ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 19ನೇ ಆರೋಪಿಯಾಗಿರುವ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಯೋಗೀಶಗೌಡರ ಹತ್ಯೆಯಾದಾಗ ಚೆನ್ನಕೇಶವ ಟಿಂಗರಿಕ ಧಾರವಾಡ ಉಪನಗರ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದರು. ಅಲ್ಲದೇ ಪ್ರಕರಣದ ತನಿಖಾಧಿಕಾರಿ ಸಹ ಆಗಿದ್ದರು. ಸಿಬಿಐಗೆ ಈ ಪ್ರಕರಣದ ತನಿಖೆ ಹಸ್ತಾಂತರಗೊಂಡ ನಂತರ ಟಿಂಗರಿಕರ್ ಸಹ ಈ ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದರು ಎಂದು …
Read More »Yearly Archives: 2023
ಬೆಳಗಾವಿ: ಜಮೀನಿಗೆ ತೆರಳಿದ್ದ ರೈತ ಕರಡಿ ದಾಳಿಗೆ ಬಲಿ
ಬೆಳಗಾವಿ: ಕರಡಿ ದಾಳಿಗೆ ರೈತ ಬಲಿಯಾಗಿರುವ ಘಟನೆ ಜಿಲ್ಲೆಯ ಖಾನಾಪೂರ ತಾಲೂಕಿನ ಘೋಶೆ (ಬಿಕೆ) ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಘೋಶೆ (ಬಿಕೆ) ಗ್ರಾಮದ ರೈತ ಭಿಕಾಜಿ ಈರಪ್ಪ ಮಿರಾಶಿ(63) ಎಂದು ಗುರುತಿಸಲಾಗಿದೆ. ಶನಿವಾರ ಹೊಲಕ್ಕೆ ಕೆಲಸಕ್ಕೆ ತೆರಳಿದ್ದ ರೈತ ಭಿಕಾಜಿ ಮೇಲೆ ಕರಡಿ ದಾಳಿ ನಡೆಸಿತ್ತು. ಈ ವೇಳೆ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಜನರು ಕರಡಿಯನ್ನು ಓಡಿಸಲು ಯತ್ನಿಸಿದ್ದರು. ಆದರೆ, ಕರಡಿ ದಾಳಿಯನ್ನು ಮುಂದುವರೆಸಿ ರೈತನನ್ನು ಸುಮಾರು 2 …
Read More »ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ: ದೂರು ದಾಖಲಿಸಿದ ಬಂಧಿಖಾನೆ ಡಿಐಜಿಪಿ
ಬೆಳಗಾವಿ : ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹ, ಬೆಂಗಳೂರು ಕಾರಾಗೃಹ ಮತ್ತು ನನ್ನ ವಸತಿ ಗೃಹದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆಂದು ಬಂಧಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ. ಶೇಷ ಅವರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಇಂದು ದೂರು ದಾಖಲಿಸಿದ್ದಾರೆ. ಮೂರು ಪ್ರತ್ಯೇಕ ಮೊಬೈಲ್ ಸಂಖ್ಯೆಗಳಿಂದ ಭಾನುವಾರ(8 ಅಕ್ಟೋಬರ್) ಕರೆ ಮಾಡಿದ ವ್ಯಕ್ತಿಯೋರ್ವ ಹಿಂಡಲಗಾ ಕೇಂದ್ರ ಕಾರಾಗೃಹದ ಹಿರಿಯ ವೀಕ್ಷಕರಾದ ಜಗದೀಶ ಗಸ್ತಿ, …
Read More »ಜಗತ್ತಿನ ಯಾವುದೇ ಮೂಲೆಗೆ ಹೋದರೂ ಸಿವಿಲ್ ಇಂಜಿನಿಯರಿಂಗ್ಗೆ ಮಹತ್ವದ ಸ್ಥಾನವಿದೆ.: ಸುಧಾಮೂರ್ತಿ
