರೆಂದು ದೂರು ದಾಖಲಿಸಲಾಗಿತ್ತು. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಭಾಷಣ ಮಾಡುವಾಗ ಮತದಾರರ ಮೇಲೆ ಪ್ರಧಾನಿ ಮೋದಿ ಆಶೀರ್ವಾದ ಇರುತ್ತೆ ಎಂದು ಅವರು ಹೇಳಿದ್ದರು. ಈ ಸಂದರ್ಭದಲ್ಲಿ ಚುನಾವಣಾ ನೀತಿ …
Read More »ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ
ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಬಂದ ನಾಲ್ವರು ದರೋಡೆಕೋರರ ತಂಡ ಹಾಡಹಗಲೇ ಜ್ಯುವೆಲ್ಲರಿ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ 10:45ರ ಸುಮಾರಿಗೆ ಘಟನೆ ನಡೆದಿದ್ದು, ಶಾಪ್ ಮಾಲೀಕ ಮನೋಜ್ ಲೋಹರ್ (30) ಮೇಲೆ ಗುಂಡು ಹಾರಿಸಿರುವ ದುಷ್ಕರ್ಮಿಗಳು 1 ಕೆ.ಜಿ ತೂಕದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ. ಬೆಳಗ್ಗೆ 2 ದ್ವಿಚಕ್ರ ವಾಹನಗಳಲ್ಲಿ ಮಾರಕಾಸ್ತ್ರಗಳ ಸಹಿತ ಬ್ಯಾಡರಹಳ್ಳಿ …
Read More »ನವೆಂಬರ್ 1 ರಂದು ಕರಾಳ ದಿನಾಚರಣೆಗೆ ಅನುಮತಿ ಇಲ್ಲ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ : ಮಹಾತ್ಮಾ ಪುಲೆ ಆರೋಗ್ಯ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಲು ನಿರ್ಣಯ ಕೈಗೊಂಡಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಕುರಿತು ಕರ್ನಾಟಕ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗುತ್ತಿದೆ. ಬೆಳಗಾವಿಯ ಜಿ.ಪಂ.ಸಭಾಭವನದಲ್ಲಿ ಇಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಕನ್ನಡಪರ ಸಂಘಟನೆಗಳು ಮಹಾರಾಷ್ಟ್ರ ಸರ್ಕಾರದ ನಿರ್ಣಯ ಖಂಡಿಸಿದರು. ಕರ್ನಾಟಕದಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ಯೋಜನೆ ಜಾರಿಗೊಳಿಸುತ್ತಿದೆ. …
Read More »ಬೆಳಗಾವಿ: ಎಣ್ಣೆ ಪಾರ್ಟಿ ಮಾಡಿದ್ದ 7 ಸಿಬ್ಬಂದಿ ಅಮಾನತು ಮಾಡಿ DHO ಆದೇಶ
ಬೆಳಗಾವಿ : ನಗರದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ಏಳು ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಬುಧವಾರ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಕಾರು ಚಾಲಕ ಮಂಜುನಾಥ ಪಾಟೀಲ್, ಸಿಬ್ಬಂದಿ ಮಹೇಶ ಹಿರೇಮಠ, ರಮೇಶ ನಾಯಿಕ, ಸತ್ಯಪ್ಪ ತಮ್ಮನ್ನವರ, ಅನಿಲ ತಿಪ್ಪನ್ನವರ, ದೀಪಕ ಗಾವಡೆ, ಯಲ್ಲಪ್ಪ ಮುನ್ನವಳ್ಳಿ ಎಂಬವರನ್ನು ಅಮಾನತು ಮಾಡಲಾಗಿದೆ. ನಗರದ ಟಿಳಕವಾಡಿಯಲ್ಲಿರುವ ಡಿಹೆಚ್ಒ ಕಚೇರಿ ಹಿಂಭಾಗದಲ್ಲಿರುವ …
Read More »ಮರ್ಯಾದಾ ಹತ್ಯೆ: ಕೋಳಿ ಕಟ್ ಮಾಡುವ ಚಾಕುವಿನಿಂದ ಮಗಳ ಕತ್ತು ಕೊಯ್ದು ಕೊಲೆ!
