Breaking News

Yearly Archives: 2023

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ದೆಹಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ

ನವದೆಹಲಿ/ಬೆಂಗಳೂರು:ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದ್ದು, ಈ ವಿಚಾರವಾಗಿ ನವದೆಹಲಿಯಲ್ಲಿಂದು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ನಾಯಕರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​, ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರುಗಳು, ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರುಗಳು ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ.     ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಿದ್ದರಾಮಯ್ಯ, ನೀರು ಬಿಡಲು …

Read More »

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿ ಹೊಸಪೇಟೆ ಸಂಸ್ಥಾನ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಇಂದು ನಗರದ 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಯನ್ನು ಸೆಪ್ಟೆಂಬರ್ 29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿತು. ಅಭಿನವ ಹಾಲಶ್ರಿ ಪರ ವಕೀಲ ಲೋಕೇಶ್ ಮಧ್ಯಂತರ ಜಾಮೀನಿಗೆ ಅರ್ಜಿ‌ ಸಲ್ಲಿಸಿದರು. ಸರ್ಕಾರಿ ವಕೀಲರಿಗೆ ಸೆಪ್ಟೆಂಬರ್ 29ರಂದು ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಜಾಮೀನು ಅರ್ಜಿಯನ್ನು ಕೋರ್ಟ್‌ ಮುಂದೂಡಿತು. ಹೀಗಾಗಿ, ಅಲ್ಲಿಯವರೆಗೂ ಆರೋಪಿಯನ್ನು ನ್ಯಾಯಾಲಯ ಪೊಲೀಸರ ವಶಕ್ಕೆ ಒಪ್ಪಿಸಿದೆ. ನಿನ್ನೆಯಿಂದ ಸ್ಚಾಮೀಜಿಯನ್ನು ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಒಂದಿಷ್ಟು ಮಹತ್ವದ ವಿಚಾರಗಳನ್ನು ಅವರು ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ 10:30ರ ವೇಳೆಗೆ ಸ್ವಾಮೀಜಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಚಂದ್ರಾ ಲೇಔಟ್ ಬಳಿಯ ಮನೆಯೊಂದರಲ್ಲಿ ಸ್ವಾಮೀಜಿ ಹಣ ಪಡೆದಿದ್ದಾರೆ ಎನ್ನಲಾಗಿದ್ದು, ಅಲ್ಲಿಗೆ ಕರೆದೊಯ್ದು ಸಿಸಿಬಿ ಅಧಿಕಾರಿಗಳು ಸ್ಥಳ ಮಹಜರು ಪ್ರಕ್ರಿಯೆ ಮಾಡಲಿದ್ದಾರೆ. ಪಡೆದ ಹಣವನ್ನು ಮೈಸೂರಿನಲ್ಲಿ ಇರಿಟ್ಟಿರುವ ಮಾಹಿತಿಯಿದ್ದು, ನಂತರ ಮೈಸೂರಿಗೂ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ 6 ಆರೋಪಿಗಳ ಬಂಧನವಾಗುತ್ತಿದ್ದಂತೆ ಅಭಿನವ ಹಾಲಶ್ರೀ ಸ್ವಾಮೀಜಿ ನಾಪತ್ತೆಯಾಗಿದ್ದರು. ತಲೆಮರೆಸಿಕೊಳ್ಳಲು ಸಂಚು ರೂಪಿಸಿದ್ದ ಆರೋಪಿ ಮೈಸೂರಿನಿಂದ ಒಡಿಶಾಗೆ ವಿವಿಧ ಮಾರ್ಗಗಳಲ್ಲಿ ತೆರಳಿ, ಭುವನೇಶ್ವರದಿಂದ ಭೋದ್ ಗಯಾಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಒಡಿಶಾ ಕಟಕ್ ಬಳಿ ಬಂಧಿಸಲಾಗಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿ ಹೊಸಪೇಟೆ ಸಂಸ್ಥಾನ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಇಂದು ನಗರದ 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಯನ್ನು ಸೆಪ್ಟೆಂಬರ್ 29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿತು. ಅಭಿನವ ಹಾಲಶ್ರಿ ಪರ ವಕೀಲ ಲೋಕೇಶ್ ಮಧ್ಯಂತರ ಜಾಮೀನಿಗೆ ಅರ್ಜಿ‌ ಸಲ್ಲಿಸಿದರು. ಸರ್ಕಾರಿ ವಕೀಲರಿಗೆ ಸೆಪ್ಟೆಂಬರ್ 29ರಂದು ಆಕ್ಷೇಪಣೆ ಸಲ್ಲಿಸಲು …

