ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಕೈ ಹೊಸೂರ್ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಸಿದ್ದಲಿಂಗಪ್ಪ ಬಡಕೂರಿ, ಸಿಂಗಪ್ಪ ಮರಕಟ್ಟಿ, …
Read More »Yearly Archives: 2023
ಬೆಳಗಾವಿ ಗಣೇಶ ಮಂಡಳಿಗೆ 75 ವರ್ಷ ,75ನೇ ವರ್ಷ ತಲುಪಿದ ಹಿನ್ನೆಲೆ ರಕ್ತದಾನ ಶಿಬಿರ
ಬೆಳಗಾವಿ: ಕುಂದಾನಗರಿಯ ಸಾರ್ವಜನಿಕ ಗಣೇಶ ಮಂಡಳಿಗಳು ಶ್ರೀಗಣೇಶನ ಆರಾಧನೆ ಜೊತೆಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲಿಯೂ ತೊಡಗಿಕೊಂಡಿವೆ. ಆ ನಿಟ್ಟಿನಲ್ಲಿ ಮಹಾದ್ವಾರ ರೋಡ್ ಮಹಾದ್ವಾರ ಚೌಕ್ನ ಸಾರ್ವಜನಿಕ ಗಣೇಶೋತ್ಸವ ಮಂಡಳಿ ರಚನೆಗೊಂಡು 75ನೇ ವರ್ಷ ತಲುಪಿದ ಹಿನ್ನೆಲೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಇಂದು ಯಶ್ ಆಸ್ಪತ್ರೆ, ಮಹಾವೀರ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಪುರುಷರ ಜೊತೆಗೆ ಮಹಿಳೆಯರು ಕೂಡ ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಿದರು. 70ಕ್ಕೂ ಅಧಿಕ …
Read More »ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ತೊಂದರೆ ಇಲ್ಲ: ಸಚಿವ ಪರಮೇಶ್ವರ್
ಬೆಂಗಳೂರು: ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ನಾವು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಶೇ.45ರಷ್ಟು ಮತ ಪ್ರಮಾಣ ಗಳಿಸಿದ್ದೆವು. ಅದನ್ನು ಲೋಕಸಭೆ ಚುನಾವಣೆಯಲ್ಲೂ ಉಳಿಸುವ ಸಾಧ್ಯತೆ ಇದೆ. ಅದರಿಂದ ನಮಗೇನು ತೊಂದರೆ ಆಗಲ್ಲ. ಅವರು ಮೈತ್ರಿ ಮಾಡಿಕೊಳ್ಳಲಿ. …
Read More »ಖಾನಾಪುರ ತಾಲೂಕಿನಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆ,ಕಲ್ಲು ತೂರಾಟ !
ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳು ಮಧ್ಯೆ ನಡೆದ ಗಲಾಟೆಯಲ್ಲಿ ಕಲ್ಲು ತೂರಾಟ ನಡೆಸಿ ಬಿಗುವಿನ ಸ್ಥಿತಿ ನಿರ್ಮಾಣವಾಗಿರುವ ಘಟನೆ ಖಾನಾಪುರ ತಾಲೂಕಿನ ತೋಪಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಹಿನ್ನೆಲೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಗುರುವಾರ ರಾತ್ರಿ ಎರಡು ಗುಂಪುಗಳ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು, ಶುಕ್ರವಾರ ಎರಡು ಗುಂಪುಗಳ ನಡುವೆ ಶಾಸಕ ವಿಠ್ಠಲ ಹಲಗೇಕರ್ ಸಂಧಾನ ಸಭೆ ನಡೆಸಿದರು. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ …
Read More »ಉತ್ತರಕನ್ನಡ ಜಿಲ್ಲೆಯ 34 ಜನರಲ್ಲಿ ಇಲಿಜ್ವರ ಪತ್ತೆ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಜೊತೆಗೆ ಇಲಿ ಜ್ವರವೂ ಜನರಲ್ಲಿ ತೀವ್ರಗತಿಯಲ್ಲಿ ಹರಡುತ್ತಿದೆ. ಕೆಲವೇ ದಿನಗಳಲ್ಲಿ ಸುಮಾರು 34 ಜನರಲ್ಲಿ ಕಾಣಿಸಿಕೊಂಡಿರುವ ಇಲಿ ಜ್ವರ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಇಲಿ ಜ್ವರದ ಬಗ್ಗೆ ಸಕಾಲದಲ್ಲಿ ಆರೋಗ್ಯ ಇಲಾಖೆ ಜಾಗೃತಿ ಮೂಡಿಸದೆ ಇದ್ದಿದ್ದರಿಂದ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ. ಉತ್ತರಕನ್ನಡ ಜಿಲ್ಲಾದ್ಯಂತ ಕಳೆದ ಎರಡು ತಿಂಗಳಿನಿಂದ ಜ್ವರದ ಪ್ರಕರಣಗಳು …
Read More »ಜಾಮೀನಿನ ಮೇಲೆ ಹೊರಬಂದು ಮತ್ತೆ ಡ್ರಗ್ಸ್ ಮಾರಾಟ: ಮಂಗಳೂರಲ್ಲಿ ಇಬ್ಬರು ಅರೆಸ್ಟ್
