ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಯಾದವಾಡದಲ್ಲಿ ಎನ್‍ಆರ್‍ಎಂಎಲ್ ಯೋಜನೆಯಡಿ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಈಗಾಗಲೇ ಮಹಿಳಾ ಮೀಸಲಾತಿಯು ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ 33 ರಷ್ಟು ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ವರ್ಷಗಳಲ್ಲಿ ಪುರುಷರಂತೆ ಮಹಿಳೆಯರು ಕೂಡ ರಾಜಕೀಯ ಸ್ಥಾನಮಾನ ಪಡೆಯಲಿದ್ದಾರೆ ಎಂದು ಶಾಸಕ ಬಾಲಚಂದ್ರ …
Read More »Yearly Archives: 2023
ಆರ.ಎಂ.ಪಿ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾಳೆ.
ಆರ್. ಎಂ. ಪಿ. ವೈದ್ಯ ಮಹಾವೀರ ಬಂಕಾಪುರೆಯವರ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಸಾವನಪ್ಪಿದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣದಲ್ಲಿ ನಡೆದಿದೆ. ಮೃತ ಮಹಿಳೆಯ ಹೆಸರು ಶೇಜಲ ಅನಿಕೇತ್ ಮಾಳಿ (22) ಎಂದು ತಿಳಿದು ಬಂದಿದೆ.ಆರ.ಎಂ.ಪಿ ವೈದ್ಯ ಬಂಕಾಪುರೆಯ ನಿರ್ಲಕ್ಷದಿಂದಲೇ ಆಗಿದೆ ಎಂದು ಪ. ಪಂ. ಸದಸ್ಯ ಪ್ರದೀಪ ಮಾಳಿ ಜತೆಗೆ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.ಶೇಜಲ್ ಮಾಳಿ ಎಂಬ ಗರ್ಭಿಣಿ ಮಹಿಳೆಯು ಬಂಕಾಪುರೆಯ ಆಸ್ಪತ್ರೆಗೆ ಹೆರಿಗೆಗಾಗಿ …
Read More »ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣ: ಪೊಲೀಸರ ಕೈಸೇರಿದ ಆರ್ಟಿಒ ಅಧಿಕಾರಿಗಳ ವರದಿ
ಬೆಂಗಳೂರು: ಕನ್ನಡ ಚಿತ್ರರಂಗದ ನಟ ನಾಗಭೂಷಣ್ ಅವರ ಕಾರು ಅಪಘಾತದಿಂದ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಅಧಿಕಾರಿಗಳ ವರದಿ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರ ಕೈ ಸೇರಿದೆ. ಆರ್.ಟಿ.ಒ ಅಧಿಕಾರಿಗಳಿಂದ ಪೊಲೀಸರಿಗೆ ವರದಿ ಸಲ್ಲಿಕೆ: ಅಪಘಾತದ ಬಳಿಕ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣಾ ಪೊಲೀಸರು ನಟ ನಾಗಭೂಷಣ್ ಅವರ ಕಾರನ್ನು ವಶಕ್ಕೆ ಪಡೆದಿದ್ದರು. ಗಾಡಿಯನ್ನು ಪರಿಶೀಲನೆ ನಡೆಸಿದ್ದ ಆರ್.ಟಿ.ಒ ಅಧಿಕಾರಿಗಳು, ಕಾರಿನ ಟಯರ್, ಕಾರು ಜಖಂಗೊಂಡ ರೀತಿ, …
