Breaking News

Yearly Archives: 2023

ಕಾವೇರಿ’ದ ಬಂದ್: ಸ್ಯಾಂಡಲ್​ವುಡ್​ ನಟ-ನಟಿಯರಿಂದ ಪ್ರತಿಭಟನೆ.

ಬೆಂಗಳೂರು: ರಾಜ್ಯದೆಲ್ಲೆಡೆ ವಿವಿಧ ಸಂಘಟನೆಗಳಿಂದ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್​ಗೆ ಚಿತ್ರರಂಗ ಕೂಡ ಬೆಂಬಲ ನೀಡಿದೆ. ಕಾವೇರಿಗಾಗಿ ಬೀದಿಗಿಳಿಯಲಿರುವ ಸ್ಯಾಂಡಲ್​ವುಡ್ ತಾರೆಯರು, ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಗುರುರಾಜ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಾಥ್​ ನೀಡಿದರು. ಈಗಾಗಲೇ ನಟರಾದ ಶಿವರಾಜ್​ ಕುಮಾರ್, ಉಪೇಂದ್ರ, ಶ್ರೀಮುರಳಿ, ದರ್ಶನ್, ಲೂಸ್ ಮಾದ ಯೋಗಿ, ಚಿಕ್ಕಣ್ಣ, ಶ್ರೀನಾಥ್, ಓಂ ಸಾಯಿ ಪ್ರಕಾಶ್, ರಘು ಮುಖರ್ಜಿ, ತಬಲ ನಾಣಿ, ಶ್ರೀಮುರಳಿ ವಿಜಯರಾಘವೇಂದ್ರ, ಶ್ರೀನಿವಾಸ್ ಮೂರ್ತಿ, ನಟಿಯರಾದ …

Read More »

ಬುರ್ಖಾ ಧರಿಸಿ, ಖಾಲಿ ಬಿಂದಿಗೆ ಹೊತ್ತು ಪ್ರತಿಭಟನೆಗೆ ಬಂದ ವಾಟಾಳ್ ನಾಗರಾಜ್..

ಬೆಂಗಳೂರು: ಕಾವೇರಿ ನೀರಿಗಾಗಿ ನಡೆಯುತ್ತಿರುವ ಕರ್ನಾಟಕ ಬಂದ್​ ಹಿನ್ನೆಲೆಯಲ್ಲಿ ಟೌನ್​ ಹಾಲ್​ ಬಳಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಾಟಾಳ್​ ನಾಗರಾಜ್​, ಸಾ ರಾ ಗೋವಿಂದು ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದು ಫ್ರೀಡಂ ಪಾರ್ಕ್​​ಗೆ ಕರೆದೊಯ್ದಿದ್ದಾರೆ. ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮುಂದುವರಿಯಲಿದೆ. ಪ್ರತಿಭಟನೆಯಲ್ಲಿ ಭಾಗಿಯಾಗುವ ಮುನ್ನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಬುರ್ಖಾ ಧರಿಸಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಾಟಾಳ್ ನಾಗರಾಜ್, “ಇವತ್ತು ಎರಡು ಬಂದ್ ನಡೆಯುತ್ತಿದೆ. ಒಂದು ಕಾವೇರಿಗಾಗಿ ನಾವು ಕರೆ ಕೊಟ್ಟಿರುವ …

Read More »

ವಿಜೃಂಭಣೆಯಿಂದ ಜರುಗಿದ ಗಣೇಶೋತ್ಸವಕ್ಕೆ ತೆರೆ ಬಿದ್ದಿದೆ.

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ 10 ದಿನಗಳ ಕಾಲ ವಿಜೃಂಭಣೆಯಿಂದ ಜರುಗಿದ ಗಣೇಶೋತ್ಸವಕ್ಕೆ ತೆರೆ ಬಿದ್ದಿದೆ. ಗುರುವಾರ ಸಾರ್ವಜನಿಕ ಗಣೇಶ ಮಂಡಳಿಗಳ ಗಣೇಶ ಮೂರ್ತಿಗಳ ನಿಮಜ್ಜನ ಮೆರವಣಿಗೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ನಗರದ ಕಿರ್ಲೋಸ್ಕರ್ ರಸ್ತೆಯಲ್ಲಿರುವ ಹುತಾತ್ಮ ಚೌಕ್​​ನಲ್ಲಿ ಮೆರವಣಿಗೆಗೆ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಹಾಗೂ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರು ಗಣೇಶನಿಗೆ ಪೂಜೆ ಸಲ್ಲಿಸಿ, ಡೊಳ್ಳು ಬಾರಿಸಿ ಚಾಲನೆ ನೀಡಿದರು. ಇದೇ ವೇಳೆ ಗಣೇಶ …

