ಬೆಳಗಾವಿ : ಸರ್ಕಾರ ಪತನವಾಗುತ್ತದೆ ಎಂದು ಹೇಳುವವರನ್ನೇ ಕೇಳಿ. ಸರ್ಕಾರ ಪತನವಾಗದಿದ್ದರೆ ರಾಜೀನಾಮೆ ಕೊಡ್ತಾರಾ..? ಎಂದು ಸಕ್ಕರೆ, ಸಹಕಾರ, ಕೃಷಿ ಮಾರುಕಟ್ಟೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ ಅವರು ವಿಪಕ್ಷಗಳಿಗೆ ಟಾಂಗ್ ಕೊಟ್ಟರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿಂದು ಮಾಧ್ಯಮಗಳ ಜೊತೆಗೆ ಸಂಕ್ರಾಂತಿ ನಂತರ ಸರ್ಕಾರ ಪತನವಾಗುತ್ತದೆ ಎಂಬ ವಿಪಕ್ಷಗಳ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯಾರು ಸರ್ಕಾರ ಪತನವಾಗುತ್ತದೆ ಎಂದು ಹೇಳುತ್ತಾರೆ ಅವರಿಗೆ ಕೇಳಿ ಎಂದರು. ಕಬ್ಬಿನ ತೂಕದಲ್ಲಿ …
Read More »Yearly Archives: 2023
ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ… ಛತ್ತೀಸ್ಗಢದಲ್ಲಿ 2ಹಂತದ ವೋಟಿಂಗ್.. ಡಿಸೆಂಬರ್ 3ಕ್ಕೆ ಚುನಾವಣಾ ಫಲಿತಾಂಶ ಪ್ರಕಟ
Assembly elections 2023: ಚುನಾವಣಾ ಆಯೋಗವು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದೆ. ನವೆಂಬರ್ 23 ರಂದು ರಾಜಸ್ಥಾನ, ಮಧ್ಯಪ್ರದೇಶ ನವೆಂಬರ್ 17, ತೆಲಂಗಾಣ ನವೆಂಬರ್ 30, ಛತ್ತೀಸ್ಗಢ ನವೆಂಬರ್ 7ರಂದು ಮೊದಲನೇ ಹಂತ ಹಾಗೂ 17 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ಜರುಗಲಿದೆ. ನವದೆಹಲಿ: ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಚುನಾವಣಾ ಆಯೋಗವು ಪ್ರಕಟಿಸಿದೆ. …
Read More »ಲೋಕಸಭೆ ಚುನಾವಣೆ ದೃಷ್ಠಿಯಿಂದ ನಮ್ಮ ಪಕ್ಷದ ನಾಯಕರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ: ಮಾಜಿ ಸಚಿವ ಸಿ ಪಿ ಯೋಗೇಶ್ವರ್
ರಾಮನಗರ : ಮುಂದಿನ ಲೋಕಸಭಾ ಚುನಾವಣಾ ದೃಷ್ಟಿಯಲ್ಲಿಟ್ಟುಕೊಂಡು ನಮ್ಮ ಪಕ್ಷದ ಹೈಕಮಾಂಡ್ ನಾಯಕರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಬಹಳ ವಿರೋಧ ಇದ್ದ ಕ್ಷೇತ್ರ. ಚನ್ನಪಟ್ಟಣ ನಾವು ಕುಮಾರಸ್ವಾಮಿಯನ್ನು ನೇರಾ ನೇರವಾಗಿ ಪರಸ್ಪರ ವಿರೋಧವಾಗಿ ರಾಜಕೀಯ ಮಾಡಿಕೊಂಡು ಬಂದಿದ್ದೆವು. ಹೊಂದಾಣಿಕೆ ಅನ್ನೋದು ತಾಳ್ಮೆಯಿಂದ ಪರಸ್ಪರ ಒಂದಾಗಿ ಎಲ್ಲರ ಮನಸ್ಸನ್ನು ಒಗ್ಗೂಡಿಸುವುದು ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಹಿನ್ನೆಲೆ ಚನ್ನಪಟ್ಟಣದಲ್ಲಿಂದು ಮಾಧ್ಯಮದವರೊಂದಿಗೆ …
Read More »ಕರ್ನಾಟಕದಲ್ಲಿ 5 ವರ್ಷದಲ್ಲಿ 58 ಸಾವಿರ ಮಕ್ಕಳು ಶಾಲೆಗಳಿಂದ ದೂರ.. ಕೋಟಿಗಟ್ಟಲೇ ವ್ಯಯಿಸಿದರೂ ನಿಲ್ಲದ ಡ್ರಾಪ್ ಔಟ್