Read More »

ಬಳ್ಳಾರಿ: ಬಸ್​ ಪಲ್ಟಿಯಾಗಿ ಶಾಲಾ ಮಕ್ಕಳು ಸೇರಿ 40ಕ್ಕೂ ಹೆಚ್ಚು ಜನರಿಗೆ ಗಾಯ

ಬಳ್ಳಾರಿ: ಕೆಎಸ್‍ಆರ್​ಟಿಸಿ ಬಸ್ ರಸ್ತೆ ಬದಿ ಪಲ್ಟಿ ಹೊಡೆದು 40ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ರಸ್ತೆಯಲ್ಲಿ ಇಂದು ಸಂಭವಿಸಿದೆ.   ಗಾಯಾಳುಗಳನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಮಕ್ಕಳನ್ನು ಆಂಬ್ಯುಲೆನ್ಸ್ ಮೂಲಕ ಬಳ್ಳಾರಿಯ ವಿಮ್ಸ್​ಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಗಿರೆನಹಳ್ಳಿ ಉತ್ತರ ಮಲೈ ಭಾಗದಿಂದ ಸಂಡೂರಿಗೆ ಬರುತ್ತಿದ್ದ ಬಸ್​ನಲ್ಲಿ …

Read More »

ಬೆಳಗಾವಿ ಮಹಾನಗರ ಪಾಲಿಕೆಯಿಂದ ಹೂವಿನ ತ್ಯಾಜ್ಯದಿಂದ ಅಗರಬತ್ತಿ ತಯಾರಿಸುವ ಘಟಕಆರಂಭ

ಭಾರತದಲ್ಲಿ ಪ್ರಪ್ರಥಮವಾಗಿ ಬೆಳಗಾವಿ ಮಹಾನಗರ ಪಾಲಿಕೆಯಿಂದ ಹೂವಿನ ತ್ಯಾಜ್ಯದಿಂದ ಅಗರಬತ್ತಿ ತಯಾರಿಸುವ ಘಟಕವನ್ನು ಆರಂಭಿಸಲಾಯಿತು ಕುಂದಾನಗರಿಯ ಬೆಳೆಗಾವಿಯಲ್ಲಿ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಹೂವಿನ ತ್ಯಾಜ್ಯದಿಂದ ಅಗರಬತ್ತಿ ತಯಾರಿಸುವ ಘಟಕವನ್ನು ಆರಂಭಿಸಲಾಯಿತು , ಅಶೋಕ ನಗರದಲ್ಲಿರುವ ಫ್ಲವರ್ ಮಾರ್ಕೆಟ್ ನಲ್ಲಿ ಹಸಿರು ‌ನ್ಯಾಯಪೀಠದ ಸುಭಾಷ ಅಡಿ ಚಾಲನೆ ನೀಡಿದರು. ದೇಶದಲ್ಲಿ ಮೊದಲ ಬಾರಿಗೆ ಪ್ರಪ್ರಥಮವಾಗಿ ಬೆಳಗಾವಿಯ ಆರೋಗ್ಯ ಇಲಾಖೆಯಿಂದ ಹೂವಿನ ತ್ಯಾಜ್ಯದಿಂದ ಅಗರಬತ್ತಿ ತಯಾರಿಸುವ ಘಟಕವನ್ನು ಸ್ಥಾಪಿಸಿರುವುದು ಖುಷಿಯ ವಿಚಾರ ಬೆಳೆಗಾವಿಯ …

Read More »

