Breaking News

Yearly Archives: 2023

ಹಿಡಕಲ್ ಡ್ಯಾಂ ನೀರು ಪೂರೈಕೆ ಪೈಪ್ ಭಗ್ನ; 50 ಅಡಿ ಎತ್ತರ ಪುಟಿದ ನೀರು

ಬೆಳಗಾವಿ: ಹಿಡಕಲ್ ಡ್ಯಾಂನಿಂದ ಬೆಳಗಾವಿ ನಗರಕ್ಕೆ ನೀರು ಪೂರೈಸುವ ಪೈಪ್ ಲೈನ್ ಶನಿವಾರ ಒಡೆದ ಪರಿಣಾಮ ಭಾರೀ ಪ್ರಮಾಣದಲ್ಲಿ ನೀರು ಸೋರಿಕೆಯಾಗಿದೆ. ಖನಗಾಂವ ಬಿ.ಕೆ. ಗ್ರಾಮದ ಬಳಿ ಒತ್ತಡದಿಂದ ಒಡೆದ ಪೈಪ್ ಪೈನ್ ನಿಂದ ನೀರು ಸುಮಾರು 50 ಅಡಿ ಎತ್ತರಕ್ಕೆ ಚಿಮ್ಮಿತ್ತು. ಹಲವರು ಇದನ್ನು ಕಂಡು ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದರೆ ಬಿರು ಬೇಸಿಗೆಯಲ್ಲಿ ನೀರಿನ ಅಪವ್ಯಯವಾಗುತ್ತಿರುವುದಕ್ಕೆ ಮರುಗಿದರು. ಬೆಳಗಾವಿ- ಗೋಕಾಕ್ ರಸ್ತೆಯಲ್ಲಿ ಈ ಭಾರಿ ಪ್ರಮಾಣದ ನೀರಿನ ಹೊರಹೊಮ್ಮುವಿಕೆಯಿಂದ ಕೆಲ ಕಾಲ …

Read More »

ಚೆಕ್ ಪೋಸ್ಟ್ ಗಳಲ್ಲಿ ತೀವ್ರ ತಪಾಸಣೆ, ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ: ಡಿಸಿ

ಬೆಳಗಾವಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಗೆ ನಿಯೋಜಿತಗೊಂಡಿರುವ ಎಲ್ಲ 18 ಮತಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜತೆ ಸುವರ್ಣ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶನಿವಾರ ಸಭೆ ನಡೆಸಿದರು. ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವೆಚ್ಚ ವೀಕ್ಷಕ ಸುಬೋಧ ಸಿಂಗ್ ಮಾತನಾಡಿ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಿಯೋಜಿಸಲಾಗಿರುವ ವಿವಿಧ ತಂಡಗಳು …

Read More »

ಶಿಗ್ಗಾಂವಿಯಲ್ಲಿ ಗ್ರಾಮದೇವತೆ ದರ್ಶನ ಪಡೆದು ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹಾವೇರಿ/ಧಾರವಾಡ: ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ‌ ಇಂದು ನಾಮಪತ್ರ ಸಲ್ಲಿಸಿದರು. ಇಂದು ಸಿಎಂ ಬೆಂಗಳೂರಿನಿಂದ ಶಿಗ್ಗಾಂವಿಗೆ ಆಗಮಿಸಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ಶಿವಕುಮಾರ್ ಉದಾಸಿ, ಸಚಿವ ಸಿ.ಸಿ ಪಾಟೀಲ್, ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡರು ಮತ್ತು ಕುಟುಂಬಸ್ಥರು ಸಿಎಂ ಬೊಮ್ಮಾಯಿಗೆ ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಸಿಎಂ, ಕ್ಷೇತ್ರದಲ್ಲಿ ಈ ಹಿಂದಿನಕ್ಕಿಂತಲೂ ಹೆಚ್ಚಿನ ಬೆಂಬಲ ಇದೆ. ತಾಲೂಕಿನ ಅಭಿವೃದ್ಧಿಯನ್ನು …

Read More »

ಉತ್ತರ ಕನ್ನಡ ಜಿಲ್ಲೆಯ ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪೂರ್ಣಗೊಳ್ಳದೆ ದಿನನಿತ್ಯ ಸವಾರರು ಪರದಾಡುವಂತಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪೂರ್ಣಗೊಳ್ಳದೆ ದಿನನಿತ್ಯ ಸವಾರರು ಪರದಾಡುವಂತಾಗಿದೆ. ಧೂಳುಮಯವಾದ ಹೆದ್ದಾರಿಯ ಸಮಸ್ಯೆಯ ಕುರಿತು ಸ್ಥಳೀಯರು ಹಾಗು ಸವಾರರು ಆರೋಪ ಮಾಡುತ್ತಿರುವುದು.ಕಾರವಾರ: ಅದು ನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುವ ರಾಷ್ಟ್ರೀಯ ಹೆದ್ದಾರಿ. ಇಲ್ಲಿ ಕಾಮಗಾರಿ ಪ್ರಾರಂಭವಾಗಿ ವರ್ಷಗಳೇ ಉರುಳಿದರೂ ಈವರೆಗೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಅರೆ ಬರೆ ಕಾಮಗಾರಿಯಾಗಿರುವ ಹೆದ್ದಾರಿಯಲ್ಲಿ ತಗ್ಗು, ದಿನ್ನೆ, ಧೂಳಿನ ಮಧ್ಯ ಅನಿವಾರ್ಯವಾಗಿ ವಾಹನಗಳು ಸಂಚಾರ ಮಾಡುವಂತಾಗಿದೆ. …

