Breaking News

Yearly Archives: 2023

ಅಕ್ಕಿ ವಿತರಣೆಗೆ ಒಂದೆರಡು ತಿಂಗಳು ತಡವಾದರೆ ಸಮಸ್ಯೆ ಏನೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಮೈಸೂರು: ”ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನರಿಗೆ ಅಕ್ಕಿ ವಿತರಣೆ ಮಾಡಲು ಸಿದ್ದರಾಮಯ್ಯನವರು ಈಗಾಗಲೇ ಕೇಂದ್ರದ ಜೊತೆಗೆ ಮಾತನಾಡಿದ್ದಾರೆ. ವಿತರಣೆಯಲ್ಲಿ ಒಂದೆರೆಡು ತಿಂಗಳು ತಡವಾದರೆ ಅಂತಹ ತೊಂದರೆ ಏನೂ ಆಗುವುದಿಲ್ಲ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದರು. ಮೈಸೂರಿನ ವಿಶ್ವವಿದ್ಯಾಲಯದಲ್ಲಿಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿರು. ”ಉಚಿತ ಅಕ್ಕಿ ನೀಡುವುದನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ. ನಮಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡಲು ಪರ್ಯಾಯ ಮಾರ್ಗಗಳಿವೆ‌. ಆದರೂ ಮುಖ್ಯಮಂತ್ರಿಗಳು ಕೇಂದ್ರದ ಜೊತೆ …

Read More »

ಕಾಂತಾರ 2 ಸಿನಿಮಾಗಾಗಿ ನಟ ರಿಷಬ್ ಶೆಟ್ಟಿ ಕುದುರೆ ಸವಾರಿ ತರಬೇತಿ

ಕಾಂತಾರ 2 ಸಿನಿಮಾಗಾಗಿ ನಟ ರಿಷಬ್ ಶೆಟ್ಟಿ ಕುದುರೆ ಸವಾರಿ ತರಬೇತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಕಳೆದ ಸೆಪ್ಟೆಂಬರ್​​ನಲ್ಲಿ ಸಾಮಾನ್ಯ ಚಿತ್ರವಾಗಿ ತೆರೆಕಂಡ ‘ಕಾಂತಾರ’ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಸುಮಾರು 15 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಂಪಾದಿಸಿದ್ದು 450 ಕೋಟಿ ರೂ.ಗೂ ಹೆಚ್ಚು. ಚಿತ್ರತಂಡದ ನಿರೀಕ್ಷೆಗೂ ಮೀರಿ ಯಶಸ್ಸು ಸಾಧಿಸಿದೆ. ಇದೀಗ ಸೂಪರ್ ಹಿಟ್​​ ಕಾಂತಾರದ ಮತ್ತೊಂದು ಭಾಗ ತಯಾರಾಗುತ್ತಿದೆ. ಆದರೆ ಈ ಸಿನಿಮಾ …

Read More »

ಲೋಕಸಭೆ ಚುನಾವಣೆಯಲ್ಲಿ ಒಟ್ಟಿಗೆ ಹೋರಾಡಲು ಪ್ರತಿಪಕ್ಷ ನಾಯಕರ ನಿರ್ಧಾರ, ಮುಂದಿನ ಸಭೆ ಶಿಮ್ಲಾದಲ್ಲಿ

ಪಾಟ್ನಾ (ಬಿಹಾರ) : ಎಲ್ಲ ಪ್ರತಿಪಕ್ಷಗಳ ಮುಖಂಡರು ಒಗ್ಗಟ್ಟಾಗಿದ್ದಾರೆ ಹಾಗೂ ಮುಂದಿನ ಬಾರಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮತ್ತೊಂದು ಬಾರಿ ಸಭೆ ನಡೆಸಿ ನಮ್ಮ ಅಜೆಂಡಾ ರೂಪಿಸುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಶುಕ್ರವಾರ ಮಧ್ಯಾಹ್ನ ನಡೆದ ಬಹು ನಿರೀಕ್ಷಿತ ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, “ಎಲ್ಲ ನಾಯಕರು ಒಗ್ಗಟ್ಟಾಗಿದ್ದು, ನಾವು ಸಾಮಾನ್ಯ ಕಾರ್ಯಸೂಚಿಯನ್ನು (ಅಜೆಂಡಾ) ಸಿದ್ಧಪಡಿಸುತ್ತಿದ್ದೇವೆ. ಜುಲೈ 12 ರಂದು ನಾವು ಹಿಮಾಚಲ ಪ್ರದೇಶದ …

Read More »

