ಶಿರಸಿ(ಉತ್ತರ ಕನ್ನಡ): ಹಣದ ಆಸೆಗಾಗಿ ಕೆಲಸ ನೀಡಿದ ಮಾಲೀಕನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಶಿರಸಿಯ ಬನವಾಸಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ನಡೆದ 48 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯ ಶವ ಶಿರಸಿಯ ವಡ್ಡಿನಕೊಪ್ಪ ಅರಣ್ಯ ಭಾಗದಲ್ಲಿ ಪತ್ತೆಯಾಗಿತ್ತು. ಕೊಲೆ ಎಂದು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ನಂತರ ತನಿಖೆ ಕೈಗೊಂಡ ಬನವಾಸಿ ಠಾಣೆ ಪೊಲೀಸರು ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ …
Read More »Yearly Archives: 2023
ಸತತ 26 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ದಾಖಲೆ ಬರೆದ ಗರ್ಭಿಣಿ
ಹೊಸಕೋಟೆ (ಬೆಂಗಳೂರು): 7 ತಿಂಗಳ ಗರ್ಭಿಣಿ ಸತತ 26 ಗಂಟೆ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ವಿಶೇಷ ಮನ್ನಣೆ ತನ್ನದಾಗಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಆವಲಹಳ್ಳಿ ನಿವಾಸಿ ಸುಬ್ಬಲಕ್ಷ್ಮೀ ಈ ಸಾಧಕಿ. ಕಳೆದ ಪೆಬ್ರವರಿಯಲ್ಲಿ ಇವರು ಆವಲಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 26 ಗಂಟೆ 23 ನಿಮಿಷ ಸ್ಯಾಕ್ಸೊಫೋನ್ ನುಡಿಸಿದ್ದಾರೆ. ಇಷ್ಟು ಸಮಯ ನಿರಂತರವಾಗಿ ಸ್ಯಾಕ್ಸೊಪೋನ್ ನುಡಿಸಿದ ಮೊದಲ ಮಹಿಳೆ ಅನ್ನೋ ಹೆಗ್ಗಳಿಕೆಯೂ ಇವರದ್ದಾಗಿದೆ. ಇದೀಗ ಅಪರೂಪದ …
Read More »ತಾಕತ್ತಿದ್ದರೆ ಸಿದ್ದರಾಮಯ್ಯಮೂವರು ಡಿಸಿಎಂಗಳನ್ನು ಮಾಡಲಿ: ಎನ್ ರವಿಕುಮಾರ್
ಬೆಂಗಳೂರು: ಬರ, ಕಾವೇರಿ ವಿಷಯಾಂತರಕ್ಕೆ ಮೂರು ಡಿಸಿಎಂ ಹುದ್ದೆ ಚರ್ಚೆ ಹರಿಬಿಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಮೂವರು ಡಿಸಿಎಂಗಳನ್ನು ಮಾಡಲಿ. ನಾವು ಮೂವರನ್ನು ಡಿಸಿಎಂ ಮಾಡಿದ್ದೆವು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸಿಎಂಗೆ ಸವಾಲೆಸೆದಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಧ್ಯಮದರೊಂದಿಗೆ ಅವರು ಮಾತನಾಡಿದರು. ಕಾವೇರಿ, ಬರ ವಿಚಾರ ಡೈವರ್ಟ್ ಮಾಡಲು ಮೂರು ಡಿಸಿಎಂ ಹುದ್ದೆಯ ಚರ್ಚೆ ಬಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ …
Read More »ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು 16 ಶಾಸಕರ ಅನರ್ಹತೆ ಅರ್ಜಿಯನ್ನು ಎರಡು ವಾರದಲ್ಲಿ ಇತ್ಯರ್ಥಪಡಿಸಿ ಎಂದು ಸುಪ್ರೀಂಕೋರ್ಟ್ ಸ್ಪೀಕರ್ಗೆ ಸೂಚಿಸಿದೆ.
ನವದೆಹಲಿ: ಶಿವಸೇನೆಯಿಂದ ಬಂಡೆದ್ದಿರುವ ಮಹಾರಾಷ್ಟ್ರದ ಈಗಿನ ಸಿಎಂ ಏಕನಾಥ್ ಶಿಂಧೆ ಮತ್ತು ಅವರ ಬಣದ 16 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಯನ್ನು ಒಂದು ವಾರದೊಳಗೆ ಕೈಗೆತ್ತಿಕೊಂಡು ವಿಚಾರಣೆ ನಡೆಸಿ, ಎರಡು ವಾರದೊಳಗೆ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್ ಸ್ಪೀಕರ್ಗೆ ಸೂಚಿಸಿದೆ. ಶಿವಸೇನೆ ಬಂಡಾಯ ಶಾಸಕರ ಅನರ್ಹತೆ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಪಕ್ಷ ವಿರೋಧಿ …
Read More »ಸದ್ಯ ಬಿಜೆಪಿ ಜೊತೆ ಯಾವುದೇ ಮೈತ್ರಿ ಇಲ್ಲ: ಎಐಎಡಿಎಂಕೆ
ಚೆನ್ನೈ(ತಮಿಳುನಾಡು) : ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ಭರದ ಸಿದ್ಧತೆ ನಡೆಸುತ್ತಿವೆ. ಈ ನಡುವೆ ವಿವಿಧ ಪಕ್ಷಗಳ ಮೈತ್ರಿ ಬಗ್ಗೆಯೂ ಸುದ್ದಿಗಳು ಹರದಾಡುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿಯ ಮಿತ್ರ ಪಕ್ಷ ಎಐಎಡಿಎಂಕೆ(ಅಲ್ ಇಂಡಿಯಾ ದ್ರಾವಿಡ ಮುನ್ನೇತ್ರ ಕಳಗಂ) ಭಾರತೀಯ ಜನತಾ ಪಕ್ಷದೊಂದಿಗೆ ಸದ್ಯ ಯಾವುದೇ ಮೈತ್ರಿ ಇಲ್ಲ ಎಂದು ಹೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ ನಾಯಕ ಡಿ. ಜಯಕುಮಾರ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ …
Read More »ಅಂದು ತಂದೆ-ತಾಯಿ, ಇಂದು ಮಗನ ಬರ್ಬರ ಹತ್ಯೆ
