Breaking News

Yearly Archives: 2023

(ನರೇಗಾ) ಯೋಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಮಾನವ ದಿನ ಸೃಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಜೊತೆಗೆ ಈ ಸಾಲಿನ ಆರ್ಥಿಕ ವರ್ಷದ ಕೇವಲ ಮೂರು ತಿಂಗಳಲ್ಲಿ 61.41 ಲಕ್ಷದಷ್ಟು ಮಾನವ ದಿನ ಸೃಜನೆ ಮಾಡಿರುವುದು ದಾಖಲೆಯಾಗಿದೆ ಎಂದು ಬೆಳಗಾವಿ ಜಿಪಂ ಸಿಇಒ ಹರ್ಷಲ್ ಭೊಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಗೆ 2023-24ನೇ ಸಾಲಿಗೆ 1.40 ಕೋಟಿ ಮಾನವ ದಿನಗಳ ಸೃಜನೆಯ …

Read More »

ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರ ಬೆಟ್ಟದಷ್ಟು ನಿರೀಕ್ಷೆ

ಬೆಳಗಾವಿ: ಐದು ಗ್ಯಾರಂಟಿ‌ ಯೋಜನೆಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ನಾಳೆ ಮಂಡನೆಯಾಗಲಿದೆ. ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿಯಾದರೂ ನಮ್ಮ ಬೇಡಿಕೆ ಈಡೇರುತ್ತವೋ ಎಂದು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಬೆಳಗಾವಿ ರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ. ರಾಜ್ಯದ ಎರಡನೇ ರಾಜಧಾನಿ ಅಂತಾನೂ ಕರೆಸಿಕೊಳ್ಳುತ್ತದೆ. ಇಲ್ಲಿನ ಜನರ ಬಹುತೇಕ ಕಸಬು ಕೃಷಿ. ಜಿಲ್ಲೆಯಲ್ಲಿ …

Read More »

ಕನ್ನಡ ಭಾಷಾ ಪದ ಪ್ರಯೋಗದ ಬಗ್ಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಯತ್ನಾಳ್ ಹಾಸ್ಯ

ಬೆಂಗಳೂರು: ವಿಧಾನಸಭೆಯ ಅಧ್ಯಕ್ಷ ಯು ಟಿ ಖಾದರ್ ಅವರ ಕನ್ನಡ ಭಾಷಾ ಪದ ಪ್ರಯೋಗದ ಬಗ್ಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಯತ್ನಾಳ್ ಹಾಸ್ಯ ಮಾಡಿದ್ದು, ಅದನ್ನು ಸಭಾಧ್ಯಕ್ಷರು ಸ್ಪರ್ಧಾತ್ಮಕವಾಗಿ ಪರಿಗಣಿಸಿದ ಪ್ರಸಂಗ ಇಂದು ನಡೆಯಿತು. ವಿಧಾನಸಭೆಯ ಉಪಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾದ ಮೇಲೆ ಅವರನ್ನು ಅಭಿನಂದಿಸುವ ಸಂದರ್ಭದಲ್ಲಿ ಸಭಾಧ್ಯಕ್ಷರು ಹಳ್ಳಿ ಎಂಬ ಪದವನ್ನು ಹಲ್ಲಿ ಎಂದು ಉಚ್ಛಾರಣೆ ಮಾಡಿದರು. ಅದನ್ನು ಬಸನಗೌಡ ಯತ್ನಾಳ್ ಉಲ್ಲೇಖಿಸಿ ಹಳ್ಳಿ, ಹಳ್ಳಿ ಎಂದು …

Read More »

ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ.:ರೇಣುಕಾಚಾರ್ಯ

ದಾವಣಗೆರೆ : ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. ನೋಟಿಸ್​ಗೆ ನಾನು ಉತ್ತರ ಕೊಡಲ್ಲ ಎಂದು ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಹಮ್ಮಿಕೊಂಡಿದ್ದ ಸಂಸದ ಜಿಎಂ ಸಿದ್ದೇಶ್ವರ್​ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಬಿಜೆಪಿ ಶಿಸ್ತು ಸಮಿತಿಯಿಂದ ನೀಡಿರುವ ನೋಟಿಸ್​​ಗೆ ಯಾವುದೇ ಉತ್ತರ ಕೊಡಲ್ಲ. ನೋಟಿಸ್​​ಗೆ ನಾನೇಕೆ ಉತ್ತರ ಕೊಡಬೇಕು ಎಂದು ಪ್ರಶ್ನಿಸಿದರು. ನಾನು ಏನು ಹೇಳಬೇಕೋ ಅದನ್ನೇ ಹೇಳಿದ್ದೇನೆ. …

Read More »

ಅಕ್ರಮಕ್ಕೆ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ: ಕೃಷ್ಣ ಬೈರೇಗೌಡ

ಬೆಂಗಳೂರು : ರಾಜ್ಯದಲ್ಲಿ ಅಕ್ರಮವಾಗಿ ಒತ್ತುವರಿಯಾಗಿರುವ ಮತ್ತು ಕಬಳಿಕೆಯಾಗಿರುವ ಕಂದಾಯ ಭೂಮಿಯನ್ನು ವಾಪಸ್ ಪಡೆದುಕೊಳ್ಳಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಅಕ್ರಮಕ್ಕೆ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಲಿದ್ದು, ವ್ಯವಸ್ಥೆ ಬಿಗಿ ಮಾಡಲಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಟಿಎ ಶರವಣ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಕಂದಾಯ ಭೂಮಿ ಕಬಳಿಕೆದಾರರು, ಒತ್ತುವರಿದಾರರು ಯಾವ ಸರ್ಕಾರ ಬಂದರೂ ಹೋದರೂ …

