ಸಂಭಾಲ್ (ಉತ್ತರ ಪ್ರದೇಶ): ಎಂಟು ವರ್ಷಗಳ ಹಿಂದೆ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರ ಜನ್ಮದಿನದಂದು ಮಣ್ಣಿನ ಕೇಕ್ ಕತ್ತರಿಸಿ, ಮಣ್ಣಿನ ಲಡ್ಡುಗಳನ್ನು ವಿತರಿಸಿದ್ದ ಆರೋಪ ಪ್ರಕರಣದಲ್ಲಿ ಮೂವರನ್ನು ಸಂಭಾಲ್ ಪೊಲೀಸರು ಬಂಧಿಸಿದ್ದಾರೆ. ಶನಿವಾರ ನ್ಯಾಯಾಲಯ ಹೊರಡಿಸಿದ ಬಂಧನ ವಾರೆಂಟ್ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಶಕೀಲ್ ಉರ್ ರೆಹಮಾನ್ ಮಲಿಕ್, ನೂರ್ ಖಾನ್ ಹಾಗೂ ಜುಲ್ಫಿಕರ್ ಎಂಬುವವರೇ ಬಂಧಿತರೆಂದು ಗುರುತಿಸಲಾಗಿದೆ. …
Read More »Yearly Archives: 2023
ಅಜಿತ್ ನನ್ನ ಸೋದರ ಸಂಬಂಧಿ, ಭೇಟಿಯಲ್ಲಿ ತಪ್ಪೇನು?- ಶರದ್ ಪವಾರ್
ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ತಿಂಗಳ ಹಿಂದೆ ಎರಡು ಬಣಗಳಾಗಿ ಇಬ್ಭಾಗವಾಗಿತ್ತು. ಒಂದೆಡೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗು ಹಿರಿಯ ರಾಜಕಾರಣಿ ಶರದ್ ಪವಾರ್ ಬಿಜೆಪಿಯನ್ನು ಕಟುವಾಗಿ ವಿರೋಧಿಸುತ್ತಿದ್ದಾರೆ. ಮತ್ತೊಂದೆಡೆ, ಸಂಬಂಧದಲ್ಲಿ ಪುತ್ರರಾದ ಅಜಿತ್ ಪವಾರ್ ಅವರು ಶಿವಸೇನೆ (ಏಕನಾಥ್ ಶಿಂಧೆ ಬಣ) ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರ ಸೇರುವ ಮೂಲಕ ಕೇಸರಿ ಪಕ್ಷದ ಸಖ್ಯ ಬೆಳೆಸಿದ್ದಾರೆ. ಹೀಗಾಗಿ ಎನ್ಸಿಪಿ ಶರದ್ ಹಾಗೂ ಅಜಿತ್ ಬಣವಾಗಿ ರೂಪುಗೊಂಡಿದೆ. …
Read More »ಬೆಳಗಾವಿಯಲ್ಲಿ ಏಡಿ ಖರೀದಿಗೆ ಮುಗಿಬಿದ್ದ ಜನರು; ಏಡಿ ಆರೋಗ್ಯಕ್ಕೆ ಒಳ್ಳೆಯದೇ? ನ್ಯೂಟ್ರಿಶಿಯನ್ ಹೇಳುವುದೇನು?
ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಏಡಿಗಳ ಮಾರಾಟ ಬಿರುಸಾಗಿದೆ. ಮಳೆ ಹಿನ್ನೆಲೆಯಲ್ಲಿ ಏಡಿಗಳ ಮಾರಾಟ ನಡೆಯುತ್ತಿದ್ದು, ಗ್ರಾಹಕರು ಮುಗಿಬೀಳುತ್ತಿದ್ದಾರೆ. ಕಳೆದೊಂದು ತಿಂಗಳಿನಿಂದ ನಗರದ ಕ್ಯಾಂಪ್ ಪ್ರದೇಶದಲ್ಲಿನ ಏಡಿ ಖರೀದಿ ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ಸಾಗುತ್ತಿದೆ. ಕ್ಯಾಂಪ್ ಪ್ರದೇಶ, ಖಾಸಬಾಗ, ಕಸಾಯಿಗಲ್ಲಿ ಸೇರಿದಂತೆ ನಗರದ ಹಲವೆಡೆ ಮಾರಾಟ ನಡೆಯುತ್ತಿದೆ. ಬೆಳಗಾವಿ ನಗರ ಸೇರಿ ಸುತ್ತಲಿನ ಹಳ್ಳಿಗಳಿಂದಲೂ ಆಗಮಿಸುತ್ತಿರುವ ಜನ ದುಂಬಾಲು ಬಿದ್ದು ಏಡಿ ಖರೀದಿಸುತ್ತಿದ್ದಾರೆ. ಕಳೆದೊಂದು ತಿಂಗಳಿನಿಂದ ಏಡಿ ಮಾರಾಟ ನಡೆಯುತ್ತಿದ್ದು, ಹಿಡಕಲ್ …
Read More »ಮದರಸಾ ಹಾಸ್ಟೆಲ್ ಕೊಠಡಿಯಲ್ಲಿ ಶಿರಚ್ಛೇದಗೊಳಿಸಿದ ವಿದ್ಯಾರ್ಥಿಯ ಶವ ಪತ್ತೆ!