ಬೆಳಗಾವಿಯ ಬಿಜೆಪಿಯಿಂದ ಅದ್ಧೂರಿ ವಿಜಯೋತ್ಸವ

ಸಂಸತ್ತಿನ ಹೊಸ ಕಟ್ಟಡದೊಂದಿಗೆ ದೇಶದ ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ದೊಡ್ಡ ಹೆಜ್ಜೆ ಇಟ್ಟಿದೆ. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಿದೆ. ಇಂದು ಬೆಳಗಾವಿಯಲ್ಲಿ ಐತಿಹಾಸಿಕ ನಿರ್ಧಾರವನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಗರದ ಚನ್ನಮ್ಮ ವೃತ್ತದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪರಸ್ಪರ ಸಿಹಿ ತಿನ್ನಿಸುವ ಮೂಲಕ …

Read More »

ಹೈ ಬಿಪಿ ನಿಯಂತ್ರಿಸಿದರೆ ಭಾರತ 2040ರ ಹೊತ್ತಿಗೆ 46 ಲಕ್ಷ ಜನರ​ ಸಾವು ತಡೆಯಬಹುದಂತೆ!

ನವದೆಹಲಿ: ಭಾರತದಲ್ಲಿ ಅಧಿಕ ರಕ್ತದೊತ್ತಡವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಮೂಲಕ 2040ರ ವೇಳೆಗೆ ಸಂಭವಿಸುವ 4.6 ಮಿಲಿಯನ್​ ಸಾವು ತಪ್ಪಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಜಾಗತಿಕವಾಗಿ ಅಧಿಕ ರಕ್ತದೊತ್ತಡದಿಂದ ಆಗುತ್ತಿರುವ ಪರಿಣಾಮಗಳ ಕುರಿತು ಇದೇ ಮೊದಲ ಬಾರಿಗೆ ವಿಶ್ವ ಆರೋಗ್ಯ ಸಂಸ್ಥೆ ವರದಿ ಪ್ರಕಟಿಸಿದೆ. ಮಂಗಳವಾರ ನಡೆದ ಸಾಮಾನ್ಯ ಸಭೆಯ 78ನೇ ಸೆಷನ್​ನಲ್ಲಿ ಈ ವರದಿ ಮಂಡಿಸಲಾಯಿತು. ಭಾರತದಲ್ಲಿ ಹೈ ಬಿಪಿ, ಅಂಕಿಅಂಶಗಳು: ವರದಿಯಲ್ಲಿ, ಭಾರತದಲ್ಲಿ 30-79 ವರ್ಷದ ವಯಸ್ಸಿನ …

Read More »

ಬೈಕ್ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಗೋಕಾಕ್ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ವಾಟ್ಸ್​ಆಯಪ್​ನಲ್ಲಿ ಚರ್ಚಿಸಿ ಬಳಿಕಬೈಕ್ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಗೋಕಾಕ್ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಬೆಣಚಿನಮರಡಿಯ ಖಿಲಾರಿ ಗ್ಯಾಂಗ್ ಮತ್ತು ಗೋಕಾಕ್​ ಎಸ್‌ಪಿ ಸರ್ಕಾರ ಗ್ಯಾಂಗ್‌ ಎಂಬ ಹೆಸರಿಟ್ಟುಕೊಂಡು ದರೋಡೆಗೆ ಇಳಿದಿದ್ದ ಗೋಕಾಕ್​ ತಾಲೂಕಿನ ಬೆಣಚಿನಮರಡಿಯ ದುರ್ಗಪ್ಪ ವಡ್ಡರ, ನಾಗಪ್ಪ ಮಾದರ, ಯಲ್ಲಪ್ಪ ಗೀಸನಿಂಗವ್ವಗೋಳ, ಕೃಷ್ಣಾ ಪೂಜೇರಿ, ರಾಮಸಿದ್ಧ ತಪಸಿ, ಬೀರಸಿದ್ಧ ಗುಂಡಿ, ಉದ್ದಪ್ಪ ಖಿಲಾರಿ, ಗೋಕಾಕ್​ನ ಪರಶುರಾಮ ಗೊಂಧಳಿ ಹಾಗೂ ಆಕಾಶ ತಳವಾರ ಬಂಧಿತರು. ಸಾಮಾನ್ಯವಾಗಿ …

Read More »

ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ಗೋಕಾಕ: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದರು. ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ವಿಧಾನ ಸಭಾ ಮತಕ್ಷೇತ್ರದ ಅನುದಾನ ಅಡಿಯಲ್ಲಿ ಫಲಾನುಭವಿಗಳಿಗೆ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದರು. ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಅಂಗವಿಕಲ ಕಲ್ಯಾಣ ಅಧಿಕಾರಿ ನಾಮದೇವ ಬಿಲ್ಕರ ಹಾಗೂ …

Read More »

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಪಟಾಕಿ ಸಿಡಿಸಿ, ಸಿಹಿಹಂಚಿ ದೇಶಾದ್ಯಂತ ಮಹಿಳೆಯರ ಸಂಭ್ರಮ

ನವದೆಹಲಿ: ಹೊಸ ಸಂಸತ್​ ಭವನ ಪ್ರವೇಶಿಸಿದ ಮೊದಲ ದಿನವೇ ಪ್ರಥಮ ಮಸೂದೆಯಾಗಿ ಮಹಿಳಾ ಮೀಸಲಾತಿ ವಿಧೇಯಕವನ್ನು ಕೇಂದ್ರ ಸರ್ಕಾರ ಮಂಗಳವಾರ ಮಂಡಿಸಿದ್ದು, ಐತಿಹಾಸಿಕ ಮುನ್ನುಡಿ ಬರೆದಿದೆ. ಇದು ದೇಶಾದ್ಯಂತ ಹರ್ಷ ತಂದಿದೆ. ಬಿಜೆಪಿ ಕಾರ್ಯಕರ್ತರು ಸೇರಿದಂತೆ ವಿವಿಧ ಪಕ್ಷಗಳ ನಾಯಕಿಯರು ಮತ್ತು ಕಾರ್ಯಕರ್ತರು ಪಟಾಕಿ ಹಚ್ಚಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಸರ್ಕಾರದ ಈ ನಡೆಗೆ ಸರ್ವಪಕ್ಷಗಳು ಶ್ಲಾಘನೆ ವ್ಯಕ್ತಪಡಿಸಿವೆ. 27 ವರ್ಷಗಳಿಂದ ಕಾಗದದಲ್ಲೇ ಉಳಿದಿದ್ದ ಮಸೂದೆಯು ಈಗ ಸಂಸತ್ತಿನಲ್ಲಿ ಚರ್ಚೆಗೆ …

Read More »

ಸಾಲಮನ್ನಾ ಮಾಡಿ 6 ವರ್ಷ ಕಳೆದರೂ ಬಾರದ ಹಣ

ಶಿರಸಿ (ಉತ್ತರ ಕನ್ನಡ) : ಒಂದೆಡೆ ತೀವ್ರ ಬರಗಾಲ, ಇನ್ನೊಂದೆಡೆ ರೈತರ ಬೆಳೆಗಳಿಗೆ ರೋಗ ಬಾಧೆ, ಹೀಗೆ ಹಲವು ಸಮಸ್ಯೆಗಳಿಂದ ರೈತರು ಬಳಲುತ್ತಿರುವ ಸಂದರ್ಭದಲ್ಲಿಯೇ ಈ ಹಿಂದೆ ರಾಜ್ಯ ಸರ್ಕಾರದಿಂದ ಮನ್ನಾ ಮಾಡಲಾಗಿದ್ದ ಬೆಳೆ ಸಾಲದ ಸೌಲಭ್ಯದಿಂದ ಉತ್ತರ ಕನ್ನಡ ಜಿಲ್ಲೆಯ 700ಕ್ಕೂ ಅಧಿಕ ರೈತರು ವಂಚಿತರಾಗಿದ್ದಾರೆ. ಮನ್ನಾ ಮಾಡಿ 6 ವರ್ಷಗಳೇ ಕಳೆದರೂ ಅನ್ನ ಕೊಡುವ ರೈತ ಸಹಕಾರಿ ಸಂಘಗಳಿಗೆ ಅಲೆಯುವ ದುಸ್ಥಿತಿ ಮುಂದುವರೆದಿದೆ. ಉತ್ತರ ಕನ್ನಡ ಜಿಲ್ಲೆಯ ರೈತರು …

Read More »