ಬೆಳಗಾವಿ: ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಹುನಿರೀಕ್ಷಿತ ಬಜೆಟ್ನಲ್ಲಿ ಅಂದುಕೊಂಡಷ್ಟು ಅನುದಾನ, ಯೋಜನೆಗಳು ಘೋಷಣೆ ಆಗದೇ ಇರುವುದು ಜಿಲ್ಲೆಯ ಜನರನ್ನು ನಿರಾಸೆಗೊಳಿಸಿದೆ. 18 ಶಾಸಕರು, ಇಬ್ಬರು ಸಂಸದರು, ಓರ್ವ ರಾಜ್ಯಸಭಾ ಸದಸ್ಯ, ಐವರು ಪರಿಷತ್ ಸದಸ್ಯರು ಹಾಗೂ ಇಬ್ಬರು ಸಚಿವರನ್ನು ಒಳಗೊಂಡಿರುವ ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿ ಈ ಬಾರಿಯ ಬಜೆಟ್ ಮೇಲೆ ಹಲವು ನಿರೀಕ್ಷೆಗಳನ್ನು ಹೊಂದಲಾಗಿತ್ತು. ಆದರೆ, ನಿರೀಕ್ಷೆಗೆ ತಕ್ಕಂತೆ ನುದಾನ, …
Read More »Yearly Archives: 2023
ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ: ಸತೀಶ್ ಜಾರಕಿಹೊಳಿ
ಬೆಂಗಳೂರು: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು 3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿ, ರಾಜ್ಯದ ಎಲ್ಲ ವರ್ಗದ ಜನರ ಸಬಲೀಕರಣಕ್ಕಾಗಿ ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ ಎಂದುಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …
Read More »ಸಿದ್ದು ಲೆಕ್ಕ: ಪಂಚ ಗ್ಯಾರಂಟಿ ಯೋಜನೆ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಅನುದಾನ ಹೆಚ್ಚಿಸಲಾಗಿದ್ದು, ಇತರ ಕೆಲ ಇಲಾಖೆಗಳಿಗೆ ಅನುದಾನ ಕಡಿತ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 3,27,747 ಕೋಟಿ ರೂ.ಗಾತ್ರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದ್ದಾರೆ. ಗ್ಯಾರಂಟಿಗಳಿಗೆ ಹಣ ಹೊಂದಿಸುವ ಗ್ಯಾರಂಟಿ ಬಜೆಟ್ ಇದಾಗಿದೆ. ಸಿಎಂ ಸಿದ್ದರಾಮಯ್ಯ ಪಂಚ ಗ್ಯಾರಂಟಿಗಳ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಿದ್ದು, ಇನ್ನು ಕೆಲ ಇಲಾಖೆಗಳಿಗೆ ಅನುದಾನ ಕಡಿತ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ 14ನೇ ಬಜೆಟ್ ಮಂಡನೆ ಮಾಡಿದ್ದಾರೆ. ಗ್ಯಾರಂಟಿ ಸವಾಲಿನೊಂದಿಗೆ ಆದಾಯ ಕೊರತೆಯ ಬಜೆಟ್ ಮಂಡಿಸಿದ್ದಾರೆ. ಪಂಚ …
Read More »ಇದ್ದಕ್ಕಿದ್ದಂತೆ ಬಸದಿಯಿಂದ ಜೈನ ಮುನಿಯೊಬ್ಬರು ರಾತ್ರೋರಾತ್ರಿ ನಾಪತ್ತೆ
