ಬೆಂಗಳೂರು: “ನಾವು ಮತ್ತು ತಮಿಳುನಾಡಿನವರು ಅಣ್ಣ-ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿಂದು ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದಕ್ಕಿಂತ, ಮಾತನಾಡಿ ಬಗೆಹರಿಸಿಕೊಳ್ಳಬೇಕು ಎಂಬುದು ನನ್ನ ಆಶಯ. ತಮಿಳುನಾಡು ಮತ್ತು ಕರ್ನಾಟಕದ ಜನ ಪರಸ್ಪರ ಎರಡೂ ಕಡೆ ಜೀವನ ಮಾಡುತ್ತಿದ್ದಾರೆ. ಹೀಗಿದ್ದಾಗ ಜಗಳ ಮಾಡುವುದು ಸರಿಯೇ? …
Read More »Yearly Archives: 2023
ವರಮಹಾಲಕ್ಷ್ಮಿ ಹಬ್ಬ: ಸರ್ಕಾರದಿಂದ ಮಹಿಳೆಯರಿಗೆ ಅರಿಶಿನ, ಕುಂಕುಮ, ಬಳೆ ಉಡುಗೊರೆ
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ರಾಜ್ಯದ ಮಹಿಳೆಯರಿಗೆ ಉಡುಗೊರೆಯಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆಗಸ್ಟ್ 25 ರಂದು ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅನುಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಹಾಗೂ ಬಳೆಗಳನ್ನು ನೀಡಲಾಗುತ್ತದೆ. ರಾಜ್ಯ ಸರ್ಕಾರದ ಸುತ್ತೋಲೆಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿನ, ಕುಂಕುಮ ಮತ್ತು ಹಸಿರು ಬಳೆಗಳನ್ನು …
Read More »ಸದ್ದಿಲ್ಲದೇ ‘ಆಪರೇಷನ್ ಹಸ್ತ’: ಎಸ್.ಟಿ.ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು : 2019ರಲ್ಲಿ ಕಾಂಗ್ರೆಸ್, ಜೆಡಿಎಸ್ ತೊರೆದು ತಮ್ಮ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶಾಸಕರು ಬಿಜೆಪಿ ತೊರೆಯದಂತೆ ನಿಗಾ ವಹಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿರುವ ಬೆನ್ನಲ್ಲೇ ಸದ್ದಿಲ್ಲದೇ ‘ಆಪರೇಷನ್ ಹಸ್ತ’ ಕಾರ್ಯಾಚರಣೆ ಬಿರುಸುಗೊಂಡಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪಕ್ಷ ತೊರೆಯದಂತೆ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವೊಲಿಸುವ ಪ್ರಯತ್ನ ನಡೆಸಿದರು. ಆದರೆ ಸೋಮವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ …
