ದಾವಣಗೆರೆ: ಸಿಎಂ ಸಿದ್ದರಾಮಯ್ಯನವರು ಕೂಡು ಕೃಷಿ ಕಾಯ್ದೆ ವಾಪಸ್ ಪಡೆಯಲು ಚರ್ಚೆ ಮಾಡಿದ್ದರು. ಅವರ ಚುನಾವಣ ಪ್ರಣಾಳಿಕೆಯಲ್ಲೂ ಹಿಂಪಡೆಯುವ ಬಗ್ಗೆ ಘೋಷಣೆ ಮಾಡಲಾಗಿತ್ತು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು. ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆ ಹಾಗು ಭೂಸುಧಾರಣಾ ಕಾಯ್ದೆ ಅತ್ಯಂತ ಅಪಾಯಕಾರಿ. ಅದನ್ನು ವಾಪಸ್ ಪಡೆಯಲು ಸಿಎಂ ಸಿದ್ದರಾಮಯ್ಯನವರು ಏಕೆ ಸದನದಲ್ಲಿ ಮುಂದಾಗಲಿಲ್ಲ, ರದ್ದುಪಡಿಸಲು ಈಗಾಗಲೇ ನಾನು ಸಿಎಂ ಸಿದ್ದರಾಮಯ್ಯ ಅವರನ್ನು …
Read More »Yearly Archives: 2023
ಜಮ್ಮು ಕಾಶ್ಮೀರ, ಉತ್ತರಾಖಂಡ, ಪಂಜಾಬ್, ಹರಿಯಾಣ, ಲಡಾಕ್ ಹಾಗು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ
ನವದೆಹಲಿ : ಉತ್ತರ ಭಾರತದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇದುವರೆಗೂ ಸುಮಾರು 39ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ, ಭೂ ಕುಸಿತದಿಂದ ಅಪಾರ ಹಾನಿ ಉಂಟಾಗಿದೆ. ಉತ್ತರಾಖಂಡ್ ಮತ್ತು ಹಿಮಾಚಲ ಪ್ರದೇಶದಲ್ಲಿ ಸೇರಿದಂತೆ ವಿವಿಧೆಡೆ ಭಾರತೀಯ ಸೇನೆ ಮತ್ತು ಎನ್ಡಿಆರ್ಎಫ್ ತಂಡಗಳು ಭರದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ 2 ದಿನಗಳಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ. ಪಂಜಾಬ್ ಮತ್ತು ಹರಿಯಾಣದಲ್ಲಿ ಒಟ್ಟು 9 …
Read More »ನಗರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು
ಬೆಂಗಳೂರು: ನಗರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಸದಾಶಿವನಗರದ ಅರಮನೆ ಬಳಿಯ ನಿರ್ಜನ ಪ್ರದೇಶದಲ್ಲಿ ದರೋಡೆಕೋರ ಯಾಸರ್ (26) ಎಂಬಾತನ ಕಾಲಿಗೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುಲ್ತಾನ್ ಪಾಳ್ಯದ ಭುವನೇಶ್ವರಿ ನಗರದ ನಿವಾಸಿಯಾಗಿರುವ ಈತನ ವಿರುದ್ಧ ಸುಲಿಗೆ, ರಾಬರಿಗಳಂತಹ 7ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇಂದು ಬೆಳಗ್ಗೆ ಕಾರ್ಯಾಚರಣೆಯಲ್ಲಿ ಪೊಲೀಸರ ಮೇಲೆ ದಾಳಿಗೆ ಮುಂದಾದಾಗ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಶೇಷಾದ್ರಿಪುರಂ …
Read More »ಇಂದು ಜುಲೈ 11. ವಿಶ್ವ ಜನಸಂಖ್ಯಾ ದಿನ
