ವಿಶಾಖಪಟ್ಟಣಂ, ಆಂಧ್ರಪ್ರದೇಶ: ನಟ ರಾಜಕಾರಣಿ ಪವನ್ ಕಲ್ಯಾಣ್ ಅವರಿಂದ ನಡೆಯುತ್ತಿರುವ ವಾರಾಹಿ ಯಾತ್ರೆ ಮುಂದುವರಿಯಲಿದೆ.ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಮೂರನೇ ಹಂತದ ವಾರಾಹಿ ಯಾತ್ರೆಗೆ ಇಂದಿನಿಂದ ಚಾಲನೆ ದೊರೆಯಲಿದೆ. ವಿಶಾಖಪಟ್ಟಣದಲ್ಲಿ ಆರಂಭವಾಗಲಿರುವ ಈ ಯಾತ್ರೆ ಇದೇ ತಿಂಗಳ 19ರವರೆಗೆ ಮುಂದುವರಿಯಲಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನದಂದು ತಮ್ಮ ಈ ವಾರಾಹಿ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇಂದು ಮಧ್ಯಾಹ್ನ ಪವನ್ ಕಲ್ಯಾಣ್ ನಗರವನ್ನು ತಲುಪಲಿದ್ದು, …
Read More »Yearly Archives: 2023
ಚುನಾವಣೆ ಗೆಲ್ಲಲು ಕೈ ಮಹಾಪ್ಲಾನ್.. ವಿದ್ಯಾರ್ಥಿನಿಗೆ ಸ್ಮಾರ್ಟ್ ಫೋನ್ ವಿತರಿಸಿದ ರಾಹುಲ್
ಜೈಪುರ(ರಾಜಸ್ಥಾನ): ಮತ್ತೆ ಅಧಿಕಾರಕ್ಕೆ ಮರಳಲು ಪ್ಲಾನ್ ಹಾಕಿರುವ ಸಿಎಂ ಅಶೋಕ್ ಗೆಹ್ಲೋಟ್ ಅದಕ್ಕಾಗಿ ಭರ್ಜರಿ ಕಾರ್ಯತಂತ್ರವನ್ನು ರೂಪಿಸುತ್ತಿದ್ದಾರೆ. ಇದಕ್ಕಾಗಿ ಅವರು ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಜೈಪುರದ ಬಿರ್ಲಾ ಆಡಿಟೋರಿಯಂನಲ್ಲಿ ಇಂದು ಸ್ಮಾರ್ಟ್‌ಫೋನ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಯೋಜನೆಗೆ ಚಾಲನೆ ಸಿಗುವ ಮುನ್ನವೇ ಕಾಂಗ್ರೆಸ್ ನೇತಾರ, ರಾಹುಲ್ ಗಾಂಧಿ ನಿನ್ನೆ ಮಂಗರ್‌ನಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಸ್ಮಾರ್ಟ್‌ಫೋನ್ ಹಸ್ತಾಂತರಿಸುವ ಮೂಲಕ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ಮೊದಲ ಸುತ್ತಿನಲ್ಲಿ ಚಿರಂಜೀವಿ ಕುಟುಂಬದ ಮಹಿಳಾ ಮುಖ್ಯಸ್ಥರು …
Read More »ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್, ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯೊಂದಿಗೆ ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ‘ಶತಮಾನೋತ್ಸವ’ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕಾರಣಿಗಳು …
Read More »ರಾಜ್ಯ ಸರ್ಕಾರದಿಂದ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ
ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಒಟ್ಟು ಮೂರು ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಸೂಕ್ತ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಹುದ್ದೆ …
