ಆನೇಕಲ್ (ಬೆಂಗಳೂರು) : ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಶನಿವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಟಾಕಿ ದುರಂತ ಪ್ರಕರಣವನ್ನು ಸಿಐಡಿಗೆ ವಹಿಸುವುದಾಗಿ ಎಂದು ಹೇಳಿದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ಅವಘಡ ಪ್ರಕರಣದಲ್ಲಿ ಒಟ್ಟು 14 ಮಂದಿ ಸಾವನ್ನಪ್ಪಿದ್ದು, 7 …
Read More »Yearly Archives: 2023
ಕಾವೇರಿ ಕಿಚ್ಚು : ಮಂಡ್ಯ ರೈತರಿಗೆ ಚಿತ್ರದುರ್ಗದಿಂದ ಟ್ಯಾಂಕರ್ ನೀರು
ಮಂಡ್ಯ : ಮಂಡ್ಯದಲ್ಲಿ ಕಾವೇರಿ ಕಿಚ್ಚು ಆರುವ ಲಕ್ಷಣ ಕಾಣುತ್ತಿಲ್ಲ. ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಹೋರಾಟ ನಡೆಯುತ್ತಲೇ ಇದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಧರಣಿ ಮುಂದುವರೆದಿದ್ದು, ಹಲವಾರು ಸಂಘಟನೆಗಳು ಬೆಂಬಲ ಸೂಚಿಸುತ್ತಿವೆ. ಮೈಸೂರು, ಬೆಂಗಳೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕುತ್ತಿದ್ದಾರೆ. ಸರ್ಕಾರ ಮಾತ್ರ ಈವರೆಗೆ ಯಾವುದೇ ತೀರ್ಮಾನ ಮಾಡದೆ, ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾದ್ರೆ ಈವತ್ತಿನ ಹೋರಾಟಗಳು ಹೇಗೆಲ್ಲಾ ನಡೀತು ಅನ್ನೋದರ ಮಾಹಿತಿ ಇಲ್ಲಿದೆ. ಇವತ್ತು ಜಿಲ್ಲಾ ರೈತ ಹಿತರಕ್ಷಣಾ …
Read More »ಫೆಸ್ಟಿವಲ್ ಸೇಲ್ ಆರಂಭಿಸಿದ ಅಮೆಜಾನ್, ಫ್ಲಿಪ್ಕಾರ್ಟ್; 90 ಸಾವಿರ ಕೋಟಿ ರೂ. ಇ-ಕಾಮರ್ಸ್ ವಹಿವಾಟು ನಿರೀಕ್ಷೆ
ನವದೆಹಲಿ : ಇ-ಕಾಮರ್ಸ್ ದೈತ್ಯ ಕಂಪನಿಗಳಾದ ಅಮೆಜಾನ್, ಫ್ಲಿಪ್ಕಾರ್ಟ್, ಮಿಂತ್ರಾ ಮತ್ತು ಇತರ ಕಂಪನಿಗಳು ಭಾನುವಾರದಿಂದ ಭಾರತದಲ್ಲಿ ಹಬ್ಬದ ಋತುವಿನ ಮಾರಾಟ ಪ್ರಾರಂಭಿಸಿವೆ. ಈ ಹಬ್ಬದ ಸೀಸನ್ನಲ್ಲಿ ಇವು ಒಟ್ಟಾರೆಯಾಗಿ 90 ಸಾವಿರ ಕೋಟಿ ರೂಪಾಯಿ ವಹಿವಾಟು ನಡೆಸುವ ನಿರೀಕ್ಷೆಯಿದೆ. ಮಾರುಕಟ್ಟೆ ವಿಶ್ಲೇಷಕ ಸಂಸ್ಥೆ ರೆಡ್ ಸೀರ್ ಸ್ಟ್ರಾಟಜಿ ಕನ್ಸಲ್ಟೆಂಟ್ಸ್ ಪ್ರಕಾರ, ಸುಮಾರು 140 ಮಿಲಿಯನ್ನಷ್ಟಿರುವ ಆನ್ ಲೈನ್ ಮಾರಾಟಗಾರರು, ಅದರಲ್ಲೂ ವಿಶೇಷವಾಗಿ ಸಣ್ಣ ವ್ಯಾಪಾರಿಗಳು, ವರ್ಷದಿಂದ ವರ್ಷಕ್ಕೆ ಹಬ್ಬದ ಮಾರಾಟದಲ್ಲಿ …
Read More »ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರ್ಕಾರ ರಾಜಕೀಯ ಮಾಡುತ್ತಿದೆ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ : ಕಾಂಗ್ರೆಸ್ನವರು ಒಂದು ಕಡೆ ಜಾತ್ಯತೀತ ಎನ್ನುತ್ತಾರೆ. ಇನ್ನೊಂದು ಕಡೆ ಜಾತಿಗಣತಿ ವರದಿ ಇಟ್ಟುಕೊಂಡು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಡದಿಯ ತಮ್ಮ ತೋಟದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರ್ಕಾರವು ರಾಜಕೀಯ ಮಾಡುತ್ತಿದೆ. ಕಾಂತರಾಜು ಎಂಬುವರಿಂದ ವರದಿ ಕೊಡಿಸಿದ್ದೀವಿ. ಕುಮಾರಸ್ವಾಮಿ ಅವರು ಒಪ್ಪಲಿಲ್ಲ …