ಗಡಿ ಜಿಲ್ಲೆಯ ಜೈನ ಮುನಿಯೊಬ್ಬರು ರಾತ್ರೋರಾತ್ರಿ ನಾಪತ್ತೆಯಾಗಿದ್ದಾರೆ. ಇದ್ದಕ್ಕಿದ್ದಂತೆ ಬಸದಿಯಿಂದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಕಾಣೆ ಆಗಿರೋದು ಭಕ್ತರಲ್ಲಿ ಆತಂಕ ಸೃಷ್ಟಿಸಿದೆ. ಮಹಾರಾಜರನ್ನ ಹುಡುಕಿಕೊಡುವಂತೆ ಭಕ್ತರು ಈಗ ಬೆಳಗಾವಿ ಜಿಲ್ಲಾ ಪೊಲೀಸರ ಮೊರೆ ಹೋಗಿದ್ದಾರೆ.15 ವರ್ಷದಿಂದ ಬಸದಿಯಲ್ಲಿದ್ದ ಸಂತನ ಮಿಸ್ಸಿಂಗ್ ಕೇಸ್ ಬೆಳಗಾವಿ ಜಿಲ್ಲೆ ಜನರನ್ನ ಬೆಚ್ಚಿಬೀಳಿಸಿದೆ. .ಹದಿಹರೆಯದ ಯುವಕ, ಯುವತಿಯರು ಮಿಸ್ಸಿಂಗ್ ಕೇಸ್ ಇತ್ತಿಚೆಗೆ ಸಾಮಾನ್ಯವಾಗಿದೆ. ಆದರೆ ಈಗ ಇಡೀ ಸಮಾಜವೇ ಆತಂಕ …
Read More »ಸರ್ಕಾರದ ವಿರುದ್ಧ ಮಳೆ ನಡುವೆಯೇ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ
ಬೆಂಗಳೂರು: ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿರುವ ಹಿಂದಿನ ಬಿಜೆಪಿ ಪಿತೂರಿ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು, ಮುಖಂಡರು ಗಾಂಧಿ ಪ್ರತಿಮೆ ಮುಂಭಾಗ ಜಮಾವಣೆಗೊಂಡು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಭಾಗಿಯಾಗಿದ್ದರು. ಸಚಿವ ಪ್ರಿಯಾಂಕಾ ಖರ್ಗೆ, ದಿನೇಶ್ ಗುಂಡೂರಾವ್, …
Read More »ಪ್ಲಾನಿಂಗ್ ಇಲ್ಲದ ಬಜೆಟ್ ಮಂಡನೆ: ಪ್ರಹ್ಲಾದ್ ಜೋಶಿ
ಧಾರವಾಡ: ಸಿಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ದಲ್ಲಿ ಆಸ್ತಿ, ಮದ್ಯ ತೆರಿಗೆ ಹೆಚ್ಚಳ ಮಾಡಿದ್ದಾರೆ. ಶೇ 10ರಷ್ಟು ತೆರಿಗೆ ಹೆಚ್ಚಿಸಿದ್ದಾರೆ. ಮತ್ತೆ ಯಾವ ಯಾವ ತೆರಿಗೆ ಹೆಚ್ಚಳ ಮಾಡ್ತಾರೆ ನೋಡೋಣ ಎಂದು ರಾಜ್ಯದ ಸರ್ಕಾರದ ಬಜೆಟ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ. ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಒಟ್ಟಾರೆ ಯಾವುದೇ ಪ್ಲಾನಿಂಗ್ ಇಲ್ಲದ ಬಜೆಟ್ ಮಂಡನೆ ಆಗುತ್ತಿದೆ. ಬಜೆಟ್ ನಿಂದ ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಎದ್ದು ಕಾಣುತ್ತಿದೆ. …
Read More »ಪಿಂಚಣಿ ಉಪದಾನ ಪತ್ರಕ್ಕೆ 20 ಲಕ್ಷ ಲಂಚ ಕೇಳಿದ ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ
ಮಂಗಳೂರು: ವಯೋ ನಿವೃತ್ತಿ ಹೊಂದಲಿರುವ ಮುಖ್ಯ ಶಿಕ್ಷಕಿಗೆ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಲು 20 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಅನುದಾನಿತ ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಂಗಳೂರು ತಾಲೂಕಿನ ಬಜ್ಪೆ ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೋಭಾರಾಣಿ ಎಂಬುವರು ಶಿಕ್ಷಕಿ …
