Breaking News

Yearly Archives: 2023

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಆರೋಪಿಗಳ ಬ್ಯಾಂಕ್ ಖಾತೆ ಸ್ಥಗಿತ, ಕಾರು ಜಪ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಹಂತ-ಹಂತವಾಗಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿಗಳ ಆಸ್ತಿ ಶೋಧ ಪ್ರಕ್ರಿಯೆಯನ್ನು ಸಿಸಿಬಿ ಪೊಲೀಸರು ಮುಂದುವರಿಸಿದ್ದಾರೆ. ಆರೋಪಿಗಳ ಬ್ಯಾಂಕ್‌ ಖಾತೆಯಲ್ಲಿದ್ದ ಠೇವಣಿ ಹಾಗೂ ಕಾರು ಜಪ್ತಿ ಮಾಡಲಾಗಿದೆ. ಶನಿವಾರ, 81 ಲಕ್ಷ ನಗದು ಜಪ್ತಿ ಮಾಡಲಾಗಿದ್ದು, ನಂತರ ಆರೋಪಿಗಳ ಎಫ್.ಡಿ ಖಾತೆಯಲ್ಲಿ ಒಟ್ಟು 1.08 ಕೋಟಿ ಠೇವಣಿ ಪತ್ತೆಯಾಗಿದೆ. ಬ್ಯಾಂಕ್‌ಗಳ ಮೂಲಕ ಠೇವಣಿಗಳ ವ್ಯವಹಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಸಿಬಿ …

Read More »

ನೆಲಮಂಗಲ: ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು, ಇಬ್ಬರಿಗೆ ಗಾಯ

ನೆಲಮಂಗಲ (ಬೆಂಗಳೂರು. ಗ್ರಾ): ಇಲ್ಲಿನರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇಂದು ಬೆಳಗ್ಗೆ ಸ್ವಿಫ್ಟ್ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ಘಟನೆ ನಡೆಯಿತು. ಸ್ವಿಫ್ಟ್​ ಕಾರಿನಲ್ಲಿದ್ದ ಐವರ ಪೈಕಿ ಮೂವರು ದುರ್ಮರಣ ಹೊಂದಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹಿಂದಿನ …

Read More »

ಮೂರು ಡಿಸಿಎಂ ಹುದ್ದೆಯ ಬೇಡಿಕೆ ತಪ್ಪಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಮಂಡ್ಯ: ಮೂರು ಡಿಸಿಎಂ ಹುದ್ದೆಯ ಬೇಡಿಕೆ ತಪ್ಪಲ್ಲ ಎಂದು ಮಂಡ್ಯದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು. ನಗರದಲ್ಲಿ ಮಾತನಾಡಿದ ಅವರು, ಇದೆಲ್ಲ ನಮ್ಮ ವರಿಷ್ಠರು ತೀರ್ಮಾನ ಮಾಡುವಂಥದ್ದು. ವೈಯಕ್ತಿಕ ಅಭಿಪ್ರಾಯಗಳನ್ನು ನಮ್ಮವರು ಆಗಾಗ್ಗೆ ಹೇಳುತ್ತಿರುತ್ತಾರೆ ಎಂದರು. ಈ ವಿಚಾರವನ್ನು ಹೈಕಮಾಂಡ್​ಗೆ ಬಿಟ್ಟು ಬಿಡೋಣ. ಅದನ್ನು ಅವರೇ ಕೇಳಬೇಕು. ನಾನು ಹೈಕಮಾಂಡ್ ಗಮನಕ್ಕೆ ಈ ವಿಷಯವನ್ನು ತರುವುದಕ್ಕೆ ಆಗಲ್ಲ. ಅವರ ಅಭಿಪ್ರಾಯ ಹೇಳಿದ್ದಾರೆ ತಪ್ಪಲ್ಲ ಎಂದು ಹೇಳಿದರು. ಕಾವೇರಿ ನಿರ್ವಾಹಣಾ ಪ್ರಾಧಿಕಾರದ ಸಭೆ …

Read More »

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ ವಿಜಯಪುರ ನಗರದ ನವಬಾಗ್ ಪ್ರದೇಶದಲ್ಲಿ ವರದಿಯಾಗಿದೆ. ರೂಪಾ ಮೇತ್ರಿ (32) ಹಾಗೂ ಅವರ ತಾಯಿ ಕಲ್ಲವ್ವ (55) ಕೊಲೆಯಾದವರು ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮೇತ್ರಿ ಕೊಲೆ ಆರೋಪಿ. ವಿವರ: ನವಭಾಗ್ ಪ್ರದೇಶದ ಭಾಗವಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗಿದ್ದ ಮಲ್ಲಿಕಾರ್ಜುನ ಮೂವರು ಮಕ್ಕಳು, ಪತ್ನಿ ಹಾಗೂ ಅತ್ತೆಯೊಂದಿಗೆ ವಾಸವಿದ್ದನು.‌ ಕಳೆದ ಆರು ತಿಂಗಳಿಂದ ನವಭಾಗ್ …

