Breaking News

Yearly Archives: 2023

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರತಿಭಟನೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಪ್ರತಿಭಟನೆಯಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು. ಹಾಗಾಗಿ ಬಂದ್​ನಿಂದ ಜನಸಾಮಾನ್ಯರಿಗೆ ತೊಂದರೆ ಆಗಬಾರದೆಂಬ ಕಾರಣಕ್ಕಾಗಿ 144 ಸೆಕ್ಷನ್ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿಂದು ಹೇಳಿಕೆ ನೀಡಿದರು.   ಎರಡು ದಿನಗಳ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಪ್ರವಾಸದ ಹಿನ್ನೆಲೆಯಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ, ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಪ್ರತಿಭಟನೆ ಹೇಗೆ ಸಂವಿಧಾನಾತ್ಮಕ …

Read More »

ಬಂದ್‌’ಬಸ್ತ್​ಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾದ ಆಹಾರದಲ್ಲಿ ಸತ್ತ ಇಲಿ!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್​ ನಡೆಸುತ್ತಿವೆ. ಈ ಸಂದರ್ಭದಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ತಿಂಡಿಯಲ್ಲಿ ಇಲಿ ಪತ್ತೆಯಾಗಿದೆ. ಯಶವಂತಪುರ ಸಂಚಾರ ಠಾಣಾ ಸಿಬ್ಬಂದಿಯೊಬ್ಬರು ಪೊಲೀಸ್‌ ಇಲಾಖೆಯಿಂದ ಸರಬರಾಜು ಮಾಡಲಾಗಿದ್ದ ತಿಂಡಿಯ ಪೊಟ್ಟಣ ತೆರೆದಾಗ ಇಲಿ ಕಂಡುಬಂದಿದೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ವಿಷಯ ತಿಳಿಸಿದ್ದು, ಯಾರೂ ಸಹ ಆ ಆಹಾರ ಸೇವಿಸದಂತೆ ಸೂಚನೆ ನೀಡಿದ್ದಾರೆ. …

Read More »

ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್‌ಗೆ ಎದೆನೋವು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟರಾದ ಬ್ಯಾಂಕ್ ಜನಾರ್ಧನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ರ ಗುರುಪ್ರಸಾದ್ ಈಟಿವಿ ಭಾರತದ ಜೊತೆ ಮಾತನಾಡಿ, ”ತಂದೆಯವರಿಗೆ ಹೃದಯಾಘಾತ ಆಗಿಲ್ಲ. ಕೆಲವು ಮಾಧ್ಯಮಗಳಲ್ಲಿ ಹೃದಯಾಘಾತ ಅಂತಾ ಹೇಳಲಾಗುತ್ತಿದೆ. ಅದು ಸುಳ್ಳು. ಅವರಿಗೆ ಬಿಪಿ ಜಾಸ್ತಿಯಾಗಿ ಆಗಾಗ ಎದೆನೋವು ಕಾಣಿಸಿಕೊಳ್ಳುತ್ತದೆ. ಶುಕ್ರವಾರ ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ನಡೆಯುತ್ತಿದೆ. ಹೃದಯಕ್ಕೆ ಎರಡು ಸ್ಟಂಟ್​ಗಳನ್ನು ಹಾಕಲಾಗಿದೆ. ಈಗ ಆರಾಮವಾಗಿದ್ದಾರೆ” ಎಂದು ಮಾಹಿತಿ ನೀಡಿದರು. …

Read More »

ನಿಮಗೆ ಕೆಲಸ ಮಾಡೋ ಆಸಕ್ತಿ ಇಲ್ಲ ಅಂದ್ರೆ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಖಡಕ್​ ವಾರ್ನಿಂಗ್​

ಬೆಂಗಳೂರು: ಸರ್ಕಾರಕ್ಕೆ ಒಳ್ಳೆ ಹೆಸರು ತರುವ ಕೆಲಸ ಮಾಡಬೇಕು, ಇಲ್ಲದಿದ್ದರೆ ಬೇರೆ ಜಾಗ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬನಶಂಕರಿಯ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2023-24 ಮೊದಲ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಹಳ್ಳಿ, ಪ್ರತಿ ಪಂಚಾಯಿತಿಯಲ್ಲೂ ಕುಡಿಯುವ ನೀರಿನ ಸ್ಥಿತಿಗತಿ ಅರಿತು ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಬೇಕು. ಮಳೆ ಕೊರತೆಯಿಂದ ಕುಡಿಯುವ ನೀರಿನ …

Read More »

ಪರಿಹಾರ ನೀಡಲು ಆರಂಭಿಸಿದ ನಂತರ ರೈತ ಆತ್ಮಹತ್ಯೆಗಳು ಹೆಚ್ಚಾಗಿವೆ ಎಂದು ಹೇಳಿಲ್ಲ: ಸಚಿವ ಶಿವಾನಂದ ಪಾಟೀಲ್ ಸ್ಪಷ್ಟನೆ

ಹಾವೇರಿ : ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮತ್ತು ಹಾವೇರಿ ಜಿಲ್ಲೆಯ ರೈತರ ನಡುವಿನ ಜಟಾಪಟಿಗೆ ತೆರೆಬಿದ್ದಿದೆ. ಸೋಮವಾರ ನಡೆದ ರೈತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ನಾನು ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಆರಂಭಿಸಿದ ನಂತರ ರೈತರ ಆತ್ಮಹತ್ಯೆಗಳು ಹೆಚ್ಚಾಗಿವೆ ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಈ ರೀತಿ ಹೇಳಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಜೊತೆಗೆ ಯಾರದಾದರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದರು. ಈ …

Read More »