Read More »

ಜೆಡಿಎಸ್​ ಭರವಸೆ ಪತ್ರ ಬಿಡುಗಡೆ: ಮಾತೃಶ್ರೀ, ಮಹಿಳಾ ಸಬಲೀಕರಣ, ರೈತ ಚೈತನ್ಯ ಸೇರಿ 12 ಭರವಸೆ ನೀಡಿದ ಜೆಡಿಎಸ್​​

ಬೆಂಗಳೂರು: ಕರುನಾಡ ಜನತೆಗಾಗಿ ಜೆಡಿಎಸ್ 12 ಭರವಸೆಯ ಪತ್ರ ಸಿದ್ದಪಡಿಸಿದ್ದು, ಇಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬಿಡುಗಡೆ ಮಾಡಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸದಲ್ಲಿ ಇಂದು ಭರವಸೆ ಪತ್ರ ಬಿಡುಗಡೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು, ಜನತಾ ಪ್ರಣಾಳಿಕೆ ಕರುಡು ರಚನಾ ಸಮಿತಿಯ ಅಧ್ಯಕ್ಷ ಬಿ.ಎಂ.ಫಾರೂಕ್ ಅವರು, ಸದಸ್ಯರಾದ ಕುಪೇಂದ್ರ ರೆಡ್ಡಿ, ಕೆ.ಎನ್. ತಿಪ್ಪೇಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ಜೆಡಿಎಸ್ ಪಕ್ಷ ಅಧಿಕಾರಕ್ಕೆ …

Read More »

ಹುಬ್ಬಳ್ಳಿ ನಿವಾಸದಲ್ಲಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬೆಂಬಲಿಗರ ‌ಅಭಿಪ್ರಾಯ ಸಂಗ್ರಹ ಸಭೆ ಆರಂಭವಾಗಿದೆ.

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್​ ಶೆಟ್ಟರ್ ನಿವಾಸದಲ್ಲಿ ಬೆಂಬಲಿಗರ ‌ಅಭಿಪ್ರಾಯ ಸಂಗ್ರಹ ಸಭೆ ಆರಂಭವಾಗಿದೆ. ಹುಬ್ಬಳ್ಳಿ ಮಧುರಾ ಎಸ್ಟೇಟ್ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ ನಿಮ್ಮೆಲ್ಲರ ಪ್ರೀತಿಗೆ ಅಭಿನಂದನೆ. ಕಳೆದ ಆರು ಭಾರಿ ನನ್ನ ಗೆಲುವಿಗೆ ನಿಮ್ಮೆಲ್ಲರ‌ ಆಶೀರ್ವಾದ ಮರೆಯಲು ಸಾಧ್ಯವಿಲ್ಲ. ಹುಬ್ಬಳ್ಳಿ ಧಾರವಾಡ ಜನತೆಯಿಂದ ರಾಜ್ಯಮಟ್ಟದ ನಾಯಕನಾಗಿ ಗುರುತಿಸಿಕೊಂಡಿದ್ದೇನೆ. ರಾಜ್ಯದ ಹಿತ, ಪಕ್ಷದ ಬೆಳವಣಿಗೆಗೆ ಕೆಲಸ ಮಾಡಿದ್ದೇನೆ. ವಿಪಕ್ಷ ‌ನಾಯಕ ಇದ್ದಾಗ ಇಡೀ‌ ಕರ್ನಾಟಕದಲ್ಲಿ ಯಡಿಯೂರಪ್ಪ, …

Read More »

ಚೆಕ್ ಬೌನ್ಸ್ ಪ್ರಕರಣ-ವೈಎಸ್‌ವಿ ದತ್ತಾಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.

ಬೆಂಗಳೂರು: ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಕಡೂರು ವಿಧಾನ ಸಭಾಕ್ಷೇತ್ರದ ಅಭ್ಯರ್ಥಿ ವೈ.ಎಸ್.ವಿ ದತ್ತಾ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿದೆ. ಚೆಕ್ ಬೌನ್ಸ್ ಆರೋಪಕ್ಕೆ ಸಂಬಂಧಿಸಿದಂತೆ ಸಿ.ಎಸ್ ಸೋಮೇಗೌಡ ಇತರರು ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (42ನೇ ಎಸಿಎಂಎಂ ನ್ಯಾಯಾಲಯ) ನ್ಯಾಯಾಧೀಶರಾದ ಜೆ.ಪ್ರೀತ್ ಅವರು, ಶನಿವಾರ ಬಂಧನ ರಹಿತ ವಾರಂಟ್ ಜಾರಿ …

Read More »

