ಉಡುಪಿ: ವಿಧಾನಸಭಾ ಚುನಾವಣೆ ಕರ್ತವ್ಯಕ್ಕೆ ಸಂಬಂಧಿಸಿ ಪ್ರಸ್ತುತ ಜಿಲ್ಲೆಯ ಗ್ರಾಮೀಣ ಭಾಗದ ತಳಮಟ್ಟದಲ್ಲಿ ಪೂರ್ವ ತಯಾರಿ ಕೆಲಸಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿದೆ. ಈ ನಡುವೆ ಅಂಗನವಾಡಿ ಸಿಬಂದಿಗೆ ಜವಾಬ್ದಾರಿ ಹೆಚ್ಚಾಗಿದೆ. 80 ವರ್ಷ ಮೇಲ್ಪಟ್ಟವರು, ಅಂಗವಿಕಲರಿಗೆ ಮನೆಯಿಂದಲೇ ವೋಟು ಮಾಡುವ ಈ ವರ್ಷದ ಹೊಸ ಪರಿಕಲ್ಪನೆಯನ್ನು ಚುನಾವಣ ಆಯೋಗ ಜಾರಿಗೊಳಿಸಿದೆ. ದ.ಕ. ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ 46,927 ಹಾಗೂ ಅಂಗವಿಕಲ ಮತದಾರರು 14,007 ಇದ್ದಾರೆ. ಉಡುಪಿ ಜಿಲ್ಲೆಯಲ್ಲಿ 80 ವರ್ಷ …
Read More »Yearly Archives: 2023
ಚರಂಡಿ ಕೆಳಗೆ ಬಚ್ಚಿಟ್ಟಿದ್ದ ರೂ.2.4 ಲಕ್ಷ ಮೌಲ್ಯದ ಅಕ್ರಮ ಸಾರಾಯಿ ವಶ
ಅಂಕೋಲಾ : ಚರಂಡಿಯ ಕೆಳಗೆ ಅಕ್ರಮವಾಗಿ ಬಚ್ಚಿಟ್ಟಿದ್ದ ಸುಮಾರು 2.4 ಲಕ್ಷ ಮೌಲ್ಯದ ಸಾಯಾಯಿಯನ್ನು ಅಂಕೋಲಾ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಹಾರವಾಡಾ ಗ್ರಾಮದ ಸೀಬರ್ಡ್ ಕಾಲೊನಿಯಲ್ಲಿ ನಡೆದಿದೆ. 345 ಲೀ. ಗೋವಾ ಸಾರಾಯಿ ಮತ್ತು 80 ಲೀ. ಗೋವಾ ಫೆನ್ನಿಯನ್ನು ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ .ವಶಕ್ಕೆ ಪಡಿಸಿದ ವಸ್ತುಗಳ ಒಟ್ಟೂ ಮೌಲ್ಯ ರೂ. 2.42,080 ಎಂದು ತಿಳಿದುಬಂದಿದೆ. ಆರೋಪಿ ಯಾರೆಂದು ಪತ್ತೆಯಾಗಿಲ್ಲ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ …
Read More »ಬರೋಬ್ಬರಿ 200 ಕೋಟಿ ರೂ.! ಅಂಕೆ ಮೀರಿದ ಚುನಾವಣ ಅಕ್ರಮ
ಬೆಂಗಳೂರು: ಬರೋಬ್ಬರಿ 200 ಕೋಟಿ ರೂಪಾಯಿ! ರಾಜ್ಯದಲ್ಲಿ ಒಂದು ತಿಂಗಳಿನಲ್ಲಿ ಬೆಳಕಿಗೆ ಬಂದಿರುವ ಚುನಾವಣ ಅಕ್ರಮಗಳ ಮೊತ್ತ ಇದು. ಹಿಂದಿನ ಚುನಾವಣೆಗೆ ಹೋಲಿಸಿದರೆ ಇದು ಪತ್ತೆಯಾದ ದಾಖಲೆ ಮೌಲ್ಯದ ಅಕ್ರಮ. “ಕರ್ನಾಟಕದಲ್ಲಿ ನಮಗೆ ಹಣಬಲವೇ ಸವಾಲು’ ಎಂದು ಮುಖ್ಯ ಚುನಾವಣ ಆಯುಕ್ತ ರಾಜೀವ್ ಕುಮಾರ್ ಮಾ. 11ರಂದು ಆತಂಕ ವ್ಯಕ್ತಪಡಿಸಿದ್ದರು. ಅದು ಈಗ ನಿಜವಾಗುತ್ತಿದೆ. ಇದು ರಾಜ್ಯದಲ್ಲಿ ಆಮಿಷಮುಕ್ತ ಚುನಾವಣೆಯ ಬಗ್ಗೆ ದೊಡ್ಡ ಪ್ರಶ್ನೆ ಮೂಡಿಸಿದೆ. 2018ರ ವಿಧಾನಸಭೆ ಚುನಾವಣೆ ವೇಳೆ …
Read More »ಅಂತಿಮಗೊಳ್ಳದ Congress ತೃತೀಯ ಪಟ್ಟಿ
