ದಾವಣಗೆರೆ: ಅಪಘಾತ ಪ್ರಕರಣವೊಂದರಲ್ಲಿ ಬಾಕಿ ಪರಿಹಾರ ಮೊತ್ತ ನೀಡದ ಹಿನ್ನೆಲೆ ಸೋಮವಾರ ನ್ಯಾಯಾಲಯದ ಆದೇಶದ ಮೇರೆಗೆ ಎರಡು ವಾಯುವ್ಯ ಕರ್ನಾಟಕ ಸಾರಿಗೆ ಬಸ್‍ಗಳನ್ನು ಜಪ್ತಿ ಮಾಡಲಾಯಿತು. ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಹಾವೇರಿ ಡಿಪೋಗೆ ಸೇರಿದ ಎರಡು ಬಸ್‍ಗಳನ್ನು ನ್ಯಾಯಾಂಗ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೊಡಬೇಕಿದ್ದ ಪರಿಹಾರದ ಬಾಕಿ ಮೊತ್ತ ಉಳಿಸಿಕೊಂಡಿರುವ ಕೆಎಸ್ಆರ್ಟಿಸಿ ಸಂಸ್ಥೆಯ ಚರಾಸ್ತಿ ಜಪ್ತಿಗೆ ದಾವಣಗೆರೆ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‍ಸಿ …
Read More »Yearly Archives: 2023
ಶಕ್ತಿ ಯೋಜನೆ: NWKRTC ಬಸ್ಗಳಲ್ಲಿ ಇದುವರೆಗೂ 13 ಕೋಟಿಗೂ ಅಧಿಕ ಮಹಿಳೆಯರ ಪ್ರಯಾಣ
ಹುಬ್ಬಳ್ಳಿ: ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಮೂರು ತಿಂಗಳು ಪೂರೈಸಿದೆ. ಇದುವರೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ 13.20 ಕೋಟಿ ಮಹಿಳೆಯರು ಶೂನ್ಯ ಟಿಕೆಟ್ ಪಡೆದುಕೊಂಡು ಉಚಿತ ಸಂಚಾರ ಮಾಡಿದ್ದು, ಇದರ ಟಿಕೆಟ್ ಪ್ರಯಾಣದ ಮೊತ್ತ 332.77 ಕೋಟಿ ರೂ.ಗಳಾಗಿದೆ. ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದಿಂದ ಆರಂಭಿಸಲಾಗಿರುವ ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣದ …
Read More »ಬಾಗೇಪಲ್ಲಿ ಬಳಿ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ಕಾರು ಪಲ್ಟಿ.. ಸಿನಿಮಾ ಸ್ಟೈಲ್ನಲ್ಲಿ ವೇಗವಾಗಿ ಹೊರಟಿದ್ದವರಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ಚಾಲಕನ ನಿಂಯತ್ರಣ ತಪ್ಪಿ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ಕಾರು ಪಲ್ಟಿಯಾಗಿ, ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಸಾದಲಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ನೆರೆಯ ರಾಜ್ಯ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ಭೇಟಿ ಕೊಟ್ಟು ಗಾಯಾಳುಗಳನ್ನು …
Read More »ಅತ್ಯಾಚಾರ ಪ್ರಕರಣ ದಾಖಲಿಸಿದ ಲಿವ್ ಇನ್ ಸಂಗಾತಿಯ ಹತ್ಯೆ