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಿ ಬಂಧಿತನಾಗಿದ್ದ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದ 15 ದಿನದಲ್ಲಿ ಮತ್ತೆ ಎಂಡಿಎಂಎ ಮಾರಾಟ ಮಾಡಿ, ಮಂಗಳೂರಿನ ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದಾನೆ. ಉಪ್ಪಿನಂಗಡಿಯ ಅಬ್ದುಲ್ ಅಜೀಜ್ ಯಾನೆ ಅಜೀಜ್ ಎಂಬಾತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು …
Read More »ಮಹಿಳಾ ಮೀಸಲಾತಿ.. ದಿಕ್ಕು ತಪ್ಪಿಸುವ ತಂತ್ರ ಅನುಸರಿಸಿದ ಸರ್ಕಾರ: ರಾಹುಲ್ ಗಾಂಧಿ
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಲವಾಗಿ ಪ್ರತಿಪಾದಿಸಿದರು. ಜನಗಣತಿ ಮತ್ತು ಸೀಮಾರೇಖೆಯ ಷರತ್ತುಗಳನ್ನು ಸೇರಿಸುವುದನ್ನು ಟೀಕಿಸಿದರು. ಈ ಷರತ್ತುಗಳು ಮಸೂದೆಯ ಅನುಷ್ಠಾನವನ್ನು ಅನಗತ್ಯವಾಗಿ ವಿಳಂಬಗೊಳಿಸುತ್ತವೆ ಎಂದು ಕಿಡಿಕಾರಿದರು. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಸರ್ಕಾರ ಜಾತಿವಾರು ಜನಗಣತಿ ನಡೆಸಬೇಕು. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಜಾತಿ ಗಣತಿ ಮಾಹಿತಿ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು. ”ಮಹಿಳೆಯರಿಗೆ ಇಂದೇ …
Read More »ಕೈಕೊಟ್ಟ ಮುಂಗಾರು ಬೆಳೆ ಹಾನಿ: ರೈತರ ನೆರವಿಗೆ ಧಾವಿಸಿದ ಸಚಿವ ಸತೀಶ ಜಾರಕಿಹೊಳಿ.. ಮೋಡ ಬಿತ್ತನೆಗೆ ಸಿದ್ಧತೆ
ಬೆಳಗಾವಿ: ಮುಂಗಾರು ಮಳೆ ತೀವ್ರ ಕೊರತೆಯಿಂದ ಬೆಳಗಾವಿ ಜಿಲ್ಲೆಯ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಷ್ಟಪಟ್ಟು ಬಿತ್ತಿದ್ದ ಬೆಳೆಗಳು ಈಗ ಹಾನಿಗೆ ಒಳಗಾಗಿದ್ದು ರೈತರಲ್ಲಿ ಆತಂಕ ಶುರುವಾಗಿದೆ. ಈ ವೇಳೆ ರೈತರ ನೆರವಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಧಾವಿಸಿದ್ದು, ತಮ್ಮದೇ ಒಡೆತನದ ಬೆಳಗಾಂ ಶುಗರ್ಸ್ದಿಂದ ಮೋಡ ಬಿತ್ತನೆಗೆ ಸಿದ್ಧತೆ ಆರಂಭಿಸಿದ್ದಾರೆ. ಈ ಕಾರ್ಯಕ್ಕೆ ರಾಜ್ಯ ಸರ್ಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಒಂದು ತಿಂಗಳು ವಿಳಂಬವಾಗಿ ಆರಂಭವಾದ ಮುಂಗಾರು …
Read More »ಪ್ರಮೋದ್ ಮುತಾಲಿಕ್ ವಿರುದ್ಧ ದೂರು ನೀಡಿದ ಮುಸ್ಲಿಂ ಮುಖಂಡರು
ಹುಬ್ಬಳ್ಳಿ: ಅನ್ಯ ಧರ್ಮಗಳ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಅವರ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ನಾಯಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರಿಗೆ ದೂರು ನೀಡಿದರು. ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಗುರುವಾರ ಭೇಟಿ ನೀಡಿದ್ದ ಪ್ರಮೋದ್ ಮುತಾಲಿಕ್, …
Read More »ಈಗ ಬಿಜೆಪಿಗೆ, ರಾಜ್ಯಕ್ಕೆ ಅನಂತಕುಮಾರ್ ಅಗತ್ಯವಿತ್ತು: ಬಸವರಾಜ ಬೊಮ್ಮಾಯಿ
ಬೆಂಗಳೂರು : ಕೇಂದ್ರ ಸರ್ಕಾರದ ಮಟ್ಟದಲ್ಲಿ ಕರ್ನಾಟಕದ ವಿಚಾರ ಬಂದಾಗ ಅನಂತಕುಮಾರ್ ಅವರು ಆಪದ್ಬಾಂಧವರಾಗಿದ್ದರು. ಈಗ ರಾಜ್ಯಕ್ಕೆ ಮತ್ತು ಬಿಜೆಪಿಗೆ ಅವರ ಅಗತ್ಯವಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರದ ಮಾಜಿ ಸಚಿವ ದಿ ಅನಂತಕುಮಾರ್ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಅನಂತಕುಮಾರ್ 64 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನಂತಕುಮಾರ್ ಅವರು ಅನಂತವಾದ ಬದುಕನ್ನು ಅಲ್ಪ ಸಮಯದಲ್ಲಿ ಇದ್ದು, ಯಶಸ್ಸು ಸಾಧನೆಗಳನ್ನು ಮಾಡಿ ಅತಿ ಚಿಕ್ಕ ವಯಸ್ಸಿನಲ್ಲಿ …
Read More »