(ಅಸ್ಸಾಂ): ಮದರಸಾವೊಂದರ ಹಾಸ್ಟೆಲ್ ಕೊಠಡಿಯಲ್ಲಿ ಶಿರಚ್ಛೇದಿಸಿದ ಸ್ಥಿತಿಯಲ್ಲಿ 12 ವರ್ಷದ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಈಶಾನ್ಯ ರಾಜ್ಯ ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಢೋಲೈ ಗ್ರಾಮದ ದಾರುಸ್ ಸಲಾಮ್ ಹಫೀಜಿಯಾ ಮದರಸಾದ ಹಾಸ್ಟೆಲ್ನಲ್ಲಿ ಶಿಕ್ಷಕರು ಬೆಳಗ್ಗೆ ವಿದ್ಯಾರ್ಥಿಗಳನ್ನು ಎಬ್ಬಿಸಲು ಹೋಗಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಹತ್ಯೆಯಾದ ವಿದ್ಯಾರ್ಥಿ ಕಳೆದ ರಾತ್ರಿ ಊಟ ಮುಗಿಸಿ ನಿದ್ರಿಸಲು ತನ್ನ ಕೊಠಡಿಗೆ ತೆರಳಿದ್ದ. ಬೆಳಗ್ಗೆ ಫಜ್ರ್ ನಮಾಝ್‌ಗಾಗಿ (ಬೆಳಗಿನ ಪ್ರಾರ್ಥನೆ) ವಿದ್ಯಾರ್ಥಿಗಳನ್ನು ಎಬ್ಬಿಸಲು …
Read More »ಸಿದ್ದಗಂಗಾ ಮಠದ ಹಿಂಭಾಗದ ಗೋ ಕಟ್ಟೆಯಲ್ಲಿ ಈಜಲು ತೆರಳಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಲು ಹೋಗಿ ನಾಲ್ವರು ಮೃತಪಟ್ಟಿದ್ದಾರೆ.
ತುಮಕೂರು : ಸಿದ್ದಗಂಗಾ ಮಠದ ಹಿಂಭಾಗದಲ್ಲಿರುವ ಗೋ ಕಟ್ಟೆಯಲ್ಲಿ (ಕೃಷಿ ಹೊಂಡದಂತಿರುವ ಕೆರೆ) ಬಿದ್ದು ನಾಲ್ವರು ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಬಾಗಲಗುಂಟೆಯ ಲಕ್ಷ್ಮೀ (33) ಹಾಗೂ ಯಾದಗಿರಿ ಜಿಲ್ಲೆಯ ಅಫಜಲಪುರದ ಮಹದೇವಪ್ಪ (44) ಚಿಕ್ಕಮಗಳೂರಿನ ಶಂಕರ್ (11), ರಾಮನಗರದ ಹರ್ಷಿತ್ (11) ಮೃತರು ಎಂದು ತಿಳಿದುಬಂದಿದೆ. ರಂಜಿತ್, ಶಂಕರ್, ಹರ್ಷಿತ್ ಮಠದಲ್ಲಿ 6ನೇ ತರಗತಿಯನ್ನು ಓದುತ್ತಿದ್ದರು. ರಂಜಿತ್‌ನ ತಾಯಿ ಲಕ್ಷ್ಮೀ ಮಗನನ್ನು ಭೇಟಿಯಾಗಲು ಮಠಕ್ಕೆ ಬಂದಿದ್ದರು. ಈ ವೇಳೆ ಅವರು …
Read More »ಗಂಗಾವತಿ: ಗ್ರಾ.ಪಂಚಾಯಿತಿ ಅಧ್ಯಕ್ಷಗಿರಿ ಮೀಸಲಾತಿ ಸಂಘರ್ಷ; ಹಲವರಿಗೆ ಗಾಯ, ಬೂದಗುಂಪಾ ಉದ್ವಿಗ್ನ
ಗಂಗಾವತಿ (ಕೊಪ್ಪಳ): ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಪ್ರಕಟವಾದ ಮೀಸಲಾತಿ ಅವೈಜ್ಞಾನಿಕವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗಿದೆ. ಪರಸ್ಪರ ದೊಣ್ಣೆ, ರಾಡ್ ಸೇರಿದಂತೆ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಕಾರಟಗಿ ತಾಲ್ಲೂಕಿನ ಬೂದಗುಂಪಾ ಗ್ರಾಮದಲ್ಲಿ ಇಂದು (ಭಾನುವಾರ) ಘಟನೆ ನಡೆಯಿತು. ಗಂಭೀರ ಗಾಯಗೊಳಗಾದವರನ್ನು ಸಮುದಾಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. …
Read More »ಅದ್ಧೂರಿ ಸ್ವಾತಂತ್ರ್ಯೋತ್ಸವಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು. ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆಗಳ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಆಗಸ್ಟ್ 15ರಂದು ಬೆಳಗ್ಗೆ 8:58ಕ್ಕೆ ಮುಖ್ಯಮಂತ್ರಿಗಳು ಮೈದಾನಕ್ಕೆ ಆಗಮಿಸಲಿದ್ದು, 9:00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡುವರು. ನಂತರ ತೆರೆದ ಜೀಪಿನಲ್ಲಿ ಪೆರೇಡ್ …