ಕಾಂಗ್ರೆಸ್​ ಮೂರನೇ ಪಟ್ಟಿ ರಿಲೀಸ್​: ಲಕ್ಷ್ಮಣ್​ ಸವದಿಗೆ ಟಿಕೆಟ್​.. ಸಿದ್ದರಾಮಯ್ಯಗೆ ಕೋಲಾರ ಮಿಸ್​

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಬಹುನಿರೀಕ್ಷಿತ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 43 ಅಭ್ಯರ್ಥಿಗಳನ್ನು ಹೆಸರನ್ನು ಅಖೈರು ಮಾಡಲಾಗಿದ್ದು, ಇನ್ನೂ 15 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಬಾಕಿ ಉಳಿಸಿಕೊಂಡಿದೆ. ವರುಣ ಜೊತೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಿಕೆಟ್​ ನೀಡಲಾಗಿಲ್ಲ. ಕೋಲಾರದಿಂದ ಕೊತ್ತೂರು ಜಿ.ಮಂಜುನಾಥ್​ಗೆ ಟಿಕೆಟ್​ ನೀಡಲಾಗಿದೆ. ಬಿಜೆಪಿಗೆ ರಾಜೀನಾಮೆ ನೀಡ ನಿನ್ನೆಯಷ್ಟೇ ಕಾಂಗ್ರೆಸ್​ ಸೇರಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಅಥಣಿ …

Read More »

ಪರಿಷತ್ ನಲ್ಲಿ ಬಹುಮತ ಕುಸಿತದ ಚಿಂತೆಯಲ್ಲಿ ಬಿಜೆಪಿ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆ ಗೊಂದಲದಲ್ಲಿ ಅತೃಪ್ತಿಯ ಭುಗಿಲೆಬ್ಬಿಸಿಕೊಂಡಿರುವ ಬಿಜೆಪಿ ಇದೀಗ ವಿಧಾನ ಪರಿಷತ್ ನಲ್ಲಿ ಬಹುಮತ ಕಳೆದುಕೊಳ್ಳುವ ಆತಂಕದಲ್ಲಿ ಮುಳುಗಿದೆ. 75 ಸದ್ಯಬಲ ಹೊಂದಿರುವ ವಿಧಾನ ಪರಿಷತ್ ನಲ್ಲಿ ಬಹುಮತಕ್ಕೆ 38 ಸ್ಥಾನಗಳನ್ನು ಹೊಂದುವುದು ಅಗತ್ಯ. ಪ್ರಸ್ತುತ ಕಾಂಗ್ರೆಸ್ 26, ಜೆಡಿಎಸ್ 8 ಸದಸ್ಯರನ್ನು ಹೊಂದಿದ್ದು ಒಬ್ಬ ಪಕ್ಷೇತರ ಸದಸ್ಯರಿದ್ದಾರೆ. ಒಬ್ಬರು ಸಭಾಪತಿ ಇದ್ದು, ಮೂರು ಸ್ಥಾನಗಳು ಖಾಲಿ ಇವೆ. ಹಲವು ವರ್ಷಗಳ ನಂತರ 39 ಸದಸ್ಯಬಲದೊಂದಿಗೆ ಬಹುಮತ …

Read More »

16, 17ರಂದು ಬೆಳಗಾವಿಯಲ್ಲಿ 13 ನೇ ಅಖಿಲ ಕರ್ನಾಟಕ ಗಮಕ ಕಲಾ ಸಮ್ಮೇಳನ

ಲೇಖನ: ಕಲಾನಿಧಿ ” ಗಮಕ” ಕರ್ನಾಟಕದ ಅತ್ಯಂತ ಪ್ರಾಚೀನ ಹೆಮ್ಮೆಯ ಕಲೆ. ಸಾಹಿತ್ಯ ಮತ್ತು ಸಂಗೀತ ಎರಡೂ ಸಮ್ಮಿಳಿಸಿದ ಸುಂದರ ಕಲೆ. ಕನ್ನಡದ ಶ್ರೇಷ್ಠ ಕಾವ್ಯಗಳನ್ನು ಕನ್ನಡಿಗರ ಮನೆಮನಕ್ಕೆ ತಲುಪಿಸುವ ಏಕೈಕ ಕಲೆ. ಪಂಪರನ್ನರಿಂದ ಕುಮಾರವ್ಯಾಸ, ಲಕ್ಷ್ಮೀಶರತನಕದ ಕವಿಕಾವ್ಯ ನಮ್ಮ ಕನ್ನಡ ನೆಲದ ಭವ್ಯ ಸಾಹಿತ್ಯ ಪರಂಪರೆಯ ಪ್ರತೀಕ. ಗಮಕದಲ್ಲಿ ಕಾವ್ಯಕ್ಕೆ ಹೆಚ್ಚಿನ ಮಹತ್ವ. ಸಂಗೀತದ ರಾಗಗಳನ್ನು ಬಳಸಿ ಕಾವ್ಯದ ಸೊಗಸನ್ನು , ಭಾಷೆಯ ಸೊಬಗನ್ನು, ಅರ್ಥದ ಸೊಗಡನ್ನು ಕೇಳುಗರಿಗೆ …

Read More »