Breaking News

Yearly Archives: 2023

ನಾಳೆ, ನಾಡಿದ್ದು ರಾಜ್ಯಕ್ಕೆ 98 ರಾಷ್ಟ್ರೀಯ ನಾಯಕರು

ಬೆಳಗಾವಿ: ಬಿಜೆಪಿ ಕಾರ್ಯಕರ್ತರಿಂದಲೇ ಕಟ್ಟಿರುವ ದೊಡ್ಡ ಪಕ್ಷ. ಕರ್ನಾಟಕ ರಾಜ್ಯದ 224 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ನಡೆಸುತ್ತಿದ್ದಾರೆ. ಏ.25 ಮತ್ತು 26 ರಂದು ವಿಶೇಷ ಮಹಾ ಅಭಿಯಾನವನ್ನು ಬಿಜೆಪಿ ಕೈಗೊಂಡಿದೆ ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಜೀರಲಿ ಹೇಳಿದರು. ಸೋಮವಾರ ಬಿಜೆಪಿ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವಿಶೇಷ ಮಹಾ ಅಭಿಯಾನವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ ನೇತೃತ್ವದಲ್ಲಿ …

Read More »

ಗೋಕಾಕ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್

ಗೋಕಾಕ: ಗೋಕಾಕ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಚಂದನಕುಮಾರ ಗಿಡ್ನವರ್ ಹಾಗೂ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಪ್ರಕಾಶ ಮಹಾದೇವ ಭಾಗೋಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ ಅವರು ಚುನಾವಣಾಧಿಕಾರಿಗೆ ನಾಮಪತ್ರ ವಾಪಸ್ ಪಡೆಯುವ ಪತ್ರ ಸಲ್ಲಿಸಿದ್ದಾರೆ. ಇದರಿಂದಾಗಿ ಗೋಕಾಕ ಕ್ಷೇತ್ರ ಮತ್ತಷ್ಟು ಕುತೂಹಲಕರ ಕಣವಾಗಿ ಮಾರ್ಪಟ್ಟಿದೆ. ಬಿಜೆಪಿಯ ರಮೇಶ ಜಾರಕಿಹೊಳಿ ಮತ್ತು ಕಾಂಗ್ರೆಸ್ ನ ಮಹಾಂತೇಶ …

Read More »

ಕರ್ನಾಟಕದಲ್ಲಿ ಕಾಂಗ್ರೆಸ್, ಜೆಡಿಎಸ್ ಧೂಳಿಪಟ ಮಾಡಬೇಕು – ಸಿಎಂ ಬೊಮ್ಮಾಯಿ

ಬೆಂಗಳೂರು: ಸುರೇಶ್ ಗೌಡರು ಒಬ್ಬರು ಸಾಧಕರು. ಇದಕ್ಕೆ ಅವರು ಮಾಡಿರುವ ಕೆಲಸವೇ ಸಾಕ್ಷಿ. ಸುರೇಶ್ ಗೌಡ್ರು 50 ವರ್ಷದಲ್ಲಿ ಆಗುವ ಕೆಲಸವನ್ನು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 5 ವರ್ಷದಲ್ಲಿ ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.   ಅವರು ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಗೌಡರ ಪರವಾಗಿ ಗೂಳೂರಿನಲ್ಲಿ ರೋಡ್ ಶೋ ನಡೆಸಿ ಮಾತನಾಡಿ, ಕಳೆದ ಬಾರಿ ಸುರೇಶ ಗೌಡರನ್ನು ಸೋಲಿಸಿ ಅಕ್ರಮವಾಗಿ …

Read More »