Read More »ಅಮೃತಹಳ್ಳಿ ಜೋಡಿ ಕೊಲೆ ಪ್ರಕರಣ: 30 ದಿನದಲ್ಲಿ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಕೆ
ಬೆಂಗಳೂರು : ಖಾಸಗಿ ಕಂಪನಿಯಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಜೋಡಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ನಗರದ ಅಮೃತಹಳ್ಳಿ ಠಾಣಾ ಪೊಲೀಸರು 30 ದಿನಗಳೊಳಗೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಜೀ-ನೆಟ್ ಕಂಪನಿಯ ಅರುಣ್ ಫೆಲಿಕ್ಸ್, ವಿನಯ್ ರೆಡ್ಡಿ ಹಾಗೂ ಸಂತೋಷ್ ಎಂಬಾತನ ವಿರುದ್ಧ ದೋಷಾರೋಪಣೆ ಸಲ್ಲಿಕೆಯಾಗಿದೆ. ಉದ್ಯಮದಲ್ಲಿ ಸ್ಪರ್ಧಿಸಲಾಗದೇ ಎದುರಾಳಿ ಕಂಪನಿಯ ಅರುಣ್ ಕೊಲೆ ಸಂಚು ರೂಪಿಸಿದ್ದು ತನಿಖೆಯಲ್ಲಿ ಸಾಬೀತಾಗಿದೆ. ಇತ್ತೀಚಿನ ದಿನಗಳಲ್ಲಿ ಕಡಿಮೆ ಅವಧಿಯಲ್ಲಿ ತನಿಖೆ …
Read More »ಬೊಮ್ಮಾಯಿ ಸರ್ಕಾರ ₹1.5 ಲಕ್ಷ ಕೋಟಿ ಮೌಲ್ಯದ ಟೆಂಡರ್ ಕರೆದು ಕಿಕ್‌ಬ್ಯಾಕ್ ಪಡೆದಿತ್ತು- ಹೆಚ್.ವಿಶ್ವನಾಥ್
ಬೆಳಗಾವಿ : “ವಿಧಾನಸಭೆ ಚುನಾವಣೆಗೂ ಮುನ್ನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದೂವರೆ ಲಕ್ಷ ಕೋಟಿ ರೂಪಾಯಿ ಮೌಲ್ಯದ ಟೆಂಡರ್ ಕರೆದು ಕಿಕ್ ಬ್ಯಾಕ್ ತೆಗೆದುಕೊಂಡಿದೆ” ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರರಿಂದ ಕಮಿಷನ್ ಆರೋಪದ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಮಾತನಾಡುವುದು ಸುಲಭ, ಮಾತನಾಡುವವನು ಸತ್ಯವಂತನಿರಬೇಕು. ಇಡೀ ದೇಶ, ರಾಜ್ಯದಲ್ಲಿ ನೀ ಕಳ್ಳ, ನೀ ಕಳ್ಳ ಎನ್ನುತ್ತಾರೆ. ಆದರೆ ಯಾರು ಕಳ್ಳ …
Read More »ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕುಟುಂಬ ಸಮೇತರಾಗಿ ಭಾನುವಾರ ಹಾವೇರಿ ಸಿಂದಗಿ ಮಠಕ್ಕೆ ಭೇಟಿ
ಹಾವೇರಿ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕುಟುಂಬ ಸಮೇತರಾಗಿ ಭಾನುವಾರ ಹಾವೇರಿ ಸಿಂದಗಿ ಮಠಕ್ಕೆ ಭೇಟಿ ನೀಡಿದರು. ಸಿಂದಗಿ ಮಠದ ಶಾಂತವೀರೇಶ್ವರ ಗದ್ದುಗಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನನ್ನ ರಾಜಕೀಯ ಜೀವನಕ್ಕೆ ಆಶೀರ್ವಾದ ಮಾಡಿರುವ ಮಠ “ಸಿಂದಗಿಮಠ” ಎಂದು ತಿಳಿಸಿದರು. ಟಿಕೆಟ್ ವಿಚಾರವನ್ನು ರಾಜ್ಯ, ರಾಷ್ಟ್ರೀಯ ಸಮಿತಿ ನಾಯಕರು ನಿರ್ಧರಿಸುತ್ತಾರೆ: 25 ವರ್ಷಗಳಿಂದ ನಾನು ಈ ಮಠದೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದೇನೆ. ಇದು ಸಮಾಜವನ್ನು ಒಂದೂಗೂಡಿಸುವ ಮಠ. …
Read More »