ಕಾರವಾರ : ಬಾಲ್ಯ ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರ ಅಂಗನವಾಡಿಗಳನ್ನು ತೆರೆದಿದೆ. ಆದರೆ, ಉತ್ತರಕನ್ನಡ ಜಿಲ್ಲೆಯ ಅದೆಷ್ಟೋ ಕಡೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳೇ ಇಲ್ಲ. ಇದ್ದ ಕೆಲ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿ ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿದ್ದರೂ ಕೆಲ ತಿಂಗಳಿಂದ ಬಾಡಿಗೆ ಕೂಡ ಕಟ್ಟಿಲ್ಲ. ಹೀಗಾಗಿ, ಕಟ್ಟಡ ಮಂಜೂರಾಗುವುದೆಂದು ಕಾದು ಕುಳಿತಿದ್ದ ಗ್ರಾಮದ ಜನರು ಸರ್ಕಾರದ ವಿಳಂಬ ನೀತಿಗೆ ರೋಸಿ ಹೋಗಿ ಕೊನೆಗೆ ತಾತ್ಕಾಲಿಕ ಅಂಗನವಾಡಿಯೊಂದನ್ನು ನಿರ್ಮಿಸಿಕೊಂಡಿದ್ದಾರೆ. ಹೌದು, ಒಂದೆಡೆ ಶಿಥಿಲಾವಸ್ಥೆ ತಲುಪಿ …
Read More »Yearly Archives: 2023
ಹೆಚ್ಚುವರಿ ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ
ಬೆಂಗಳೂರು : ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೆ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ ಬರೆಯಲು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪಾಲಿಕೆ ಅಧಿಕಾರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ಶುಕ್ರವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಸರ್ವೆ ಮಾಡಲು ಹೆಚ್ಚು ಭೂಮಾಪಕರ ಅವಶ್ಯಕತೆಯಿದ್ದು, …
Read More »ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್-ಆಟೋ ಮಧ್ಯೆ ಅಪಘಾತ; ಐವರು ಸಾವು
ಮಲಪ್ಪುರಂ(ಕೇರಳ): ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ. ನಿನ್ನೆ ಸಂಜೆ ಆರು ಗಂಟೆಗೆ ಮಂಚೇರಿ-ಅರೀಕೋಡು ರಸ್ತೆಯ ಚೆಟ್ಟಿಅಂಗಡಿ ಎಂಬಲ್ಲಿ ಅಪಘಾತ ನಡೆದಿದೆ. ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಕರ್ನಾಟಕ ಬಸ್ ಮತ್ತು ಆಟೋ ಮಧ್ಯೆ ಅಪಘಾತವಾಗಿದೆ. ಆಟೋ ಚಾಲಕ ಮಜೀದ್, …
Read More »ಮಧ್ಯಮಾವಧಿ, ದೀರ್ಘಾವಧಿ ಸಾಲದ ಅಸಲು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ: ಸಿಎಂ
ಬೆಳಗಾವಿ/ಬೆಂಗಳೂರು: ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ. ಬಿಜೆಪಿಯವರು 2018ರ ತಮ್ಮ ಪ್ರಣಾಳಿಕೆಯಲ್ಲಿ “ನಮ್ಮ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು” …
Read More »ಭಗೀರಥ ಉಪ್ಪಾರ ಸಮಾಜವನ್ನು ಪಜಾ/ ಪ.ಪಂಗಡಕ್ಕೆ ಸೇರಿಸಲು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ
ಭಗೀರಥ ಉಪ್ಪಾರ ಸಮಾಜವನ್ನು ಪಜಾ/ ಪ.ಪಂಗಡಕ್ಕೆ ಸೇರಿಸಲು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಜರುಗಿದ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಗೋಕಾಕ: ಭಗೀರಥ ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸರ್ಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಬೀರೇಶ್ವರ ಸಭಾಭವನದಲ್ಲಿ ಶುಕ್ರವಾರದಂದು …
Read More »ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ರೈತರಿಂದ ಸುಮಾರು 5 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ: ಬಾಲಚಂದ್ರ ಜಾರಕಿಹೊಳಿ
