ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಮೇ 20 ಹಾಗೂ 21ರಂದು ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam) ನಡೆಯಲಿದ್ದು, ಪಿಯುಸಿ ಪೂರಕ ಪರೀಕ್ಷೆ ಬರೆಯಲು ಉದ್ದೇಶಿಸಿರುವವರು ಕೂಡ ಸಿಇಟಿ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಸಿಇಟಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ, ಮೇ 20 ಮತ್ತು …
Read More »Yearly Archives: 2023
‘ಶಿವಾಜಿ ಸುರತ್ಕಲ್ 2’ಗೆ ಐಪಿಎಸ್ ಅಧಿಕಾರಿಗಳಿಂದ ಬಹುಪರಾಕ್
ನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್ 2 ಸಿನಿಮಾ ವೀಕ್ಷಿಸಿದ ರಾಜ್ಯದ ಗಣ್ಯ ವ್ಯಕ್ತಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟ ರಮೇಶ್ ಅರವಿಂದ್ ಡಿಟೆಕ್ಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಶಿವಾಜಿ ಸುರತ್ಕಲ್ 2 ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ ಚಲನಚಿತ್ರವು ಎರಡು ವಾರಗಳ ಯಶಸ್ವಿ ಓಟದ ನಂತರ ಭರದಿಂದ ಮೂರನೇ ವಾರಕ್ಕೆ ಕಾಲಿಡುತ್ತಿದೆ. ಸಂಭ್ರಮದ ವಿಚಾರ ಏನೆಂದರೆ ಹಲವು ಉನ್ನತ ಮಟ್ಟದ ಸಾಧಕರು ಚಿತ್ರವನ್ನು ನೋಡಿ ಅಪಾರ ಮೆಚ್ಚುಗೆ …
Read More »ರಾಹುಲ್ ಗಾಂಧಿ 224 ಕ್ಷೇತ್ರಕ್ಕೂ ಹೋಗಲಿ, ಅವರು ಹೋದಲೆಲ್ಲ ಕಾಂಗ್ರೆಸ್ ಸೋತಿದೆ: ನಳಿನ್ ಕುಮಾರ್ ಕಟೀಲ್
ಮಂಗಳೂರು(ದಕ್ಷಿಣ ಕನ್ನಡ): ರಾಹುಲ್ ಗಾಂಧಿ ಅವರು 224 ಕ್ಷೇತ್ರಕ್ಕೂ ಹೋಗಿ ಬರಲಿ ಎಂದು ವಿನಂತಿ ಮಾಡುತ್ತೇನೆ. ಅವರು ಹೋದಲೆಲ್ಲ ಕಾಂಗ್ರೆಸ್ ಸೋತಿದೆ. ಕಾಂಗ್ರೆಸ್ನ ಜಾಯಮಾನವೇ ಭ್ರಷ್ಟಾಚಾರವಾಗಿದೆ. ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಮಂಗಳೂರಿನ ಡೊಂಗರಕೇರಿಯ ಸುಧೀಂದ್ರ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕರ್ತರ ಜೊತೆಗೆ ನಡೆದ ಸಂವಾದದ ವರ್ಚುಯಲ್ ಸಭೆಯನ್ನು ವೀಕ್ಷಿಸಿದ ಬಳಿಕ ನಳಿನ್ ಕುಮಾರ್ ಕಟೀಲ್ ಮಾತನಾಡಿದರು. ಮನೆ …
Read More »ದೇಶದ ಪ್ರಗತಿ ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸುಂತೆ ಯಡಿಯೂರಪ್ಪ ಕರೆ ನೀಡಿದರು.
ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ. ಇತ್ತಿಚಿಗೆ ನಡೆದ ಉತ್ತರ ಪ್ರದೇಶ ಚುನಾವಣೆಯಲ್ಲಿ 400 ಸೀಟ್ ಪೈಕಿ 4 ಮಾತ್ರ ಕಾಂಗ್ರೆಸ್ ಗೆದ್ದಿದೆ. ದೇಶದಲ್ಲಿ ದಯನೀಯ ಸೋಲು ಅನುಭವಿಸಿ ಕಾಂಗ್ರೆಸ್ ಬೀದಿ ಪಾಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಬೆಳಗಾವಿಯ ಧರ್ಮನಾಥ ಭವನದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು, ಪ್ರಧಾನಿ ಮೋದಿಯವರು …
Read More »ಹು-ಧಾ ಮಹಾನಗರ ಪಾಲಿಕೆ ಮಾಜಿ ಮೇಯರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ
ಹುಬ್ಬಳ್ಳಿ : ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾದಾಗಿನಿಂದ ಆಯಾ ಪಕ್ಷಗಳ ಮುಖಂಡರ ಪಕ್ಷಾಂತರ ಪರ್ವ ಜೋರಾಗಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಜಗದೀಶ್ ಶೆಟ್ಟರ್ ಅವರು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಇದರ ಬೆನ್ನಲ್ಲೇಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಾಜಿ ಮೇಯರ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಪ್ರಕಾಶ ಕ್ಯಾರಕಟ್ಟಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ನಗರದ ಕುಸುಗಲ್ ರಸ್ತೆಯಲ್ಲಿನ ಶ್ರೀನಿವಾಸ್ ಗಾರ್ಡನ್ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …
Read More »ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ: ವ್ಯಕ್ತಿಗೆ ಚಾಕು ಇರಿತ, ಕಾರ್ ಗ್ಲಾಸ್ ಒಡೆದು ಪುಂಡಾಟ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಕಂಡ ಕಂಡಲ್ಲಿ ಜನರನ್ನು ಅಡ್ಡ ಹಾಕುವ ಕಿರಾತಕರು ಹಲ್ಲೆ ಮಾಡಿ ಉದ್ಧಟತನ ತೋರುತ್ತಿದ್ದಾರೆ. ಇದೇ ರೀತಿ ಹವಾ ಮೈಂಟೇನ್ ಮಾಡಲು ಅಟ್ಟಹಾಸ ಮೆರೆದಿದ್ದ ರೌಡಿಶೀಟರ್ ಕೈಗೆ ಗಿರಿನಗರ ಪೊಲೀಸ್ ಠಾಣೆಯ ಪೊಲೀಸರು ಕೈಕೋಳ ತೊಡಿಸಿದ್ದಾರೆ. ರೌಡಿಶೀಟರ್ ನರಸಿಂಹ ಅಲಿಯಾಸ್ ಕೂಸೆ, ಸಹಚರ ಕಾಂತರಾಜ್ ಬಂಧಿತರು. ಕೃತ್ಯದಲ್ಲಿ ಭಾಗಿಯಾಗಿದ್ದ ಯೋಗೇಶ್ ಸೇರಿ ಮೂವರ ವಿರುದ್ಧ ತಲೆಮರೆಸಿಕೊಂಡಿದ್ದು ಶೋಧಕಾರ್ಯ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ …
Read More »ಜಸ್ಟ್ 25 ಸಾವಿರ ರೂ. ಕೊಡಿ : ಮತದಾರರ ಡಿಟೈಲ್ಸ್ ಕೊಡ್ತೇವೆ ಎಂದಿದ್ದ ಅನಾಮಧೇಯ ಕಂಪನಿ ವಿರುದ್ಧ ಕೇಸ್
