ಬೆಂಗಳೂರು: ಇವತ್ತು ಕಾವೇರಿ ನೀರಿನ ವಿಚಾರದಲ್ಲಿ ತೀರ್ಪು ಬಂದಿದೆ. ನೀರೇ ಇಲ್ಲದೇ ಇರುವ ಸಂದರ್ಭದಲ್ಲಿ ನಮ್ಮ ಅಹವಾಲು ಸರಿಯಾದ ರೀತಿ ಕೇಳಿದ್ದರೂ ನ್ಯಾಯಾಲಯವು ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸುವಂತೆ ಹೇಳಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡೆಡ್ ಸ್ಟೋರೇಜ್ ಹೊರತುಪಡಿಸಿ ಉಳಿಯುವ 10 ಟಿಎಂಸಿ ನೀರಿನಲ್ಲಿ ನಾವು ನೀರು ಬಿಡುವುದು ಹೇಗೆ? ಎಂದು ಪ್ರಶ್ನಿಸಿದರು. ಕಾವೇರಿ ನೀರು …
Read More »Yearly Archives: 2023
5 ಗ್ಯಾರಂಟಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ನಲ್ಲಿ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಜಾರಿಗೆ ತರಲಾಗಿರುವ 5 ಗ್ಯಾರಂಟಿ ಯೋಜನೆಗಳು ಸಂವಿಧಾನ ಮತ್ತು ಚುನಾವಣಾ ಆಯೋಗದ ನಿಯಮಗಳು ಹಾಗೂ ಮಾರ್ಗಸೂಚಿಗಳ ಪ್ರಕಾರವೇ ಘೋಷಣೆ ಮಾಡಿದ್ದು, ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ಗೆ ಲಿಖಿತ ಸ್ಪಷ್ಟನೆ ಸಲ್ಲಿಸಿದ್ದಾರೆ. ಗ್ಯಾರಂಟಿಗಳ ಹೆಸರಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮವೆಸಗಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಆಯ್ಕೆಯನ್ನು ಅಸಿಂಧುಗೊಳಿಸಬೇಕು …
Read More »ಡಾ ರಾಜ್ ಕುಮಾರ್ ಅಕಾಡೆಮಿ ಜೊತೆ ಸರ್ಕಾರ ಒಡಂಬಡಿಕೆ : ವಿದ್ಯಾರ್ಥಿಗಳ ವಿಕಾಸವೇ ನಮ್ಮ ಮುಖ್ಯ ಗುರಿ.. ಸಚಿವ ಬಿ ನಾಗೇಂದ್ರ
ಬೆಂಗಳೂರು : ಡಾ. ರಾಜ್ ಕುಮಾರ್ ಅವರ ಇಡೀ ಕುಟುಂಬ ಸಮಾಜ ಸೇವೆಯ ಜೊತೆಗೆ ಶಿಕ್ಷಣದ ಮೌಲ್ಯಗಳನ್ನು ಹೆಚ್ಚಿಸಲು ರಾಜ್ಕುಮಾರ್ ಅಕಾಡೆಮಿಯನ್ನು ಹುಟ್ಟುಹಾಕಿದೆ. ಇಂತಹ ಸಂಸ್ಥೆಯೊಂದಿಗೆ ನಾವು ಇಂದು ಒಡಂಬಡಿಕೆ ಮಾಡಿಕೊಂಡಿದ್ದು ಬಹಳ ಸಂತಸ ತಂದಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ ನಾಗೇಂದ್ರ ಹೇಳಿದರು. ವಿಕಾಸಸೌಧದಲ್ಲಿ ಇಂದು ರಾಜ್ಯ ಎನ್‌ಎಸ್‌ಎಸ್ ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಡಾ. …
