Breaking News

Yearly Archives: 2023

ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ C.M. ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಅವರೇನು …

Read More »

ಸಾಂಸ್ಕೃತಿಕ ಪರಂಪರೆ ಭೂತಕಾಲದ ಆಧಾರ ಸ್ತಂಭ:ಪ್ರಹ್ಲಾದ್​ ಜೋಶಿ

ವಿಜಯನಗರ: ಸಂಸ್ಕೃತಿ ಎಂಬುದು ಕೇವಲ ಗುರುತಾಗದೇ ಜಾಗತಿಕ ಸಾಂಗತ್ಯವಾಗಿ ಮಾರ್ಪಡಿಸಿಕೊಳ್ಳಲು ಜಿ-20 ಸಭೆ ಮಾರ್ಗವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು. ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಆರಂಭಗೊಂಡ 3ನೇ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ತಂಡದ(ಸಿಡಬ್ಲ್ಯೂಜಿ) ಸಭೆಯನ್ನು ಇಂದು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಸಭೆಯನ್ನು ಉದ್ಘಾಟಿಸಿದ ಪ್ರಹ್ಲಾದ್​ ಜೋಶಿನಾಲ್ಕು ಪ್ರಮುಖ ಆದ್ಯತೆಗಳಾದ ಆಯಾ ದೇಶಗಳ ಕಲಾಕೃತಿಗಳನ್ನು ಮೂಲ ಸ್ಥಾನಕ್ಕೆ …

Read More »

ಆಯುಷ್ ಇಲಾಖೆ ಆಯುಕ್ತ ಮಂಜುನಾಥ್ ಸೇರಿದಂತೆ 9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಆಯುಷ್ ಇಲಾಖೆ ಆಯುಕ್ತ ಮಂಜುನಾಥ್ ಸೇರಿದಂತೆ ಒಟ್ಟು 9 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಇಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆಯುಷ್ಯ ಇಲಾಖೆಯ ಆಯುಕ್ತರಾಗಿದ್ದ ಮಂಜುನಾಥ್ ಅವರನ್ನು ಸರ್ವೇ ಇತ್ಯರ್ಥ ಮತ್ತು ಭೂಮಿ ದಾಖಲೆಗಳ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.   ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ನಿರ್ದೇಶಕರಾಗಿದ್ದ ಶ್ರೀಮತಿ ಸತ್ಯಭಾಮ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ನೇಮಕ …

Read More »

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ.

ವಿಶಾಖಪಟ್ಟಣಂ( ಆಂಧ್ರಪ್ರದೇಶ) : ಆತ ಬಾಲಕಿ ಓದುತ್ತಿದ್ದ ಶಾಲೆಯಲ್ಲಿ ಅಟೆಂಡರ್​. ಒಂದೇ ಅಪಾರ್ಟ್​ಮೆಂಟ್​ನ ನಿವಾಸಿ. ವಿದ್ಯಾರ್ಥಿನಿ ನೀಡಿದ ಸಲುಗೆಯನ್ನು ದುರುಪಯೋಗಪಡಿಸಿಕೊಂಡು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಿಡಿಯೋ ಮಾಡಿ ತನ್ನೊಂದಿಗೆ ಸಹಕರಿಸದಿದ್ದರೆ, ಹರಿಬಿಡುವ ಬೆದರಿಕೆ ಹಾಕಿ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ. ಕೃತ್ಯ ಇದೀಗ ಬೆಳಕಿಗೆ ಬಂದಿದ್ದು, ಕೀಚಕ ಸತ್ಯರಾವ್​ ಮತ್ತು ಆತನ ನಾಲ್ವರು ಸ್ನೇಹಿತರನ್ನ ಬಂಧಿಸಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ …

Read More »