ಜೆಡಿಎಸ್ ಪಕ್ಷ’ ಸೇರುತ್ತೇನೆ ಎಂದಿದ್ದ ‘ನೆಹರು ಓಲೇಕಾರ್’ “U””ಟರ್ನ್

ಹಾವೇರಿ: ಈಗಾಗಲೇ ಅನೇಕರು ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ್ದರಿಂದ ವಿವಿಧ ಪಕ್ಷಗಳಿಗೆ ಸೇರ್ಪಡೆಗೊಂಡಿದ್ದಾರೆ. ಇದೇ ರೀತಿಯಲ್ಲಿ ಟಿಕೆಟ್ ಕೈ ತಪ್ಪಿದ್ದರಿಂದ ನೆಹರು ಓಲೇಕಾರ್ ಕೂಡ ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರಿವುದಾಗಿ ಹೇಳಿದ್ದರು. ಆದ್ರೇ ಇಂದು ಯೂಟರ್ನ್ ಹೊಡೆದು, ಬಿಜೆಪಿಯಲ್ಲೇ ಮುಂದುವರೆಯುವುದಾಗಿ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಾನು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಪಕ್ಷದಲ್ಲೇ ಇದ್ದೇನೆ. ಚುನಾವಣಾ ಪ್ರಚಾರಕ್ಕೂ ನನ್ನ ಸಿಎಂ ಬೊಮ್ಮಾಯಿ ಕರೆದಿಲ್ಲ. ಬೇರೆ ಯಾವುದೇ …

Read More »

ರಾಮದುರ್ಗ ಬಂಡಾಯ ಶಮನ ಇಂದು ಮಹದೇವಪ್ಪ ನಾಮ ಪತ್ರ ವಾಪಸ..!

ಬೆಳಗಾವಿ: ಜಿಲ್ಲೆಯ ರಾಮದುರ್ಗ ಕ್ಷೇತ್ರದಲ್ಲಿ ಎದ್ದಿದ್ದಂತ ಬಿಜೆಪಿ ಬಂಡಾಯ ಕೊನೆಗೂ ಶಮನವಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದಂತ ಹಾಲಿ ಶಾಸಕ ಮಹದೇವಪ್ಪ ಯಾದವಾಡ ಅವರು  ತಮ್ಮ ನಾಮಪತ್ರವನ್ನು ವಾಪಾಸ್ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ.   ಜಿಲ್ಲೆಯಲ್ಲಿ ಎದ್ದಿದ್ದಂತ ಬಂಡಾಯವನ್ನು ಶಮನಗೊಳಿಸುವಂತೆ ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್, ಈರಣ್ಣ ಕಡಾಡಿ ಯಶಸ್ವಿಯಾಗಿದ್ದಾರೆ. ನಿನ್ನೆ ಶಾಸಕ ಮಹದೇವಪ್ಪ ಯಾದವಾಡ ಮನೆಗೆ ಭೇಟಿ ನೀಡಿದ್ದಂತ ಅವರು,  ನಾಮಪತ್ರ ತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ವಾಪಾಸ್ಸು ಪಡೆಯುವಂತೆ ಮನವೊಲಿಸಲು ಯಶಸ್ವಿಯಾಗಿದ್ದರು. …

Read More »

ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೂವರು ಸಾವು, ಓರ್ವ ಕಣ್ಮರೆ

ಉಡುಪಿ: ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿ ಓರ್ವ ಕಣ್ಮರೆಯಾಗಿರುವ ಘಟನೆ, ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಇಬಾಜ್, ಫಜಾನ್, ಸೂಫಾನ್ ಹಾಗೂ ಫರಾನ್ ಮೃತ ದುರ್ದೈವಿಯಾಗಿದ್ದು, ಕುಕ್ಕುಡೆ ಕಿಣಿಯರ ಕುದ್ರು ಸಮೀಪದ ನದಿಗೆ ಸಂಜೆ ದೋಣಿಯಲ್ಲಿ ಮೀನು ಹಿಡಿಯಲು ಏಳು ಯುವಕರ ತಂಡ ತೆರಳಿತ್ತು, ಈ ವೇಳೆ ಅವಘಡ ನಡೆದಿದೆ ಎನ್ನಲಾಗಿದೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಸಿದ ವೇಳೆಯಲ್ಲಿ, ಮೂವರು ಯುವಕರು …

Read More »

ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ವೈದ್ಯ

ಬೆಂಗಳೂರು : ಬೆಂಗಳೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಾಗಿದ್ದ ವೈದ್ಯರೊಬ್ಬರು ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ರೇಣುಕಾನಂದ (43) ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿನ ವಾರ್ಡ್ ನಲ್ಲಿ ಇದ್ದ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಆಸ್ಪತ್ರೆಯ ಸಿಬ್ಬಂದಿ ತಿಲಕ್ ನಗರ ಠಾಣೆಯ ಪೊಲೀಸರಿಗೆ ನೀಡಿದ್ದು, ಸ್ಥಳಕ್ಕಾಗಮಿಸಿ್ ಪೊಲೀಸರು ಶವವನ್ನು …

Read More »

215 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ CPI ಬೆಂಬಲ; 7ಕಡೆ ಸೌಹಾರ್ದ ಸ್ಪರ್ಧೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) 215 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದೆ. ‘ರಾಜ್ಯಾದ ಮೂಡಿಗೆರೆ, ಆಳಂದ, ಜೇವರ್ಗಿ, ಕೂಡ್ಲಗಿ, ಕೆಜಿಎಫ್, ಸಿರಾ, ಮಡಿಕೇರಿ ಸೇರಿದಂತೆ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸಿಪಿಐ ಸ್ಪರ್ಧಿಸುತ್ತಿದ್ದು, ಉಳಿದ 215 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಿಪಿಐ ಬೆಂಬಲಿಸಲಿದೆ’ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾಟಿ ಸುಂದರೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.   …

Read More »

2023: ಬಿಜೆಪಿ ಬಂಡಾಯ ಅಭ್ಯರ್ಥಿ ತವಣಪ್ಪ ಅಷ್ಟಗಿ ಕಾಂಗ್ರೆಸ್ ಸೇರ್ಪಡೆ

ಧಾರವಾಡ: ಬಿಜೆಪಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಂಡಾಯವೆದ್ದು ಧಾರವಾಡ ಗ್ರಾಮೀಣ-71 ರ ವಿಧಾನಸಭಾ ಮತಕ್ಷೇತ್ರಕ್ಕೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ತವನಪ್ಪ ಅಷ್ಟಗಿ ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಕ್ಷೇತ್ರದಲ್ಲಿ ಹೊಸ ಸಂಚಲನ ‌ಸೃಷ್ಠಿಸಿದ್ದಾರೆ.   ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತವನಪ್ಪ ಅಷ್ಟಗಿ ಬಿಜೆಪಿ ವರಿಷ್ಠರು ಮಣೆ ಹಾಕದೇ ಹಾಲಿ ಶಾಸಕ ಅಮೃತ ದೇಸಾಯಿ ಅವರಿಗೆ ಈ ಸಲವೂ ಟಿಕೆಟ್ ನೀಡಿದ್ದರಿಂದ ಅಷ್ಟಗಿ ಮುನಿಸಿಕೊಂಡಿದ್ದರು. ಇದಲ್ಲದೇ ನಿಗಮ ಮಂಡಳಿ …

Read More »

ಎಲ್ಲೆಡೆ ವಾಹನಗಳ ತಪಾಸಣೆಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಧಿಕಾರಿಗಳು ಎಲ್ಲೆಡೆ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಹಣ ಅಥವಾ ಗಿಫ್ಟ್ ಸಾಗಾಣಿಕೆ ತಡೆಯಲು ಕಟ್ಟೆಚ್ಚರ ವಹಿಸಲಾಗುತ್ತಿದೆ. ಈಚೆಗೆ ಹಾಸನ ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಾಹನವನ್ನೂ ತಡೆದು ಪರಿಶೀಲನೆ ನಡೆಸಲಾಗಿದೆ. ನಿನ್ನೆ ಮತ್ತು ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಹೆಲಿಕಾಪ್ಟರನ್ನು ಸಹ ಪರಿಶೀಲನೆ ನಡೆಸಲಾಗಿದೆ. ಅದಕ್ಕೆ ಡಿ.ಕೆ.ಶಿವಕುಮಾರ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ …

Read More »