Read More »

ಗಣೇಶೋತ್ಸವ ಮೆರವಣಿಗೆಗೆ ಈದ್ ಮಿಲಾದ್ ಮುಂದೂಡಿದ ಮುಸ್ಲಿಮರು

ಬೆಳಗಾವಿ: ಗಡಿ, ಭಾಷೆಯ ಹೆಸರಿನಲ್ಲಿ ನಡೆಯುವ ಹಲವು ವಿವಾದಗಳ ಮಧ್ಯೆ ಬೆಳಗಾವಿ ಹಬ್ಬಗಳ ವಿಚಾರದಲ್ಲಿ ಸೌಹಾರ್ದತೆ ಮೆರೆಯುತ್ತಾ ಬಂದಿದೆ. ಇದಕ್ಕೆ ಹೊಸ ಉದಾಹರಣೆಯೆಂಬಂತೆ, ಈ ಬಾರಿ ಎಲ್ಲ ಧರ್ಮ, ಭಾಷೆಯವರು ಒಂದಾಗಿ ಗಣೇಶೋತ್ಸವ ಆಚರಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಗಣೇಶ ನಿಮಜ್ಜನೆ ಮೆರವಣಿಗೆಗೆ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಮುಂದೂಡಿದ್ದಾರೆ. 119 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ವೈಭವದ ಗಣೇಶೋತ್ಸವಕ್ಕೆ ಕುಂದಾನಗರಿ ಖ್ಯಾತಿಯ ಬೆಳಗಾವಿ ಸಜ್ಜಾಗಿದೆ. ವಿಘ್ನ ನಿವಾರಕನನ್ನು ಶ್ರದ್ಧಾ-ಭಕ್ತಿಯಿಂದ ಬರಮಾಡಿಕೊಂಡು, ಸಂತಸದಿಂದ …

Read More »

ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಪುನೀತ್ ಕೆರೆಹಳ್ಳಿ ಬಿಡುಗಡೆ

ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಗೂಂಡಾ ಕಾಯ್ದೆಯಡಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಜೈಲಿಂದ ಬಿಡುಗಡೆಯಾಗಿದ್ದಾರೆ. ಗೂಂಡಾ ಕಾಯ್ದೆ ರದ್ದಾದ ಹಿನ್ನೆಲೆಯಲ್ಲಿ ಇಂದು ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಕಳೆದ ಆಗಸ್ಟ್ 11ರಂದು ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ, ಗೂಂಡಾ ಕಾಯ್ದೆಗೆ ಸಂಬಂಧಿಸಿಂತೆ ರಚಿಸಲಾಗಿದ್ದ ಸಲಹಾ ಮಂಡಳಿಯು ಬಂಧಿಯನ್ನು ಬಂಧನದಲ್ಲಿ‌ಡಲು ಸಾಕಷ್ಟು ಕಾರಣಗಳಿಲ್ಲ ಎಂದು‌ …

Read More »

ನಾನು ನಾನೇ, ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ಎಲ್ಲರೂ ಎರಡನೇ ದೇವರಾಜ ಅರಸು ಅಂತಾರೆ. ಆದರೆ, ದೇವರಾಜ ಅರಸು ದೇವರಾಜ ಅರಸುನೇ ಸಿದ್ದರಾಮಯ್ಯ ಸಿದ್ದರಾಮಯ್ಯನೇ. ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರರು. ಕೆಲವರು ನನ್ನನ್ನು ಎರಡನೇ ದೇವರಾಜು ಅರಸು ಅಂತಾರೆ. ಅದು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಪಪಡಿಸಿದರು. ಇತ್ತೀಚೆಗೆ ವಿಧಾನ ಪರಿಷತ್ ಬಿ ಕೆ …

Read More »

ಪ್ರಧಾನಿ ಹುಟ್ಟುಹಬ್ಬದ ಹಿನ್ನೆಲೆ ರಕ್ತದಾನ ಶಿಬಿರ, ಆಯುಷ್ಮಾನ್​ ಕಾರ್ಡ್​ ನೋಂದಣಿ, ಮೋದಿ ಕ್ರಿಕೆಟ್ ಕಪ್ ಆಯೋಜನೆ