ಬೆಳಗಾವಿ : ಹಳೆ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯೋರ್ವನ ಕೊಲೆ ಮಾಡಿರುವ ಘಟನೆ ಚೆನ್ನಮ್ಮ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ತಿಗಡೊಳ್ಳಿ ಗ್ರಾಮದ ವಿಜಯ್ ರಾಮಚಂದ್ರಪ್ಪ ಆರೇರ್(35) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಕಲ್ಲಪ್ಪ ಕ್ಯಾತಣ್ಣವರ್ ನಡುವೆ ನಿನ್ನೆ ರಾತ್ರಿ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಇಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ತೀವ್ರ ಗಾಯಗೊಂಡಿದ್ದ ವಿಜಯ್ನನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಕುಟುಂಬಸ್ಥರು …
Read More »ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ತಾನು ಭಾಗಿಯಾಗಿಲ್ಲ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ
ಮಂಗಳೂರು: ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಇದೀಗ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ತಾನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ, ಇದೊಂದು ಷಡ್ಯಂತ್ರದ ಭಾಗವಾಗಿ ಕಂಡು ಬರುತ್ತಿದ್ದು, ಆದರಿಂದ ಸಿಸಿಬಿ ಅಧಿಕಾರಿಗಳು ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ಏನಾಗಿದೆ ಎಂದು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ “ಮಾಜಿ ಹಿಂದೂ ಮುಖಂಡ ಸತ್ಯಜಿತ್ …
Read More »ಇದು ಸರ್ಕಾರದ ಆರ್ಡರ್ ಅಲ್ಲ.ಇದು ಪ್ರಸ್ತಾವನೆ ಪತ್ರ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಇದು ಸರ್ಕಾರದ ಆರ್ಡರ್ ಅಲ್ಲ.ಇದು ಪ್ರಸ್ತಾವನೆ ಪತ್ರ ಇದು ಬೆಳಗಾವಿ ಜಿಲ್ಲಾಧಿಕಾರಿಗಳು ನಿನ್ನೆ ರಾತ್ರಿ ಸರ್ಕಾರಕ್ಕೆ ಕಳುಹಿಸಿರುವ ಪ್ರಸ್ತಾವನೆ ಪತ್ರ ಅಷ್ಟೆ, ಸರ್ಕಾರ ಇದಕ್ಕೆ ಅನುಮತಿ ನೀಡಿಲ್ಲ.ಹೀಗಾಗಿ ಸರ್ಕಾರದ ಆದೇಶದ ಪ್ರಕಾರ ಇಂದು ಸೋಮವಾರವೇ ರಜೆ ಮಂಗಳವಾರ ವರ್ಕಿಂಗ್ ಡೇ ಈ ಪ್ರಸ್ತಾವಣೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ವದಂತಿಗಳನ್ನು ಹರಡಿಸುತ್ತಿದ್ದಾರೆ. ಸರ್ಕಾರದ ಆದೇಶದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.ಸರ್ಕಾರದಿಂದ ಪರಿಷ್ಕೃತ ಆದೇಶವೂ ಬಂದಿಲ್ಲ.ಆದ್ರೆ ಕೆಲವರು ಬೆಳಗಾವಿ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ …
Read More »ನಾಳೆH.D.K. ದೆಹಲಿಗೆ ಹೊರಡುತ್ತಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ,
ಶಾಸಕ ರಮೇಶ್ ಜಾರಕಿಹೊಳಿಯವರು ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ನಾಳೆ ಕುಮಾರಸ್ವಾಮಿ ದೆಹಲಿಗೆ ಹೊರಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಜೆಪಿ ನಗರದಲ್ಲಿರುವ ನಿವಾಸದಲ್ಲಿ ಜಾರಕಿಹೊಳಿ ಭೇಟಿಯಾಗಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವನ್ನು ನಾನು ಹೈಕಮಾಂಡ್ ನಿರ್ಧಾರಕ್ಕೆ ಸ್ವಾಗತಿಸುತ್ತೇನೆ. ಆದಷ್ಟು ಬೇಗ ಮೈತ್ರಿ ಆದರೆ ಒಳ್ಳೆಯದಾಗುತ್ತದೆ. ಈಗಿನ ಸರ್ಕಾರ ಬೀಳಿಸುವುದನ್ನು ಈಗ ಹೇಳಲು …
Read More »ಗಣೇಶ ಹಬ್ಬದಂದು ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ
ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಅವರು ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಗಣೇಶ ಹಬ್ಬದಂದು ಧ್ರುವ ಪತ್ನಿ ಪ್ರೇರಣಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನನವಾಗಿದೆ ಇದೇ ಖುಷಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ನಟ ಧ್ರುವ ಸರ್ಜಾ ಗಣೇಶ ಹಬ್ಬದ ದಿನ ಮನೆಗೆ ಮಗ ಬಂದಿದ್ದಾನೆ. ಮನೆಯಲ್ಲಿ ಎಲ್ಲರೂ ಖುಷಿಯಾಗಿದ್ದಾರೆ. …
Read More »