ವಿಧಾನಪರಿಷತ್ ಉಪ ಚುನಾವಣೆ: ಶೆಟ್ಟರ್‌ ಸೇರಿ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು : ವಿಧಾನ ಪರಿಷತ್ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್ ಹಾಗೂ ಎನ್.ಎಸ್. ಬೋಸರಾಜು ಅವಿರೋಧವಾಗಿ ಆಯ್ಕೆಯಾದವರು. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾಗಿತ್ತು. ಬಿಜೆಪಿ ಹಾಗೂ ಜೆಡಿಎಸ್‌ ಅಭ್ಯರ್ಥಿಗಳನ್ನು ಹಾಕಿರಲಿಲ್ಲ. ಹಾಗಾಗಿ, ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮಾತ್ರ ಇದ್ದರು. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, …

Read More »

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ದಿನಾಂಕವನ್ನು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ದಿನಾಂಕವನ್ನು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಡಿಸಿಎಂ ಡಿ.ಕೆ. ಶಿವಕುಮಾರ್​ ನೇತೃತ್ವದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಯ ಕುರಿತ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿದ್ದರು. ಬಳಿಕ ಮಾತನಾಡಿದ ಅವರು, ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ಆಗಿದೆ. …

Read More »

ಸುಧಾ ಮೂರ್ತಿ, ವಿಜಯಶ್ರೀ ಹಾಲಾಡಿಗೆ ಬಾಲ ಸಾಹಿತ್ಯ ಪುರಸ್ಕಾರ; ಮಂಜುನಾಯಕ್​ಗೆ ಯುವ ಪುರಸ್ಕಾರ

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು ಈ ವರ್ಷದ ಬಾಲ ಸಾಹಿತ್ಯ ಪುರಸ್ಕಾರ ಹಾಗೂ ಯುವ ಪುರಸ್ಕಾರ ವಿಜೇತರ ಪಟ್ಟಿಯನ್ನು ಪ್ರಕಟಿಸಿದೆ. ಬಾಲ ಸಾಹಿತ್ಯ ಪುರಸ್ಕಾರಕ್ಕೆ ಕನ್ನಡದ ಪ್ರಸಿದ್ಧ ಲೇಖಕಿ ಸುಧಾ ಮೂರ್ತಿ, ವಿಜಯಶ್ರೀ ಹಾಲಾಡಿ ಸೇರಿ 22 ಜನರು ಹಾಗೂ ಯುವ ಪುರಸ್ಕಾರಕ್ಕೆ ಮಂಜುನಾಯಕ್ ಚಳ್ಳೂರು ಸೇರಿ 20 ಲೇಖಕರು ಭಾಜನರಾಗಿದ್ದಾರೆ. ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮಾಧವ್ ಕೌಶಿಕ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ …

Read More »

ಬ್ರ್ಯಾಂಡ್ ಬೆಂಗಳೂರು ಗುರಿ: ಬಸವರಾಜ ಬೊಮ್ಮಾಯಿ ಭೇಟಿಯಾಗಿ ಸಲಹೆ ಪಡೆದ ಡಿ.ಕೆ. ಶಿವಕುಮಾರ್

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ರಾಜ್ಯ ರಾಜಧಾನಿ ಅಭಿವೃದ್ಧಿಗೆ ಮುಂದಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರು ಅಭಿವೃದ್ಧಿ ಕುರಿತು ಏನೆಲ್ಲ ಯೋಜನೆ ಜಾರಿಗೆ ತರಬಹುದು ಎನ್ನುವ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಸಮಾಲೋಚನೆ ನಡೆಸಿದರು. ನಗರದ ಅಭಿವೃದ್ಧಿಗೆ ಪೂರಕವಾಗಿ ಅಗತ್ಯ ಸಲಹೆಗಳನ್ನು ಪಡೆದುಕೊಂಡರು. ಬೊಮ್ಮಾಯಿ ಅವರ ರೇಸ್ ಕೋರ್ಸ್ ರಸ್ತೆಯ ಸರ್ಕಾರಿ ರೇಸ್‌ವ್ಯೂ ಕಾಟೇಜ್​ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ತಮ್ಮ ನಿವಾಸಕ್ಕೆ ಬಂದ …

Read More »

ರಾಮನಗರ: ಕರ್ತವ್ಯ ವೇಳೆಯಲ್ಲೇ ‘ಗುಂಡು’ ಹಾಕಿದ ಎಎಸ್‌ಐ; ಮೂವರು ಸಸ್ಪೆಂಡ್‌!