ಬೆಳಗಾವಿ: ಜಗತ್ತಿನ ಯಾವುದೇ ಮೂಲೆಗೆ ಹೋದರೂ ಸಿವಿಲ್ ಇಂಜಿನಿಯರಿಂಗ್ಗೆ ಮಹತ್ವದ ಸ್ಥಾನವಿದೆ. ಹಾಗಾಗಿ, ಸಿವಿಲ್ ಇಂಜಿನಿಯರಿಂಗ್ ಎಂಬುದು ಮದರ್ ಆಫ್ ಇಂಜಿನಿಯರ್ಸ್ ಎಂದು ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ, ಪದ್ಮಭೂಷಣ ಪುರಸ್ಕೃತೆ ಡಾ.ಸುಧಾಮೂರ್ತಿ ಹೇಳಿದರು. ಬೆಳಗಾವಿಯ ಕೆಎಲ್ಇ ಸಂಸ್ಥೆಯ ಜೀರಗೆ ಸಭಾಭವನದಲ್ಲಿ ನಡೆದ ‘ದಿ ಇನಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್’ ವತಿಯಿಂದ ಹಮ್ಮಿಕೊಂಡಿದ್ದ ಸಿವಿಲ್ ಇಂಜಿನಿಯರ್ಸ್ 38ನೇ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಿವಿಲ್ ಇಂಜಿನಿಯರಿಂಗ್ ಕುರಿತು ಬಣ್ಣಿಸಿದರು. “ಹಣವೇ ಎಲ್ಲ ಖುಷಿ …
Read More »ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಪ್ರಕಟಣೆ ಸಾಧ್ಯತೆ
ನವದೆಹಲಿ : ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಚುನಾವಣಾ ಆಯೋಗವು ಇಂದು ಪ್ರಕಟಿಸಲಿದೆ. ಈ ಸಂಬಂಧ ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಚುನಾವಣಾ ಆಯೋಗವು ಸುಮಾರು 300 ವೀಕ್ಷಕರ ಸಭೆ ನಡೆಸಿತ್ತು. ಭಾನುವಾರದ ನಂತರ ಯಾವುದೇ ಸಮಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ, ತೆಲಂಗಾಣ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಚುನಾವಣೆ …
Read More »ಮೂರು ತಾಲೂಕುಗಳು ಬರಪೀಡಿತ ಪಟ್ಟಿಯಿಂದ ಹೊರಗೆ.. ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ನೇತೃತ್ವದಲ್ಲಿ ಪ್ರತಿಭಟನೆ
ಹಾವೇರಿ : ರಾಜ್ಯ ಸರ್ಕಾರ ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಐದು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಉಳಿದಂತೆ ಮೂರು ತಾಲೂಕುಗಳನ್ನು ಸರ್ಕಾರ ಬರಗಾಲಪೀಡಿತ ಎಂದು ಘೋಷಿಸಿಲ್ಲ. ರಾಣೆಬೆನ್ನೂರು, ಹಿರೇಕೆರೂರು, ಹಾವೇರಿ, ಸವಣೂರು ರಟ್ಟಿಹಳ್ಳಿ ತಾಲೂಕುಗಳು ಬರಗಾಲ ಪೀಡಿತವಾಗಿವೆ. ಉಳಿದಂತೆ ಬ್ಯಾಡಗಿ, ಹಾನಗಲ್ ಮತ್ತು ಶಿಗ್ಗಾಂವಿ ತಾಲೂಕುಗಳನ್ನು ಬರಗಾಲಪೀಡಿತ ಎಂದು ಘೋಷಣೆ ಮಾಡಿಲ್ಲ.ಇದರಿಂದ ಆಕ್ರೋಶಗೊಂಡು ಬ್ಯಾಡಗಿ, ಹಾನಗಲ್ ಮತ್ತು ಶಿಗ್ಗಾಂವಿ ತಾಲೂಕಿನ ರೈತರು ಇದೀಗ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ನೇತೃತ್ವದಲ್ಲಿ ಪ್ರತಿಭಟನೆಯ …
Read More »ಸಿಎಂ ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್;
