ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ನಡೆದ ಜನತಾ ದರ್ಶನದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಮಹಿಳೆಯರು, ವೃದ್ಧರು, ಅಂಗವಿಕಲರು ಸೇರಿ ನೂರಾರು ಜನರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಬಳಿ ತೋಡಿಕೊಂಡರು. ಜಿಲ್ಲಾಧಿಕಾರಿ, ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆ ಆಲಿಸಿದರು. ವಿಠಲ ದೇಸಾಯಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಜಿಲ್ಲಾಡಳಿತದಿಂದ 8 ಕೇಂದ್ರಗಳನ್ನು ತೆರೆಯಲಾಗಿತ್ತು. ಅರ್ಜಿ ಸಲ್ಲಿಸಿದ ಬಳಿಕ ವೇದಿಕೆಗೆ ಆಗಮಿಸಿದ ಜನರು, …
Read More »Yearly Archives: 2023
ಕಿತ್ತೂರು ಉತ್ಸವಕ್ಕೆ 5 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಕಳಿಸಲು ನಿರ್ಧಾರ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ : “ಕಳೆದ ವರ್ಷ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಿಸಿ ಎರಡು ಕೋಟಿ ರೂಪಾಯಿ ಅನುದಾನ ನೀಡಿತ್ತು. ಅದೇ ರೀತಿ ಈ ಬಾರಿ ಐದು ಕೋಟಿ ರೂಪಾಯಿ ಅನುದಾನ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ಐದು ಕೋಟಿ ರೂಪಾಯಿ ಅನುದಾನ …
Read More »ಬೆಳಗಾವಿ: ಲಾರಿ-ಕ್ರೂಸರ್ ನಡುವೆ ಡಿಕ್ಕಿ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ
ಬೆಳಗಾವಿ : ಸೆಪ್ಟೆಂಬರ್ 15ರಂದು ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದವರಿದ್ದ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಐದು ಜನ ಮೃತಪಟ್ಟಿದ್ದರು. ಇವತ್ತು ಮತ್ತೆ ಬಸವರಾಜ್ ಗಿರಿಮಲ್ಲ ಆಜೂರ (32) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಡಚಿ ಗ್ರಾಮದ ಆಜೂರ್ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡು ಸ್ವ ಗ್ರಾಮಕ್ಕೆ ಆಗಮಿಸುವ ವೇಳೆ ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿಯ ಕಡಪ-ಚಿತ್ತೂರು …
Read More »ಶಾಲಾ ಬಾಲಕರಿದ್ದ ಬಸ್ಸನ್ನು ಪ್ರವಾಹದ ನೀರಿನಲ್ಲಿ ನುಗ್ಗಿಸಿದ ಚಾಲಕ
ಬೆಳಗಾವಿ : ಮಳೆಯ ಆರ್ಭಟಕ್ಕೆ ಹಳ್ಳದಲ್ಲಿ ಉಂಟಾಗಿದ್ದ ಪ್ರವಾಹದ ನೀರಿನಲ್ಲಿ ಶಾಲಾ ಬಾಲಕರಿದ್ದ ಬಸ್ಸನ್ನು ಎಗ್ಗಿಲ್ಲದೆ ನುಗ್ಗಿಸಿ ಚಾಲಕ ಚಲಾಯಿಸಿದ್ದು, ಇನ್ನೇನು ಬಸ್ ನೀರಲ್ಲಿ ಕೊಚ್ವಿ ಹೋಗುವ ಮಟ್ಟಕ್ಕೆ ಬಂದಾಗ ಎಚ್ಚರಗೊಂಡ ಗ್ರಾಮಸ್ಥರು ಶಾಲಾ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಹುಕ್ಕೇರಿ ತಾಲೂಕಿನಲ್ಲಿ ಮಂಗಳವಾರ ಸಂಜೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿ, ಹಳ್ಳಗಳು …
Read More »ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್
ಗೋಕಾಕ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಂದು ಸಂಜೆ ಇಬ್ಬರು ಯೋಧರ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ ನಡೆದಿತ್ತು ಎನ್ನಲಾಗಿದೆ. ಅವರಿಬ್ಬರ ಜಗಳ ವಿಕೋಪಕ್ಕೆ ತಿರುಗಿ ಯೋಧರೊಬ್ಬರು ಮತ್ತೊಬ್ಬ ಯೋಧನ ಮೇಲೆ ಡಬಲ್ ರಿವಾಲ್ವಾರ ಗನ್ ನಿಂದ ಪೈರ್ ಮಾಡಿದ್ದಾರೆ. ಪೈರಿಂಗ್ ಮಾಡಿದ …
Read More »ಹಿರಿಯ ನಟಿ ವಹೀದಾ ರೆಹಮಾನ್ಗೆ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ಘೋಷಣೆ