ರಾಮನಗರ: ಕರ್ತವ್ಯದಲ್ಲಿದ್ದ ವೇಳೆಯಲ್ಲೇ ಪಾನಮತ್ತರಾಗಿ ಸಾರ್ವಜನಿಕರೊಂದಿಗೆ ಕಿರಿಕ್​ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಎಎಸ್​ಐ ಸೇರಿ ಮೂವರು ಪೊಲೀಸರನ್ನು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕಾರ್ತಿಕ್​ ರೆಡ್ಡಿ ಶುಕ್ರವಾರ ಅಮಾನತು ಮಾಡಿದ್ದಾರೆ. ಮಾಗಡಿ ಪೊಲೀಸ್​ ಠಾಣೆಯ ಎಎಸ್​ಐ ಮಂಜುನಾಥ್​ ಕೆ.ಎನ್​., ಡಿಸಿಆರ್​ಬಿ ಘಟಕದ ಎಎಸ್​ಐ ಗೋವಿಂದಯ್ಯ ಜಿ.ಎಸ್​ ಮತ್ತು ಚನ್ನಪಟ್ಟಣ ಪುರ ಪೊಲೀಸ್​ ಠಾಣೆ ಹೆಡ್‌ ಕಾನ್​ಸ್ಟೆಬಲ್​ ನಾರಾಯಣ ಮೂರ್ತಿ ಅಮಾನತುಗೊಂಡಿದ್ದಾರೆ. ಮೈಮೇಲೆ ಪ್ರಜ್ಞೆ ಇಲ್ಲದೇ ಯೂನಿಫಾರ್ಮ್ ಕಳಚಿಟ್ಟಿದ್ದು, ನಂತರ ಕಾರು ಚಾಲಕನೊಂದಿಗೆ ಕಿರಿಕ್ ಮಾಡಿಕೊಂಡು …

Read More »

ಮಗುವಿನಿಂದ ಮತ್ತೊಂದು ಮಗುವಿನ ಮೇಲೆ ಹಲ್ಲೆ: ಬೆಂಗಳೂರಿನ ಡೇ ಕೇರ್ ಸೆಂಟರ್​ಗೆ ಪೊಲೀಸ್, ಮಕ್ಕಳ ಹಕ್ಕುಗಳ ಆಯೋಗದಿಂದ ನೋಟೀಸ್

ಬೆಂಗಳೂರು: ಶಿಶುಪಾಲ‌ನಾ ಕೇಂದ್ರವೊಂದರಲ್ಲಿ ಮೂರು ವರ್ಷದ ಬಾಲಕ 2 ವರ್ಷದ ಬಾಲಕಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಬೇಬಿ ಕೇರ್ ಸೆಂಟರ್​ಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಸುಬ್ರಮಣ್ಯನಗರ ಪೊಲೀಸರು ನೋಟಿಸ್​ ನೀಡಿದ್ದಾರೆ‌. ಅಲ್ಲದೆ‌ ರಾಜ್ಯ ಮಕ್ಕಳ‌ ಹಕ್ಕುಗಳ ಆಯೋಗವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಎಷ್ಟು ವರ್ಷಗಳಿಂದ ಡೇ ಕೇರ್ ನಡೆಸುತ್ತಿದ್ದೀರಾ? ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದುಕೊಂಡಿದ್ದೀರಾ? ಮಕ್ಕಳ ಸುರಕ್ಷತೆಗೆ ಏನೆಲ್ಲಾ ಕ್ರಮ ಕೈಗೊಂಡಿದ್ದೀರಾ? …

Read More »

ಮಳೆ ಇಲ್ಲದೇ ಕಂಗಾಲಾಗಿದ್ದಾನೆ.ರೈತ

ಧಾರವಾಡ: ಮೊದಲೇ ಮಳೆ ಇಲ್ಲದೇ ರೈತ ಕಂಗಾಲಾಗಿದ್ದಾನೆ. ಹೀಗಿರುವಾಗ ರೈತ ಅಷ್ಟೋ ಇಷ್ಟೋ ಬೆಳೆದ ಬೆಳೆ ದನಗಳ ಪಾಲಾಗುತ್ತಿದೆ. ಇದರಿಂದ ಮತ್ತಷ್ಟು ಕಂಗಾಲಾಗಿರುವ ರೈತ ತಾವು ಬೆಳೆದ ಬೆಳೆಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾನೆ. ದೃಶ್ಯಗಳಲ್ಲಿ ಕಾಣುತ್ತಿರುವ ಈ ರೈತರು ಧಾರವಾಡ ತಾಲೂಕಿನ ಯರಿಕೊಪ್ಪ ಹಾಗೂ ಮನಸೂರು ಗ್ರಾಮದವರು. ನೀರಾವರಿ ಮಾಡಿಕೊಂಡು ಅಷ್ಟೋ ಇಷ್ಟೋ ಬೆಳೆಯನ್ನು ರೈತರು ಬೆಳೆದಿದ್ದಾರೆ. ಆದರೆ, …

Read More »