ಬೆಂಗಳೂರು: ಕಾಂಗ್ರೆಸ್‌ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಅಂತಿಮಗೊಳಿಸಲು ರವಿವಾರ ಹೊಸದಿಲ್ಲಿ ಯಲ್ಲಿ ಹಿರಿಯ ನಾಯಕರ ಸಭೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಕೆಲವು ಪ್ರತಿಷ್ಠಿತ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಬಾಕಿ 58 ಕ್ಷೇತ್ರ ಗಳಿಗೆ ಈ ಪಟ್ಟಿಯಲ್ಲಿ ಟಿಕೆಟ್ ಘೋಷಿಸಲಾಗುತ್ತದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಭೆ ಕಾಂಗ್ರೆಸ್‌ನ ಮೂರನೇ ಮತ್ತು ಅಂತಿಮ …
Read More »ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ
ಬೆಂಗಳೂರು: ಚುನಾವಣ ಪ್ರಚಾರ ಮಾಡುವ ನಟರ ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಚುನಾವಣ ಆಯೋಗ ತಿಳಿಸಿದೆ. ನಟ ಕಿಚ್ಚ ಸುದೀಪ್ ಮುಖ್ಯ ಮಂತ್ರಿ ಪರ ಚುನಾವಣ ಪ್ರಚಾರ ಮಾಡುವ ವಿಷಯಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು, ಯಾರೇ ಸಿನೆಮಾ ನಟರು ಯಾವುದೇ ಪಕ್ಷ , ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಅಂಥವರ ಚಿತ್ರಗಳನ್ನು ಸರಕಾರದ ವೆಚ್ಚದಲ್ಲಿ ನಡೆಯುವ ಮಾಧ್ಯಮ ಅಥವಾ ಚಾನಲ್‌ಗಳಲ್ಲಿ ಪ್ರಸಾರ …
Read More »18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ತಪ್ಪುವ ಭೀತಿ
ಬೆಂಗಳೂರು: ರಾಜ್ಯದ 18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ತಪ್ಪುವ ಭೀತಿ ಉಂಟಾಗಿದೆ. ವಯಸ್ಸಿನ ಕಾರಣ ಮತ್ತು ಕ್ಷೇತ್ರದಲ್ಲಿ ವಿರೋಧಿ ಅಲೆಯ ಹಿನ್ನೆಲೆಯಲ್ಲಿ ಕೆಲವರಿಗೆ ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ ಎನ್ನುವ ಸುದ್ದಿ ಬಂದಿದೆ. ಭಾನುವಾರ ರಾತ್ರಿ ಅಥಾ ಸೋಮವಾರ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು ಇದರಲ್ಲಿ ಸುಮಾರು 75 -80 ಹಾಲಿ ಶಾಸಕರ ಹೆಸರು ಇರುವ ಸಾಧ್ಯತೆ ಇದೆ. ವಯಸ್ಸಿನ ಕಾರಣಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಾಮದುರ್ಗದ ಮಹಾದೇವಪ್ಪ ಯಾದವಾಡ, ಕಲಘಟಗಿಯ …
Read More »ಕನ್ನಡಿಗರ ಬ್ಯಾಂಕ್, ಏರ್ ಪೋರ್ಟ್ ಮುಕ್ಕಿದ್ದಾಯ್ತು, ಈಗ KMF ನುಂಗಲು ಹೊರಟಿದ್ದೀರಾ?