Read More »ಲೋಕಸಭೆ ಚುನಾವಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರನಿಗೆ ಟಿಕೆಟ್ ನೀಡುವ ವಿಚಾರ ನಮ್ಮ ಮುಂದೆ ಬಂದಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ : ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿ ಯಾವುದೇ ಮುಸುಕಿನ ಗುದ್ದಾಟ ಇಲ್ಲ ಎಂದು ಮಾಧ್ಯಮಗಳ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು. ಇಂದು (ಸೋಮವಾರ) ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನೂರು ನಿಗಮ, ಮಂಡಳಿಗಳಿಗೆ ಅಧ್ಯಕ್ಷ ಸ್ಥಾನ ನೀಡಬೇಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರಿದ್ದಾರೆ. ಈ ಪೈಕಿ 50 ಶಾಸಕರಿಗೆ ಹಾಗೂ 50 ಕಾರ್ಯಕರ್ತರಿಗೆ ಕೊಡಲಾಗುವುದು. ಕಾರ್ಯಕರ್ತರಿಗೆ ನೀಡಿದರೆ, ಉಳಿದವರಿಗೆ ಸಂತೋಷವಾಗುತ್ತದೆ. ಎಲ್ಲರಿಗೂ …
Read More »ವಂಟಮುರಿ ಕಾಲೋನಿಯಲ್ಲಿ ಆಶ್ರಯ ಯೋಜನೆ ಕಾಲೋನಿ ನಿವಾಸಿಗಳ ಸಂಘದ ವತಿಯಿಂದ ವಿಭಿನ್ನ ರೀತಿಯಲ್ಲಿ ಬಸವ ಪಂಚಮಿ ಆಚರಿಸಲಾಯಿತು
ಬೆಳಗಾವಿಯ ವಂಟಮುರಿ ಕಾಲೋನಿಯಲ್ಲಿ ಆಶ್ರಯ ಯೋಜನೆ ಕಾಲೋನಿ ನಿವಾಸಿಗಳ ಸಂಘದ ವತಿಯಿಂದ ಇಂದು ಬಸವ ಪಂಚಮಿ ಕಾರ್ಯಕ್ರಮವನ್ನು ವಿಭಿನ್ನ ರೀತಿಯಲ್ಲಿ ಆಯೋಜಿಸಲಾಗಿತ್ತು. ಈ ಬಾರಿಯ ಬಸವ ಪಂಚಮಿಯನ್ನು ನಾಗದೇವತೆಗೆ ಹಾಲಿನ ಅಭಿಷೇಕದ ಬದಲು ಮಕ್ಕಳಿಗೆ ಹಾಲು, ಸಿಹಿತಿಂಡಿ ನೀಡಿ ಆಚರಿಸಲಾಯಿತು. ಸಮಾಜದಲ್ಲಿ ದೇವರ ಹೆಸರಿನಲ್ಲಿ ಮೂಢನಂಬಿಕೆ ಹೋಗಲಾಡಿಸಲು, ಆಹಾರ ಪೋಲು ಮಾಡುವದನ್ನು ನಿಲ್ಲಿಸಲು ಹಾಗೂ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಸಾಮಾಜಿಕ …
Read More »ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನ
ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನರಾದರು. ಇಂದು ಹೃದಯಘಾತದಿಂದ ಶಾಹಪೂರ ನಗರದ ನಿವಾಸಿ ಗೋಪಾಲ ರೋಹಿದಾಸ ಹೊನಗೆಕರ ಯವರು ನಿಧನರಾಗಿದ್ದಾರೆ ,ಮೃತರು ಹೆಂಡತಿ ,ಇಬ್ಬರು ಮಕ್ಕಳು, ತಂದೆ ತಾಯಿಗಳು ಸಹೋದರ ಸಹೋದರಿಯನ್ನು ಅಗಲಿದ್ದಾರೆ ಮೃತರನ್ನ ಆತ್ಮಕ್ಕೆ ಶಾಂತಿ ಸಿಗಲೇಂದು ಹೊನಗೆಕರ ಕುಟುಂಬಸ್ಥರು ಪ್ರಾರ್ಥಿಸಿದ್ದಾರೆ , ಇನ್ನೂ ಮೃತನ ಪುಣ್ಯತಿಥಿ ಕಾರ್ಯಕ್ರವನ್ನು ಆ.23 ರಂದು ನೇರವೇರಿಸುವುದಾಗಿ ಗುರು ಹಿರಿಯರು ತಿಳಿಸಿದ್ದಾರೆ
Read More »ಶಾಂತಾಯಿ ವೃದ್ಧಾಶ್ರಮದ 25ನೇ ವಾರ್ಷಿಕೋತ್ಸವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ
ಶಾಂತಾಯಿ ವೃದ್ಧಾಶ್ರಮದ 25ನೇ ವಾರ್ಷಿಕೋತ್ಸವವನ್ನು ಬೆಳಗಾವಿಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ (ಭಿಕ್ಷುಕರ ಪುನರ್ವಸತಿ ಕೇಂದ್ರ) ಆಚರಿಸಲಾಯಿತು. ಶಾಂತಾಯಿ ವೃದ್ಧಾಶ್ರಮ ಈ ವರ್ಷ ಡಿಸೆಂಬರ್‌ನಲ್ಲಿ 25ನೇ ವರ್ಷವನ್ನು ಪೂರೈಸುತ್ತಿದ್ದು, ಪ್ರತಿ ತಿಂಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಿರ್ಗತಿಕ ಪುನರ್ವಸತಿ ಕೇಂದ್ರವು 150 ಜನರ ಆರೈಕೆ ಮಾಡುತ್ತಿದ್ದು, ಸಿಬ್ಬಂದಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಸಿಬ್ಬಂದಿ ಮತ್ತು ಅಧೀಕ್ಷಕ ಮಲ್ಲೇಶಪ್ಪ ಮೇಘದಿ ಅವರನ್ನು ಈ ಸಂದರ್ಭದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, …
Read More »ಕ್ಷತ್ರಿಯ ಮರಾಠಾ ಸಮಾಜದ ಸರ್ವಾಂಗೀಣ ಅಭಿವೃದ್ದಿಯ ಕುರಿತು ಬೆಂಗಳೂರಿನಲ್ಲಿ ಮಾಜಿ ಶಾಸಕ ಅನಿಲ್ ಬೆನೆಕೆ ನೇತೃತ್ವದಲ್ಲಿ ಸಭೆ
ಕ್ಷತ್ರಿಯ ಮರಾಠಾ ಸಮಾಜದ ಸರ್ವಾಂಗೀಣ ಅಭಿವೃದ್ದಿಯ ಕುರಿತು ಬೆಂಗಳೂರಿನಲ್ಲಿ ಮಾಜಿ ಶಾಸಕ ಅನಿಲ್ ಬೆನೆಕೆ ನೇತೃತ್ವದಲ್ಲಿ ಸಭೆ ನಡೆಯಿತು , ಬೆಳಗಾವಿಯ ಸದಾಶಿವ ನಗದರಲ್ಲಿನ ಆಸ್ತಿಯ ೨೦ ವರ್ಷಗಳ ಸಂಪೂರ್ಣ ಆರ್ಥಿಕ ನಿರ್ವಹಣಾ ಹಣವನ್ನು ನನ್ನ ಸ್ವಂತ ಖರ್ಚಿನಲ್ಲಿ ತುಂಬುವುದಾಗಿ ರಾಜ್ಯ ಅಧ್ಯಕ್ಷರಾದ ಶ್ರೀ ಸುರೇಶರಾವ ಸಾಠೆ ಹಾಗೂ ರಾಜ್ಯ ಪದಾಧಿಕಾರಿಗಳ ಸಮ್ಮುಖದಲ್ಲಿ ತೀರ್ಮಾನಿಸಿದ್ದರು, ಮುಂದಿನ ದಿನಗಳಲ್ಲಿ ಭವ್ಯ ಹಾಸ್ಟೆಲ್ ನಿರ್ಮಾಣ ಗೊಳಿಸಿ ಕರ್ನಾಟಕ, ಮಹಾರಾಷ್ಟ, ಗೋವಾ ರಾಜ್ಯಗಳ ಗಡಿ …
Read More »ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಹಿತ ಕಾಯಲಿ,: ಬೊಮ್ಮಾಯಿ
ಬೆಂಗಳೂರು: “ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು” ಎಂದರು. “ಈಗಾಗಲೇ ಟ್ರಿಬ್ಯುನಲ್ …
Read More »ಕೃಷಿ ಸಚಿವರ ವಿರುದ್ದ ರಾಜ್ಯಪಾಲರಿಗೆ ‘ಲಂಚ ಪತ್ರ’: ಇಬ್ಬರು ಕೃಷಿ ಅಧಿಕಾರಿಗಳು 3 ದಿನ ಪೊಲೀಸ್ ಕಸ್ಟಡಿಗೆ
ಮಂಡ್ಯ : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಮೈಸೂರು ಜಿಲ್ಲೆಯ ಕೆ.ಆರ್.ನಗರದ ಇಬ್ಬರು ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಿಐಡಿ ಪೊಲೀಸರು ನ್ಯಾಯಾಲಯದ ಮುಂದೆ ಹಾಜರಿಪಡಿಸಿದ್ದರು. ಇದೀಗ ಕೋರ್ಟ್ ಇಬ್ಬರು ಅಧಿಕಾರಿಗಳನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಕೃಷಿ ಸಚಿವರ ವಿರುದ್ಧ ನಕಲಿ ಪತ್ರ ಸೃಷ್ಟಿಸಿದ ಆರೋಪದ ಮೇರೆಗೆ ಕೆ.ಆರ್.ನಗರ ತಾಲೂಕಿನ …
Read More »