ನವದೆಹಲಿ: ಒಂದು ವೇಳೆ ಬೇರೆ ಪಕ್ಷ ಅಧಿಕಾರದಲ್ಲಿದ್ದ ವೇಳೆ ಸಂಸತ್ ಭದ್ರತಾ ಲೋಪ ನಡೆದಿದ್ದರೆ ಬಿಜೆಪಿ ಪಕ್ಷ ಇಡೀ ದೆಹಲಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿತ್ತು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಕಿಡಿ ಕಾರಿದ್ದಾರೆ. ಈಚೆಗೆ ಸಂಸತ್ ಭವನದಲ್ಲಿ ನಡೆದ ಭದ್ರತಾ ಲೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, “ಕೇಂದ್ರದಲ್ಲಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೆ, ಈ ವಿಷಯದ ಬಗ್ಗೆ ಬಿಜೆಪಿ ಇಡೀ ದೆಹಲಿಯನ್ನು ಬಂದ್ ಮಾಡುತ್ತಿತ್ತು. …
Read More »Yearly Archives: 2023
CM&DCM ದೆಹಲಿಗೆ ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ”:DCM
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಿಗಮ …
Read More »ನಮ್ಮ ಮಠಾಧಿಪತಿಗಳ ಕೈಯಲ್ಲಿ ಆಯುಧ ಕೊಡಬೇಕು ಎಂದ ದಿಂಗಾಲೇಶ್ವರ ಸ್ವಾಮೀಜಿ
ಹುಬ್ಬಳ್ಳಿ : ನಮ್ಮ ಸಮಾಜದ ನಾಯಕರು ಮತ್ತು ಮಠಾಧಿಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಪುರಾಣವೊಂದನ್ನು ಉಲ್ಲೇಖಿಸಿ ಹೇಳಿರುವುದು ಎಂದು ಚರ್ಚೆಗೆ ಗ್ರಾಸವಾಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ಹೇಳಿದ್ದು, ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ” ಪುರಾಣದಲ್ಲಿ ದೇವಿ …
Read More »60 ವರ್ಷ ಮೇಲ್ಪಟ್ಟವರು, ಹೃದಯ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯ..
ಬೆಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಉನ್ನತಾಧಿಕಾರಿಗಳ ಸಭೆ ನಡೆಸಿ ರಾಜ್ಯದ ಆಸ್ಪತ್ರೆಗಳಲ್ಲಿ ಹೆಚ್ಚು ಕೊರೊನಾ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಇದೇ ವೇಳೆ 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಸಮಸ್ಯೆ ಹೊಂದಿರುವವರಿಗೆ ಮಾಸ್ಕ್ ಕಡ್ಡಾಯ ಮಾಡಬೇಕು ಎಂದು ತಜ್ಞರ ಸಮಿತಿ ಸಲಹೆ ನೀಡಿದೆ. ಈ ಸಲಹೆಗಳನ್ನು ಪರಿಶೀಲಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು …
Read More »ಎರಡು ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಗೃಹ ಸಚಿವ ಡಾ ಜಿ ಪರಮೇಶ್ವರ್
ಬೆಂಗಳೂರು : ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಎತ್ತಿನ ಹೊಳೆ ಯೋಜನೆ ಬಗ್ಗೆ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಗೆ ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ …
Read More »ಮಹಿಳೆ ಮೇಲಿನ ಅಮಾನವೀಯ ಹಲ್ಲೆ ಮಾಡಿದ ಬೆಳಗಾವಿ ಘಟನೆ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು.