ಬೆಂಗಳೂರು : ಖಾಸಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಅಶ್ವಿನಿ ಪುನೀತ್ ರಾಜ್ಕುಮಾರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ ಜೊತೆಗಿದ್ದರು. ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರ ಶಿಲ್ಪದ ಸಂಗ್ರಹದ ಅನಾವರಣ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಸಿಎಂಗೆ …
Read More »ಗೆಲುವಿನ ದಡ ಸೇರಿಸಿದ ವಿರಾಟ್ – ರಾಹುಲ್ ತಾಳ್ಮೆಯ ಆಟ.. ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್ ಜಯ
ವಿಶ್ವಕಪ್ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಮತ್ತು ರಾಹುಲ್ ಟೀಮ್ ಇಂಡಿಯಾಕ್ಕೆ ಗೆಲುವಿಗೆ ಆಸರೆ ಆದರು. ಚೆನ್ನೈ (ತಮಿಳುನಾಡು): 2 ರನ್ಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾದ ಭಾರತಕ್ಕೆ ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಮತ್ತು ಕೆ ಎಲ್ ರಾಹುಲ್ ಅವರ ಬ್ಯಾಟಿಂಗ್ ತಂಡಕ್ಕೆ ಆಸರೆ ಆಯಿತು. ಇದರಿಂದ ಆಸ್ಟ್ರೇಲಿಯಾ ವಿರುದ್ಧ ಭಾರತ ಮೊದಲ ಪಂದ್ಯದಲ್ಲಿ 8.4 ಓವರ್ ಉಳಿಸಿಕೊಂಡು 6 ವಿಕೆಟ್ಗಳ ಜಯ ದಾಖಲಿಸಿದೆ.
Read More »ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡ- ಸಿಎಂ ಸಿದ್ದರಾಮಯ್ಯ ಭೇಟಿ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಅನಿರೀಕ್ಷಿತವಾಗಿ ಭೇಟಿಯಾದರು. ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು. ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ …
Read More »ಇಂದಿನಿಂದ ಬಿಗ್ ಬಾಸ್ ಸೀಸನ್ 10 ಶುರುವಾಗಿದೆ. ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಸ್ಫರ್ಧಿಗಳ ಪಟ್ಟಿ ಇಂತಿದೆ..
ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಭಾನುವಾರದಿಂದ ಆರಂಭವಾಗಿದೆ. ಕಿಚ್ಚ ಸುದೀಪ್ ಸಾರಥ್ಯದಲ್ಲಿ ನಡೆಯಲಿರುವ ಬಿಗ್ ಬಾಸ್ ಸೀಸನ್ 10ಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಈ ಸೀಸನ್ನ ಗ್ರಾಂಡ್ ಇವೆಂಟ್ ಭಾನುವಾರದಿಂದ ಕಲರ್ಸ್ ಕನ್ನಡದಲ್ಲಿ ಪ್ರಸಾರ ಶುರುವಾಗಿದೆ. ಬಿಗ್ ಬಾಸ್ ರಿಯಾಲಿಟಿ ಶೋನ ಒಂಭತ್ತು ಆವೃತ್ತಿಗಳು ಯಶಸ್ವಿಯಾಗಿದ್ದು, ಅಪಾರ ಸಂಖ್ಯೆಯ ವೀಕ್ಷಕರನ್ನು ಪಡೆದಿದೆ. ಬಿಗ್ ಬಾಸ್ನಲ್ಲಿನ ಸುದೀಪ್ ನಿರೂಪಣೆ ಅತಿ ಹೆಚ್ಚು ಜನರನ್ನು ಕಾರ್ಯಕ್ರಮ ವೀಕ್ಷಿಸುವಂತೆ …
Read More »