ಬೆಂಗಳೂರು: ಶಾಲೆ ತೊರೆದಿರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 7 ನೇ ಸ್ಥಾನ ಪಡೆದುಕೊಂಡಿದ್ದು, ರಾಜ್ಯಾದ್ಯಂತ ಕಳೆದ ಐದು ವರ್ಷಗಳಲ್ಲಿ 57,785 ವಿದ್ಯಾರ್ಥಿಗಳು ಶಿಕ್ಷಣ ತೊರೆದಿದ್ದಾರೆ. ವಿದ್ಯಾರ್ಥಿಗಳು ಶಾಲೆ ತೊರೆಯುವುದನ್ನು ತಡೆಯಲು ಐದು ವರ್ಷದಲ್ಲಿ ಸರ್ಕಾರದಿಂದ ಬರೋಬ್ಬರಿ 1,099.63 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದೆ. ಆದರೂ ಮಕ್ಕಳು ಶಾಲೆ ತೊರೆಯುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದಕ್ಕೆ ಕಾರಣವೇನು, ಸರ್ಕಾರ ಏನೆಲ್ಲಾ ಕ್ರಮವಹಿಸಲು ಮುಂದಾಗಿದೆ ಎನ್ನುವ ಕುರಿತ ಒಂದು ವರದಿ ಇಲ್ಲಿದೆ. ಶಾಲೆ ತೊರೆದ …
Read More »ಕೇಂದ್ರ ತಂಡಕ್ಕೆ ನಮ್ಮ ವಸ್ತುಸ್ಥಿತಿಯ ಮನವಿ ಮನವರಿಕೆಯಾಗಿದೆ- ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು : ರಾಜ್ಯದ ಬರ ಅಧ್ಯಯನಕ್ಕಾಗಿ ಆಗಮಿಸಿರುವ ಕೇಂದ್ರ ತಂಡಕ್ಕೆ ನಾವು ಪರಿಸ್ಥಿತಿಯನ್ನು ವಸ್ತುಸ್ಥಿತಿಯಿಂದ ವಿವರಿಸಿದ್ದು, ಅವರಿಗೆ ಮನವರಿಕೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಬರ ಅಧ್ಯಯನ ತಂಡ ಕೇಂದ್ರ ಸರ್ಕಾರಕ್ಕೆ ಒಂದು ವಾರದಲ್ಲಿ ವರದಿ ಸಲ್ಲಿಸಲಿದೆ. ಎಷ್ಟು ಪರಿಹಾರ ಕೊಡುತ್ತಾರೆ ನೋಡೋಣ. ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿದ ತಂಡ ಪರಿಸ್ಥಿತಿ ಅವಲೋಕನ ಮಾಡಿದೆ. ಕುಡಿಯುವ …
Read More »ಯೋಗೇಶ್ ಗೌಡ ಹತ್ಯೆ ಪ್ರಕರಣ: ಹಿಂದಿನ ತನಿಖಾಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಬಂಧನಕ್ಕೆ ಹುಡುಕಾಟ
ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಮತ್ತೆ ತನಿಖೆಗಿಳಿದಿದ್ದಾರೆ. ಪ್ರಕರಣದ ಹಿಂದಿನ ತನಿಖಾಧಿಕಾರಿ ಚೆನ್ನಕೇಶವ ಟಿಂಗರಿಕರ ಮನೆಗೆ ಇಂದು ಬೆಳಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ಆಗಮಿಸಿ ಶೋಧ ಕಾರ್ಯ ನಡೆಸಿದರು. ಧಾರವಾಡ ಮಲಪ್ರಭಾ ನಗರದಲ್ಲಿರುವ ಚೆನ್ನಕೇಶವ ಟಿಂಗರಿಕರ್ ಮನೆಗೆ ಸಿಬಿಐ ಅಧಿಕಾರಿಗಳು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಆದ್ರೆ ಮನೆಯಲ್ಲಿ ಟಿಂಗರಿಕರ್ ಇಲ್ಲ ಎಂದು ಹೇಳಲಾಗುತ್ತಿದೆ. ಯೋಗೇಶ್ ಗೌಡ …
Read More »ಗ್ ಬಾಸ್ ಮನೆಗೆ ಎಂಎಲ್ಎ ಪ್ರದೀಪ್ ಈಶ್ವರ್ ಎಂಟ್ರಿ
ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಗೆ ಅಚ್ಚರಿಯ ಎಂಟ್ರಿ ಕೊಟ್ಟಿದ್ದಾರೆ. ‘ಬಿಗ್ ಬಾಸ್’.. ಕನ್ನಡದ ಜನಪ್ರಿಯ ರಿಯಾಲಿಟಿ ಶೋನ 10ನೇ ಸೀಸನ್ ಭಾನುವಾರದಿಂದ ಆರಂಭವಾಗಿದೆ. ಕಿಚ್ಚ ಸುದೀಪ್ ಸಾರಥ್ಯದ 100 ದಿನಗಳ ಕಾರ್ಯಕ್ರಮವು ನಿನ್ನೆ ಗ್ರ್ಯಾಂಡ್ ಲಾಂಚ್ ಆಗಿದೆ. ಈ ವೇಳೆಯೇ ಕಲರ್ಫುಲ್ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳು ಪ್ರವೇಶಿಸಿದ್ದಾರೆ. ಇದೀಗ ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಗೆ ಅಚ್ಚರಿಯ …
Read More »ಬಸ್ ಹರಿದ ಪರಿಣಾಮ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಸಾವು
ಬೆಂಗಳೂರು : ಬಿಎಂಟಿಸಿ ಬಸ್ ಹರಿದ ಪರಿಣಾಮ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಗಾರ್ವೇಭಾವಿಪಾಳ್ಯ ಜಂಕ್ಷನ್ನಲ್ಲಿ ನಡೆದಿದೆ. ಆಯಾನ್ ಪಾಷಾ (3) ಮೃತ ಮಗು ಎಂದು ಗುರುತಿಸಲಾಗಿದೆ. ಆಯಾನ್ ಪಾಷಾ ದೊಡ್ಡಮ್ಮ ರುಸ್ಮಾರೊಂದಿಗೆ ಭಾನುವಾರ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದನು. ಈ ವೇಳೆ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಇವರ ವಾಹನಕ್ಕೆ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗೆ ಬಿದ್ದಿದ್ದು, ಈ ವೇಳೆ …
Read More »ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್
ನವದೆಹಲಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಅಜಿತ್ ಪವಾರ್ ಮತ್ತು ಇತರ ಏಳು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಶರದ್ ಪವಾರ್ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ತ್ವರಿತ ನಿರ್ಧಾರ ಕೈಗೊಳ್ಳಲು ಸೂಚನೆಗಳನ್ನು ನೀಡುವಂತೆ ಆದೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು …
Read More »ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಧನೆ: ಕೆಎಂಎಫ್-24ರಲ್ಲಿ 3ನೇ ಸ್ಥಾನ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ನಿಟ್ಟಿನಲ್ಲಿ ಕೆಎಂಎಫ್-24ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಉತ್ತಮ ಸಾಧನೆ ಮಾಡಿದೆ. ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲಿಕೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ರಾಜ್ಯದಲ್ಲಿ 3ನೇ ಸ್ಥಾನ ಪಡೆದುಕೊಂಡಿದೆ. ಎಲ್ಲ ಸ್ಥಿರಾಸ್ತಿಗಳನ್ನು ತೆರಿಗೆ (ಆಸ್ತಿ ಕರ) ವ್ಯಾಪ್ತಿಗೆ ತರುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಪೌರಾಡಳಿತ ನಿರ್ದೇಶನಾಲಯವು …
Read More »