Breaking News

Yearly Archives: 2023

ಬೆಳಗಾವಿ ದಕ್ಷಿಣ ಅಭಯ್ ಪಾಟೀಲ ರಿಗೆ ತೀವ್ರ ಪೈಪೋಟಿ ಕೊಡಲು ಮುಂದಾದ ರಮಾಕಾಂತ ಕೊಂಡಸ್ಕರ

ಬೆಳಗಾವಿ: ಇಲ್ಲಿನ ದಕ್ಷಿಣ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ಅಭಿವೃದ್ಧಿ ಮತ್ತು ಭಾಷೆ ಹೆಸರಿನಲ್ಲಿ ಮತದಾರರನ್ನು ಸೆಳೆಯುವ ಪ್ರಯತ್ನ ಮುಂದುವರಿದಿವೆ. ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಸತತ ಎರಡನೇ ಬಾರಿ ಗೆಲುವಿನ ಬಾವುಟ ಹಾರಿಸುವ ತವಕದಲ್ಲಿದ್ದಾರೆ. ಮತ್ತೊಂದೆಡೆ, ‘ಕಮಲ’ ಪಾಳಯದ ಗೆಲುವಿನ ಓಟಕ್ಕೆ ಬ್ರೇಕ್‌ ಹಾಕಲು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಅಭ್ಯರ್ಥಿ ರಮಾಕಾಂತ ಕೊಂಡೂಸ್ಕರ್‌ ಕಸರತ್ತು ನಡೆಸಿದ್ದಾರೆ. ಇಬ್ಬರು ಅಭ್ಯರ್ಥಿಗಳು ‘ಪ್ರಜಾವಾಣಿ’ಗೆ ನೀಡಿದ ಸಂದರ್ಶನ ಇಲ್ಲಿದೆ. ಕ್ಷೇತ್ರದ ಜನ ಅಭಿವೃದ್ಧಿ …

Read More »

ಶಿವಸೇನಾ ಜತೆಗಿನ ಮೈತ್ರಿ ಮಹಾರಾಷ್ಟ್ರಕ್ಕೆ ಸೀಮಿತ: ಅಶೋಕ ಚವ್ಹಾಣ

ಬೆಳಗಾವಿ: ‘ಶಿವಸೇನಾ(ಉದ್ಧವ್ ಠಾಕ್ರೆ ಬಣ) ಜತೆಗಿನ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ. ರಾಜ್ಯದ ಹೊರಗೆ ನಾವು ಯಾವುದೇ ಮೈತ್ರಿ ಮಾಡಿಕೊಂಡಿಲ್ಲ’ ಎಂದು ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರೂ ಆಗಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ ಚವ್ಹಾಣ ಹೇಳಿದರು.   ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುತ್ತಿದ್ದೇವೆ. ಮತಗಳ ವಿಭಜನೆಯಾಗಿ ಬಿಜೆಪಿಗೆ ಲಾಭವಾಗದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಸೇರಿದಂತೆ ಜಾತ್ಯತೀತ ಶಕ್ತಿಗಳು ನೋಡಿಕೊಳ್ಳಬೇಕು’ ಎಂದು ಹೇಳಿದರು. …

Read More »

ಬುದ್ಧ ಪೂರ್ಣಿಮೆ: ಇತರರ ಕಲ್ಯಾಣಕ್ಕಾಗಿ ಅರ್ಥಪೂರ್ಣ ಜೀವನ ನಡೆಸಿ- ದಲೈ ಲಾಮಾ

ಬೌದ್ಧ ಧರ್ಮದ ಶ್ರೇಷ್ಠ ಧರ್ಮಗುರು ದಲೈ ಲಾಮಾ ಅವರು ಜಗತ್ತಿನಾದ್ಯಂತ ಇರುವ ಬೌದ್ಧ ಅನುಯಾಯಿಗಳಿಗೆ ಬುದ್ಧ ಪೂರ್ಣಿಮೆಯ ಶುಭಾಶಯ ತಿಳಿಸಿದ್ದಾರೆ. ಭಗವಾನ್ ಗೌತಮ ಬುದ್ಧ ಹುಟ್ಟಿದ, ಜ್ಞಾನೋದಯವಾದ ಹಾಗೂ ನಿರ್ವಾಣ ಹೊಂದಿದ ದಿನವನ್ನು ಭಾರತಾದ್ಯಂತ ಬುದ್ಧ ಪೂರ್ಣಿಮೆ ಎಂದು ಆಚರಿಸಲಾಗುತ್ತದೆ. ಈ ಶುಭ ಸಂದರ್ಭದಲ್ಲಿ ಬೌದ್ಧ ಧರ್ಮದ ಧರ್ಮಗುರು ದಲೈ ಲಾಮಾ ಅವರು ವಿಶ್ವಾದ್ಯಂತ ಇರುವ ತಮ್ಮ ಅನುಯಾಯಿಗಳಿಗೆ “ಇತರರ ಕಲ್ಯಾಣಕ್ಕಾಗಿ ಅರ್ಥಪೂರ್ಣವಾದ ಜೀವನವನ್ನು ನಡೆಸುವಂತೆ” ಸಂದೇಶ ನೀಡಿದ್ದಾರೆ. “ಭಗವಾನ್ …