Read More »ಸ್ತ್ರೀ ದ್ವೇಷಿ ವ್ಯಕ್ತಿ’: ಸಂಸತ್ತಿನಲ್ಲಿ ರಾಹುಲ್ ‘ಫ್ಲೈಯಿಂಗ್ ಕಿಸ್’ಗೆ ಸ್ಮೃತಿ ಇರಾನಿ ಆರೋಪ; ಸ್ಪೀಕರ್‌ಗೆ ಶೋಭಾ ಕರಂದ್ಲಾಜೆ ದೂರು
ನವದೆಹಲಿ: ಲೋಕಸಭೆಯಲ್ಲಿಂದು ಮಣಿಪುರ ಹಿಂಸಾಚಾರ ವಿಷಯವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿಲುವಳಿ ಮೇಲೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ನಂತರ ‘ಫ್ಲೈಯಿಂಗ್ ಕಿಸ್’ (ಗಾಳಿಯಲ್ಲಿ ಮುತ್ತು) ನೀಡಿದ್ದಕ್ಕೆ ಬಿಜೆಪಿ ಮಹಿಳಾ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸದನದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರತ್ತ ರಾಹುಲ್ ಗಾಂಧಿ ‘ಅನುಚಿತ ಸನ್ನೆ’ …
Read More »ಕ್ವಿಟ್ ಇಂಡಿಯಾ ದಿನಾಚರಣೆ.. ರ‍್ಯಾಲಿ ನಡೆಸದಂತೆ ಮುಂಬೈನಲ್ಲಿ ಗಾಂಧೀಜಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ, ಬಿಡುಗಡೆ
ಮುಂಬೈ (ಮಹಾರಾಷ್ಟ್ರ) : ಕ್ವಿಟ್ ಇಂಡಿಯಾ ಚಳವಳಿಯ 81ನೇ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿ ನಡೆಸದಂತೆ ನನ್ನನ್ನು ಪೊಲೀಸರು ತಡೆದಿದ್ದಾರೆ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಆರೋಪಿಸಿದ್ದಾರೆ. ಇಲ್ಲಿನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ತುಷಾರ್ ಗಾಂಧಿ ಅವರು ಇಂದು ಬೆಳಿಗ್ಗೆ ಸುಬುರ್ಬಾನ್ ಸಾಂತಾ ಕ್ರೂಝ್ನಲ್ಲಿರುವ ಮನೆಯಿಂದ ಹೊರಟಿದ್ದರು. ಈ ವೇಳೆ ಮನೆಗೆ ಆಗಮಿಸಿದ …
Read More »ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ತಂದೆಯ ಹತ್ಯೆಗೆ ಸಂಚು ರೂಪಿಸಿದ ಮಗಳು
ಸೊಲ್ಲಾಪುರ (ಮಹಾರಾಷ್ಟ್ರ): ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ಮಗಳು ತಂದೆಯ ಹತ್ಯೆಗೆ ಸಂಚು ರೂಪಿಸಿದ್ದಾಳೆ. ಕೊಲೆ ಮಾಡಲು ನಾಲ್ವರಿಗೆ 60 ಸಾವಿರ ರೂ. ಸುಪಾರಿ (ತಲಾ 15 ಸಾವಿರ) ನೀಡಿದ್ದಾಳೆ. ಸೊಲ್ಲಾಪುರದ ಮಾಧಾ ಪೊಲೀಸರು ಕೂಲಂಕಷವಾಗಿ ವಿಚಾರಣೆ ನಡೆಸಿದ ಬಳಿಕ ಯುವತಿ, ಪ್ರಿಯಕರ ಹಾಗೂ ತಂದೆಯ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ಬಂಧಿಸಿದ್ದಾರೆ. ತಾಲೂಕಿನ ವಡಚಿ ವಾಡಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳು ಯವತಿಯ ತಂದೆ ಮಾದ ತಾಲೂಕಿನ ನಿವಾಸಿ …