ಇಂದು ಜುಲೈ 11. ವಿಶ್ವ ಜನಸಂಖ್ಯಾ ದಿನ. ಹೆಚ್ಚುತ್ತಿರುವ ಜನಸಂಖ್ಯೆಯ ಕುರಿತು ಅರಿವು ಮೂಡಿಸುವುದು ಈ ದಿನದ ಗುರಿ. ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿರುವ ಭಾರತ ಜನಸಂಖ್ಯೆಯಲ್ಲಿ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ. ಪ್ರಸ್ತುತ ದೇಶದಜನಸಂಖ್ಯೆ ವಿಶ್ವಸಂಸ್ಥೆಯ ದತ್ತಾಂಶದ ವರ್ಲ್ಡ್‌ಮೀಟರ್ ಪ್ರಕಾರ 1.4 ಶತಕೋಟಿ. ಕೇವಲ ಒಂದು ರಾಷ್ಟ್ರ ಇಷ್ಟರಮಟ್ಟಿಗೆ ಜನಸಂಖ್ಯೆ ಹೊಂದಿದೆ ಎಂದಾದರೆ ವಿಶ್ವದ ಜನಸಂಖ್ಯೆ ಎಷ್ಟು ಗೊತ್ತೇ? ಪ್ರಪಂಚದಲ್ಲಿ ಒಟ್ಟು 195 ದೇಶಗಳು ವಿಶ್ವಸಂಸ್ಥೆಯ ಮಾನ್ಯತೆ ಪಡೆದಿವೆ. 1985ರಲ್ಲಿ …
Read More »ಕೊಠಡಿಯಲ್ಲಿ ಪರೀಕ್ಷೆ ಬರೆಯುತ್ತಿದ್ದಳು ಅಮ್ಮ; ಮಹಿಳಾ ಪೊಲೀಸ್ ಅಕ್ಕರೆಗೆ ನಲಿದಾಡಿತು ಕಂದಮ್ಮ
ಅಹಮದಾಬಾದ್ (ಗುಜರಾತ್): ಹೆಣ್ಣೆಂದರೆ ಹಾಗೆಯೇ. ಭೂಮಿ ಭಾರವನ್ನೂ ಹೊರುತ್ತಾಳೆ, ಯಾರದೇ ಕಣ್ಣೀರಿಗೂ ಮಿಡಿಯುತ್ತಾಳೆ. ಅದಕ್ಕೆ ಅಲ್ವೇ ನಾರಿಯರಿಗೆ ವಿಶ್ವಮನ್ನಣೆ ಇರೋದು. ಗುಜರಾತ್ ಹೈಕೋರ್ಟ್ ಜವಾನ (ಪ್ಯೂನ್) ಹುದ್ದೆಯ ಪರೀಕ್ಷೆಗೆ ಮಹಿಳೆಯೊಬ್ಬರು ಹಾಜರಾಗಿದ್ದರೆ, ಆಕೆಯ ಮಗುವನ್ನು ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಎತ್ತಿಕೊಂಡು ಪರೀಕ್ಷೆ ಮುಗಿಸಿ ಬರುವವರೆಗೂ ರಕ್ಷಣೆ ಒದಗಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಗು ಕೂಡ ಆಕೆಯೊಂದಿಗೆ ನಗುತ್ತಾ ನಲಿದಾಡಿದೆ. ಭಾನುವಾರದಂದು ಗುಜರಾತ್ ಹೈಕೋರ್ಟ್‌ನ ಜವಾನ ಹುದ್ದೆಗೆ ಪರೀಕ್ಷೆ ನಡೆದಿದೆ. 6 ತಿಂಗಳ …
Read More »ಲೋಕ ಅದಾಲತ್‌ನಲ್ಲಿ ದಾಖಲೆಯ 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿ
ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜ್ಯಾದ್ಯಂತ ನಡೆಸಲಾದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ದಾಖಲೆಯ 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿಸಲಾಗಿದೆ. ಈ ಸಂಬಂಧ ನಡೆದ ಮಾಧ್ಯಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್ ನ್ಯಾಯಮೂರ್ತಿ ಜಿ.ನರೇಂದರ್ ಮಾಹಿತಿ ನೀಡಿದರು. ಹೈಕೋರ್ಟ್‌ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು …
Read More »ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್ ನೀರಲ್ಲಿ ಕೊಚ್ಚಿ ಹೋದ ಇಬ್ಬರು
ಬೆಳಗಾವಿ: ಘಟಪ್ರಭಾ ನದಿಯಲ್ಲಿ ಇಬ್ಬರು ಸಂಬಂಧಿಕರು ಕೊಚ್ಚಿ ಹೋಗಿರುವ ಘಟನೆ ಮೂಡಲಗಿ ತಾಲೂಕಿನ ಅವರಾದಿ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್ ಬಿದ್ದಿದ್ದು, ಅವರಾದಿ ಗ್ರಾಮದ ಚನ್ನಪ್ಪ ಹರಿಜನ(30), ದುರ್ಗವ್ವ ಹರಿಜನ(25) ಕೊಚ್ಚಿಹೋದ ಸಂಬಂಧಿಗಳು ಎಂದು ಗುರುತಿಸಲಾಗಿದೆ. ಅವರಾದಿ ಗ್ರಾಮದಿಂದ ಮಹಾಲಿಂಗಪುರ ಪಟ್ಟಣಕ್ಕೆ ಇಬ್ಬರು ಹೊರಟಿದ್ದರು. ಈ ವೇಳೆ, ನಿಯಂತ್ರಣ ತಪ್ಪಿ ಬೈಕ್, ಸೇತುವೆ ಮೇಲಿಂದ ನೀರಿನಲ್ಲಿ ಬಿದ್ದಿದೆ. ಬ್ರಿಡ್ಜ್ …