ಜೈನ ಮುನಿ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಚಿಕ್ಕೋಡಿ ಪಟ್ಟಣದಲ್ಲಿ ಜೈನ್ ಧರ್ಮದ ಶ್ರಾವಕ ಶ್ರಾವಕಿಯರು ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದ ಆರ್​ಡಿ ಮೈದಾನದಿಂದ 15 ಸಾವಿರಕ್ಕೂ ಹೆಚ್ಚು ಜನರು ಕೊಲ್ಲಾಪುರ ನಾಂದಣಿ ಮಠದ ಜೀನಸೇನ ಭಟ್ಟಾರಕ ಹಾಗೂ ವರೂರು ಮಠದ ಧರ್ಮಸೇನಾ ಭಟ್ಟಾರಕ, ಮತ್ತು ಕೊಲ್ಲಾಪುರದ ಕೀರ್ತಿಸೇನ ಭಟ್ಟಾರಕರ ನೇತೃತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು. ಆರ್‌ಡಿ ಹೈಸ್ಕೂಲ್ ಮೈದಾನದಿಂದ ಮಹಾವೀರ ಸರ್ಕಲ್, ಬಸವೇಶ್ವರ ಸರ್ಕಲ್ ಮೂಲಕ …

Read More »

ಮಳೆ ಕೊರತೆ.. ಅಕ್ಕಿ ಬೆಲೆಯೂ ಆಗಲಿದೆ ದುಬಾರಿ

ನವದೆಹಲಿ: ದೇಶದಲ್ಲಿ ಈಗಾಗಲೇ ಟೊಮೆಟೊ ಬೆಲೆ ಗಗನಕ್ಕೆ ಏರಿದೆ. ಇದಕ್ಕೆ ಕಾರಣ ಹೆಚ್ಚಿದ ಮಾರುಕಟ್ಟೆ ಮತ್ತು ಕಡಿಮೆ ಪೂರೈಕೆ ಆಗಿದೆ. ಸದ್ಯ ಇದರ ಬೆನ್ನಲ್ಲೇ ಜನರು ಮತ್ತೊಂದು ಅಗತ್ಯ ಆಹಾರ ಸಾಮಗ್ರಿಯ ಬರ ಎದುರಿಸುವಂತೆ ಆಗಲಿದೆ. ಅಚ್ಚರಿ ಆದರೂ ಹೌದು, ಮಳೆ ಕೊರತೆ ಮತ್ತು ಕಡಿಮೆ ಬಿತ್ತನೆಯಿಂದಾಗಿ ಅಕ್ಕಿ ಇಳುವರಿ ಕಡಿಮೆಯಾಗಿದೆ. ಇದರ ಕೊರತೆ ಎದುರಾಗುವ ದಿನ ಸನ್ನಿಹಿತವಾಗಿದೆ ಎಂದು ಮೋತಿಲಾಲ್​ ಒಸ್ವಾಲ್​ ಫೈನಾನ್ಸ್​ ಸರ್ವೀಸ್​ ವರದಿಯಲ್ಲಿ ತಿಳಿಸಿದೆ. ಜಾಗತಿಕವಾಗಿ ಅಕ್ಕಿ …

Read More »

ಟೊಮೆಟೊ ತುಂಬಿದ್ದ ಬೊಲೆರೊ ವಾಹನ ಹೈಜಾಕ್

ಬೆಂಗಳೂರು: ಕೆಲ ದಿನಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದೆ. ಇದೇ ಸಮಯವನ್ನು ಕಾದು ಕುಳಿತಿರುವ ಕೆಲ ಖದೀಮರು ಟೊಮೆಟೊ ಕದಿಯುತ್ತಿದ್ದಾರೆ. ಗಾಡಿ ಟಚ್ ಆಗಿದೆ ಎಂದು ಸುಳ್ಳು ಹೇಳಿದ ಮೂವರು ಆರೋಪಿಗಳು ಟೊಮೆಟೊ ತುಂಬಿದ್ದ ಬೊಲೆರೊ ವಾಹನವನ್ನು ಹೈಜಾಕ್ ಮಾಡಿದ್ದಾರೆ. ಕಳೆದ‌ ಎರಡು‌ ದಿನಗಳ ಹಿಂದೆ ಘಟನೆ ನಡೆದಿದ್ದು, ಈ ಸಂಬಂಧ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Read More »

ಧಾರವಾಡದ ಐವರು ತಮ್ಮದೇ ಸ್ವಂತ ಹಣದಲ್ಲಿಹೆಲಿಕ್ಯಾಪ್ಟರ್​ ಮೂಲಕ ಶ್ರೀನಗರ ತಲುಪಿದ ಧಾರವಾಡದ ಯಾತ್ರಿಗಳು!