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ರಾಜ್ಯ ಪ್ರವಸದ ಬಗ್ಗೆ ವಿಪಕ್ಷ ನಾಯಕರು ಹಿಗ್ಗಾ ಮುಗ್ಗಾ ಟೀಕಿಸಿದ್ದಾರೆ. ಪ್ರಧಾನಿ ಮೋದಿಯವರೇ ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯ್ತು. ಈಗ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ? ನಮ್ಮ ವಿಜಯಾ ಬ್ಯಾಂಕ್ ನ್ನು ನುಂಗಿದ ಬರೋಡಾ ಬ್ಯಾಂಕ್ ಗುಜರಾತ್ ನದ್ದು. ಬಂದರು, ಏರ್ ಪೋರ್ಟ್ ನುಂಗಿದ ಅದಾನಿ …
Read More »ಕಿತ್ತೂರನ ಚೆಕ್ ಪೋಸ್ಟ್ ನಲ್ಲಿ 4.5 ಲಕ್ಷ ರೂ. ಮೌಲ್ಯದ ಆಭರಣ ವಶ
ಬೆಳಗಾವಿ: ಕಿತ್ತೂರಿನ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿ ಮತ್ತು ಪೊಲೀಸರು ಅಪಾರ ಪ್ರಮಾಣದ ಚಿನ್ನ ಮತ್ತು ಬೆಳ್ಳಿ ಆಭರಣ ವಶಪಡಿಸಿಕೊಂಡಿದ್ದಾರೆ. 4.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಕಾರು ಸಮೇತ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಆಭರಣಗಳಿಗೆ ಯಾವುದೇ ದಾಖಲೆಗಳಿಲ್ಲದ್ದರಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ.
Read More »ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ವೈ.ಎಸ್.ವಿ ದತ್ತಾ ಪಕ್ಷದ ವಿರುದ್ಧ ಬಂಡಾಯ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕ
ಚಿಕ್ಕಮಗಳೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ವೈ.ಎಸ್.ವಿ ದತ್ತಾ ಪಕ್ಷದ ವಿರುದ್ಧ ಬಂಡಾಯ ಸಾರಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದರು. ಚಿಕ್ಕಮಗಳೂರಿನ ಕಡೂರಿನಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಿ ಅಭಿಮಾನಿಗಳು, ಬೆಂಬಲಿಗರ ಜೊತೆ ಚರ್ಚಿಸಿದ ವೈ.ಎಸ್.ವಿದತ್ತಾ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕರು ಟಿಕೆಟ್ ನೀಡುವ ಭರವಸೆ ನಿಡಿದ್ದರು. ಆದರೆ ಟಿಕೆಟ್ ಕೈತಪ್ಪಿದೆ. ಕಾಂಗ್ರೆಸ್ ಗೆ ರಾಜೀನಾಮೆ ನೀಡುವುದಷ್ಟೇ ಬಾಕಿಯಿದೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅಭಿಮಾನಿಗಳು ಹೇಳುತ್ತಿದ್ದಾರೆ. ಹಾಗಾಗಿ …
Read More »ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಏ.11 ರವರೆಗೆ ಅವಕಾಶ
ಬೆಳಗಾವಿ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಏ.11 ರವರೆಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಏ.20 ಕಡೆಯ ದಿನವಾಗಿರುತ್ತದೆ. ಸಾರ್ವಜನಿಕರು ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್(ಎನ್.ವಿ.ಎಸ್.ಪಿ) ಲಾಗಿನ್ ಆಗುವ ಮೂಲಕ ತಮ್ಮ ಹೆಸರು ನೋಂದಾಯಿಸಲು ಅಥವಾ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬಹುದು. ಇದಲ್ಲದೇ ಅರ್ಹ ಮತದಾರರು ವೋಟರ್ ಹೆಲ್ಪ್ ಲೈನ್ ಆ್ಯಪ್ ಮೂಲಕವೂ ನಮೂನೆ-6 …
Read More »