Read More »100 ಕರ್ನಾಟಕ ಸಾರಿಗೆ ಹಾಗೂ 40 ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ಗಳಿಗೆ ಸಿಎಂ, ಡಿಸಿಎಂ ಚಾಲನೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಇಂದು ಆಯೋಜಿಸಿದ್ದ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸಿದರು. ‘ಪಲ್ಲಕ್ಕಿ’ಗೆ ಚಾಲನೆಇದೇ ವೇಳೆ ಪಾಯಿಂಟ್ ಟು ಪಾಯಿಂಟ್ ಕಾರ್ಯಾಚರಣೆಗೆ ನೂತನ ಮಾದರಿಯ ಮೇಲ್ದರ್ಜೆಗೇರಿಸಿದ ಕರ್ನಾಟಕ ಸಾರಿಗೆ ಬಸ್ಗಳಿಗೂ ಸಿಎಂ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. …
Read More »ಬಾಗಲಕೋಟೆ: RSS ಮುಖಂಡ ಹೃದಯಾಘಾತದಿಂದ ಕಾರಿನಲ್ಲೇ ಸಾವು
ಬಾಗಲಕೋಟೆ: ಆರ್ಎಸ್ಎಸ್ ಮುಖಂಡರೊಬ್ಬರು ಹೃದಯಾಘಾತದಿಂದ ಕಾರಿನಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಬಳಿ ನಡೆದಿದೆ. ಸಿದ್ದು ಚಿಕ್ಕದಾನಿ ಮುಧೋಳ (55) ಮೃತರು. ಇವರು ಆರ್ಎಸ್ಎಸ್ನಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಸಿದ್ದು ಕಳೆದ ರಾತ್ರಿ ಬಾಗಲಕೋಟೆ ಹೋಗಿ ವಾಪಸ್ ಬರುವಾಗ ಈ ಘಟನೆ ಸಂಭವಿಸಿದೆ. ಮುಧೋಳ ಪಟ್ಟಣದ ನಿವಾಸಿಯಾಗಿರುವ ಇವರು, ಶಿವಾಜಿ ಸರ್ಕಲ್ ಬಳಿ ಮಂಜುನಾಥ ಮೊಬೈಲ್ ಶಾಪ್ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಲೋಕಾಪೂರ ಪಟ್ಟಣದ ಸಮೀಪ ಇರುವ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಡೇಂಜರ್ ಸ್ಟುಡೆಂಟ್ಸ್…!! ಗಣಿತದಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕಿಯ ವಿದ್ಯಾರ್ಥಿನಿಯರು ಮಾಡಿದ್ದೇನು?
ಉಳ್ಳಾಲ (ಮಂಗಳೂರು): ಶಾಲಾ ಪರೀಕ್ಷೆಯ ಗಣಿತ ವಿಷಯದಲ್ಲಿ ಒಂದು ಅಂಕ ಕಡಿಮೆ ನೀಡಿದರು ಎಂದು ಸಿಟ್ಟಾಗಿದ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತಮ್ಮ ಗಣಿತ ಶಿಕ್ಷಕಿಯ ನೀರಿನ ಬಾಟಲ್ಗೆ ಅವಧಿ ಮುಗಿದು ಹೋದ ಮಾತ್ರೆಯನ್ನು ಹಾಕಿದ್ದಾರೆ. ಈ ಬಾಟಲ್ನಲ್ಲಿರುವ ನೀರು ಕುಡಿದಿದ್ದರಿಂದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡ ಘಟನೆ ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಈ ಸಂಬಂಧ ಶಾಲೆಯಲ್ಲಿ ಎಸ್ಡಿಎಂಸಿಯಿಂದ ತುರ್ತು ಸಭೆ ನಡೆಸಿ, ವಿದ್ಯಾರ್ಥಿನಿಯರಿಬ್ಬರಿಗೆ ಟಿಸಿ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಧರಿಸಿರುವ …
Read More »ಡಿಜಿಟಲ್ ಮಾಧ್ಯಮ ನ್ಯೂಸ್ಕ್ಲಿಕ್ ಪ್ರಕರಣ: ಪತ್ರಕರ್ತೆ ಮನೆ ಮೇಲೆ ದಾಳಿ!