Read More »ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣದ ಶಿವಸೇನೆಗೆ ಮತ್ತೊಂದು ಆಘಾತ
ಮುಂಬೈ: ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣದ ಶಿವಸೇನೆಗೆ ಮತ್ತೊಂದು ಆಘಾತ ಉಂಟಾಗಿದೆ. ಉದ್ಧವ್ ಆಪ್ತ ಬಣದಲ್ಲಿದ್ದ ವಿಧಾನಪರಿಷತ್ ಉಪಸಭಾಪತಿ, ಎಂಎಲ್ಸಿ ನೀಲಂ ಗೊರ್ಹೆ ಅವರು ಸಿಎಂ ಏಕನಾಥ್ ಶಿಂಧೆ ಅವರ ಬಣಕ್ಕೆ ಜಿಗಿಯಲಿದ್ದಾರೆ ಎಂದು ಹೇಳಲಾಗಿದೆ. ಕಳೆದ ತಿಂಗಳಷ್ಟೇ ಶಾಸಕಿ ಮನೀಶಾ ಕಾಯಂದೆ ಅವರು ಬಣ ತೊರೆದ ಬಳಿಕ ಇದು ಮತ್ತೊಬ್ಬ ನಾಯಕಿಯ ನಿರ್ಗಮನವಾಗುತ್ತಿರುವುದು ಠಾಕ್ರೆ ಬಣಕ್ಕೆ ತೀವ್ರ ಹಿನ್ನಡೆ ಉಂಟು ಮಾಡಿದೆ. ಶಿವಸೇನೆಯ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ …
Read More »ರಾಜ್ಯದ ಸಮಗ್ರ ಅಭಿವೃದ್ಧಿ ಕಲ್ಪನೆ ಇಲ್ಲದೇ, ತೆರಿಗೆ ಹೊರೆ ಇರುವ ಬಜೆಟ್:B.S.Y.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಪ್ರಸ್ತುತ ಸಾಲಿನ ಬಜೆಟ್, ರಾಜ್ಯದ ಸಮಗ್ರ ಅಭಿವೃದ್ಧಿ ಕಲ್ಪನೆ ಇಲ್ಲದೇ, ತೆರಿಗೆ ಹೊರೆ ಇರುವ ಬಜೆಟ್ ಆಗಿದೆ. 85000 ಕೋಟಿ ಸಾಲ ಮಾಡುತ್ತೇನೆ ಎಂದು ಹೇಳಿದ್ದು, ಈ ಸಾಲದ ಹೊರೆ ರಾಜ್ಯದ ಜನತೆಯ ಮೇಲೆ ಬೀಳುತ್ತದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಟೀಕಿಸಿದ್ದಾರೆ. ಬಜೆಟ್ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ತಮ್ಮ ಮೂರು …
Read More »ಡೆಲಿವರಿ ಬಾಯ್ಸ್‌ಗೆ ಬಿಗ್ ರಿಲೀಫ್! 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ಕೊಡುವುದಾಗೊ ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ (CM Siddaramaiah) ಅವರು 14ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ ಈ ಬಾರಿಯ ಬಜೆಟ್ ಕೂತುಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ, ಹಣಕಾಸು ಸಚಿವರಾಗಿ 1995-96 ರಲ್ಲಿ ಮಂಡಿಸಿದ ಮೊದಲ ಬಾರಿಗೆ ಬಜೆಟ್ ಮಂಡಿಸಿದ್ದರು. ಬಜೆಟ್ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಬಜೆಟ್ ಆರಂಭದಲ್ಲೇ ಅಬಕಾರಿ ತೆರಿಗೆ ಹೆಚ್ಚಳ ಮಾಡಿರುವುದನ್ನು …
Read More »