ಭಾರತೀಯ ಚಿತ್ರರಂಗದ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿದೆ. ಭಾರತೀಯ ಚಿತ್ರರಂಗದ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಿತ್ರರಂಗದಲ್ಲಿ ಜೀವಮಾನ ಶ್ರೇಷ್ಠ ಸಾಧನೆಗೆ ಈ ಗೌರವ ನೀಡಲಾಗುತ್ತದೆ. ಅನುರಾಗ್ ಸಿಂಗ್ ಠಾಕೂರ್ ಟ್ವೀಟ್: ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ …
Read More »ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ಅಭೂತ ಪೂರ್ವ ಸ್ಪಂದನೆ
ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಾಶ್ ಹುಕ್ಕೇರಿ ಹೇಳಿದರು. ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ನಡೆದ ಜನತಾ ದರ್ಶನಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ವೇದಿಕೆಗೆ ಆಗಮಿಸಿ ಅಹವಾಲುಗಳನ್ನು ಸಲ್ಲಿಸಿದರು. ಇದಲ್ಲದೇ ಸಭಾಭವನದಲ್ಲಿ ಸ್ಥಾಪಿಸಲಾಗಿದ್ದು ಎಂಟು ಕೌಂಟರ್ ಗಳಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತವು …
Read More »ಬರ ಪರಿಹಾರಕ್ಕೆ ಸರ್ಕಾರಕ್ಕೆ ಬೆಳಗಾವಿಯ ಕಡೋಲಿ ರೈತರ ಆಗ್ರಹ
ಬೆಳಗಾವಿ: ಮುಂಗಾರು ಮಳೆ ಕೈ ಕೊಟ್ಟಿದ್ದು ಜಿಲ್ಲೆಯ ಅನ್ನದಾತರು ಮುಂದೇನು ಎಂಬ ಚಿಂತೆಯಲ್ಲಿದ್ದಾರೆ. ಆಲೂಗಡ್ಡೆ ಬೆಳೆದಿರುವ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ರೈತರು ಬೆಳೆ ಹಾನಿ ಭೀತಿಯಲ್ಲಿದ್ದು, ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ. ಒಂದು ವರ್ಷ ಅತಿವೃಷ್ಟಿ, ಮತ್ತೊಂದು ವರ್ಷ ಅನಾವೃಷ್ಟಿ. ಇದು ರೈತರ ಜೀವನವನ್ನು ಕಂಗಾಲು ಮಾಡಿಬಿಟ್ಟಿದೆ. ಮಳೆ ನಂಬಿ ಸಾಲ ಮಾಡಿ ಬಿತ್ತಿದ್ದ ಆಲೂಗಡ್ಡೆ ಬೀಜಗಳು ಭೂಮಿಯಲ್ಲೇ ಕಮರಿವೆ. ಹಾಕಿದ ಗೊಬ್ಬರ ನೀರಿಲ್ಲದ್ದೇ ಮೇಲೆಯೇ ಇದೆ. ಇನ್ನೂ ಒಂದಿಷ್ಟು ಬೆಳೆದರೂ …
Read More »ಚಿಂಚೋಳಿ ಜನತಾ ದರ್ಶನ ಕಾರ್ಯಕ್ರಮ: 800ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ, 250 ಸ್ಥಳದಲ್ಲಿಯೇ ವಿಲೇವಾರಿ
ಕಲಬುರಗಿ : ಚಿಂಚೋಳಿಯಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅಂದಾಜು 800ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದು, ಆಧಾರ್ ಸಂಬಂಧಿತ 250ಕ್ಕೂ ಹೆಚ್ಚು ಅರ್ಜಿ ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಗಿದೆ. ಉಳಿದಂತೆ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಲಾಗುತ್ತದೆ. 2-3 ದಿನದಲ್ಲಿ ಆದ್ಯತೆ ಮೇರೆಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ, ಜೆಸ್ಕಾಂ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ. …
Read More »ಬೆಳಗಾವಿಯಲ್ಲಿ ಸರ್ಕಾರಿ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳ ಗಾಯ
ಬೆಳಗಾವಿ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 20 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನಡೆದಿದೆ. ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗಕ್ಕೆ ಬಸ್ ಸಂಚರಿಸುತ್ತಿತ್ತು. 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಪಾಟಾ ಕಟ್ ಆದ ಪರಿಣಾಮ ಬಿಜಗುಪ್ಪಿ ಸಮೀಪದ ರಸ್ತೆ ಪಕ್ಕದ ಜಮೀನಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಬಸ್ನಲ್ಲಿ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಘಟನೆ ನಡೆದ ತಕ್ಷಣವೇ 108ಕ್ಕೆ ಕರೆ ಮಾಡಿ ಗಾಯಾಳುಗಳನ್ನು ರಾಮದುರ್ಗ …
Read More »