Read More »

ಬೆಳಗಾವಿಯಲ್ಲಿ ತಟ್ಟದ ಬಂದ್ ಬಿಸಿ, ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ಬೆಳಗಾವಿ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಇಂದು ಕೆಲ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಕೂಡ ಬೆಳ್ಳಂಬೆಳಗ್ಗೆ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಕರವೇ ಜಿಲ್ಲಾಧ್ಯಕ್ಷ ವಾಜೀದ ಹಿರೇಕೂಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. “ನಮ್ಮದು ನಮ್ಮದು ಕಾವೇರಿ ನಮ್ಮದು” ಎಂದು ಘೋಷಣೆ ಕೂಗಿದ ಕರವೇ ಕಾರ್ಯಕರ್ತರ ಪ್ರತಿಭಟನೆಗೆ ರೈತ …

Read More »

ಕಾವೇರಿ ಕಿಚ್ಚು ಹೆಚ್ಚಿದ್ದು ಪ್ರತಿಭಟನಕಾರರ ಆಕ್ರೋಶ

ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಿದ್ದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದ ಸಂಜಯ ವೃತ್ತದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಇನ್ನು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಬಳಿ ಬೆಳ್ಳಂಬೆಳಗ್ಗೆ ಕಾವೇರಿ ನದಿಗಿಳಿದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಸ್ತೂರಿ ಕನ್ನಡ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ತಮಿಳುನಾಡಿಗೆ ನೀರು ಬಿಡಲು ಆದೇಶ ಕೊಟ್ಟ ಸುಪ್ರೀಂ ಕೋರ್ಟ್​ …

Read More »

ಮುಧೋಳ ರನ್ನ ಸಕ್ಕರೆ ಕಾರ್ಖಾನೆ ಪುನಃಶ್ಚೇತನಕ್ಕೆ ಟೆಂಡರ್ ಕರೆಯಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಗೃಹ ಕಚೇರಿ ಕಷ್ಣಾದಲ್ಲಿ ನಡೆದ ಸಭೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023-24ನೇ ಸಾಲಿಗೆ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ಚರ್ಚಿಸಿದರು. ಈ ವೇಳೆ ಮಾತನಾಡಿ, ಕಬ್ಬು ಅರೆಯುವ ಕಾರ್ಯ ಪ್ರಾರಂಭವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ಆಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ಧವಿರುವ ಸಂಸ್ಥೆಗಳು …

Read More »

ಐತಿಹಾಸಿಕ ತಾಣ ಹಂಪಿಗೆ ಒಲಿದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ರಾಷ್ಟ್ರೀಯ ಪ್ರಶಸ್ತಿ

ವಿಜಯನಗರ: ರಾಜ್ಯದ ಹೆಮ್ಮೆಯ ಐತಿಹಾಸಿಕ ತಾಣ ಹಂಪಿಯ ಪ್ರವಾಸೋದ್ಯಮಕ್ಕೆ ಮತ್ತೊಂದು ಗೌರವ ಸಂದಿದೆ. ಕೇಂದ್ರ ಸರ್ಕಾರದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ರಾಷ್ಟ್ರೀಯ ಪ್ರಶಸ್ತಿಗೆ ಹಂಪಿ ಆಯ್ಕೆಯಾಗಿದೆ. ಹಂಪಿ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಮಾನ್ಯತೆಯ ಗೌರವ ಒಲಿದಿದೆ. ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರವಾಸೋದ್ಯಮ ರಾಜ್ಯ ಖಾತೆ ಸಚಿವ ಅಜಯ್ ಭಟ್ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಷಣ್ಮುಖ ಗೌಡ ಪ್ರಶಸ್ತಿ ಸ್ವೀಕಾರ‌ ಮಾಡಿದರು. ಪ್ರಶಸ್ತಿಗೆ 15 …

