ಬೆಂಗಳೂರು : ನಾಳೆಯಿಂದ ಕೊರೊನಾ ಟೆಸ್ಟಿಂಗ್ ಹೆಚ್ಚು ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಕುರಿತು ವಿಕಾಸಸೌಧ ಕಚೇರಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದರು. ನಾಳೆ ಕೇಂದ್ರ ಆರೋಗ್ಯ ಸಚಿವರು ರಾಜ್ಯಗಳ ಜೊತೆ ಕೊರೊನಾ ಸ್ಥಿತಿಗತಿ ಸಂಬಂಧ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೊರೊನಾ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಯಲಿದೆ. …
Read More »Yearly Archives: 2023
ತುರ್ತಾಗಿ ಉನ್ನತ ಮಟ್ಟದ ಸಭೆ ಕರೆದು, ಬರ ಪರಿಹಾರ ನೀಡಲು ಪ್ರಧಾನಿಗೆ ಒತ್ತಾಯಿಸಿದ್ದೇವೆ: ಸಿಎಂ
ನವದೆಹಲಿ/ಬೆಂಗಳೂರು: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರಧಾನಿ ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಕಮಿತಿ ಸಭೆ ನಡೆಯಬೇಕು. ಆದರೆ, ನಾವು ಇದುವರೆಗೂ ಮೂರು ಬಾರಿ …
Read More »ಮಹಾರಾಷ್ಟ್ರದಲ್ಲಿ ಜಾತಿ ಆಧಾರಿತ ಜನಗಣತಿ ವಿರೋಧಿಸಿದ ಆರ್‌ಎಸ್‌ಎಸ್
ನಾಗ್ಪುರ : ಮಹಾರಾಷ್ಟ್ರ ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿಗೆ ಜನರು ಬೇಡಿಕೆ ಇಟ್ಟಿದ್ದಾರೆ. ಆದರೆ, ಆರ್‌ಎಸ್‌ಎಸ್ ಜಾತಿ ಆಧಾರಿತ ಜನಗಣತಿ ವಿರೋಧಿಸಿದೆ ಎಂದು ವಿದರ್ಭ ವಲಯದ ಸಹ ಸಂಘಚಾಲಕ್ ಶ್ರೀಧರ ಗಾಡಗೆ ಇಂದು ನಾಗ್ಪುರದಲ್ಲಿ ಹೇಳಿದರು. ಜಾತಿ ಆಧಾರಿತ ಜನಗಣತಿಯನ್ನು ಆರ್‌ಎಸ್‌ಎಸ್ ವಿರೋಧಿಸಿದ ನಂತರ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಜಾತಿವಾರು ಜನಗಣತಿ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದರ್ಭ ಪ್ರದೇಶದ ಸಹಸಂಚಾಲಕ್ ಶ್ರೀಧರ್ ಗಾಡ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. …
Read More »ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ನಟಿ ಕಂಗನಾ ಸ್ಪರ್ಧಿಸುವುದು ಖಚಿತ
ಮಂಡಿ (ಹಿಮಾಚಲ ಪ್ರದೇಶ): ಬಾಲಿವುಡ್ ಚಿತ್ರರಂಗದ ಖ್ಯಾತ ನಟಿ ಕಂಗನಾ ರಣಾವತ್ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ವದಂತಿಗಳು ಇವೆ. ಈ ಬಗ್ಗೆ ಇದೀಗ ಕಂಗನಾ ತಂದೆ ಅಮರ್ದೀಪ್ ರಣಾವತ್ ಸ್ಪಷ್ಟಪಡಿಸಿದ್ದಾರೆ. ತಮ್ಮ ಮಗಳು ಲೋಕಸಭೆ ಚುನಾವಣೆಗೆ ಬಿಜೆಪಿ ಪಕ್ಷದಿಂದ ಸ್ಪರ್ಧಿಸುವುದು ಖಚಿತ ಎಂದು ತಿಳಿಸಿದ್ದಾರೆ. ಕಳೆದ ನವೆಂಬರ್‌ನಲ್ಲಿ ಕಂಗನಾ ತಮ್ಮ ರಾಜಕೀಯ ವಲಯದ ಆಕಾಂಕ್ಷೆಗಳ …
Read More »ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ: ಕಾರಣ ಬಿಚ್ಚಿಟ್ಟ ಹೆಸ್ಕಾಂ ಎಂಡಿ
ಹುಬ್ಬಳ್ಳಿ : ಸಮರ್ಪಕವಾಗಿ ಮಳೆಯಾಗದೇ ಅನ್ನದಾತ ಕಂಗಾಲಾಗಿದ್ದಾನೆ. ಇದರ ಜೊತೆಗೆ ವಿದ್ಯುತ್ ನಂಬಿ ಕೃಷಿ ಮಾಡುವ ರೈತನ ಜೊತೆಗೆ ಹೆಸ್ಕಾಂ ಇಲಾಖೆ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ನೀರಾವರಿಗೆ ಬೇಕಾದ ವಿದ್ಯುತ್ ಪೂರೈಸಲು ಮೀನಮೇಷ ಎಣಿಸುತ್ತಿದ್ದು, ರೈತ ಸಮುದಾಯಕ್ಕೆ ನುಂಗಲಾರದ ಬಿಸಿ ತುಪ್ಪವಾಗಿದೆ. ಧಾರವಾಡ ಜಿಲ್ಲೆಯ ರೈತರ ಪಂಪ್‌ಸೆಟ್‌ಗಳಿಗೆ ಕಳೆದ ಕೆಲ ದಿನಗಳಿಂದ ನಿಗದಿತ ಸಮಯಕ್ಕೆ ವಿದ್ಯುತ್ ನೀಡದಿರುವುದು ರೈತರಿಗೆ ಅನಾನುಕೂಲವಾಗುತ್ತಿದೆ. ರೈತರು ಮಳೆಯಿಲ್ಲದೇ ಕಂಗಾಲಾಗಿದ್ದಾರೆ. ಬಿತ್ತಿದ ಬೆಳೆ ಒಣಗುತ್ತಿದೆ. ಆದರೆ, ಬೋರ್‌ವೆಲ್ …
Read More »ಮೈಸೂರಲ್ಲಿ ಕೋವಿಡ್ ಆತಂಕ