ಧಾರವಾಡ : ನಿರಂತರ ಮಳೆಯಾಗುತ್ತಿರುವ ಪರಿಣಾಮ ಜಮ್ಮು ಕಾಶ್ಮೀರದ ಅಮರನಾಥ ಮಾರ್ಗ ಮಧ್ಯೆ ಗುಡ್ಡಕುಸಿತ ಉಂಟಾಗಿ ಅಮರನಾಥದಲ್ಲಿ ಧಾರವಾಡದ ಐವರು ತಮ್ಮದೇ ಸ್ವಂತ ಹಣದಲ್ಲಿ ಶ್ರೀನಗರ ತಲುಪಿದ್ದಾರೆ. ಪಂಚತಾರಣಿ ಬಳಿ ಸಿಲುಕಿದ್ದ ಐವರು ಧಾರವಾಡ ಯಾತ್ರಿಗಳು ಸುರಕ್ಷಿತವಾಗಿ ಶ್ರೀನಗರ ತಲುಪಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಟೆಂಟ್‌ನಲ್ಲಿ ವಾಸವಾಗಿದ್ದ ಯಾತ್ರಿಗಳು ಸರ್ಕಾರದಿಂದ ಯಾವುದೇ ಸಹಾಯ ಸಿಗದ ಹಿನ್ನೆಲೆ ಹೆಲಿಕ್ಯಾಪ್ಟರ್ ಮೂಲಕ ಶ್ರೀನಗರಕ್ಕೆ ಪ್ರಯಾಣಿಸಿದ್ದಾರೆ. ಪ್ರತಿಯೊಬ್ಬರಿಗೆ 4200ರೂ. ನೀಡಿ ಹೆಲಿಕ್ಯಾಪ್ಟರ್​ನಲ್ಲಿ ಪ್ರಯಾಣಿಸಿ ಸದ್ಯ ಐವರು …

Read More »

ಜೈನ ಮುನಿಗಳ ಹತ್ಯೆ ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ಪಟ್ಟು

ಬೆಂಗಳೂರು: ಜೈನ ಮುನಿಗಳ ಹತ್ಯೆ ಕೃತ್ಯವನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಉತ್ತಮ ಅಧಿಕಾರಿಗಳ ತಂಡವನ್ನು ತನಿಖೆಗೆ ಒದಗಿಸಲಿದ್ದೇವೆ. ಘಟನೆಯಲ್ಲಿ ಭಾಗಿಯಾದ ಯಾರೂ ನಮ್ಮ ಸರ್ಕಾರದಿಂದ ರಕ್ಷಣೆ ಪಡೆಯಲು ಸಾಧ್ಯವಿಲ್ಲ. ನಮ್ಮ ಮೇಲೆ ವಿಶ್ವಾಸ ಇಟ್ಟು ಸಹಕಾರ ನೀಡಿ, ನಿಮ್ಮ ಅವಧಿಯ ಪೊಲೀಸರೇ ಈಗಲೂ ಇದ್ದಾರೆ. ನಂಬಿಕೆ ಇಡಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜೈನ ಮುನಿಗಳ ಹತ್ಯೆ ವಿಷಯದ ಚರ್ಚೆಗೆ …

Read More »

ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ

ಪಣಜಿ(ಗೋವಾ): ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ (ಪ್ರವಾಹ್) ರಚನೆಯಾದ ನಂತರ ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ. “ಮಹದಾಯಿ ವಿಷಯವಾಗಿ ಗೋವಾದ ಕಾನೂನು ತಂಡವು ದೆಹಲಿಯಲ್ಲಿದೆ. ನಾವು ನಮ್ಮ ವಾದವನ್ನು ಸಮರ್ಥವಾಗಿ ಮಂಡಿಸುತ್ತೇವೆ ಎಂಬುದು ನನಗೆ ಖಾತ್ರಿಯಿದೆ. ಸರ್ವೋಚ್ಛ ನ್ಯಾಯಾಲಯದ ಮೇಲೆ ಸಂಪೂರ್ಣ ನಂಬಿಕೆ ನನಗೆ ಇದೆ. ಕರ್ನಾಟಕ ಏನೇ …

Read More »