Read More »

ಮೈಸೂರಿನಲ್ಲಿ ಐಟಿ ದಾಳಿ: ಅಲಂಕಾರಿಕ ಗಿಡದಲ್ಲಿ ಸಿಕ್ತು 1 ಕೋಟಿ ಹಣ!

ಮೈಸೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರ ಸೋದರ ಎನ್ನಲಾಗಿರುವ ಕೆ.ಸುಬ್ರಮಣ್ಯ ರೈ ಎಂಬುವವರ ಮೈಸೂರಿನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ‌ ನಡೆಸಿದೆ. ಈ ವೇಳೆ ಮನೆ ಮುಂಭಾಗದ ಅಲಂಕಾರಿಕ ಗಿಡದೊಳಗೆ ಹಣ್ಣಿನ ಬಾಕ್ಸ್​ಗಳಲ್ಲಿ ಇಟ್ಟಿದ್ದ ಹಣವನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವುದನ್ನು ಮೂಲಗಳು ಖಚಿತಪಡಿಸಿವೆ. ಕೆ.ಸುಬ್ರಹ್ಮಣ್ಯ ರೈ ಎಂಬುವವರು ಮೈಸೂರು ನಗರದ ನಿವಾಸಿಯಾಗಿದ್ದು, ಇವರ ಮನೆಯ ಮೇಲೆ ಸೋಮವಾರ ಸಂಜೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ …

Read More »

P.M. ಮೋದಿ ವಿರುದ್ಧ ದೂರು

ಬೆಂಗಳೂರು: ಬಜರಂಗದಳ ನಿಷೇಧ ಪ್ರಸ್ತಾವ ಮುಂದಿಟ್ಟು “ಜೈ ಬಜರಂಗಬಲಿ ಎಂದು ಘೋಷಣೆ ಕೂಗಿ ಓಟಿನ ಬಟನ್‌ ಒತ್ತಿ” ಎಂದು ಕರೆ ನೀಡುವ ಮೂಲಕ ಧಾರ್ಮಿಕ ಭಾವನೆ ಕೆರಳಿಸುವ ಮತ್ತು ಶಾಂತಿಗೆ ಭಂಗ ಉಂಟು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಕಾಂಗ್ರೆಸ್‌ ಪಕ್ಷ ಚುನಾವಣ ಆಯೋಗಕ್ಕೆ ದೂರು ನೀಡಿದೆ. ಜಾತಿ-ಧರ್ಮದ ಆಧಾರದಲ್ಲಿ ಮತ ಕೇಳು ವಂತಿಲ್ಲ. ಆದರೆ ಮೋದಿ ಚುನಾವಣ ರ್ಯಾಲಿ ಯಲ್ಲಿ ಹಿಂದೂ …

Read More »

ರಾಜ್ಯದ ಭವಿಷ್ಯದ ನಗರವಾಗಲಿದೆ ಹುಬ್ಬಳ್ಳಿ: ಶೆಟ್ಟರ್

ಹುಬ್ಬಳ್ಳಿ: ನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗಿದ್ದು, ರಾಜ್ಯದ ಭವಿಷ್ಯದ ನಗರವಾಗಿ ರೂಪುಗೊಳ್ಳಲಿದೆ ಎಂದು ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು. ವಾರ್ಡ್‌ 39, 41 ಮತ್ತು 47 ಸೇರಿದಂತೆ ವಿವಿಧ ಕಡೆ ಮತಯಾಚನೆ ಮಾಡಿ ಮಾತನಾಡಿದ ಅವರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ, ಜನರ ಹಿತದೃಷ್ಟಿಯಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತ ಬಂದಿದ್ದೇನೆ. ಕ್ಷೇತ್ರದಲ್ಲಿ ಹಲವು ಮೂಲಸೌಲಭ್ಯಗಳ ನೀಡಿಕೆ ನಿಟ್ಟಿನಲ್ಲಿ ಪ್ರಾಮಾಣಿಕ ಯತ್ನ …

Read More »