Read More »ಧಾರವಾಡದಲ್ಲಿ ತಮ್ಮದೇ ತಂಪು ಪಾನೀಯ ಉದ್ಯಮ ಆರಂಭಿಸಲಿದ್ದಾರೆ. ಮುತ್ತಯ್ಯ ಮುರಳೀಧರನ್
ಧಾರವಾಡ : ಶ್ರೀಲಂಕಾದ ಖ್ಯಾತ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ಧಾರವಾಡದಲ್ಲಿ ಸ್ವಂತ ತಂಪು ಪಾನೀಯ ಉದ್ಯಮ ಪ್ರಾರಂಭಿಸಲು ಮುಂದಾಗಿದ್ದಾರೆ. ಈಗಾಗಲೇ ಶ್ರೀಲಂಕಾದಲ್ಲಿ ಸಿಲೋನ್ ಬೇವರೆಜಸ್ ಕ್ಯಾನ್ ಕಂಪನಿ ಮೂಲಕ ತಂಪು ಪಾನೀಯ ಮತ್ತು ಎನರ್ಜಿ ಡ್ರಿಂಕ್ ಉತ್ಪಾದನಾ ಉದ್ಯಮದಲ್ಲಿ ತೊಡಗಿರುವ ಅವರು ಧಾರವಾಡದಲ್ಲಿ ತಮ್ಮದೇ ತಂಪು ಪಾನೀಯ ಉದ್ಯಮ ಆರಂಭಿಸಲಿದ್ದಾರೆ. ಈ ಸಂಬಂಧ ಕಳೆದ ವಾರವಷ್ಟೇ ಮುತ್ತಯ್ಯ ಮುರಳೀಧರನ್ ಅವರು ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದ ಬಳಿ ಇರುವ …
Read More »ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಬೈಕ್ ಸವಾರರಿಬ್ಬರ ದುರ್ಮರಣ
ಕಲಬುರಗಿ: ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಸಾತನೂರ ಬಳಿ ನಡೆದಿದೆ. ಮೃತ ಬೈಕ್ ಸವಾರರು ದಿಗ್ಗಾಂವ ಗ್ರಾಮದ ಮರೆಪ್ಪ (54) ಹಾಗೂ ಭಾಗಣ್ಣಾ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರ ರಕ್ತಸ್ರಾವದಿಂದ ಇಬ್ಬರು ದುರ್ಮರಣ ಹೊಂದಿದ್ದಾರೆ. ಸ್ಥಳಕ್ಕೆ ಸಿಪಿಐ ಪ್ರಕಾಶ್ ಯಾತನೂರ, ಚಿತ್ತಾಪುರ ಪಿಎಸ್‌ಐ ಶ್ರೀಶೈಲ ಅಂಬಾಟಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಶಿವಯ್ಯಾ, ಮುಕ್ತುಂ …
Read More »ಶಾಸಕರ ಅಸಮಾಧಾನ ಸ್ಫೋಟದ ಸುಳಿವು ಸಿಗುತ್ತಿದ್ದಂತೆ ಎಚ್ಷೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಶಾಸಕರ ಅಸಮಾಧಾನ ಸ್ಫೋಟದ ಸುಳಿವು ಸಿಗುತ್ತಿದ್ದಂತೆ ಎಚ್ಷೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸತತ ಮೂರನೇ ದಿನವೂ ಜಿಲ್ಲಾವಾರು ಶಾಸಕರು ಮತ್ತು ಸಚಿವರ ಸಭೆ ನಡೆಸಿ ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯತೆ ಮೂಡಿಸುವ ಪ್ರಯತ್ನ ನಡೆಸಿದ್ದಾರೆ. ಅನುದಾನ ಕೊರತೆಯ ಬಗ್ಗೆಯೂ ಮಾಹಿತಿ ನೀಡಿ ಮಿತಿಯೊಳಗೆ ಬೇಡಿಕೆ ತನ್ನಿ ಎನ್ನುವ ಸಲಹೆ ನೀಡಿದ್ದಾರೆ. ಈ ವರ್ಷ ಹೆಚ್ಚು ಅನುದಾನದ ನಿರೀಕ್ಷೆ ಇಟ್ಟುಕೊಳ್ಳದೇ, ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆದ್ಯತೆ ನೀಡಬೇಕು ಎಂದು ಸಿಎಂ …
Read More »