ಜನತಾ ದರ್ಶನಕ್ಕೆ ಉತ್ತಮ‌ ಸ್ಪಂದನೆ: ಒಟ್ಟು 6,684 ಅಹವಾಲು, ಮನವಿ ಸ್ವೀಕಾರ.. 6,663 ಅರ್ಜಿ ವಿಲೇವಾರಿ ಬಾಕಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.   ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ. ಸಂಜೆ 6:30 ರ ವೇಳೆಗೆ ಲಭ್ಯವಿದ್ದ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, …

Read More »

ಕಾವೇರಿ ಕಿಚ್ಚು: ರೈತರ ಹೋರಾಟಕ್ಕೆ ಹಿರಿಯ ನಟಿ ಲೀಲಾವತಿ ಸಾಥ್

ಮಂಡ್ಯ: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶದ ಬೆನ್ನಲ್ಲೇ ಸಕ್ಕರೆ ನಗರಿ ಮಂಡ್ಯದಲ್ಲಿ ಅನ್ನದಾತರನ್ನ ಕೆರಳುವಂತೆ ಮಾಡಿದೆ. ದಿನದಿಂದ ದಿನಕ್ಕೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ಸೋಮವಾರ ರೈತರ ಹೋರಾಟಕ್ಕೆ ಕಮಲಪಡೆ ಹಾಗೂ ಚಿತ್ರನಟರು ಸಾಥ್ ನೀಡಿದ್ರು. ದಿನದಿಂದ ದಿನಕ್ಕೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ಸೋಮವಾರ ರೈತರ ಹೋರಾಟಕ್ಕೆ ಕಮಲಪಡೆ ಹಾಗೂ ಚಿತ್ರನಟರು ಸಾಥ್ ನೀಡಿದ್ರು. ಹೋರಾಟದ ಕಾವು ಉಗ್ರ ಸ್ವರೂಪ ಪಡೆದಿತ್ತು. ಶಾಸಕ ಬಿ …

Read More »

ಶಿವಮೊಗ್ಗದಲ್ಲಿ ನಡೆದ ಜನತಾ ದರ್ಶನ

ಶಿವಮೊಗ್ಗ: ಜನತಾ ದರ್ಶನವನ್ನು ಜಿಲ್ಲಾ ಮಟ್ಟದಲ್ಲಿ ನಡೆಸಿದಂತೆ, ತಾಲೂಕು ಮಟ್ಟದಲ್ಲೂ ನಡೆಸುವ ಉದ್ದೇಶವಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗ ಜಿಲ್ಲಾ ಮಟ್ಟದ ಪ್ರಥಮ ಜನತಾ ದರ್ಶನದಲ್ಲಿ ಭಾಗಿಯಾಗಿ ಜನರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಅರ್ಜಿ ಪಡೆಯುವುದಲ್ಲ. ಅರ್ಜಿ ಪಡೆದ ಮೇಲೆ ಅದನ್ನು ವಿಲೇವಾರಿ ಮಾಡಿ ಕೆಲಸ ಆಗಬೇಕು. ಸಾಮಾನ್ಯ ಜನರು ಸಹ ಟೋಕನ್ ಪಡೆದು ಆಯಾ ಇಲಾಖೆಗೆ ಹೋಗಿ ಫಾಲೋಅಪ್ ಮಾಡಬೇಕು. ಅವರಿಗೆ ಗೂತ್ತಾಗದೆ ಹೋದರೆ, ನಮ್ಮ …

Read More »

ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಬೆಂಗಳೂರು ಬಂದ್

ನಾಳೆ ನಡೆಯುವ ಬೆಂಗಳೂರು ಬಂದ್​ಗೆ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಮಂಗಳವಾರದ ಬೆಂಗಳೂರು ಬಂದ್‌ಗೆ ರಾಜ್ಯ ರಾಜಧಾನಿ ಬಹುತೇಕ ಸ್ತಬ್ಧವಾಗಲಿದೆ. ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಬೆಂಗಳೂರು ಬಂದ್ ಆಗಲಿದೆ. ಶಾಲಾ ಕಾಲೇಜುಗಳಿಗೂ ರಜೆ ಇರಲಿದೆ. ಸಿನಿಮಾ, ಟ್ಯಾಕ್ಸಿ, ಐಟಿ-ಬಿಟಿ, ಹೋಟೆಲ್ ಮಾಲೀಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಬೇಕೆಂದು ಸಂಘಟನೆಗಳು ಕೋರಿವೆ. …

Read More »

ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಉರುಳುವ ಹಂತದಲ್ಲಿರುವ ಬೃಹತ್ ಮರಗಳು : ತೆರವುಗೊಳಿಸಲು ಸಾರ್ವಜನಿಕರ ಒತ್ತಾಯ

ಬೆಳಗಾವಿ : ನಗರ ವ್ಯಾಪ್ತಿಯಲ್ಲಿ ಹಲವು ಬೃಹತ್​ ಮರಗಳು ಉರುಳುವ ಹಂತ ತಲುಪಿದ್ದು, ಈ ಮರಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಹಿಂದೆ ಬಿರುಗಾಳಿ ಸಹಿತ ಭಾರಿ ಮಳೆಗೆ ನಗರ ವ್ಯಾಪ್ತಿಯಲ್ಲಿ ಹಲವು ಕಡೆ ಮರಗಳು ಉರುಳಿ ಜೀವಹಾನಿ ಸಂಭವಿಸಿತ್ತು. ಆದರೂ ಅರಣ್ಯ ಇಲಾಖೆ ಮತ್ತು ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ 2022ರ ಸೆಪ್ಟೆಂಬರ್​ನಲ್ಲಿ ಬೆಳಗಾವಿ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿತ್ತು. ಸೆಪ್ಟೆಂಬರ್ 13ರಂದು …

Read More »