Read More »

ಎಕ್ಸ್​​​​ಪ್ರೆಸ್ ವೇನಲ್ಲಿ ಅಪಘಾತ ಹೆಚ್ಚಳಕ್ಕೆ ಅತಿವೇಗವೇ ಕಾರಣ: ಜಾರಕಿಹೊಳಿ

ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ದಲ್ಲಿ ಅಪಘಾತ ಹೆಚ್ಚಳ ಸೇರಿದಂತೆ ಇರುವ ನ್ಯೂನತೆ ಕುರಿತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತಂದಿದ್ದು, ಸುರಕ್ಷಿತ ಪ್ರಯಾಣ ಮತ್ತು ನ್ಯೂನತೆ ಸರಿಪಡಿಸಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.   ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಕ್ಸ್‌ಪ್ರೆಸ್‌ ವೇ …

Read More »

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷಧಾರೆ ಚುರುಕು: ತುಂಬಿದ ತುಂಗಾ ಡ್ಯಾಂ

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಪ್ರಾರಂಭವಾಗಿದೆ. ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತದೆ. ವರುಣನ ಆಗಮನದಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 199.90 ಮಿಮೀ ಮಳೆ ಸುರಿದಿದೆ. ಸರಾಸರಿ 28.56 ಮಿಮೀ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮೀ ಇದ್ದು, ಈವರೆಗೆ ಸರಾಸರಿ 73.13 ಮಿಮೀ ಮಳೆ ಮಾತ್ರ ದಾಖಲಾಗಿದೆ. …

Read More »

ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ: ಯುವ ಕಾಂಗ್ರೆಸ್ ಕಾರ್ಯಕರ್ತರು

ಬೆಳಗಾವಿ : ಅಕ್ಕಿ ವಿತರಣೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಇಂದು ಧರಣಿ ನಡೆಸಿದರು. ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತಿಕ ಪಾಟೀಲ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅನ್ನಭಾಗ್ಯಕ್ಕೆ ಕನ್ನ ಹಾಕಿರುವ ಬಿಜೆಪಿಗೆ ಧಿಕ್ಕಾರ, ಮೋದಿ ಹಟಾವ್ ದೇಶ ಬಚಾವ್, ಬೇಕೆ ಬೇಕು ಅಕ್ಕಿ ಬೇಕು ಎಂದು ಘೋಷಣೆ ಕೂಗಿದ ಕೈ ಕಾರ್ಯಕರ್ತರು ಕಾಡಾ ಕಚೇರಿ ಬಳಿಯ ಸಂಸದೆ …

Read More »

ಫಸಲ್ ಬಿಮಾ ಯೋಜನೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ಶಂಕೆ .. ರೈತರ ಲಕ್ಷಾಂತರ ರೂ.ದುರ್ಬಳಕೆ ಆರೋಪ

ರಾಯಚೂರು : ರೈತರ ಅನುಕೂಲಕ್ಕೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜಾರಿ ಮಾಡಿದೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಮಾತ್ರ ಲಾಭ ಪಡೆದುಕೊಳ್ಳಬೇಕು. ಆದರೆ, ರೈತರಿಗೆ ಯಾವುದೇ ಮಾಹಿತಿ ನೀಡದೇ ಅವರ ಹೆಸರನ್ನು ಬಳಸಿಕೊಂಡು ಲಕ್ಷಾಂತರ ರೂಪಾಯಿ ಹಣ ಬೇರೆಯವರ ಖಾತೆಗೆ ಜಮಾ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಸಿರವಾರ ತಾಲೂಕಿನ ಸಣ್ಣಹೊಸೂರು, ಮಾಡಗಿರಿ, ಹರವಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಮಾಹಿತಿ ನೀಡದೆ 40ಕ್ಕೂ ಹೆಚ್ಚು …

Read More »

ಧರಣಿ ಹಿಂಪಡೆದ ಬಿಜೆಪಿ; ಪರಿಷತ್​ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಆರಂಭ

ಬೆಂಗಳೂರು : ಗೋಹತ್ಯೆ ನಿಷೇಧ ಕಾಯ್ದೆ ಸಾಧಕ- ಬಾಧಕಗಳ ಕುರಿತು ನಾವು ನಮ್ಮಲ್ಲಿ ಚರ್ಚೆ ನಡೆಸಿದ್ದೇವೆ. ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಕೆ. ಆರ್ ವೆಂಕಟೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ರವಿಕುಮಾರ್ ಚರ್ಚೆಗೆ ಉತ್ತರಿಸಿದ ಸಚಿವರು, ನಾವು ಕಾಯ್ದೆ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಂದೊಮ್ಮೆ ಸದಸ್ಯರ ಬಳಿ ಈ ವಿಚಾರಕ್ಕೆ ಸಂಬಂಧಿಸಿ ಮಾಹಿತಿ ಇದ್ದರೆ ಅವರು ಮಾಹಿತಿ ನೀಡಲಿ. ಕ್ರಮ ಕೈಗೊಳ್ಳುತ್ತೇವೆ ಎಂದರು. ಮತ್ತಷ್ಟು ಚರ್ಚೆಗೆ ಮುಂದಾದ …

Read More »