ನವದೆಹಲಿ: ಮಹಿಳೆ ಮೇಲಿನ ಅಮಾನವೀಯ ಹಲ್ಲೆ ಮಾಡಿದ ಬೆಳಗಾವಿ ಘಟನೆ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು. ಈ ಅಮಾನವೀಯ ಪ್ರಕರಣದ ಬಗ್ಗೆ ಉತ್ತರಪ್ರದೇಶದ ಬಿಜೆಪಿ ಸಂಸದೆ ಕಾಂತಾ ಕರ್ದಮ್ ಅವರು ಸದನಕ್ಕೆ ಗಮನಕ್ಕೆ ತಂದರು. ಕರ್ನಾಟಕದಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ. ರಕ್ಷಣೆ ನೀಡಬೇಕಾದ ಪೊಲೀಸರೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು. ಇದಕ್ಕೆ ಸದನದಲ್ಲಿ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ ಗದ್ದಲ ಶುರು ಮಾಡಿದರು. ಇದರ ಮಧ್ಯೆಯೂ ಸಂಸದೆ ಮಹಿಳೆಯ ಪರವಾಗಿ ಮಾತನಾಡಿ, ಮಹಿಳೆಯ …
Read More »ಬೆಳಗಾವಿ ಮಹಿಳೆಯ ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣದ ತನಿಖೆ ಚುರುಕುಗೊಳಿಸಿದ ಸಿಐಡಿ
ಬೆಳಗಾವಿ: ಜಿಲ್ಲೆ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣವನ್ನು ನಿನ್ನೆಯಷ್ಟೇ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಪ್ರಕರಣದ ಕುರಿತು ಸಿಐಡಿ ಡಿಐಜಿ ಸುಧೀರಕುಮಾರ ರೆಡ್ಡಿ ನೇತೃತ್ವದ ತಂಡ ಇಂದು (ಸೋಮವಾರ) ತನಿಖೆ ಚುರುಗೊಳಿಸಿದೆ. ಭಾನುವಾರ ರಾತ್ರಿಯೇ ಬೆಳಗಾವಿಗೆ ಬಂದು ವಾಸ್ತವ್ಯ ಹೂಡಿರುವ ಸಿಐಡಿ ತಂಡವು, ಇಂದು ಬೆಳಗ್ಗೆಯೇ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಸೆಂಟರ್ಗೆ ಭೇಟಿ ನೀಡಿ, ಸಂತ್ರಸ್ತ ಮಹಿಳೆಯಿಂದ ಮಾಹಿತಿ ಕಲೆ ಹಾಕಿದೆ. ಸಿಐಡಿ …
Read More »ಮಲ್ಟಿ ಬ್ರ್ಯಾಂಡ್ ಕೃಷಿ ಉತ್ಪನ್ನಗಳ ಮಾರಾಟ ಮಳಿಗೆಗೆ ಸಚಿವ ಚಲುವರಾಯಸ್ವಾಮಿ ಚಾಲನೆ
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ನಗರದಲ್ಲಿ ನೂತನವಾಗಿ ಪ್ರಾರಂಭಿಸಲಾದ ಮಲ್ಟಿ ಬ್ರ್ಯಾಂಡ್ ಕೃಷಿ ಉತ್ಪನ್ನಗಳ ಮಾರಾಟ ಮಳಿಗೆಗೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಬುಧವಾರ ಚಾಲನೆ ನೀಡಿದರು. ಕೃಷಿ ಉತ್ಪನ್ನಗಳ ಮಳಿಗೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರಿಗೆ ದಿನ ನಿತ್ಯ ಬಳಕೆಗೆ ಬೇಕಾಗುವ ವಸ್ತುಗಳು ಒಂದೇ ಕಡೆ ಸಿಗಲು ಮಾಡಿರುವಂತ ಸೂಪರ್ ಮಾರ್ಕೆಟ್ ತರಹ ಕೃಷಿ ಮಾರ್ಕೆಟ್ ರೈತರಿಗೆ ಉಪಯೋಗವಾಗಲಿದೆ. ಈ ತರಹದ ಮಳಿಗೆಯನ್ನು ರಾಜ್ಯದಲ್ಲಿ 150 ಕ್ಕೂ ಹೆಚ್ಚು …
Read More »ಬೆಳಗಾವಿ: ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ
ಬೆಳಗಾವಿ: ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಯ ನಗರ ಪ್ರದೇಶದ ಅಭಿಯಾನಕ್ಕೆ ಇಲ್ಲಿನ ಪಾಲಿಕೆ ಆವರಣದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶನಿವಾರ ಚಾಲನೆ ನೀಡಿದರು. ‘ಪ್ರಧಾನಿ ನರೇಂದ್ರ ಮೋದಿ ಅವರ ಸಮಗ್ರ ಅಭಿವೃದ್ಧಿಯ ಕನಸಿನ ಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಹಮ್ಮಿಕೊಂಡ ವಿಕಸಿತ ಭಾರತ ಸಂಕಲ್ಪ ಯಾತ್ರೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಯಶಸ್ವಿಯಾಗಿ ಮುನ್ನಡೆದಿದೆ. ಪ್ರಸ್ತುತ ನಗರ ಪ್ರದೇಶಗಳಲ್ಲಿ ಮೋದಿ ಗ್ಯಾರಂಟಿ ಯೋಜನೆ ಜಾಗೃತಿಯ ವಾಹನ …
Read More »ಬೆಳಗಾವಿ: ಪ್ಲಾಸ್ಟಿಕ್ ಬಳಸಿ ರಸ್ತೆ ನಿರ್ಮಾಣಕ್ಕೆ ಒಪ್ಪಿಗೆ
ಬೆಳಗಾವಿ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನನಿತ್ಯ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಬಳಸಿಕೊಂಡು ರಸ್ತೆ ನಿರ್ಮಾಣ ಮಾಡುವ ವಿನೂತನ ಯೋಜನೆ ಕೈಗೆತ್ತಿಕೊಳ್ಳಲು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದು, ಪ್ರಾಯೋಗಿಕವಾಗಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ರಸ್ತೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಯಿತು. ‘ಶೇ 6ರಿಂದ ಶೇ 8ರಷ್ಟು ಪ್ಲಾಸ್ಟಿಕ್ ತ್ಯಾಜ್ಯ …
Read More »