ಬೆಂಗಳೂರು : ಮತದಾರರ ವೈಯಕ್ತಿಕ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಚಿಲುಮೆ ಸಂಸ್ಥೆಯ ಅವ್ಯವಹಾರ ಮರೆಯಾಗುವ ಮುನ್ನವೇ ಮತ್ತೊಂದು ಕಂಪೆನಿಯು ಇದೇ ಮಾದರಿಯಲ್ಲಿ ಮಾಹಿತಿ ಪಡೆದು ಚುನಾವಣಾ ಅಭ್ಯರ್ಥಿಗಳಿಗೆ ಅನಾಮಧೇಯ ಕಂಪೆನಿಯು ಮಾರಾಟ ಮಾಡುತ್ತಿರುವ ಜಾಲ ಬೆಳಕಿಗೆ ಬಂದಿದೆ. 25 ಸಾವಿರ ಕೊಟ್ಟರೆ ಸಾಕು ನಿಮ್ಮ ಕ್ಷೇತ್ರದಲ್ಲಿ ಮತದಾರರ ಮಾಹಿತಿಯನ್ನು ನಾವು ನಿಮಗೆ ಕೊಡುತ್ತೇವೆ. ಇಲ್ಲಿ ಲಕ್ಷಾಂತರ ಮತದಾರರ ಮಾಹಿತಿಯನ್ನು ಕೇವಲ 25 ಸಾವಿರಕ್ಕೆ ಮಾರಾಟ ಮಾಡುವುದಾಗಿ ಹೇಳಿದ್ದ ಅನಾಮಧೇಯ ವೆಬ್ಸೈಟ್ …
Read More »ವಿಷದ ಹಾವಿಗೆ ಪ್ರಧಾನಿ ಮೋದಿಯವರನ್ನು ಹೋಲಿಸಿದ ಮಲ್ಲಿಕಾರ್ಜುನ ಖರ್ಗೆ
ಗದಗ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ವಾಕ್ಪ್ರಹಾರ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರನ್ನು ವಿಷದ ಹಾವಿಗೆ ಹೋಲಿಕೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ ನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರು ವಿಷದ ಹಾವು ಇದ್ದಂತೆ. ಹಾವಿನ ವಿಷ ಸ್ವಲ್ಪ ತಾಗಿದರೂ ಸತ್ತು ಹೋಗ್ತಾರೆ. ಹಾಗಾಗಿ ರಾಜ್ಯಕ್ಕೆ ನುಗ್ಗಿರುವ ವಿಷದ ಹಾವು …
Read More »ಚುನಾವಣೆ ನಡೆಸುತ್ತಿರುವುದುಚುನಾವಣಾ ಆಯೋಗವೋ? BJP ಪಕ್ಷವೋ? : ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು:ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದುಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಚೆ ಬಿಜೆಪಿ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಅಭ್ಯರ್ಥಿಗಳು ಹಾಗೂ ಚುನಾವಣೆ ಏಜಂಟರಿಗೆ ಬರೆದ ಪತ್ರದ ಕುರಿತು ಪ್ರಸ್ತಾಪಿಸಿ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಪ್ರಶ್ನಿಸಿದ್ದಾರೆ. …
Read More »ಚಾಯ್ ಪೆ ಚರ್ಚಾ ಕಾರ್ಯಕ್ರಮದ ಮೂಲಕ ನಗರದ ಮುಖ್ಯ ಮಾರುಕಟ್ಟೆಯ ಪರಿಸರದಲ್ಲಿ ಪ್ರಚಾರ ಕಾರ್ಯ ಕೈಗೊಂಡ ರವಿ ಪಾಟೀಲ್
ಬೆಳಗಾವಿ: ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ ಭಾರತೀಯ ಜನತಾ ಪಾರ್ಟಿ ಅಧಿಕೃತ ಅಭ್ಯರ್ಥಿ ಡಾಕ್ಟರ್ ರವಿ ಪಾಟೀಲ್ ಬೆಳಗಾವಿ ನಗರದ ರಾಮದೇವ್ ಗಲ್ಲಿ ಕಾರ್ ಪಾರ್ಕಿಂಗ್ ನಲ್ಲಿ ಚಾಯ್ ಪೆ ಚರ್ಚಾ ಕಾರ್ಯಕ್ರಮದ ಮೂಲಕ ನಗರದ ಮುಖ್ಯ ಮಾರುಕಟ್ಟೆಯ ಪರಿಸರದಲ್ಲಿ ಪ್ರಚಾರ ಕಾರ್ಯ ಕೈಗೊಂಡರು. ಈ ಸಂದರ್ಭದಲ್ಲಿ ಡಾ ರವಿ ಪಾಟೀಲ್ ನಗರದ ವರ್ತಕರೊಂದಿಗೆ ಸುದೀರ್ಘಕಾಲ ಸಂವಹನ ನಡೆಸಿ ಅವರ ಸಮಸ್ಯೆಗಳನ್ನು ಕುಲಂಕಷವಾಗಿ ಆಲಿಸಿದರು. ಮೂಲಭೂತ ಸೌಕರ್ಯಗಳ ಕೊರತೆಯಿಂದ ತಮಗಾಗಿರುವ ತೊಂದರೆಯನ್ನು …
Read More »