ಯರಗಟ್ಟಿ: ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟವು ಹೈನುಗಾರ ರೈತರಿಂದ ಸುಮಾರು 5 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಯರಗಟ್ಟಿಯ ಹೊರವಲಯದಲ್ಲಿ ಖಾಸಗಿ ಹೊಟೇಲ್ ನಲ್ಲಿ ರಾಜ್ಯ ಸಹಕಾರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಯೂನಿಯನ್ ಇವುಗಳ ಆಶ್ರಯದಲ್ಲಿ ಶುಕ್ರವಾರದಂದು ಜರುಗಿದ ಬೈಲಹೊಂಗಲ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಸರ್ವತೋಮುಖ ಬೆಳವಣಿಗೆಗೆ …
Read More »ಡಿಕೆಶಿ ವಿರುದ್ಧದ ಪ್ರಕರಣದ ಸಿಬಿಐ ತನಿಖೆ ಚರ್ಚೆಗೆ ಅವಕಾಶ ನಿರಾಕರಿಸಿದ ಸಭಾಪತಿ
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ವಾಪಸ್ ಪಡೆದ ರಾಜ್ಯ ಸರ್ಕಾರದ ಕ್ರಮದ ಕುರಿತು ಚರ್ಚಿಸಲು, ಅವಕಾಶ ಕೋರಿ ಬಿಜೆಪಿ ಮಂಡಿಸಿದ ನಿಲುವಳಿ ಸೂಚನೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ತಿರಸ್ಕರಿಸಿ ರೂಲಿಂಗ್ ನೀಡಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕಡೆಯ ದಿನವಾದ ಇಂದು ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ, ಸಾರ್ವಜನಿಕ ಮಹತ್ವದ ವಿಷಯದಡಿ ಡಿ.ಕೆ.ಶಿವಕುಮಾರ್ …
Read More »ಕೋಟಿ ಕೋಟಿ ವಿದ್ಯುತ್ ಬಿಲ್ ಬಾಕಿ ಇಟ್ಕೊಂಡ ಧಾರವಾಡ ಜಿಲ್ಲೆಯ ಸರ್ಕಾರಿ ಕಚೇರಿಗಳು
ಧಾರವಾಡ, ಡಿ.08: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ(Hescom)ವು ಒಟ್ಟು ಏಳು ಜಿಲ್ಲೆಗಳಲ್ಲಿ ಬರುತ್ತದೆ. ರಾಜ್ಯದ ಪ್ರತಿಷ್ಠಿತ ವಿದ್ಯುತ್ ಸರಬರಾಜು ಕಂಪನಿಗಳ ಪೈಕಿ ಇದು ಕೂಡ ಒಂದು. ಈ ಕಂಪನಿ ಅಡಿಯಲ್ಲಿ ರಾಜ್ಯದ ಎರಡನೇ ದೊಡ್ಡ ನಗರ ಖ್ಯಾತಿಯಹುಬ್ಬಳ್ಳಿ-ಧಾರವಾಡ(Hubballi-Dharwad) ಅವಳಿ ನಗರ ಹಾಗೂ ಬೆಳಗಾವಿ ಬರುತ್ತವೆ. ಇದೀಗ ಈ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿನ ಸರಕಾರಿ ಕಚೇರಿಗಳಿಂದಲೇ ಹೆಸ್ಕಾಂ ಗೆ ನೂರಾರು ಕೋಟಿ ರೂಪಾಯಿ ವಿದ್ಯುತ್ ಬಿಲ್ ಬರಬೇಕಿದೆ. ಇಂತಹ ವೇಳೆ …
Read More »ಗುಡ್ನ್ಯೂಸ್: ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ, ಸಿದ್ದರಾಮಯ್ಯ ಘೋಷಣೆ
ಬೆಳಗಾವಿ (ಡಿಸೆಂಬರ್ 15): ಸಹಕಾರಿ ಬ್ಯಾಂಕ್‌ಗಳ (cooperative bank) ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಘೋಷಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು (ಡಿಸೆಂಬರ್ 15) ಈ ಘೋಷಣೆ ಮಾಡಿದ್ದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ಮಾಹಿತಿ ನೀಡಿದರು. ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ …
Read More »ಖರ್ಗೆ ಜೊತೆ ದೇವೆಗೌಡರ ಸುದೀರ್ಘ ಮಾತುಕತೆ
ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ(lokasabhe election) ಕಾಂಗ್ರೆಸ್ ಮಣಿಸಲು ರಾಜ್ಯದಲ್ಲಿ ಜೆಡಿಎಸ್(JDS) ಮತ್ತು ಬಿಜೆಪಿ(BJP) ಜೊತೆಯಾಗಿ ನಿಂತಿವೆ. ಸೀಟು ಹಂಚಿಕೆ ವಿಚಾರ ಇನ್ನೂ ಪಕ್ಕಾ ಆಗದಿದ್ದರೂ ರಾಜ್ಯ ನಾಯಕರು ಎಲ್ಲಾ ವಿಚಾರದಲ್ಲಿ ಸಮನ್ವಯತೆ ಕಾದುಕೊಂಡು ಒಟ್ಟಾಗಿ ಕೆಲಸ ಮಾಡ್ತಿದ್ದಾರೆ. ಆದರೆ ಈ ಮಧ್ಯೆ ಅಚ್ಚರಿ ಬೆಳವಣಿಗೆ ನಡೆದಿದೆ. ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೆಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿಯಾಗಿ ಸುದೀರ್ಘ ರಾಜಕೀಯ ಚರ್ಚೆ …
Read More »