Read More »ಮೈಸೂರು ವಿವಿ ಕುಲಪತಿಯಾಗಿ ಲೋಕ್ನಾಥ್ ಮುಂದುವರಿಕೆಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿ ಆಗಿರುವ ಪ್ರೊ. ಎನ್ ಕೆ ಲೋಕನಾಥ್ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿರುವ ಹೈಕೋರ್ಟ್ ಮುಂದಿನ ಆದೇಶದವರೆಗೆ ಕುಲಪತಿ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಟ್ಟಿದೆ. ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯು ಖಾಲಿಯಾಗುವಂತಿಲ್ಲ. ಈ ಹಿನ್ನೆಲೆ ಹುದ್ದೆಯಲ್ಲಿ ಮುದುವರೆಯಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ, ಈ ಸಂಬಂಧ ಯಾವುದೇ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ. ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್ ಅವರನ್ನು ನೇಮಿಸಿ 2023ರ ಮಾರ್ಚ್ …
Read More »ಬನವಾಸಿಯಲ್ಲಿ ಅರಣ್ಯ ಇಲಾಖೆಯಿಂದ ಉದ್ಯಾನವನಕ್ಕೆ ಡಿಜಿಟಲ್ ಸ್ಪರ್ಶ
ಶಿರಸಿ: ಕನ್ನಡದ ಮೊದಲ ರಾಜಧಾನಿ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ಇತಿಹಾಸವನ್ನು ಈಗ ಇಲ್ಲಿಯ ಗಿಡಮರಗಳು ಸಾರುತ್ತಿವೆ. ಅದೂ ಡಿಜಿಟಲ್ ತಂತ್ರಜ್ಞಾನದ ಮೂಲಕ ಎಂಬುದು ವಿಶೇಷ. ಬನವಾಸಿಯ ಸಾಲುಮರದ ತಿಮ್ಮಕ್ಕ ಉದ್ಯಾನವನಕ್ಕೆ ಡಿಜಿಟಲ್ ಸ್ಪರ್ಶ ನೀಡಿರುವ ಅರಣ್ಯ ಇಲಾಖೆ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಬನವಾಸಿಯ ಇತಿಹಾಸವನ್ನು ತಿಳಿಸುವ ಮಾದರಿ ಕಾರ್ಯ ಕೈಗೊಂಡಿದೆ. ಕದಂಬ ನಡಿಗೆ ಎಂಬ ನೂತನ ಕಲ್ಪನೆಯನ್ನು ಜಾರಿಗೆ ತಂದಿದೆ. ಶಿರಸಿ ತಾಲೂಕಿಗೆ ಒಳಪಡುವ ಬನವಾಸಿ ಕದಂಬರಾಳಿದ ಪ್ರದೇಶ. ಕನ್ನಡದ ಪ್ರಥಮ …
Read More »ಚೈತ್ರಾ ಕುಂದಾಪುರ ಅವರು ಸಿಸಿಬಿ ವಿಚಾರಣೆ ವೇಳೆ ಮೌನಕ್ಕೆ ಶರಣಾಗಿದ್ದಾರೆ.
ಬೆಂಗಳೂರು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬಂಧಿಸಿದರೆ, ದೊಡ್ಡವರ ಹೆಸರು ಬಹಿರಂಗವಾಗಲಿದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಬಂಧಿತೆ ಚೈತ್ರಾ ಕುಂದಾಪುರ ಸಿಸಿಬಿ ವಿಚಾರಣೆ ವೇಳೆ ಮೌನವಾಗಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ 5 ಕೋಟಿ ರೂ. ವಂಚನೆ ಆರೋಪದಡಿ ಬಂಧಿತರಾಗಿದ್ದ ಚೈತ್ರಾ, ಮಾಧ್ಯಮಗಳ ಮುಂದೆ ಸ್ವಾಮೀಜಿ ಹಾಲಶ್ರೀ ಬಂಧಿಸಿದರೆ ದೊಡ್ಡವರ ಹೆಸರು ಹೊರಬರಲಿದೆ ಎಂದು …
Read More »ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ.
ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ. ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಇತಿಹಾಸ: ಅದು ಬ್ರಿಟಿಷರ ವಿರುದ್ಧ ಚಳುವಳಿ ನಡೆಯುತ್ತಿದ್ದ ಸಂದರ್ಭ. ಹೇಗಾದರೂ ಮಾಡಿ ಜನರನ್ನು ಸಂಘಟಿಸಿ, ಹೋರಾಟ ತೀವ್ರಗೊಳಿಸಬೇಕೆಂಬ ಉದ್ದೇಶದಿಂದ ಮನೆಗಳಿಗೆ ಸೀಮಿತವಾಗಿದ್ದ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸಲು ಬಾಲಗಂಗಾಧರ ತಿಲಕರು ಕರೆ ನೀಡಿದ್ದರು. 1893ರಲ್ಲಿ ಮಹಾರಾಷ್ಟ್ರದ …
Read More »ಕೆನಡಾದಲ್ಲಿ ಮತ್ತೊಬ್ಬ ಖಲಿಸ್ತಾನ ಉಗ್ರನ ಹತ್ಯೆ: ದುಷ್ಕರ್ಮಿಗಳ ಗುಂಡೇಟಿಗೆ ಸುಖ್ದೂಲ್ ಸಿಂಗ್ ಬಲಿ
ನವದೆಹಲಿ : ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಕಾರಣ ಕೆನಡಾ ಮತ್ತು ಭಾರತದ ಮಧ್ಯೆ ರಾಜತಾಂತ್ರಿಕ ಸಂಬಂಧ ಹಳಸಿದ ಬೆನ್ನಲ್ಲೇ ಇನ್ನೊಬ್ಬ ಖಲಿಸ್ತಾನ ಉಗ್ರ ಮತ್ತು ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ಸುಖ್ದೂಲ್ ಸಿಂಗ್ ಅಲಿಯಾಸ್ ಸುಖ ಡುನೆಕೆ ಎಂಬಾತನ ಹತ್ಯೆ ನಡೆದಿದೆ. ಈಚೆಗೆ ನಡೆದ ಗುಂಡಿನ ದಾಳಿಯಲ್ಲಿ ಈತ ಮೃತಪಟ್ಟಿದ್ದಾನೆ ಎಂದು ತನಿಖಾ ಸಂಸ್ಥೆಗಳು ದೃಢಪಡಿಸಿವೆ. ಕೆನಡಾದ ವಿನ್ನಿಪೆಗ್‌ನಲ್ಲಿ ಸೆಪ್ಟೆಂಬರ್ 18 ರಂದು ನಡೆದ ಗುಂಡಿನ ಚಕಮಕಿಯಲ್ಲಿ ಸುಖ್ದೂಲ್ …
Read More »ಕೈ, ಕಾಲು ಕಟ್ಟಿ ಮನೆ ದರೋಡೆ; ₹1 ಕೋಟಿ ಮೌಲ್ಯದ ಚಿನ್ನ, ನಗದು ದೋಚಿ ದುಷ್ಕರ್ಮಿಗಳು ಪರಾರಿ
ಹುಬ್ಬಳ್ಳಿ: ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ದರೋಡೆಕೋರರು ಹುಬ್ಬಳ್ಳಿಯಲ್ಲಿ ದುಷ್ಕೃತ್ಯ ಎಸಗಿದ್ದಾರೆ. ಅಂದಾಜು ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ. ಇಲ್ಲಿನ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ನ ಮನೆಯೊಂದರಲ್ಲಿ ತಡರಾತ್ರಿ ಘಟನೆ ನಡೆದಿದೆ. ವಿದ್ಯಾಮಂದಿರ ಬುಕ್ ಡಿಪೋ ಮಾಲೀಕ ಉಲ್ಲಾಸ ದೊಡ್ಡಮನಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆ ಕಿಟಕಿಯ ಕಬ್ಬಿಣದ ಗ್ರಿಲ್ ತುಂಡರಿಸಿ ಮನೆಯೊಳಗೆ ನುಗ್ಗಿದ ದರೋಡೆಕೋರರು, ಮನೆಯಲ್ಲಿದ್ದವರ ಕೈ, ಕಾಲು ಕಟ್ಟಿ ಹಾಕಿ ನಗ, …
Read More »ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ ಕೇಂದ್ರ ಕಾನೂನು ಸಚಿವ
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಮಹತ್ವದ ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ ರಾಮ್ ಮೇಘವಾಲ್ ಮಂಡಿಸಿದರು. ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ 128ನೇ ಸಂವಿಧಾನ ತಿದ್ದುಪಡಿ ಮಸೂದೆಗೆ ಭಾರಿ ಬೆಂಬಲ ವ್ಯಕ್ತವಾಗಿತ್ತು. ಮಸೂದೆ ಮಂಡಿಸಿದ ಸಚಿವರು, ಕಳೆದ ಒಂಬತ್ತು ವರ್ಷಗಳಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಮಹಿಳೆಯರ ಹೆಸರಿನಲ್ಲಿ ಶೂನ್ಯ …
Read More »