Read More »ವಿದ್ಯಾರ್ಥಿಗಳಿಗೆ ಎರಡು ಮುಖ್ಯ ಪರೀಕ್ಷೆಗಳು ಕಡ್ಡಾಯವಲ್ಲ :ಕೇಂದ್ರ ಶಿಕ್ಷಣ ಸಚಿವ ಪ್ರಧಾನ್
ನವದೆಹಲಿ: 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸದಾಗಿ ಪರಿಚಯಿಸಲಾಗುರುವ ‘ವರ್ಷಕ್ಕೆ ಎರಡು ಬಾರಿ ಪರೀಕ್ಷೆ’ಗೆ ನಿಯಮ ಕಡ್ಡಾಯವಲ್ಲ. ಅವರು 2 ಸಲ ಪರೀಕ್ಷೆ ಬರೆಯಲೇಬೇಕಿಲ್ಲ. ಬೇಕಾದಲ್ಲಿ ಅವರು ಎರಡರ ಪೈಕಿ ಒಂದು ಪರೀಕ್ಷೆಯಲ್ಲಿ ಗಳಿಸಿದ ಹೆಚ್ಚಿನ ಅಂಕಗಳನ್ನೇ ಅವರು ಉಳಿಸಿಕೊಳ್ಳಬಹುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು. ಈ ನಿಯಮವು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ಜೆಇಇ ಇರುವಂತೆ ವರ್ಷಕ್ಕೆ ಎರಡು ಬಾರಿ ಎಕ್ಸಾಂ ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. …
Read More »: ಶಾಮನೂರು ಶಿವಶಂಕರಪ್ಪ ಅವರು ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿಲ್ಲ:ಶ್ರೀಶೈಲ ಜಗದ್ಗುರು
ಬೆಳಗಾವಿ : ಶಾಮನೂರು ಶಿವಶಂಕರಪ್ಪ ಅವರು ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿಲ್ಲ. ಯಾವ ಮಟ್ಟದಲ್ಲಿ ನಮ್ಮ ಸಮಾಜದ ಅಧಿಕಾರಿಗಳಿಗೆ ಉನ್ನತ ಸ್ಥಾನಮಾನಗಳು ಸಿಗಬೇಕಿತ್ತೋ ಆ ಮಟ್ಟದಲ್ಲಿ ಸಿಗ್ತಿಲ್ಲ. ಹೆಚ್ಚಿನ ಪ್ರಮಾಣದಲ್ಲಿ ವೀರಶೈವ ಲಿಂಗಾಯತ ಅಧಿಕಾರಿಗಳನ್ನು ಪರಿಗಣಿಸಬೇಕು ಎಂದು ಶ್ರೀಶೈಲದ ಡಾ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದರು. ಶ್ರೀಶೈಲದ ಡಾ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಇದನ್ನೆಲ್ಲ ತಿಳಿದುಕೊಳ್ಳಬೇಕು, ವೀರಶೈವ ಲಿಂಗಾಯತ ಅಧಿಕಾರಿಗಳಿಗೆ …
Read More »ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್
ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್ ಮಹಾಲಕ್ಷ್ಮೀ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 6.80 ಕೋಟಿ ರೂ. ವ್ಯಯ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ನೋಡುವಂತಹ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಮಹಾಲಕ್ಷ್ಮೀದೇವಿ ಜಾತ್ರಾ ಕಮೀಟಿ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ …
Read More »ಏಷ್ಯನ್ ಗೇಮ್ಸ್: ಭಾರತೀಯ ಅಥ್ಲೀಟ್‌ಗಳು 107 ಪದಕ ಗೆದ್ದಿರುವುದು ಐತಿಹಾಸಿಕ ಸಾಧನೆ- ಪ್ರಧಾನಿ ಮೋದಿ ಮೆಚ್ಚುಗೆ
ನವದೆಹಲಿ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ವಿವಿಧ ಸ್ಪರ್ಧೆಗಳಲ್ಲಿ ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಜಯಿಸಿ ಅಥ್ಲೀಟ್‌ಗಳು ಸಂಭ್ರಮಿಸಿದ್ದಾರೆ. ಈ ಸ್ಮರಣೀಯ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳು ಒಟ್ಟು 107 ಪದಕಗಳನ್ನು ಗೆದ್ದಿರುವುದನ್ನು ಐತಿಹಾಸಿಕ ಸಾಧನೆ ಎಂದು ಬಣ್ಣಿಸಿದ್ದಾರೆ. ‘ನಮ್ಮ ಅಥ್ಲೀಟ್‌ಗಳ ಸಾಧನೆಯನ್ನು ರಾಷ್ಟ್ರವೇ ಸಂಭ್ರಮಿಸುತ್ತಿದ್ದು, ಆಟಗಾರರ ಅಚಲ ಸಂಕಲ್ಪ ಮತ್ತು ಕಠಿಣ ಪರಿಶ್ರಮ …
Read More »ಇಸ್ರೇಲ್ ಪ್ರತಿದಾಳಿ: 232 ಪ್ಯಾಲೆಸ್ಟೀನ್ ಜನ ಸಾವು, ಹಮಾಸ್ ನಾಯಕನ ಮನೆ ಹೊಕ್ಕ ಫೈಟರ್‌ಜೆಟ್
ರಮಾಲ್ಲಾಹ (ಪ್ಯಾಲೆಸ್ಟೀನ್): ಪ್ಯಾಲೆಸ್ಟೀನ್ ಉಗ್ರಗಾಮಿ ಪಡೆಯ ಹಮಾಸ್ ದಾಳಿಗೆ ಇಸ್ರೇಲ್ ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸಿದ ಪ್ರತಿದಾಳಿಯಲ್ಲಿ ಸುಮಾರು 232 ಪ್ಯಾಲೆಸ್ಟೀನಿಯನ್ಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಲ್ಲದೇ, ಹಮಾಸ್ ನಾಯಕರನ್ನೂ ಇಸ್ರೇಲ್ ರಕ್ಷಣಾ ಪಡೆ ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದೆ. ಶನಿವಾರ ಬೆಳಗ್ಗೆ 6:30ರ ಸುಮಾರಿಗೆ ಇಸ್ರೇಲ್ ಮೇಲೆ ಹಮಾಸ್ ಉಗ್ರಗಾಮಿಗಳು ಹಠಾತ್ ದಾಳಿ ಮಾಡಿದ್ದಾರೆ. ಇಸ್ರೇಲ್ನತ್ತ ಸಾವಿರಾರು ರಾಕೆಟ್ಗಳನ್ನು ಉಡಾಯಿಸಿದ್ದಾರೆ. ವಾಯು, ಭೂ, ಸಮುದ್ರ ಮೂಲಕ ಉಗ್ರರು …
Read More »ಬುದ್ಧಿಮಾಂದ್ಯನಂತೆ ನಟಿಸಿ ₹50 ಲಕ್ಷ ಮೌಲ್ಯದ 150 ಮೊಬೈಲ್ ಕಳವು; ಐನಾತಿ ಕಳ್ಳ ಕೊನೆಗೂ ಸೆರೆ
ಹೊಸಕೋಟೆ (ಬೆ. ಗ್ರಾಮಾಂತರ): ಬಸ್ ನಿಲ್ದಾಣದಲ್ಲಿ ಪ್ರಯಾಣಿಕನಂತೆ ನಿಲ್ಲುತ್ತಿದ್ದ ಆತ ಬುದ್ಧಿಮಾಂದ್ಯನಂತೆ ನಟಿಸಿ ಜನರಿಂದ ಪರ್ಸ್, ಮೊಬೈಲ್ಗಳನ್ನು ಕದಿಯುತ್ತಿದ್ದ. ಈ ಐನಾತಿ ಕಳ್ಳನನ್ನು ಪೊಲೀಸರು ಬಂಧಿಸಿದ್ದು 50 ಲಕ್ಷ ರೂ ಮೌಲ್ಯದ 150 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಕದ್ದ ಮೊಬೈಲ್ಗಳನ್ನು ಮಾರಾಟ ಮಾಡಿ ಮೋಜಿನ ಜೀವನ ಮಾಡುತ್ತಿದ್ದ ಕಳ್ಳ ಕೊನೆಗೂ ಪೊಲೀಸರ ಬಲೆಯಲ್ಲಿ ಸೆರೆಯಾಗಿದ್ದಾನೆ. ಆರೋಪಿಯನ್ನು ವಿನಯ್ ಎಂದು ಗುರುತಿಸಲಾಗಿದೆ. ಸಂಜೆ ಮತ್ತು ಬೆಳಗಿನ ಹೊತ್ತಲ್ಲಿ ಬಸ್ ನಿಲ್ದಾಣಕ್ಕೆ ಪ್ರಯಾಣಿಕನಂತೆ ಬರುತ್ತಿದ್ದ …
Read More »