Read More »ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ಸೌಲಭ್ಯ ಇಲ್ಲ, ಸ್ಮಾರ್ಟ್ ಫೋನ್ ನೀಡುವ ಬಗ್ಗೆ ಪರಿಶೀಲನೆ :ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಆಶಾ ಕಾರ್ಯಕರ್ತೆಯರು ಖಾಯಂ ನೌಕರರಲ್ಲ ಹಾಗಾಗಿ ಅವರಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಿಲ್ಲ, ಆದರೆ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೆಲ್ಲವೂ ಅವರಿಗೆ ಅನ್ವಯವಾಗಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಶಾ ಕಾರ್ಯಕರ್ತೆಯರ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ, ಅವರು ಸ್ವಯಂ ಪ್ರೇರಿತರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. ಅದಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಐದು ಸಾವಿರ …
Read More »ಮೈಸೂರು ಯುವ ಬ್ರಿಗೇಡ್ ಸದಸ್ಯನ ಕೊಲೆ ಪ್ರಕರಣ-ಘಟನೆಗೆ ಯಾವುದೇ ಕೋಮು ಸಂಬಂಧ ಇಲ್ಲ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್
ಮೈಸೂರು: ಟಿ ನರಸೀಪುರ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣದ ಬಗ್ಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಪ್ರತಿಕ್ರಿಯಿಸಿದ್ದಾರೆ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಶ್ರೀರಾಂಪುರ ಕಾಲೋನಿಯ ವೇಣುಗೋಪಾಲ್ (32) ಎಂಬಾತ ನಿನ್ನೆ(ಭಾನುವಾರ) ಹತ್ಯೆಯಾಗಿದ್ದರು. ಇವರು ಯುವ ಬ್ರಿಗೇಡ್ನ ಸದಸ್ಯ. ಘಟನೆಗೆ ಕೋಮು ಸಂಬಂಧ ಇಲ್ಲ: ಪುನೀತ್ ರಾಜ್ ಕುಮಾರ್ ಫೋಟೋ ಅಳವಡಿಕೆ ವಿಚಾರಕ್ಕೆ ಹಾಗೂ ಬೈಕ್ ನಿಲ್ಲಿಸುವ ವಿಚಾರದಲ್ಲಿ …
Read More »ರೌಡಿಶೀಟರ್ ಮಾಸ್ತಿಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳು ಶರಣಾಗಿದ್ದಾರೆ.
ಹಾಸನ: ಮೂರು ದಿನಗಳ ಹಿಂದೆ ಚನ್ನರಾಯಪಟ್ಟಣದಲ್ಲಿ ರೌಡಿಶೀಟರ್ ಮಾಸ್ತಿಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳು ಶರಣಾಗಿದ್ದಾರೆ. ಚನ್ನರಾಯಪಟ್ಟಣದ ರೌಡಿಶೀಟರ್ ಹುಲಿವಾಲ ಚೇತು, ಹಾಸನದ ಸಾಲಗಾಮೆ ರಾಕೇಶ್ ಅಲಿಯಾಸ್ ರಾಕಿ ಮತ್ತು ಮಂಡ್ಯ ಮೂಲದ ಶಿವು, ಶರಣಾದ ಆರೋಪಿಗಳು. ಜೂ.4ರ ಮಂಗಳವಾರ ಐದು ಮಂದಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಮಾಸ್ತಿಗೌಡನನ್ನು ಬರ್ಬರವಾಗಿ ಕೊಲೆ ಮಾಡಿ, ಪರಾರಿಯಾಗಿದ್ದರು. ಆರೋಪಿಗಳಲ್ಲಿ ಮೂವರು ತಾವಾಗಿಯೇ ಶರಣಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ. …
Read More »