ಚಾರವನ್ನು ಅರ್ಧಕ್ಕೇ ಮೊಟಕುಗೊಳಿಸಿ ತೆರಳಿದ್ದಾರೆ. ಅಮಿತ್ ಶಾ

ಇಂಫಾಲ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಏ.25ರಿಂದ ಕರ್ನಾಟಕ ರಾಜ್ಯಾದ್ಯಂತ ಪ್ರಚಾರ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರವನ್ನು ಅರ್ಧಕ್ಕೇ ಮೊಟಕುಗೊಳಿಸಿ ತೆರಳಿದ್ದಾರೆ. ಮಣಿಪುರದಲ್ಲಿ ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರದ ಸ್ವರೂಪ ಪಡೆದಿದ್ದು ಕಾನೂನು ತೀವ್ರ ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅವರು ಚುನಾವಣೆ ಪ್ರಚಾರ ಸಭೆಗಳನ್ನು ರದ್ದುಪಡಿಸಿದ್ದಾರೆ. ಚುನಾವಣೆ ಪ್ರಚಾರ ಇನ್ನು ನಾಲ್ಕು ದಿನಗಳು ಮಾತ್ರ ನಡೆಯುವ ಹಿನ್ನೆಲೆಯಲ್ಲಿ …

Read More »

SSLC ಫಲಿತಾಂಶ ಮೇ 8ರಂದು ಪ್ರಕಟ

ಬೆಂಗಳೂರು: ಕಳೆದ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ನಡೆದ ಕರ್ನಾಟಕ ಎಸ್.ಎಸ್.ಎಲ್.ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದ್ದು ಪರೀಕ್ಷಾ ಫಲಿತಾಂಶ ಮೇ 8ರಂದು ಪ್ರಕಟಗೊಳ್ಳುವ ಸಾಧ್ಯತೆಗಳಿವೆ. KSEAB ಅಧಿಕಾರಿಗಳು  karresults.nic.in ಮತ್ತು kseab.karnataka.gov.in. ನಲ್ಲಿ SSLC ಫಲಿತಾಂಶವನ್ನು ಮುಂದಿನ ವಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆಎಸ್‌ಇಎಬಿ ಅಧಿಕಾರಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ 8 ರಂದು ಘೋಷಿಸಲು ಶೇ. 90ರಷ್ಟು ನಿರ್ಧಾರ ಕೈಗೊಂಡಿದ್ದರೂ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಸಭೆ …

Read More »

ಅವಿವಾಹಿತ ಯುವಕರಿಗೆ ಮದುವೆ ಭಾಗ್ಯ: ಪಕ್ಷೇತರ ಅಭ್ಯರ್ಥಿಗಳ ವಿನೂತನ ಪ್ರಣಾಳಿಕೆ

ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಈಗಾಗಲೇ ಪ್ರಬಲ ರಾಜಕೀಯ ಪಕ್ಷಗಳು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿ ಎಲ್ಲರ ಹುಬ್ಬೇರಿಸುವಂತೆ ಮಾಡಿವೆ. ಈ ನಡುವೆ ಬೆಳಗಾವಿ ಜಿಲ್ಲೆಯ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾವು ಯಾರಿಗೂ ಕಮ್ಮಿ ಇಲ್ಲ ಎಂಬಂತೆ ವಿನೂತನ ರೀತಿ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮತದಾರರ ಗಮನ ಸೆಳೆದಿದ್ದಾರೆ. ಹೌದು, ಅರಭಾವಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ್ ಕ್ಷೇತ್ರದ …

Read More »

ತನ್ನ ಸರ್ವಿಸ್ 303 ರೈಪಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾನಸ್ಟೇಬಲ್

ಕಲಬುರಗಿ: ಜಿಲ್ಲೆಯ ಚಿತ್ತಾಪುರ(Chittapur) ಪಟ್ಟಣದಲ್ಲಿ ಕಾನಸ್ಟೇಬಲ್​ಲೊಬ್ಬ ತನ್ನ ಸರ್ವಿಸ್ 303 ರೈಫಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ತಾಪುರ ಪಟ್ಟಣದ ತಹಶಿಲ್ದಾರ್ ಕಚೇರಿಯ ಮಹಡಿ ಮೇಲೆ ಹೋಗಿ 34 ವರ್ಷದ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚುನಾವಣೆ ಕರ್ತವ್ಯದಲ್ಲಿದ್ದ ಮಲ್ಲಿಕಾರ್ಜುನ, ಇಂದು(ಮೇ.4) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತ ಜಿಲ್ಲೆಯ ಶಹಬಾದ್ ಪಟ್ಟಣದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ, ಕಳೆದ ಕೆಲ ವರ್ಷಗಳಿಂದ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದ್ರೆ ಇದೀಗ ಏಕಾಎಕಿ ಆತ್ಮಹತ್ಯೆ …

Read More »