ಬೆಂಗಳೂರು: ಭಾನುವಾರ( ಸೆ.17) ಪ್ರಧಾನಿ ನರೇಂದ್ರ ಮೋದಿ ಅವರ 73ನೇ ವರ್ಷದ ಜನ್ಮದಿನ ಆಚರಿಸಲಾಯಿತು. ಈ ಪ್ರಯುಕ್ತ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ನೇತೃತ್ವದಲ್ಲಿ ರಕ್ತದಾನ ಶಿಬಿರ, ಆಯುಷ್ಮಾನ್​ ಭಾರತ್ ಕಾರ್ಡ್​ಗಳ ನೋಂದಣಿ ಹಾಗೂ ಮೋದಿ ಕ್ರಿಕೆಟ್ ಕಪ್ ಆಯೋಜನೆ ಮಾಡಲಾಗಿತ್ತು. ಮೋದಿ ಕ್ರಿಕೆಟ್ ಕಪ್ ಆಯೋಜನೆಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ತೇಜಸ್ವಿ ಸೂರ್ಯ ಅವರು, ಪ್ರಧಾನಿ ಮೋದಿಯವರ ಜನ್ಮದಿನದ ಪ್ರಯುಕ್ತ ಇಡೀ ದೇಶಾದ್ಯಂತ ಒಂದು …

Read More »

ಗಣಪನ ಆಗಮನಕ್ಕೆ ಕುಂದಾನಗರಿ ಸಜ್ಜಾಗಿದ್ದು

ಬೆಳಗಾವಿ: ಗಣಪನ ಆಗಮನಕ್ಕೆ ಕುಂದಾನಗರಿ ಸಜ್ಜಾಗಿದ್ದು, ಭರದ ಸಿದ್ಧತೆಯಲ್ಲಿ ಜನರು ತೊಡಗಿದ್ದಾರೆ. ಮಾರುಕಟ್ಟೆ ಪ್ರದೇಶಗಳಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆದಿದೆ. ಇನ್ನು, ಪೂಜಾ ಸಾಮಗ್ರಿ ಖರೀದಿಗೆ ಜನ ಅಂಗಡಿಗಳಿಗೆ ಮುಗಿ ಬಿದ್ದಿರುವುದು ಇಂದು ಕಂಡು ಬಂತು. ಹೌದು.. ಇಡೀ ರಾಜ್ಯದಲ್ಲೇ ಬೆಳಗಾವಿಯಲ್ಲಿ ಅದ್ಧೂರಿ ಗಣೇಶೋತ್ಸವ ಆಚರಿಸಲಾಗುತ್ತದೆ‌. ಈ ಸಲ ಸೆ.18ರಂದು ಕೆಲವರು ಚೌತಿ ಆಚರಿಸುತ್ತಿದ್ದರೆ ಮತ್ತೊಂದಿಷ್ಟು ಜನ 19ರಂದು ಆಚರಿಸಲು ಮುಂದಾಗಿದ್ದಾರೆ. ಹಾಗಾಗಿ ಭಾನುವಾರ ಬೆಳಗಾವಿಯ ಗಣಪತಿ ಗಲ್ಲಿ, ಖಡೇಬಜಾರ್, …

Read More »

ಆಂಧ್ರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಥಣಿಯ ಆರು ಮಂದಿ ಸಾವು; ಸ್ವಗ್ರಾಮದಲ್ಲಿ ನೆರವೇರಿತು ಅಂತ್ಯಕ್ರಿಯೆ

ಚಿಕ್ಕೋಡಿ : ಸೆಪ್ಟೆಂಬರ್ 15 ರಂದು ತಿರುಪತಿಯ ತಿಮ್ಮಪ್ಪನ ದರ್ಶನ ಮಾಡಿಕೊಂಡು ಸ್ವ ಗ್ರಾಮಕ್ಕೆ ಆಗಮಿಸುತ್ತಿದ್ದ ಅಥಣಿ ತಾಲೂಕಿನ ಬಡಚಿ ಗ್ರಾಮದ ಭಕ್ತರ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಐದು ಜನ ಮೃತಪಟ್ಟಿದ್ದರು. ಇವತ್ತು ಅವರ ಸ್ವ ಗ್ರಾಮದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿ, ಕಡಪ-ಚಿತ್ತೂರು ರಸ್ತೆಯಲ್ಲಿ ಅಪಘಾತ ಸಂಭವಿಸಿ ಐದು ಜನ ಸಾವು ಸಂಭವಿಸಿ 11 ಜನರಿಗೆ ಗಾಯಗಳಾಗಿತ್ತು. ಇದರಲ್ಲಿ ಮೂವರ ಸ್ಥಿತಿ …

Read More »