ಪತನಂತಿಟ್ಟ (ಕೇರಳ): ಚೀನಾ ಕಂಪನಿಗಳಿಂದ ಅಕ್ರಮವಾಗಿ ಹಣ ಪಡೆದ ಆರೋಪದ ಮೇರೆಗೆ ಡಿಜಿಟಲ್ ಮಾಧ್ಯಮ ನ್ಯೂಸ್ಕ್ಲಿಕ್ (Newsclick)ಗೆ ಸಂಬಂಧಿಸಿದಂತೆ ವಿವಿಧ ಸ್ಥಳಗಳಲ್ಲಿ ಇತ್ತೀಚೆಗಷ್ಟೇ ದೆಹಲಿ ಪೊಲೀಸರು ದಾಳಿ ನಡೆಸಿದ್ದರು. ಕೆಲ ಪತ್ರಕರ್ತರ ಮನೆ ಮೇಲೆ ದಾಳಿ ನಡೆಸಲಾಗಿತ್ತು. ಶುಕ್ರವಾರವೂ ದಾಳಿ ನಡೆಸಿದ ದೆಹಲಿ ಪೊಲೀಸರು, ಮಲಯಾಳಿ ಪತ್ರಕರ್ತೆ ಹಾಗೂ ನ್ಯೂಸ್‌ಕ್ಲಿಕ್‌ನ ಮಾಜಿ ಉದ್ಯೋಗಿ ಅನುಷಾ ಪೌಲ್ ಅವರ ಲ್ಯಾಪ್‌ಟಾಪ್ ಮತ್ತು ಫೋನ್ ವಶಪಡಿಸಿಕೊಂಡಿದ್ದಾರೆ. ಕೊಡುಮೋನ್ ಬಳಿಯ ಅವರ ನಿವಾಸದ ಮೇಲೆ ದಾಳಿ …
Read More »ಗಗನಯಾನ ಮಿಷನ್‌ಗಾಗಿ ಇಸ್ರೋ ಮಾನವರಹಿತ ಹಾರಾಟದ ಪರೀಕ್ಷೆ ಪ್ರಾರಂಭ
ಬೆಂಗಳೂರು: ಗಗನಯಾನ ಮಿಷನ್‌ಗಾಗಿ ಇಸ್ರೋ ಮಾನವರಹಿತ ಹಾರಾಟದ ಪರೀಕ್ಷೆಯನ್ನು ಪ್ರಾರಂಭಿಸಲಿದೆ. ಕ್ರೂ ಎಸ್ಕೇಪ್ ಸಿಸ್ಟಮ್‌ನ ಕಾರ್ಯಕ್ಷಮತೆ ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದು ಇಸ್ರೋ ತಿಳಿಸಿದೆ. ಈ ಸಂಬಂಧ ಅದು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಮಾಹಿತಿ ಹಂಚಿಕೊಂಡಿದೆ. ಗಗನಯಾನಕ್ಕೆ ಇಸ್ರೋ ಸಿದ್ಧತೆ… ಮಾನವ ರಹಿತ ನೌಕೆ ಹಾರಾಟ ಪರೀಕ್ಷೆಗೆ ಭರ್ಜರಿ ತಯಾರಿ!ಗಗನಯಾನ ಹೇಗೆಲ್ಲ ಕಾರ್ಯನಿರ್ವಹಿಸುತ್ತದೆ: ಗಗನಯಾನ ಕಾರ್ಯಾಚರಣೆಯ ಸಮಯದಲ್ಲಿ ಗಗನಯಾತ್ರಿಗಳು ಒತ್ತಡಕ್ಕೊಳಗಾದ ಭೂಮಿಯಂತಹ ವಾತಾವರಣದ …
Read More »ಅಥಣಿಯಲ್ಲಿ ಕಾಣೆಯಾದ ವಿದ್ಯಾರ್ಥಿಗಳು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಪತ್ತೆ
ಚಿಕ್ಕೋಡಿ(ಬೆಳಗಾವಿ): ಶಾಲೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮೂರು ಮಕ್ಕಳು ಕಾಣೆಯಾಗಿರುವ ಪ್ರಕರಣದಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮಕ್ಕಳು ಪತ್ತೆಯಾಗಿದ್ದು, ಪೋಷಕರ ಆತಂಕ ದೂರಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನಿವಾಸಿಯ ಮೂವರು ವಿದ್ಯಾರ್ಥಿಗಳು ಶುಕ್ರವಾರ ಸಂಜೆ ಅಥಣಿ ಪಟ್ಟಣದಲ್ಲಿ ಕಾಣೆಯಾಗಿದ್ದರು. ಶಾಲೆಗೆ ಹೋಗಿ ಬರುತ್ತೇನೆ ಎಂದು ಮಕ್ಕಳು ಮರಳಿ ಮನೆಗೆ ಬಾರದೆ ಇದ್ದಾಗ ಕುಟುಂಬಸ್ಥರು ಆತಂಕಗೊಂಡು ಅಥಣಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಕುಟುಂಬಸ್ಥರು ಶೋಧ ಕಾರ್ಯ ನಡೆಸಿದರು, ಹುಡುಕಾಟ ಸಮಯದಲ್ಲಿ …
Read More »