ಬೆಂಗಳೂರು: ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದ ನನಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದ್ದು ಸೌಭಾಗ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿನ ನೆನಪುಗಳನ್ನು ಸ್ಮರಿಸಿದರು. ದಸರಾದಲ್ಲಿ ಭಾಗವಹಿಸಲು ನೀಡಿದ ಆಹ್ವಾನ ಪತ್ರಿಕೆಯನ್ನು ಅವರು ಸಂತೋಷದಿಂದ ಸ್ವೀಕರಿಸಿದರು. ಸಿಎಂ ಸಿದ್ದರಾಮಯ್ಯನವರಿಗೆ ಇಂದು ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗ ದಸರಾ ಆಹ್ವಾನಪತ್ರಿಕೆ ನೀಡಿತು. ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ನಿಯೋಗದಲ್ಲಿ ಮೇಯರ್ ಶಿವಕುಮಾರ್, ಶಾಸಕ ರವಿಶಂಕರ್, …
Read More »Yearly Archives: 2023
ಅಕ್ರಮ ಜಾಹೀರಾತು ತಡೆಯುವಲ್ಲಿ ವಿಫಲವಾದ ಅಧಿಕಾರಿಗಳ ವಿರುದ್ಧ ಕ್ರಮ:
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಅನಧಿಕೃತ ಜಾಹೀರಾತುಗಳ ಅಳವಡಿಕೆಯ ವಿರುದ್ಧ ಕ್ರಮ ಕೈಗೊಳ್ಳದ ಹಾಗೂ ಜಾಹೀರಾತು ಅಕ್ರಮ ಅಳವಡಿಕೆ ತಡೆಗೆ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇಂದು ಹೈಕೋರ್ಟ್‌ಗೆ ತಿಳಿಸಿದೆ. ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತ ಹೋರ್ಡಿಂಗ್ ಹಾವಳಿ ತಡೆಯಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಮಾಯಿಗೇಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ …
Read More »ಮೈಸೂರು ದಸರಾ: 10 ಕಡೆ ಸಾಂಸ್ಕೃತಿಕ ಕಾರ್ಯಕ್ರಮಗಳು- ಸಂಪೂರ್ಣ ವಿವರ..
ಮೈಸೂರು : ಈ ಬಾರಿಯ ಸಾಂಪ್ರದಾಯಿಕ ದಸರಾದಲ್ಲಿ 10 ಕಡೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಮುಖ್ಯವಾಗಿ, ಅಂಬಾವಿಲಾಸ ಅರಮನೆಯ ಮುಂಭಾಗದ ಸಾಂಸ್ಕೃತಿಕ ವೇದಿಕೆ ಸೇರಿದಂತೆ ನಗರದ ಇತರ 9 ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳು ಏರ್ಪಾಡಾಗಿವೆ. ಸುಗಮ ಹಾಗೂ ಶಾಸ್ತ್ರೀಯ ಸಂಗೀತ, ಭರತನಾಟ್ಯ, ಇತರೆ ಪ್ರಕಾರಗಳ ನೃತ್ಯ, ನಾಟಕ, ಜಾನಪದ, ನಿರೂಪಣೆ, ಜಾದು, ಹರಿಕಥೆ, ಭಕ್ತಿ ಗೀತೆಗಳು, ತತ್ವಪದಗಳು, ವಾದ್ಯ, ಸೂತ್ರ ಸಲಾಕೆ ಸೇರಿದಂತೆ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. …
Read More »ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳು; ನೇಮಕಾತಿಗೆ ಕೆಇಎ ಅಧಿಸೂಚನೆ
ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಒಟ್ಟು 100 ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ರಾಜ್ಯ ಸರ್ಕಾರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳನ್ನು ತುಂಬಲು ಅರ್ಜಿ ಆಹ್ವಾನಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅಧಿಸೂಚನೆಹುದ್ದೆಗಳ ವಿವರ: 100 ಸ್ಟಾಫ್ ನರ್ಸ್ …
Read More »ಹಲವು ವಿಶೇಷತೆಗಳಿಂದ ಕೂಡಿದ ತುಕ್ಕಾನಟ್ಟಿ ಹಸರಬ್ಬ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ
* *ಲಕ್ಷ್ಮೀ ದೇವಿ ದರ್ಶನ ಪಡೆದ ನಂತರ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ- ತುಕ್ಕಾನಟ್ಟಿ ಲಕ್ಷ್ಮೀ ದೇವಿಯ ಜಾತ್ರೆಯ ನಿಮಿತ್ಯವಾಗಿ ನಡೆಯುವ ಹಸರಬ್ಬವು ತನ್ನದೇಯಾದ ಪ್ರಸಿದ್ಧಿಯನ್ನು ಪಡೆದಿದ್ದು, ಹಲವು ವಿಶೇಷತೆಗಳಿಂದ ಕೂಡಿರುವ ತುಕ್ಕಾನಟ್ಟಿ ಹಸರಬ್ಬ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಗ್ರಾಮದ ಎಲ್ಲ ಸಮಾಜ ಬಾಂಧವರು ದೇವಿಗೆ …
Read More »ಗ್ರೇಮಿಂಗ್ ಆಯಪ್ನಲ್ಲಿ 1.5 ಕೋಟಿ ರೂ. ಬಹುಮಾನ ಗೆದ್ದ ಪಿಎಸ್‌ಐ: ಒಂದೇ ದಿನದಲ್ಲಿ ಕೋಟ್ಯಧಿಪತಿಯಾದ ಅಧಿಕಾರಿ
Gaming app: ಮಹಾರಾಷ್ಟ್ರದ ಪಿಂಪ್ರಿ ಚಿಂಚ್‌ವಾಡ್ ಪೊಲೀಸ್ ಕಮಿಷನರೇಟ್‌ನ ಪೊಲೀಸ್ ಸಬ್-ಇನ್‌ಸ್ಪೆಕ್ಟರ್ (ಪಿಎಸ್‌ಐ) ಗೇಮಿಂಗ್ ಆಯಪ್ನಲ್ಲಿ 1.5 ಕೋಟಿ ರೂಪಾಯಿ ಬಹುಮಾನ ಗೆದ್ದಿದ್ದಾರೆ. ಈ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹೆಸರು ಸೋಮನಾಥ್ ಝೆಂಡೆ. ಈ ಪಿಎಸ್‌ಐ ಒಂದೇ ದಿನದಲ್ಲಿ ಕೋಟ್ಯಧಿಪತಿಯಾಗಿದ್ದಾರೆ. ಪುಣೆ (ಮಹಾರಾಷ್ಟ್ರ): ದೇಶದೆಲ್ಲೆಡೆ ವಿಶ್ವಕಪ್ ಜ್ವರ ಕಾಣಿಸಿಕೊಂಡಿದೆ. ಕ್ರಿಕೆಟ್ ಪ್ರೇಮಿಗಳಿಗೆ ಇದು ಅತ್ಯಂತ ಸಂತಸದ ಕ್ಷಣ. ಕ್ರಿಕೆಟ್ ಎಲ್ಲರ ಅಚ್ಚುಮೆಚ್ಚಿನ ಆಟ. ಕೆಲವರು ಮೈದಾನದಲ್ಲಿ ಆಡುತ್ತಾರೆ ಮತ್ತು ಕೆಲವರು …
Read More »ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ: ಆರೋಪಿ ಗುರುತು ಪತ್ತೆ ಹಚ್ಚಿದ ಬೆಳಗಾವಿ ಪೊಲೀಸರು
ಬೆಳಗಾವಿ : ಜಿಲ್ಲೆಯಲ್ಲಿರುವ ಹಿಂಡಲಗಾ ಕೇಂದ್ರ ಕಾರಾಗೃಹ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಸ್ಫೋಟಿಸುವುದಾಗಿ ಹಾಗೂ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಗುರುತು ಪತ್ತೆ ಹಚ್ಚುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಕ್ಕೇರಿಯ ಕಿರಣ ಮೋಷಿ (48) ಬೆದರಿಕೆ ಕರೆ ಮಾಡಿದ್ದ ಆರೋಪಿ. ತನ್ನ ಪತ್ನಿಯ ಹೆಸರಿನಲ್ಲಿರುವ ಸೀಮ್‌ನಿಂದ ಬಂದಿಖಾನೆ ಇಲಾಖೆಯ ಉತ್ತರ ವಲಯದ ಡಿಐಜಿಪಿ ಟಿ …