ಮೈಸೂರು: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣ ವರದಿಯಾದ ಹಿನ್ನೆಲೆ ಹೆಚ್ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ ರವಿಕುಮಾರ್.ಟಿ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಗ್ಯಾಧಿಕಾರಿ ಡಾ ರವಿಕುಮಾರ್ ಮಾತನಾಡಿ, “ಕೇರಳದ ವಯನಾಡ್ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದ ಹಿನ್ನೆಲೆ ಇಂದು ಹೆಚ್ಡಿ ಕೋಟೆಯ ಬಾವಲಿ ಚೆಕ್ ಪೋಸ್ಟ್ಗೆ ಆಗಮಿಸಿ ಪರಿಶೀಲನೆ ನಡೆಸಿದ್ದೇನೆ. ನಾಳೆಯಿಂದ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಹಾಗೂ …
Read More »ಪ್ರಧಾನಿ ಅಭ್ಯರ್ಥಿಯಾಗಿ ಖರ್ಗೆ ಹೆಸರು ಪ್ರಸ್ತಾಪಿಸಿದ ಮಮತಾ, ಕೇಜ್ರಿವಾಲ್
ನವದೆಹಲಿ: ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದಲ್ಲಿ ಮಂಗಳವಾರ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಆದರೆ, ವರಿಷ್ಠ ನಾಯಕ ಖರ್ಗೆ, ಮೊದಲು ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯವಾಗಿದೆ. ಉಳಿದೆಲ್ಲವನ್ನೂ ನಂತರ ನಿರ್ಧರಿಸಬಹುದು ಎಂದು ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ನಾಲ್ಕನೇ ಸಭೆ ಜರುಗಿದ್ದು. 28 …
Read More »ಸ್ಮೃತಿ ಇರಾನಿ ಭೇಟಿಯಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ನವದೆಹಲಿ/ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು. ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ …
Read More »ಖಾನಾಪುರದ ಭಾಗ್ಯಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಅವ್ಯವಹಾರ ಆರೋಪ ಚರ್ಚೆಗೆ ಬನ್ನಿ: ಶಾಸಕ ಹಲಗೇಕರ್ಗೆ ನಿಂಬಾಳ್ಕರ್ ಸವಾಲು
ಬೆಳಗಾವಿ: ಖಾನಾಪುರದ ಭಾಗ್ಯಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಅವ್ಯವಹಾರ ಆರೋಪದಲ್ಲಿ ರಾಜಕೀಯ ಏನೂ ಇಲ್ಲ. ಈಗ ಚುನಾವಣೆ ಮುಗಿದಿದ್ದು, ನೀವು ದಾಖಲೆ ಸಮೇತ ಬಹಿರಂಗ ಚರ್ಚೆ ಬರುವಂತೆ ಶಾಸಕ ವಿಠ್ಠಲ ಹಲಗೇಕರ್ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸವಾಲ್ ಹಾಕಿದ್ದಾರೆ. ಖಾನಾಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾಹಿತಿ ಹಕ್ಕಿನಡಿ ಯಾವುದೇ ದಾಖಲೆ ಕೊಡ್ತಿಲ್ಲ. ಕಳೆದ 6 ವರ್ಷಗಳಿಂದ ಬೆನ್ನು ಬಿದ್ದ ಮೇಲೆ ನಿವೃತ್ತ ನ್ಯಾಯಾಧೀಶ ಎಸ್.ಪಿ.ವಸ್ತ್ರದ ಅವರ ನೇತೃತ್ವದಲ್ಲಿ ತನಿಖೆ …
Read More »ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದ ಬೆಳಗಾವಿಯ ಸಂಜೀವ್ ಹಮ್ಮನ್ನವರ
ಬೆಳಗಾವಿ: ದೆಹಲಿಯ ಐಜಿ ಸ್ಟೇಡಿಯಂನಲ್ಲಿ ನಡೆದ ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್‌ನಲ್ಲಿ ಬೆಳಗಾವಿಯ ಕೆಪಿಟಿಸಿಎಲ್ ಮತ್ತು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಸಂಜೀವ್ ಹಮ್ಮನ್ನವರ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಡಿಸೆಂಬರ್ 10 ರಿಂದ 17ರ ವರೆಗೆ ನಡೆದ ಕ್ರೀಡಾಕೂಟದಲ್ಲಿ ಪ್ಯಾರಾ ಟೇಬಲ್ ಟೆನಿಸ್ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕದ ಸಂಜೀವ್ ಹಜೇರಿ ವಿರುದ್ಧ 3-0 ಅಂತರದಲ್ಲಿ ಗೆದ್ದಿದ್ದ ಸಂಜೀವ ಹಮ್ಮನ್ನವರ ಫೈನಲ್‌ನಲ್ಲಿ ಹರಿಯಾಣದ ಯಗೇಶ್ ನಾಡಾರ್ ವಿರುದ್ಧ 3-1 ಅಂತರದಿಂದ ಪರಾಭವಗೊಂಡು ಬೆಳ್ಳಿ ಪದಕ್ಕೆ …
Read More »