ಬೆಂಗಳೂರು : ಮರ್ಯಾದೆಗೆ ಹೆದರಿ ತಂದೆಯೇ ಮಗಳನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕವನ ( 20 ) ಮೃತ ಯುವತಿ ಎಂದು ಗುರುತಿಸಲಾಗಿದೆ. ತಂದೆ ಮಂಜುನಾಥ್ ಎಂಬುವವನು ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ. ತಂದೆ ಮಂಜುನಾಥ್ ಎಂಬುವವನು ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಮಗಳ ಕತ್ತು ಕೊಯ್ದು, ಕಟ್ಟಿಗೆಯಿಂದ ತಲೆಗೆ ಹೊಡೆದು …
Read More »ಅತ್ತಿಬೆಲೆ ದುರಂತ: ಪಟಾಕಿ ಖರೀದಿಗೆ ಬಂದು ಪ್ರಾಣ ಕಳೆದುಕೊಂಡ ವ್ಯಕ್ತಿ, ಸಾವಿನ ಸಂಖ್ಯೆ 16ಕ್ಕೆ ಏರಿಕೆ
ಆನೇಕಲ್: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಸಾವಿನ ಸಂಖ್ಯೆ 16 ಕ್ಕೆ ಏರಿಕೆ. ಸೆಂಟ್ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಚಿಕಿತ್ಸೆಗೆ ಸ್ಪಂದಿಸದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಪಟಾಕಿ ಖರೀದಿಸಲು ತನ್ನ ಸ್ನೇಹಿತನೊಂದಿಗೆ ವೆಂಕಟೇಶ್ ಅಂಗಡಿಗೆ ಬಂದಿದ್ದರು. ಇದೇ ಸಂದರ್ಭದಲ್ಲಿ ಪಟಾಕಿ ಸ್ಫೋಟಗೊಂಡಿತ್ತು. ಇದರಿಂದಾಗಿ ತೀವ್ರವಾಗಿ ಗಾಯಗೊಂಡಿದ್ದರು. ಜೊತೆಯಲ್ಲಿದ್ದ ಸ್ನೇಹಿತನ ಬೆನ್ನು, ತಲೆ ಕೈಕಾಲುಗಳಿಗೆ ಬೆಂಕಿ ತಗುಲಿ ಸುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಫೋಟೋ ಗ್ರಾಫರ್ ಕೆಲಸ ಮಾಡುತ್ತಿದ್ದ ವೆಂಕಟೇಶ್ ಬಾಡಿ …
Read More »ಬೆಂಗಳೂರಲ್ಲಿ ಜ್ಯುವೆಲರಿ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ
ಬೆಂಗಳೂರು: ಕಳೆದ ವಾರ ನಗರದ ಹಲವು ಉದ್ಯಮಿಗಳ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದೂ ಸಹ ತಮ್ಮ ಪರಿಶೀಲನೆ ಮುಂದುವರೆಸಿದ್ದಾರೆ. ನಗರದ ಸುಮಾರು ಹತ್ತಕ್ಕೂ ಅಧಿಕ ಕಡೆಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಉದ್ಯಮಿಗಳು, ಜ್ಯುವೆಲರಿ ಶಾಪ್ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸರ್ಜಾಪುರ ಬಳಿಯ ಮುಳ್ಳೂರು, ಆರ್.ಎಂ.ವಿ ಎಕ್ಸ್ಟೆನ್ಷನ್, ಬಿಇಎಲ್ ಸರ್ಕಲ್, ಮಲ್ಲೇಶ್ವರಂ, …
Read More »ಧಾರವಾಡ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ
ಧಾರವಾಡ: ಸಭೆಗೆ ಸರಿಯಾಗಿ ಮಾಹಿತಿ ನೀಡದಿರುವ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಸಂತೋಷ್ ಲಾಡ್, ನಿಮ್ಮನ್ನು ಸಸ್ಪೆಂಡ್ ಮಾಡಬೇಕಾ? ಎಂದು ಗರಂ ಆದರು. ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಎನ್.ಎಚ್.ಭಜಂತ್ರಿ ಅವರು ಸಮರ್ಪಕ ಮಾಹಿತಿ ನೀಡದೇ ಇದ್ದುದಕ್ಕೆ ಸಚಿವರು ಕ್ಲಾಸ್ ತೆಗೆದುಕೊಂಡರು. ಕೈಯಲ್ಲಿ ವರದಿ ಇದ್ದರೂ ಸರಿಯಾಗಿ ವಿವರಿಸಲು ಆಗೋದಿಲ್ವಾ, ಇಲ್ಲಿ ಬಂದು ಓದುತ್ತೀರಾ ಎಂಬ ಸಚಿವರ ಪ್ರಶ್ನೆಗೆ ಅಧಿಕಾರಿ ವಿಚಲಿತರಾದರು. ಆಗ ಸಚಿವರು, …
Read More »