Read More »ಡಿಎಚ್ಒ ಕಚೇರಿ ಸಿಬ್ಬಂದಿಯಿಂದ ಕಚೇರಿ ಹಿಂಭಾಗದಲ್ಲಿ ಎಣ್ಣೆ ಪಾರ್ಟಿ
ಬೆಳಗಾವಿ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ(ಡಿಹೆಚ್‌ಒ)ಯಲ್ಲಿ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಸಿಬ್ಬಂದಿ ಮದ್ಯಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ. ನಗರದ ಟಿಳಕವಾಡಿಯಲ್ಲಿರುವ ಡಿಹೆಚ್‌ಒ ಕಚೇರಿ ಹಿಂಭಾಗದಲ್ಲಿರುವ ಕೊಠಡಿಯಲ್ಲಿನ ಗಾಂಧಿಜೀ ಫೋಟೋ ಎದುರಿಗೆಯೇ ಸಿಬ್ಬಂದಿ ಮದ್ಯಪಾನ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ, ಈ ಘಟನೆ ಯಾವಾಗ ನಡೆದಿದೆ ಎಂಬ ಬಗ್ಗೆ ಸರಿಯಾದ …
Read More »ಬಿಜೆಪಿ ಶಾಸಕ ಅಭಯ್ ಪಾಟೀಲ ವಿರುದ್ಧ ಅವ್ಯವಹಾರ ಆರೋಪ: ತನಿಖೆ ಮಾಡಿಸುತ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಇಲ್ಲಿನ ಶಹಾಪುರ ಬ್ಯಾಂಕ್ ಆಫ್ ಇಂಡಿಯಾದಿಂದ ಹಳೆ ಪಿ.ಬಿ.ರಸ್ತೆಯವರೆಗೆ ಮಾಡಿರುವ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಿವಾಜಿ ಮಹಾರಾಜ ಉದ್ಯಾನದ ಬಳಿ ಬೆಳಗಾವಿ ನಾಗರಿಕರ ಹಿತರಕ್ಷಣಾ ಒಕ್ಕೂಟದಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಸ್ಥಳೀಯ ಶಾಸಕ ಅಭಯ್ ಪಾಟೀಲ ಭಾವಚಿತ್ರ ಇರುವ ಫಲಕಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಘೋಷಣೆ ಮೊಳಗಿಸಿದರು. ಮಾನವ ಸರಪಳಿ ನಿರ್ಮಿಸಿ, ಬುಟ್ಟಿಯಲ್ಲಿ ಮರಳು, ಕಡಿ, ನಕಲಿ ನೋಟುಗಳನ್ನು …
Read More »ಅರಬ್‌ನಾಡಿನಲ್ಲಿ ಮೊದಲ ಹಿಂದು ದೇಗುಲ ನಿರ್ಮಾಣ
ಅಬುಧಾಬಿ/ಪಾಟ್ನಾ: ಅಮೆರಿಕದ ನ್ಯೂಜೆರ್ಸಿಯಲ್ಲಿ ಅಕ್ಷರಧಾಮ ಉದ್ಘಾಟನೆಯಾದ ಬೆನ್ನಲ್ಲೇ, ಇನ್ನೊಂದು ಭವ್ಯ ಹಿಂದು ದೇವಾಲಯ ಮುಸ್ಲಿಂ ರಾಷ್ಟ್ರವಾದ ಯುಎಇಯ ಅಬುಧಾಬಿಯಲ್ಲಿ ನಿರ್ಮಾಣವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ದೇಗುಲವನ್ನು ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಬುಧಾಬಿಯಲ್ಲಿ ನಿರ್ಮಿಸಲಾಗುತ್ತಿರುವ ದೇವಾಲಯದ ಕಾಮಗಾರಿಯನ್ನು ವೀಕ್ಷಿಸಲು ತೆರಳಿರುವ ಕೇಂದ್ರ ಸಚಿವ ಅಶ್ವಿನಿ ಚೌಬೆ, ಕಾಮಗಾರಿ ನಡೆಯುತ್ತಿರುವ ಎಲ್ಲ ಭಾಗಗಳಿಗೂ ಭೇಟಿ ನೀಡಿದರು. ಮುಂದಿನ ವರ್ಷ ಮಂದಿರದ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು. …
Read More »