ಪಾಲ್ಘರ್ (ಮಹಾರಾಷ್ಟ್ರ): ತನ್ನೊಂದಿಗೆ ಸಹಜೀವನ (ಲಿವ್ ಇನ್) ನಡೆಸುತ್ತಿದ್ದ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸಿದ ಕಾರಣಕ್ಕೆ ಆಕೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿ, ಶವ ಎಸೆದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಂಗಳವಾರ 43 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಸಾಯಿ ಪ್ರದೇಶದ ನಿವಾಸಿ ಬಂಧಿತ ಆರೋಪಿಯಾಗಿದ್ದು, ಆಗಸ್ಟ್ 9ರಿಂದ 12ರ ನಡುವೆ ತನ್ನ 28 ವರ್ಷದ ಸಂಗಾತಿಯನ್ನು ಕೊಲೆ ಮಾಡಿದ್ದಾನೆ. ಆರೋಪಿ ಶವವನ್ನು ನೆರೆ ರಾಜ್ಯ …
Read More »ರೈಲಿನಲ್ಲಿ ಸಂಚರಿಸುತ್ತಿದ್ದ 8 ಪ್ರಯಾಣಿಕರು ಅಸ್ವಸ್ಥ, ಬಿಮ್ಸ್‌ಗೆ ದಾಖಲು
ಬೆಳಗಾವಿ: ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ 8 ಮಂದಿ ಯುವಕರು ಪ್ರಜ್ಞೆ ತಪ್ಪಿದ ಘಟನೆ ಸೋಮವಾರ ನಡೆದಿದೆ. ಅಸ್ವಸ್ಥರನ್ನು ತಕ್ಷಣವೇ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಸ್ಕೋ-ನಿಜಾಮುದ್ದೀನ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಜ್ಞೆ ಕಳೆದುಕೊಂಡಿದ್ದಾರೆ. ಗಾಬರಿಯಾದ ಸಹ ಪ್ರಯಾಣಿಕರು ಈ ವಿಚಾರವನ್ನು ತಕ್ಷಣ ರೈಲ್ವೇ ಪೊಲೀಸರ ಗಮನಕ್ಕೆ ತಂದಿದ್ದಾರೆ. ಕೂಡಲೇ ಪ್ರಯಾಣಿಕರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಸ್ವಸ್ಥಗೊಂಡ ಎಲ್ಲರೂ ಉತ್ತರ ಪ್ರದೇಶದ …
Read More »ಬಸ್ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು
ಬಸ್‌ನಲ್ಲಿ ನಿಲಲ್ಲು ಜಾಗವಿಲ್ಲದೆ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ನಡೆದಿದೆ. ಕಳೆದ ಎರಡು ತಿಂಗಳಿಂದ ಬಸ್ ನಲ್ಲಿ ವಿದ್ಯಾರ್ಥಿಗಳು ನಿಲ್ಲಲ್ಲು ಜಾಗವಿಲ್ಲ.ಕೇರೂರ ಗ್ರಾಮದಲ್ಲಿ ಬಸ್ ಗಳನ್ನು ನಿಲ್ಲಿಸುತ್ತಿಲ್ಲಾ.ಇದರಿಂದಾಗಿ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ. ಸಾರಿಗೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ನಮ್ಮ ಪ್ರತಿಭಟನೆ ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟುಹಿಡಿದರು.ಚಿಕ್ಕೋಡಿ ಪೊಲೀಸ ಠಾಣಾ …
Read More »‘ರಾಜ್ಯದ್ಯಂತ ಮುಂದಿನ ಹೋರಾಟದ ಬಗ್ಗೆ ತೀರ್ಮಾನ, ನಾಳೆ ದೆಹಲಿಗೆ ತೆರಳಿ ಮೈತ್ರಿ ಕುರಿತು ಚರ್ಚೆ:B.S.Y.
ಬೆಂಗಳೂರು: ”ಸಿಎಂ ಸಿದ್ದರಾಮಯ್ಯ ಸರ್ಕಾರ ಇಷ್ಟು ಬೇಗ ಜನಪ್ರಿಯತೆ ಕಳೆದುಕೊಳ್ಳುತ್ತದೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಇವತ್ತು ನಾವೆಲ್ಲ ಕುಳಿತು ಚರ್ಚೆ ಮಾಡುತ್ತೇವೆ. ರಾಜ್ಯಾದ್ಯಂತ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತವೆ” ಎಂದರು. ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ವೈ, ”ಲೋಕಸಭೆ ಚುನಾವಣೆಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ …
Read More »ಒಂದೇ ಕುಟುಂಬದ 15 ಮಂದಿಯಿಂದ ಪರಿಸರಸ್ನೇಹಿ ಗಣಪತಿ ನಿರ್ಮಾಣ: ಗ್ರಾಹಕ ನಿಗದಿಪಡಿಸಿದ ದುಡ್ಡಿಗೆ ಮೂರ್ತಿ ಮಾರಾಟ
ಹಾವೇರಿ: ಇಲ್ಲಿನಗುತ್ತಲ ಪಟ್ಟಣದಲ್ಲೊಂದು ಗಣಪತಿ ತಯಾರಿಸುವ ವಿಶೇಷ ಅನ್ನಿಸುವ ಕುಟುಂಬವಿದೆ. ನೆಗಳೂರುಮಠ ಎಂಬ ಹೆಸರಿನ ಕುಟುಂಬದ ಸುಮಾರು 15 ಮಂದಿ ಗಣಪತಿ ವಿಗ್ರಹ ತಯಾರಿಸುತ್ತಾರೆ. ಮೂರ್ತಿ ಸಿದ್ಧಪಡಿಸುವ ಈ ಕಲಾವಿದರೆಲ್ಲರೂ ಸರ್ಕಾರಿ ನೌಕರಿಯಲ್ಲಿದ್ದಾರೆ. ಗಣೇಶೋತ್ಸವಕ್ಕೆ ಈ ಮನೆಯ ಅಳಿಯಂದಿರು, ಸೊಸೆಯಂದಿರು, ಮಕ್ಕಳು, ಮೊಮ್ಮಕ್ಕಳು ಒಟ್ಟು ಸೇರಿದರೆ ಇವರ ಸಂಖ್ಯೆ 25 ದಾಟುತ್ತದೆ. ಹಬ್ಬ ಸಮೀಪಿಸುತ್ತಿದ್ದಂತೆ ಸರ್ಕಾರಿ ಕೆಲಸಕ್ಕೆ ರಜೆ ಹಾಕುವ ಇವರು ವಿಘ್ನವಿನಾಶಕನ ತಯಾರಿಯಲ್ಲಿ ಸಂಪೂರ್ಣವಾಗಿ ತೊಡುಗುತ್ತಾರೆ. ಯುಗಾದಿಯಂದು ಗಣೇಶ ಮೂರ್ತಿಗಳ …
Read More »ಗ್ಯಾರಂಟಿ ಯೋಜನೆಗೆ ‘SCSPTSP’ ಅನುದಾನ ಬಳಕೆ: ಈವರೆಗೆ ಬಿಡುಗಡೆಯಾದ ಹಣ ಎಷ್ಟು?
ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (SCSP TSP) ಅನುದಾನ ಬಳಕೆ ಮಾಡುತ್ತಿದೆ. ಸರ್ಕಾರದ ನಡೆಗೆ ಪ್ರತಿಪಕ್ಷ ಬಿಜೆಪಿ ಹಾಗು ದಲಿತ ನಾಯಕರು ಟೀಕಾಸಮರ ನಡೆಸಿದ್ದಾರೆ. ಸರ್ಕಾರ ಈಗಾಗಲೇ ಎಸ್ಸಿಎಸ್ಪಿಟಿಎಸ್ಪಿ ಅನುದಾನದಿಂದ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಬಿಡುಗಡೆ ಮಾಡಿದೆ. ಈವರೆಗೆ ಬಿಡುಗಡೆಯಾದ ಹಣ ಎಷ್ಟು?, ಎಷ್ಟು ಹಣ ಹಂಚಿಕೆಯಾಗಿದೆ? ನೋಡೋಣ. ಕಾಂಗ್ರೆಸ್ ಸರ್ಕಾರ ತನ್ನ ಶತದಿನಗಳ ಆಡಳಿತದಲ್ಲಿ ಗ್ಯಾರಂಟಿಗಳ ಅನುಷ್ಠಾನಕ್ಕೆ …
Read More »ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿದೇಶಿ ವಿಮಾನ ಹಾರಾಟ ಶುರು
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿದೇಶಿ ವಿಮಾನಗಳ ಹಾರಾಟ ಇಂದಿನಿಂದ ಪ್ರಾರಂಭವಾಗಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಇಂದಿನಿಂದ ಟರ್ಮಿನಲ್ 2ಗೆ ಶಿಫ್ಟ್ ಆಗಿದೆ. 5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಗಾರ್ಡನ್ ಟರ್ಮಿನಲ್ ಅತ್ಯಾಧುನಿಕ ತಂತ್ರಜ್ಞಾನವುಳ್ಳದ್ದಾಗಿದೆ. ಕಳೆದ ವರ್ಷ ನವೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಟರ್ಮಿನಲ್ ಅನ್ನು ಉದ್ಘಾಟನೆ ಮಾಡಿದ್ದರು. ಜನವರಿ 15ರಿಂದ ಕೆಲ ದೇಶಿಯ ವಿಮಾನಗಳ ಹಾರಾಟ ಮಾತ್ರ ಟಿ2ನಲ್ಲಿ …
Read More »