Read More »

ರಾಯಚೂರು ಜಿಲ್ಲೆಯ ಹಟ್ಟಿ ಪಟ್ಟಣದಲ್ಲಿ ಆಫ್ರಿಕನ್ ಸ್ವೈನ್ ಫ್ಲೂ ಪತ್ತೆ

ರಾಯಚೂರು: ಬಿಸಿಲೂರು ರಾಯಚೂರು ಜಿಲ್ಲೆಯಲ್ಲಿ ಆಫ್ರಿಕನ್ ಸ್ವೈನ್ ಫ್ಲೂ ಜ್ವರ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಮೂಡಿಸಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ(ಚಿನ್ನದ ಗಣಿ)ಯಲ್ಲಿ ಹಂದಿಗಳಲ್ಲಿ ಆಫ್ರಿಕನ್ ಸ್ವೈನ್ ಫ್ಲೂ ಕಾಣಿಸಿಕೊಂಡ ಪರಿಣಾಮ, ಅವು ಸಾವನ್ನಪ್ಪುತ್ತಿವೆ. ಹೀಗಾಗಿ ಅಲ್ಲಿನ ಸ್ಥಳೀಯರಿಗೆ ಜ್ವರ ಆವರಿಸುತ್ತಾ ಎಂಬ ಭೀತಿಯಲ್ಲಿ ಜನರು ಕಾಲ ಕಳೆಯುತ್ತಿದ್ದಾರೆ. ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ಸುಮಾರು 100ಕ್ಕೂ ಹಂದಿಗಳು ಆಫ್ರಿಕನ್ ಸ್ವೈನ್ ಫ್ಲೂದಿಂದ ಮೃತಪಟ್ಟಿವೆ. ಹಂದಿಗಳ ಸಾವು ಕುರಿತಂತೆ ಮಾದರಿ ಪರೀಕ್ಷೆಗೆ ಒಳಪಡಿಸಿದ …

Read More »

ಜಂಬೂಸವಾರಿಗೆ ಗಜಪಡೆ ಸಿದ್ಧತೆ

ಮೈಸೂರು : ವಿಶ್ವವಿಖ್ಯಾತಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಅಭಿಮನ್ಯು ನೇತೃತ್ವದ ಗಜಪಡೆಯ ತಾಲೀಮು ನಡೆಸಲಾಗುತ್ತಿದೆ. ಜೊತೆಗೆ ವಿಶೇಷ ಆಹಾರ ಹಾಗೂ ಭಾರ ಹೊರುವ ತಾಲೀಮನ್ನು ನಡೆಸಲಾಗುತ್ತಿದ್ದು, ಈ ಸಿದ್ಧತೆ ಬಗ್ಗೆ ಡಿಸಿಎಫ್ ಸೌರವ್ ಕುಮಾರ್ ಅವರು ಈಟಿವಿ ಭಾರತಕ್ಕೆ ನೀಡಿದ ಸಂದರ್ಶನದಲ್ಲಿ ವಿವರಿಸಿದ್ದಾರೆ. ದಸರಾ ಜಂಬೂಸವಾರಿಗೆ ಗಜಪಡೆ ತಾಲೀಮು ಸೇರಿದಂತೆ ಎಲ್ಲಾ ರೀತಿಯಲ್ಲೂ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ 5 ಆನೆಗಳಿಗೆ ಭಾರ ಹಾಕಿ ತಾಲೀಮು ನಡೆಸಿದ್ದು, ಈ ವೇಳೆ ಬರುವ …

Read More »

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿ- ಮೋಹನ್​ ಲಿಂಬಿಕಾಯಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚಿಸಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನಮ್ಮ ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಕರೆಸಿದ್ದರು. ಅವರೊಂದಿಗೆ ಸುದೀರ್ಘವಾದ ಚರ್ಚೆಯೂ ಆಯಿತು. ಚರ್ಚೆಯಾಗಿ ಅವರು ಪೂರಕವಾಗಿ ಸ್ಪಂದಿಸುತ್ತೇವೆ ಎಂದು …

Read More »